Breaking News

ಯುವ ದಸರಾ’ದಲ್ಲಿ ಕನ್ನಡ ಚಿತ್ರರಂಗದ ನಟ-ನಟಿಯರ ಸಂಗಮ

ಮೈಸೂರು: ಮಳೆ ನಿಂತ ಮೇಲೆ ನಿರ್ಮಾಣವಾಗಿದ್ದ ತಂಪಾದ ವಾತಾವರಣದಲ್ಲಿ ಮೂಡಿ ಬಂದ ವರ್ಣರಂಜಿತ ‘ಸ್ಯಾಂಡಲ್‌ವುಡ್‌ ನೈಟ್‌’ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ರಂಗದ ನಟ-ನಟಿಯರು ಡೈಲಾಗ್, ಹಾಡು ಮತ್ತು ನೃತ್ಯದ ಮೂಲಕ ರಂಜಿಸಿದರು.   ಹೊರಗೆ ಮಳೆಯಾಗುತ್ತಿದ್ದರೆ, ಒಳಗೆ ರಂಜನೆಯ ಸುರಿಮಳೆ ಜೋರಾಗಿಯೇ ಸುರಿಯಿತು. ಯುವ ದಸರಾ ಉಪ ಸಮಿತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟ-ನಟಿಯರು ಸರಣಿ ಕಾರ್ಯಕ್ರಮ ನೀಡಿ ರಂಜಿಸಿದರು. ಆಗಾಗ ಪುನೀತ್‌ ರಾಜ್‌ಕುಮಾರ್‌ …

Read More »

ಗಂಡನ ಕೊಲೆ, ಹೆಂಡತಿಯ ಆತ್ಮಹತ್ಯೆ, ತಬ್ಬಲಿಯಾದ ಮಕ್ಕಳು; ಪ್ರೇಮಿಗಳ ದುರಂತ ಅಂತ್ಯ

ಹುಬ್ಬಳ್ಳಿ : ಲವ್, ಮರ್ಡರ್, ಸೂಸೈಡ್. ಪ್ರೇಮಿಗಳ (Couple) ದುರಂತ ಅಂತ್ಯ. ತಬ್ಬಲಿಗಳಾದ ಪುಟ್ಟ ಮಕ್ಕಳು. ಇಂಥದ್ದೊಂದು ಮನಕಲುಕುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಮನೆಯವರ ವಿರೋಧದ ನಡುವೆಯೇ ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು (Love Marriage). ಇಬ್ಬರು ಪುಟ್ಟ ಕಂದಮ್ಮಗಳು, ಮೂರನೇ ಕೂಸು ಹೊಟ್ಟೆಯಲ್ಲಿತ್ತು. ದುಡಿದೋ ಹಾಕೋ ಶಕ್ತಿ ಗಂಡನ (Husband) ರೆಟ್ಟೆಯಲ್ಲಿತ್ತು. ಇಂತಹ ಸುಂದರ ಸಂಸಾರದ ಮೇಲೆ ಬಡಿದ ಬರಸಿಡಿಲು ಲವ್ ಬರ್ಡ್ ಕನಸನ್ನು ನುಚ್ಚು ನೂರು ಮಾಡಿದೆ. …

Read More »

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಖರ್ಗೆ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ!

ಬೆಂಗಳೂರು: ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಸಮೀಪಿಸುತ್ತಿದ್ದು, ಸಂಸದ ಶಶಿ ತರೂರ್ ಮತ್ತು ಮಾಜಿ ಸಚಿವ ಕೆ.ಎನ್​.ತ್ರಿಪಾಠಿ, ಗಾಂಧಿ ಪರಿವಾರದ ನಿಷ್ಠ ಮತ್ತು ಪಕ್ಷದ ಶಿಸ್ತಿನ ಸಿಪಾಯಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದಾರೆ. ನಿನ್ನೆಯಷ್ಟೇ ಮೂವರು ನಾಯಕರು ನಾಮಪತ್ರ ಸಲ್ಲಿಸಿದ್ದು, ಮುಂದಿನ ಕಾಂಗ್ರೆಸ್​ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿರುವಾಗಲೇ ಖರ್ಗೆ ಕುರಿತಾದ ಅಚ್ಚರಿಯ ಭವಿಷ್ಯವೊಂದು ಹೊರಬಿದ್ದಿದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಭವಿಷ್ಯದ ಕುರಿತು ಭಾರೀ ಸುದ್ದಿಯಲ್ಲಿರುವ ದಾವಣಗೆರೆ ಜಿಲ್ಲೆಯ …

Read More »

ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ, ತನ್ನೊಂದಿಗೆ ಮಲಗುವಂತೆ ಕೇಳಿದ ಆರೋಪ: ಮಂಜು ಪಾವಗಡ ಸಹೋದನಿಗೆ ಥಳಿತ

ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.   ಪ್ರದೀಪ್​ ಪಾವಗಡ ತಾನೊಬ್ಬ ಸತ್ಯ ವಿಸ್ಮಯ ವಾರ ಪತ್ರಿಕೆ ಸಂಪಾದಕ ಎಂದು ಹೇಳಿಕೊಂಡಿದ್ದ ಮತ್ತು ತುಮಕೂರು ಮಹಾನಗರ ಪಾಲಿಕೆ ನಲ್ಮ್ ವಿಭಾಗದ ಸಿಬ್ಬಂದಿ ದೀಪಿಕಾಗೆ ಪರಿಚಯವಾಗಿದ್ದ. ಸಂಘ, ಸಂಸ್ಥೆ ಹೆಸರಲ್ಲಿ …

Read More »

ಮಹದಾಯಿ ಯೋಜನೆ’ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ದಸರಾ ಬಳಿಕ ಕಾಮಗಾರಿ

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹತ್ವಾಕಾಂಕ್ಷಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ದಸರಾ ಹಬ್ಬದ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.     ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಜಲಶಕ್ತಿ ಇಲಾಖೆ ಅನುಮೋದನೆ ನೀಡಿದೆ. ದಸರಾ ಹಬ್ಬದ ಕಾರಣ ಸರ್ಕಾರಿ ರಜೆಗಳಿರುವ ಕಾರಣ ಕೇಂದ್ರ ಜಲಶಕ್ತಿ ಇಲಾಖೆಯು ನೀಡಿರುವ ಅನುಮೋದನೆ ಆದೇಶವು …

Read More »

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ

ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

Read More »

ಗೃಹ, ವಾಹನ ಸಾಲ ಬಡ್ಡಿದರ ಮತ್ತಷ್ಟು ಹೆಚ್ಚಳ: ರೆಪೋ ದರ ಮತ್ತೆ ಶೇ.0.50ರಷ್ಟು ಹೆಚ್ಚಳ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ (ಸೆಪ್ಟೆಂಬರ್ 30) ಸತತ ನಾಲ್ಕನೇ ಬಾರಿಗೆ ಶೇ.05ರಷ್ಟು ರೆಪೋ ದರವನ್ನು ತಕ್ಷಣವೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿದ್ದು, ಇದರೊಂದಿಗೆ ರೆಪೋ ದರ ಶೇ.5.9ಕ್ಕೆ ಏರಿಕೆಯಾದಂತಾಗಿದೆ.   ಪ್ರಸಕ್ತ ಸಾಲಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನಾಲ್ಕನೇ ಬಾರಿಗೆ ರೆಪೋ ದರ ಹೆಚ್ಚಳ ಮಾಡಿದಂತಾಗಿದೆ. ರೆಪೋ ದರ ಹೆಚ್ಚಳದಿಂದ ಗೃಹ, ವಾಹನ ಸಾಲದ ಬಡ್ಡಿದರ ಮತ್ತಷ್ಟು ಏರಿಕೆಯಾಗಿದೆ. ಕೋವಿಡ್ ಬಳಿಕ ಆರ್ ಬಿಐ ಮೇ ತಿಂಗಳಿನಲ್ಲಿ ರೆಪೋ …

Read More »

ನಾನು ಆಪ್‌ ಬೆಂಬಲಿಗ ಅಲ್ಲ; ಕಟ್ಟಾ ಬಿಜೆಪಿಗ: ಅಟೋ ಚಾಲಕ ವಿಕ್ರಂ

ಅಹಮದಾಬಾದ್‌: ಆಮ್‌ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಇತರ ಮುಖಂಡರಿಗೆ ಭೋಜನ ಕೂಟ ಏರ್ಪಡಿಸಿದ್ದ ಗುಜರಾತ್‌ನ ಅಟೋ ಚಾಲಕ ವಿಕ್ರಂ ದಂತಾನಿ ಈಗ ತಾವು ಬಿಜೆಪಿಯ ಬೆಂಬಲಿಗ ಎಂದು ಹೇಳಿಕೊಂಡಿದ್ದಾರೆ.   “ನನಗೆ ಮತ ಹಾಕಲು ಅವಕಾಶ ಸಿಕ್ಕಿದ ಮೊದಲ ದಿನದಿಂದಲೂ ಬಿಜೆಪಿಯ ಬೆಂಬಲಿಗನೇ ಆಗಿದ್ದೇನೆ’ ಎಂದು ಅವರು ಹೇಳಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆಟೋ ರಿಕ್ಷಾ ಒಕ್ಕೂಟದ ಸೂಚನೆಯ …

Read More »

ಅ.3ರಿಂದ ರಾಜ್ಯ ಹೈಕೋರ್ಟ್ ಗೆ 5 ದಿನಗಳ ದಸರಾ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಅ.3ರಿಂದ 7ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಅ.1 ಮತ್ತು 2 ಶನಿವಾರ ಹಾಗೂ ಭಾನುವಾರ ಅದೇ ರೀತಿ ಅ.8 ಮತ್ತು 9 ಕ್ರಮವಾಗಿ ಶನಿವಾರ ಹಾಗೂ ಭಾನುವಾರ ರಜೆ ಇರುವುದರಿಂದ ಒಟ್ಟು 9 ದಿನಗಳ ಕಾಲ ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ರಜೆ ಇರಲಿದೆ.   ತುರ್ತು ಪ್ರಕರಣಗಳ ವಿಚಾರಣೆಗೆ ಅ.6ರಂದು ಬೆಂಗಳೂರು ಪ್ರಧಾನ ಪೀಠದಲ್ಲಿ ರಜಾ ಕಾಲದ ವಿಶೇಷ ಪೀಠಗಳ ಕಲಾಪ …

Read More »

ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ !:ಸೂರತ್‌ನಲ್ಲಿ 25 ಕೋಟಿ ರೂ. ನಕಲಿ ನೋಟುಗಳ ವಶ

ಸೂರತ್: ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ನಿಂದ 25.80 ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಚಲನಚಿತ್ರವೊಂದರಲ್ಲಿ ಬಳಸಲು ಮುಂಬೈಗೆ ನಕಲಿ ನೋಟುಗಳನ್ನು ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.   ಕಮ್ರೇಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದ ನಕಲಿ ನೋಟುಗಳನ್ನು (ಎಫ್‌ಐಸಿಎನ್) ಸಾಗಿಸುವ ಆಂಬ್ಯುಲೆನ್ಸ್ ಸಾಗಲಿದೆ ಎಂಬ ಸುಳಿವಿನ ಮೇರೆಗೆ ಸ್ಥಳೀಯ ಪೊಲೀಸರು ಚೆಕ್‌ಪೋಸ್ಟ್‌ನಲ್ಲಿ ವಾಹನವನ್ನು ತಡೆದರು ಮತ್ತು ಗುರುವಾರ ಆರು ಬ್ಯಾಗ್‌ಗಳಲ್ಲಿ …

Read More »