Breaking News

B.S.Y.ಇಲ್ಲ ಅಂದ್ರೆ ಬಿಜೆಪಿ ಇಲ್ಲ: ಚೆಲುವರಾಯಸ್ವಾಮಿ

ಮಂಡ್ಯ: ಬಿಜೆಪಿಯಲ್ಲಿ ನೂರು ಬಾಗಿಲು, ನಮ್ಮಲ್ಲಿ ಒಂದೇ ಬಾಗಿಲು. ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ. ಅಧಿಕಾರದ ದರ್ಪದಲ್ಲಿ ಬಿಜೆಪಿಯವ್ರು ಮಾತಾಡುತ್ತಿದ್ದಾರೆ ಅಷ್ಟೇ ಎಂದು ಮಾಜಿ ಸಂಸದ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಉತ್ಸಾಹದಿಂದ ಸಾಗುತ್ತಿದೆ. ಸೋನಿಯಾ ಗಾಂಧಿ ಯವರು ಭಾಗವಹಿಸ್ತಿರೋದು ನಮಗೆಲ್ಲ ಹೆಮ್ಮೆ. ಅಧಿಕಾರಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವ ಗಟ್ಟಿ ಮಾಡಲು ರಾಹುಲ್ ಗಾಂಧಿ ಈ ಯಾತ್ರೆ ಮಾಡುತ್ತಿದ್ದಾರೆ ಎಂದರು.

Read More »

ಕಾರ್ತಿಕ ಮಾಸದಲ್ಲಿ ಅಲ್ಲೋಲ-ಕಲ್ಲೋಲ: ಕೋಡಿಮಠದ ಶ್ರೀ ಭವಿಷ್ಯ

ಧಾರವಾಡ: ಕಾರ್ತಿಕ ಮಾಸದಲ್ಲಿ ಪ್ರಕೃತಿಯಲ್ಲಿ ಅಲ್ಲೋಲ-ಕಲ್ಲೋಲ ಆಗಲಿದ್ದು, ಈಗಾಗಲೇ ಸಾಕಷ್ಟು ಮಳೆಯಾಗಿದ್ದರೂ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಲಕ್ಷಣವಿದೆ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಯೋಗೀಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯೂ ಮಳೆಯ ಲಕ್ಷಣವಿದ್ದು, ಕಾರ್ತಿಕ ಮಾಸದಲ್ಲಿ ಜನರಿಗೆ ತುಸು ಹೆಚ್ಚು ತೊಂದರೆ ಆಗುವ ಸಾಧ್ಯತೆಗಳಿವೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣ ಇದೆ. ಇದಲ್ಲದೆ ರಾಜ್ಯಕ್ಕೆ ಒಂದು ಅವಘಡ ಆಗಲಿದೆ. …

Read More »

ನಗರ ಸೇರಿದಂತೆ ಜಿಲ್ಲೆಯಾದ್ಯಂತ ಈ ಬಾರಿ ನಡೆದ ದಸರಾ ವೈಭವಕ್ಕೆ ಅದ್ಧೂರಿ ತೆರೆ ಬಿದ್ದಿದೆ.

ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಈ ಬಾರಿ ನಡೆದ ದಸರಾ ವೈಭವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಜೊತೆಗೆ ನಗರದ ಕ್ಯಾಂಪ್‌ ಪ್ರದೇಶದ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ಗುರುವಾರ ಸಂಜೆ ವಿಜಯದಶಮಿ ಪ್ರಯುಕ್ತ ಅದ್ಧೂರಿಯಾಗಿ ಸೀಮೋಲ್ಲಂಘನೆ ಕಾರ್ಯಕ್ರಮ ಜರುಗಿತು. ಇಲ್ಲಿನ ಪಾಟೀಲ ಗಲ್ಲಿಯ ವತನದಾರ್‌ ಪಾಟೀಲ(ಪೊಲೀಸ್‌ಪಾಟೀಲ) ಮನೆತನದ ನೇತೃತ್ವದಲ್ಲೇ ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಈ ವೇಳೆ ಶಾಸಕ ಅನಿಲ‌ ಬೆನಕೆ, ಪೊಲೀಸ್ ಕಮೀಷನರ್ ಡಾ.ಎಂ‌.ಬಿ.ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ, ರಮಾಕಾಂತ ಕುಡೋಸ್ಕರ …

Read More »

ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಧಾರವಾಡ: ಗುರುವಾರ ತಡರಾತ್ರಿ ಧಾರವಾಡ ಎಸ್ಪಿ ಕಚೇರಿ ಎದುರು ಅಪಘಾತ ನಡೆದಿತ್ತು. ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಿವಣ್ಣ ಬೆಲ್ಲದ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಹೋದರ ಶಿವಣ್ಣ ಬೆಲ್ಲದ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. …

Read More »

ಸರ್ಕಾರ, ಪೊಲೀಸರು, ಸೈನಿಕರಿಂದ ಮಾತ್ರ ಹಿಂದೂ ಧರ್ಮದ ರಕ್ಷಣೆ ಸಾಧ್ಯವಿಲ್ಲ.:ಗೋಪಾಲ್ ನಾಗರಕಟ್ಟೆ

ಬೆಳಗಾವಿ: ಸರ್ಕಾರ, ಪೊಲೀಸರು, ಸೈನಿಕರಿಂದ ಮಾತ್ರ ಹಿಂದೂ ಧರ್ಮದ ರಕ್ಷಣೆ ಸಾಧ್ಯವಿಲ್ಲ. ಹಿಂದೂ ಸಮಾಜದಲ್ಲಿ ಪರಾಕ್ರಮ ಜಾಗೃತಗೊಳಿಸಬೇಕಿದೆ ಎಂದು ವಿಹೆಚ್‌ಪಿ ಮುಖಂಡ, ಅಯೋಧ್ಯೆ ರಾಮಮಂದಿರ ನಿರ್ಮಾಣದ ಉಸ್ತುವಾರಿ ಗೋಪಾಲ್ ನಾಗರಕಟ್ಟೆ ಹೇಳಿದರು. ನಗರದಲ್ಲಿ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಪರಾಕ್ರಮ ಮುಖ್ಯವಾಗಿದೆ. ನಾವು ಪರಾಕ್ರಮ ಆರಾಧನೆ ಮಾಡಿದ್ದೇವೆ. ಕೆಲವು ವರ್ಷಗಳ ಕಾಲ ಕೆಲವರು ಶಾಂತಿ – ಶಾಂತಿ ಎಂದು ಹೇಳಿದರು. ಸದ್ಯ ದೇಶದಲ್ಲಿ …

Read More »

ಪಿಎಸ್‌ಐ ಹಗರಣದಲ್ಲಿ ಮಾಜಿ ಸಿಎಂ ಮಗನ ಕೈವಾಡವೇನು? ಕಾಂಗ್ರೆಸ್ ಗೆ ಅಸ್ತ್ರವಾದ ಯತ್ನಾಳ್ ಆರೋಪ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಉಂಟು ಮಾಡಿದ್ದ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದ್ದು, ಕಾಂಗ್ರೆಸ್ ಗೆ ಅಸ್ತ್ರ ಸಿಕ್ಕಂತಾಗಿದೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಯತ್ನಾಳ್‌ರ ಈ …

Read More »

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಗಳೊಂದಿಗೆ ಮಂಗಳವಾರ ರಾತ್ರಿ …

Read More »

ಶುಕ್ರವಾರ ರಾಜ್ಯ ಬಿಜೆಪಿ ಕಾರ್ಯಕಾರಿಣಿ: ಸಿಎಂ ರಾಜ್ಯ ಪ್ರವಾಸಕ್ಕೆ ನಿಗದಿಯಾಗುವುದೇ ಮುಹೂರ್ತ?

ಬೆಂಗಳೂರು : ದಸರಾ ಮುಕ್ತಾಯದ ಬೆನ್ನಲ್ಲೇ ಸಾಲು ಸಾಲು ರಾಜಕೀಯ ಚಟುವಟಿಕೆಗಳು ಗರಿಗೆದರುವುದಕ್ಕೆ ರಾಜ್ಯ ಬಿಜೆಪಿಯಲ್ಲಿ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ದಿನಾಂಕ ನಿಗದಿಯಾಗಲಿದೆ.   ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಗುರುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿಎಂ ಬಸವರಾಜ್ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮುಂಚೂಣಿ ನಾಯಕರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ …

Read More »

ಕಾಂಗ್ರೆಸ್ಸಿಗರ ‘ಭಾರತ ಬಿಟ್ಟು ಓಡೋ ಯಾತ್ರೆ’: ನಳಿನ್‍ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ; ಅದು ‘ಭಾರತ ಬಿಟ್ಟು ಓಡೋ ಯಾತ್ರೆ’ಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದಿರುವ ನಾಯಕರು ಜೊತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ; ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ನಾಯಕರನೇಕರು …

Read More »

ಸಿಇಟಿ ಕೋಟಾ ಸೀಟು ಆಕಾಂಕ್ಷಿಗಳಿಗೆ ನಿರಾಸೆ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈಗಾಗಲೇ ವಿಳಂಬ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈಗ ಸೀಟು ಹಂಚಿಕೆ ಯಲ್ಲಿಯೂ ವಿಳಂಬ ನೀತಿ ಅನುಸರಿಸುವ ಮೂಲಕ ಬಡ ವಿದ್ಯಾರ್ಥಿಗಳ ಸರಕಾರಿ ಕೋಟ ಸೀಟು ದೊರೆಯದಂತೆಯೂ ನಿರಾಸೆ ಮೂಡಿಸಿದೆ.   ಸುಮಾರು 10 ದಿನಗಳ ಮೊದಲೇ ಕಾಮೆಡ್‌-ಕೆ ಸೀಟುಗಳ ಹಂಚಿಕೆ ವೇಳಾಪಟ್ಟಿಯನ್ನು ಕಾಮೆಡ್‌-ಕೆ ಪ್ರಕಟಿಸಿದ್ದು ಇದಕ್ಕೂ ಮೊದಲೇ ಸಿಇಟಿ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸಬಹುದಿತ್ತು. ಆದರೂ ಕಾಮೆಡ್‌-ಕೆ ಬಳಿಕ ಸೀಟು …

Read More »