Breaking News

ಚಿಕ್ಕೋಡಿಯಲ್ಲಿ ವಿವಿಧ ದಲಿತ ಸಂಘಟನೆಗಳಿಂದ ತಾಲ್ಲೂಕು ಆಡಳಿತ‌ ವಿರುದ್ಧ ಪ್ರತಿಭಟನೆ

ಇತ್ತೀಚೆಗೆ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಆಗಸ್ಟ್ 15 ರಂದು ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸದೇ ತಾಲ್ಲೂಕು ಆಡಳಿತ ಅವಮಾನ ಮಾಡಿರೋದಾಗಿ ಆರೋಪಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಚಿಕ್ಕೋಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಯಿಂದ ಹೊರಟ ಮೆರವಣಿಗೆಯು ಬಸವ ಸರ್ಕಲ್ ಮೂಲಕ …

Read More »

ಗಣೇಶೋತ್ಸವ ಆಚರಣೆ ವೇಳೆ ಯಾವುದೇ ಅಡೆತಡೆಗಳಾಗದಂತೆ ಕ್ರಮ ವಹಿಸುತ್ತೇವೆ-ಡಾ. ಎಂಬಿ ಬೊರಲಿಂಗಯ್ಯ

ಬೆಳಗಾವಿ ನಗರದಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಯಾವುದೇ ತೊಂದರೆಗಳಾಗದ ನಿಟ್ಟಿನಲ್ಲಿ ಆಚರಣೆ ಮಾಡುವ ಹಿನ್ನೆಲೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಿ ಗಣೇಶೋತ್ಸವ ಯಶಸ್ವಿಗಾಗಿ ಕಾರ್ಯ ನಿರ್ವಹಿಸಬೇಕೆಂದು ನಗರಪೊಲೀಸ್ ಆಯುಕ್ತರಾದ ಡಾ. ಎಂಬಿ ಬೊರಲಿಂಗಯ್ಯ ಹೇಳಿದರು. ಬೆಳಗಾವಿನಗರದ ಸಮಾದೇವಿ ಮಂದಿರದ ಹಾಲ್‍ನಲ್ಲಿ ನಡೆದ ಗಣೇಶೋತ್ಸವ ಹಿನ್ನೆಲೆ ಕರೆನೀಡಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಗಣೇಶೋತ್ಸವ ಆಚರಣೆ ವೇಳೆ ಯಾವುದೇ ರೀತಿಯ ಅಡೆತಡೆಗಳಾಗದಂತೆ, ಅಹಿತಕರ …

Read More »

ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್‍ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿ

ರಾತ್ರಿ ವೇಳೆ ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್‍ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೌದು ರಾತ್ರಿವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‍ಗಳಿಂದ ಡಿಸೇಲ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸವದತ್ತಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಿನಾಂಕ 14/04/2022 ರಂದು ಸವದತ್ತಿ ತಾಲೂಕಿನ ಯಡ್ರಾಂವಿ ಗ್ರಾಮದ ಮಲ್ಲಿಕಾರ್ಜುನ ಫಕ್ಕೀರಪ್ಪ ಕಗದಾಳ ತಾವು ಚಲಾಯಿಸುವ ಟ್ರಕ್‍ನ್ನು …

Read More »

ಮೇಯರ್ ಸಾಮಾನ್ಯ, ಉಪಮೇಯರ್ ಎಸ್‌ಸಿ ಮಹಿಳೆ: ಬೆಳಗಾವಿ ಮಹಾನಗರ ಪಾಲಿಕೆ ಮೀಸಲಾತಿ ಘೋಷಣೆ

ಬೆಳಗಾವಿ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಬೆಳಗಾವಿ ಪಾಲಿಕೆ ಮೇಯರ್ ಸಾಮಾನ್ಯ, ಉಪಮೇಯರ್ ಎಸ್‌ಸಿ ಮಹಿಳೆ ಮೀಸಲಾತಿ ಘೋಷಣೆಯಾಗಿದೆ. ಇದರಿಂದ ಕೊನೆಗೂ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ದಾರಿ ಸುಗಮವಾಗಿದೆ. ಈ ಕುರಿತು ಎರಡೂ ಸ್ಥಾನಗಳಿಗೆ ಸರಕಾರ ಮೀಸಲಾತಿ ಪ್ರಕಟಿಸಿದೆ.

Read More »

ಗುತ್ತಿಗೆದಾರ ಸಂತೋಷ್​​ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್‌ ರಿಲೀಫ್ ಪಡೆದುಕೊಂಡಿದ್ದ ಮಾಜಿ ಸಚಿವ ಈಶ್ವರಪ್ಪಗೆ ಇದೀಗ ಮತ್ತೆ ಸಂಕಷ್ಟ ಶುರವಾಗಿದೆ. ಪ್ರಕರಣದಲ್ಲಿ ಮಾಜಿ ಸಚಿವರಿಗೆ ಕ್ಲೀನ್‌ಚಿಟ್‌ ನೀಡಿದ್ದ ತನಿಖಾಧಿಕಾರಿಗಳ ಕ್ರಮ ಪ್ರಶ್ನಿಸಿ ಸಂತೋಷ್‌ ಪಾಟೀಲ್‌ ಕುಟುಂಬ ಸದಸ್ಯರು ಕೋರ್ಟ್‌ ಮೊರೆ ಹೋಗಿದ್ದಾರೆ. ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಸಲ್ಲಿಸಿರುವ ಬಿ-ವರದಿ ಪ್ರಶ್ನಿಸಿ ಮೃತ ಸಂತೋಷ್‌ ಪಾಟೀಲ್‌ ಸಹೋದರ ಪ್ರಶಾಂತ್‌ ಪಾಟೀಲ್‌ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ …

Read More »

ಸರ್ಕಾರ ಸಮಯಕ್ಕೆ ಸರಿ ನಿರ್ಧಾರ ಕೈಗೊಳ್ಳುತ್ತಿಲ್ಲ: ಸಚಿವ ನಿತಿನ್‌ ಗಡ್ಕರಿ

ಮುಂಬೈ: “ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಅದೇ ದೊಡ್ಡ ಸಮಸ್ಯೆ’ -ಹೀಗೆ ಹೇಳಿರುವುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ. ಮುಂಬೈನಲ್ಲಿ ಅಸೋಸಿಯೇಷನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಇಂಜಿನಿಯರ್ಸ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿತಿನ್‌ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ.   “ನೀವು ಪವಾಡಗಳನ್ನು ಸೃಷ್ಟಿಸಬಹುದು. ಆ ಸಾಮರ್ಥ್ಯ ಇಲ್ಲಿದೆ. ಮೂಲ ಸೌಕರ್ಯ ಕ್ಷೇತ್ರಕ್ಕೆ ಉಜ್ವಲ ಭವಿಷ್ಯವಿದೆ. ನಾವು ಅತ್ಯುತ್ತಮ ತಂತ್ರಜ್ಞಾನ, ನಾವಿನ್ಯತೆ, ಸಂಶೋಧನೆಯನ್ನು ಅಳವಡಿಸಿಕೊಳ್ಳಬೇಕು. …

Read More »

ಕೊಡವರ ಪರ ಜಗ್ಗೇಶ ಹೇಳಿಕೆಗೆ ಯತ್ನಾಳ್ ಸಮರ್ಥನೆ

ವಿಜಯಪುರ: ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಉರುಳುತ್ತವೆ ಎಂದಿರುವ ಸಂಸದ ಜಗ್ಗೇಶ ಹೇಳಿಕೆಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕೆ ಸಮರ್ಥಿಸಿದ್ದಾರೆ. ಮಾಧ್ಯಮಗಳ ಮಟ್ಟಿಗೆ ಅದು ವಿವಾದಾತ್ಮಕ ಇರಬಹುದು, ಆದರೆ ವಾಸ್ತವ ಹಾಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.   ಬುಧವಾರ ನಗರದಲ್ಲಿ ವಿಜಯಪುರ ನಗರದ ಗಾಂಧಿಚೌಕ್ ಬಳಿ ಪಾಲಿಕೆಯ ವಲಯ ಕಚೇರಿಗೆ ಚಾಲನೆ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಟಿಪ್ಪು …

Read More »

ಬೆಳಿಗ್ಗೆ ಯಿಂದ ಹುಡುಕಿದರೂ ಸಿಗದ ಚಿರತೆ..

ಬೆಳಗಾವಿ: ಇಲ್ಲಿನ ಗಾಲ್ಫ್ ಮೈದಾನಕ್ಕೆ ನುಗ್ಗಿದ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಕ್ರೇಬೈಲ್ ಶಿಬಿರದಿಂದ ನಗರ ತಲುಪಿರುವ ಅರ್ಜುನ(20) ಮತ್ತು ಆಲೆ(14) ಬೆಳಗ್ಗೆ ವಿಶ್ರಾಂತಿ ಪಡೆದವು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಂದ ಕಾರ್ಯಾಚರಣೆ ಆರಂಭವಾಯಿತು. ಮೈದಾನದ ಸುತ್ತಲೂ ಬಲೆ ಅಳವಡಿಸಲಾಗಿದೆ‌. ಸುತ್ತಲಿನ ಪ್ರದೇಶದಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಕ್ರಮ ವಹಿಸಲಾಗಿದೆ. ಆ.5ರಂದು ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಚಿರತೆ …

Read More »

ಪಲ್ಚಿಯಾದ ಕಾರು: ಪ್ರಯಾಣಿಕರು ಪಾರು

ಬೈಲಹೊಂಗಲ : ಸಮೀಪದ ಚಚಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ನಸುಕಿನಲ್ಲಿ ಕಾರ್ ಪಲ್ಟಿಯಾಗಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಚಡಿ ಗ್ರಾಮದಿಂದ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮಾರ್ಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಅಷ್ಟರಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಕಾರ್ ತಲೆ ಕೆಳಗಾಗಿ ಬಿದ್ದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ …

Read More »

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್: ಸರ್ಕಾರದಿಂದ ಸುಗ್ರೀವಾಜ್ಞೆ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ತಿದ್ದುಪಡಿ) ಅಧ್ಯಾದೇಶ-2022′ ಅನ್ನು ರಾಜ್ಯ ಸರ್ಕಾರ ಹೊರಡಿಸಿದೆ.   ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ವಿಧೇಯಕ-2022ರ ಸೆಕ್ಷನ್‌ 121 ಹಾಗೂ ಸೆಕ್ಷನ್‌ 160ಗೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಆಗಸ್ಟ್‌ 20ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ …

Read More »