Breaking News

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಈ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ …

Read More »

ಸಂಕನೂರು ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಕನೂರು ಗ್ರಾಮದ ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹಳ್ಳದಲ್ಲಿ ಕೊಚ್ಚಿ ಹೋದವರನ್ನು ಸಂಕನೂರು ಗ್ರಾಮದ ಗಿರಿಜಾ ಕಲ್ಲನಗೌಡ ಮಾಲಿ ಪಾಟೀಲ್ (32), ಭುವನೇಶ್ವರಿ ಶಾಂತವೀರಯ್ಯ ಪೊಲೀಸ್ ಪಾಟೀಲ್ (40) ಪವಿತ್ರಾ ಸಿದ್ದಯ್ಯ ಪೊಲೀಸ್ ಪಾಟೀಲ್(45) ವೀಣಾ ಬಸವರಾಜ ಮಾಲಿ ಪಾಟೀಲ್(19) ಕೊಚ್ಚಿ ಹೋಗಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಹೇಳುತ್ತಿದ್ದಾರೆ.   ಈ ಮಹಿಳೆಯರು ಗ್ರಾಮ ಸಮೀಪದಲ್ಲಿನ ಸೀಡ್ಸ್ ಕಂಪನಿಯಲ್ಲಿ ಹತ್ತಿ ಬೀಜ …

Read More »

ಹೌಸಿಂಗ್ ಸೊಸೈಟಿ ಹೆಸರಿನಲ್ಲಿ ವಂಚನೆ: ನಿರ್ದೇಶಕ ಅರೆಸ್ಟ್, ಮಾಜಿ ಅಧ್ಯಕ್ಷ ಎಸ್ಕೇಪ್

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಭೂಮಿ ಕಬಳಿಸಲು ಕಿಡಿಗೇಡಿಗಳು ಇಲ್ಲದ ದಾಖಲೆಗಳನ್ನು ಸೃಷ್ಟಿ ಮಾಡಿ ಮೋಸ ಮಾಡುತ್ತಿರುವ ಹಲವು ಪ್ರಕರಣಗಳು ಕಂಡುಬಂದಿವೆ. ಅದೇ ರೀತಿಯಲ್ಲಿ ಬೋಗಸ್ ಹೌಸಿಂಗ್ ಸೊಸೈಟಿ ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಂಸ್ಥೆಯ ನಿರ್ದೇಶಕ ಹಾಗೂ ಸಿಇಒ ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇತ್ತೀಚೆಗೆ ವಂಚನೆ ಪ್ರಕರಣವೊಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೌಸಿಂಗ್ ಸೊಸೈಟಿಯ ಹಾಲಿ ನಿರ್ದೇಶಕ …

Read More »

ಬೆಳಗಾವಿಯ ಮಾಡಂಗೇರಿ ಗ್ರಾಮದಲ್ಲಿ ಮನೆಗೋಡೆ ಕುಸಿದು ತಾಯಿ ಮಗು ಸ್ಥಳದಲ್ಲೇ ಸಾವು

ಬೆಳಗಾವಿ : ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಂಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಯಲ್ಲವ್ವ ಮಹಾದೇವ ಬಾಗಿಲದ (40), ಪ್ರಜ್ಬಲ್ ಮಹಾದೇವ ಬಾಗಿಲದ (5) ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳಿಂದ ಯರಗಟ್ಟಿ ತಾಲೂಕಿನಾದ್ಯಂತ ನಿರಂತರ ಮಳೆ ಆಗುತ್ತಿದ್ದು,ಇದರಿಂದ ಶಿಥಿಲಾವಸ್ಥೆಯಲ್ಲಿದ್ದ …

Read More »

ರೀಲ್ಸ್ ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ದಾವಣಗೆರೆ: ರೀಲ್ಸ್ (Reels) ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davangere) ಜಿಲ್ಲೆ ಹರಗನಹಳ್ಳಿ ಚೆಕ್ ಡ್ಯಾಂ ಬಳಿ ನಡೆದಿದೆ. ಮೃತರನ್ನು ಹರಿಹರದ ಆಶ್ರಯ ಬಡಾವಣೆ ಪವನ್ (25), ಪ್ರಕಾಶ್ (24) ಎಂದು ಗುರುತಿಸಲಾಗಿದೆ. ಇವರಿಬ್ಬರು ಸ್ನೇಹಿತರಾಗಿದ್ದು, ರೀಲ್ಸ್ ಮಾಡಲು ಹೋಗಿ ನೀರಲ್ಲಿ ಬಿದ್ದ ಪ್ರಕಾಶ್ ನನ್ನು ರಕ್ಷಿಸಲು ಹೋಗಿ ಪವನ್ ಸಹ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 

Read More »

ನಾನು ಬ್ಲ್ಯಾಕ್‌ ಇದ್ದೇನೆ, ಆದ್ರೆ ಬ್ಲ್ಯಾಕ್‌ ಮೇಲರ್ ಅಲ್ಲ:H.D.K.

ರಾಮನಗರ: ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ (Blackmail) ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD KumaraSwamy) ತಿಳಿಸಿದ್ದಾರೆ. ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ (CP Yogeshwar) ಕಾರಿಗೆ ಜೆಡಿಎಸ್ (JDS) ಕಾರ್ಯಕರ್ತರಿಂದು ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದರು. ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ …

Read More »

A.I.C.C. ಅಧ್ಯಕ್ಷಗಾದಿ ಅಲಂಕರಿಸುತ್ತಾರಾ ಎರಡನೇ ಕನ್ನಡಿಗ, ದಲಿತ ನಾಯಕ ಖರ್ಗೆ !

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಕೊನೆಗೂ ಗಾಂಧಿ ಕುಟುಂಬದ ಪ್ರಾಬಲ್ಯ ತಾತ್ಕಾಲಿಕವಾಗಿ ಅಂತ್ಯಕಾಣುವ ಸಾಧ್ಯತೆ ಗೋಚರಿಸುತ್ತಿದ್ದು, ಪಕ್ಷದ ಅಧ್ಯಕ್ಷಗಾದಿಗೆ ಸ್ಪರ್ಧಿಸಿದವರಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸರ್ವೋಚ್ಛ ಸ್ಥಾನಕ್ಕೆ ಏರುವ ಸಾಧ್ಯತೆ ಹೆಚ್ಚಾಗಿ ಗೋಚರಿಸುತ್ತಿದೆ. ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಜತೆ ರಾಷ್ಟ್ರೀಯ ನಾಯಕ ಶಶಿ ತರೂರ್ ಸಹ ಪ್ರಬಲ ಸ್ಪರ್ಧಿ. ಖರ್ಗೆ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಕಡೆಯ ಕ್ಷಣದಲ್ಲಿ ಸ್ಪರ್ಧಾ …

Read More »

ಮಾಜಿ ಸಿಎಂ ಎಸ್ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ ಭಾನುವಾರ ಹಿರಿಯ‌ ಮುಖಂಡ ಎಸ್.ಎಂ ಕೃಷ್ಣ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಮಾಜಿ ಸಿಎಂ ಇದೀಗ ಸಂಪೂರ್ಣ ಗುಣಮುಖರಾಗಿ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆಸ್ಪತ್ರೆಗೆ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಚಿವರು ಭೇಟಿ ನೀಡಿ, ಮಾಜಿ ಸಿಎಂ ಆರೋಗ್ಯ …

Read More »

ಗಾಂಧಿ ಜಯಂತಿ ಹಿನ್ನೆಲೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಗಾಂಧಿ ಜಯಂತಿಯ ಪ್ರಯುಕ್ತ ನಾಳೆ ಅಕ್ಟೋಬರ್ 2ರಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶುಸಂಗೋಪನಾ ವಿಭಾಗ ಆದೇಶ ಹೊರಡಿಸಿದೆ.   ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Read More »

ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ

ಅಥಣಿ(ಬೆಳಗಾವಿ): ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ತೇಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ- ಬಿಜ್ಜರಗಿ ರಸ್ತೆಯ ಡೋಣಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ತೋಟದ ಕೆಲಸಕ್ಕೆ ಹೋದ ರೈತರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ …

Read More »