Breaking News

ಖರ್ಗೆ ಅಧ್ಯಕ್ಷರಾದರೂ ರಿಮೋಟ್‌ ಕಂಟ್ರೋಲ್‌ನಲ್ಲೇ ಇರಬೇಕು: ಜೋಶಿ

ವಿಜಯಪುರ: ಎಐಸಿಸಿ ಅಧ್ಯಕ್ಷರು ಯಾರೇ ಆದರೂ ರಿಮೋಟ್‌ ಕಂಟ್ರೋಲ್‌ನಲ್ಲೇ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೂ ಆ ಸ್ಥಾನಕ್ಕೆ ಅರ್ಥ, ಘನೆತೆಯೇ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.   ನಗರದ ಸೈನಿಕ ಶಾಲಾ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ …

Read More »

ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧತೆ ಮಾಡಿಕೊಂಡಿದ್ದ ಲೋಕಾಯುಕ್ತ ಪೊಲೀಸರು ರಾಜ್ಯದ 9 ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್‌ ಕೊಟ್ಟಿದ್ದಾರೆ.   ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಮುಂಜಾನೆ 4.30ಕ್ಕೆ ಏಕಕಾಲದಲ್ಲಿ ನೂರಾರು ಲೋಕಾಯಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪೈಕಿ 7 ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮವಾಗಿ ಸಾರಿಗೆ ಇಲಾಖೆ ಸಿಬ್ಬಂದಿ ಸಂಗ್ರಹಿಸಿಟ್ಟಿದ್ದ ಕಂತೆ-ಕಂತೆ ನೋಟುಗಳನ್ನು ಕಂಡು ಲೋಕಾ ಪೊಲೀಸರೇ ದಂಗಾಗಿದ್ದಾರೆ. ಇನ್ನು …

Read More »

ವಿಶ್ವ ಹಿರಿಯ ನಾಗರಿಕರ ದಿನಾಚರಣೆ,6 ಸಾಧಕರು, ಒಂದು ಸಂಸ್ಥೆಗೆ ಪ್ರಶಸ್ತಿ

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ 6 ಮಂದಿ ಹಿರಿಯ ನಾಗರಿಕರಿಗೆ ಮತ್ತು ಒಂದು ಸಂಸ್ಥೆಗೆ ಶನಿವಾರ (ಅ.1) ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌ ಅವರು, ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ, ಕ್ರೀಡೆ ಮತ್ತು ಕಾನೂನು ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ …

Read More »

ದೇಶಕ್ಕೆ 5ಜಿ ಪ್ರವೇಶ; 4ಜಿ ಗಿಂತ 10 ಪಟ್ಟು ವೇಗ.

ಅ.1ರಿಂದ ಭಾರತದಲ್ಲಿ 5ಜಿ ಸೇವೆ ಆರಂಭವಾಗುತ್ತಿದೆ. ದೇಶದಲ್ಲಿ ಡಿಜಿಟಲ್‌ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ 5ಜಿ ಸೇವೆ ಸಹಕಾರಿಯಾಗಿದೆ. ಈಗಾಗಲೇ 5ಜಿ ಸ್ಮಾರ್ಟ್‌ ಮೊಬೈಲ್‌ ಪೋನ್‌ ಹೊಂದಿರುವ ದೇಶದ 100 ಮಿಲಿಯನ್‌ ಜನರು 5ಜಿ ಸೇವೆಯ ಲಭ್ಯತೆಗಾಗಿ ಕಾಯುತ್ತಿದ್ದಾರೆ. 5ಜಿ ಸೇವೆಯಿಂದ ಇಂಟರ್ನೆಟ್‌ ವೇಗ ಹೆಚ್ಚುವ ಜತೆಗೆ ಹಲವಾರು ಉಪಯೋಗಗಳ ಬಗ್ಗೆ ವಿಸ್ತೃತ ಮಾಹಿತಿ ಇಲ್ಲಿದೆ. 4ಜಿ ಗಿಂತ 10 ಪಟ್ಟು ವೇಗ: ಪ್ರಸ್ತುತ 4ಜಿ …

Read More »

ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯಪುರ : ಕೋವಿಡ್ ನಂತರದ ಭಾರತಕ್ಕೆ ವಿಶ್ವದಲ್ಲೇ ವಿಶೇಷ ಸ್ಥಾನ, ವಿಶೇಷ ಗುರುತಿಸುವಿಕೆ ಆರಂಭಗೊಂಡಿದೆ. 21ನೇ ಶತಮಾನದಲ್ಲಿ ಬಲಿಷ್ಠ ಭಾರತ ಕಟ್ಟುವ ಕನಸು ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಸಾಗಿದೆ. ಯುಎನ್ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರಾತಿನಿಧ್ಯವಿಲ್ಲದೇ ಯಾವ ಸಭೆಗಳೂ ನಡೆಯುವುದಿಲ್ಲ. ಅಷ್ಟರ ಮಟ್ಟಿಗೆ ಭಾರತ ವಿಶ್ವಕ್ಕೆ ಅನಿವಾರ್ಯ ಎನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಶುಕ್ರವಾರ ನಗರದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ …

Read More »

ಸರ್ಕಾರ ಇ ಕಚೇರಿ ಜಾರಿಗೊಳಿಸಿದೆ. ಆದ್ರೆ ಅದಕ್ಕೆ ಬೇಕಾದ ಸಾಮಗ್ರಿಗಳನ್ನು ಪೂರೈಸುವಲ್ಲಿ ಸರ್ಕಾರ ವಿಫಲ

ಬೆಂಗಳೂರು: ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಇ ಕಚೇರಿ ಕಡ್ಡಾಯಗೊಳಿಸಲಾಗಿದೆ. ಇ-ಕಚೇರಿಯನ್ನೇನೋ ಕಡ್ಡಾಯಗೊಳಿಸಿದೆ ಆದರೆ ಅದಕ್ಕೆ ಬೇಕಾಗಿರುವ ಸ್ಕ್ಯಾನರ್ ಮತ್ತು ಪ್ರಿಂಟರ್​​ಗಳನ್ನು ಪೂರೈಸಲು ಸರ್ಕಾರ ಮರೆತಿದೆ. ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದೆ. ಅದರ ನಿದರ್ಶನವಾಗಿ ಇ-ಆಡಳಿತ ಕೇಂದ್ರದ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಎಲ್ಲಾ ಇಲಾಖೆಗಳಲ್ಲಿ ಇ …

Read More »

ಬೆಳಗಾವಿ: ಸಾಂಸ್ಕೃತಿಕ ಸಂಗಮ‌ ದಾಂಡಿಯಾ

ಬೆಳಗಾವಿ: ನವರಾತ್ರಿ ಉತ್ಸವಕ್ಕೆ ಬೆಳಗಾವಿಗೆ ಬರಬೇಕು ನೀವು. ಈ ಒಂಬತ್ತು ದಿನಗಳ ಪ್ರತಿ ರಾತ್ರಿಗೂ ರಂಗು ತುಂಬುತ್ತದೆ ದಾಂಡಿಯಾ. ಕನ್ನಡ, ಮರಾಠಿ, ಗುಜರಾತಿ ಮೂರೂ ಸಂಸ್ಕೃತಿಗಳ ‘ಕೂಡಲಸಂಗಮ’ ಈ ಕೋಲಾಟ. ಬೆಳಗಾವಿ ನಗರದ ಪ್ರತಿ ಗಲ್ಲಿ, ರಸ್ತೆ, ಬಡಾವಣೆ, ಅಪಾರ್ಟ್‌ಮೆಂಟ್‌, ಮೈದಾನಗಳು, ಕಲ್ಯಾಣ ಮಂಟಪಗಳು… ಹೀಗೆ ಎಲ್ಲೆಲ್ಲಿ ಜಾಗವಿದೆಯೋ ಅಲ್ಲಿ ದಾಂಡಿಯಾ ಗುಂಗೇರಿದೆ. ಈಗೀಗ ಹಳ್ಳಿಗಳಿಗೂ ಹರಿದುಹೋಗಿರುವ ಈ ನೃತ್ಯ ಗ್ರಾಮೀಣ ಹೃದಯಗಳನ್ನೂ ಕುಣಿಸುತ್ತಿದೆ. ಸಾಂಪ್ರದಾಯಿಕ ಹಾಡು, ಸಿನಿಮಾ ಗೀತೆಗಳನ್ನು …

Read More »

ನಿಪ್ಪಾಣಿ: ಡೆಂಗಿಯಿಂದ ಯುವಕ ಸಾವು

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಡೆಂಗಿಯಿಂದ ಬಳಲುತ್ತಿದ್ದ ತಾಲ್ಲೂಕಿನ ಕಾರದಗಾ ಗ್ರಾಮದ ಯುವಕ ಶುಕ್ರವಾರ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮ್ ಸಂಜಯ ಕಮತೆ (19) ಸಾವನ್ನಪ್ಪಿದವರು. ಬಿಎಸ್ಪಿ ಓದುತ್ತಿದ್ದ ಪ್ರೇಮ್ ಎಂಟು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಗಡಿಗೆ ಹೊಂದಿಕೊಂಡ ಮಹಾರಾಷ್ಟ್ರದ ಇಚಲಕರಂಜಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡೆಂಗಿ ತಗಲಿದ್ದು ಖಚಿತವಾಗಿತ್ತು. ಶುಕ್ರವಾರ ಆರೋಗ್ಯ ಹಠಾತ್ ಕ್ಷೀಣಿಸಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಕುಟುಂಬದ ಮೂಲಗಳು ತಿಳಿಸಿವೆ. ಯುವಕನ ಸಾವಿನಿಂದ ಗ್ರಾಮದಲ್ಲಿ ಡೆಂಗಿ ಭೀತಿ …

Read More »

ರಾಜ್ಯದಾದ್ಯಂತ ವೀರಜ್ಯೋತಿ ಯಾತ್ರೆ; ಅ.2ರಂದು ಬೆಂಗಳೂರಿನಲ್ಲಿ ಸಿ.ಎಂ ಚಾಲನೆ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲಾಗುತ್ತದೆ. ರಾಜ್ಯ ಸರ್ಕಾರ ₹2 ಕೋಟಿ ಅನುದಾನ ಮಂಜೂರು ಮಾಡಿದ್ದು, ಅ.23, 24 ಹಾಗೂ 25ರಂದು ಮೂರು ದಿನ ವೈಭವ ಮರುಕಳಿಸಲಿದೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡ್ರ ತಿಳಿಸಿದರು.   ಪಟ್ಟಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ …

Read More »

ರಾಯಬಾಗ :A.T.M.ಕಳವು ಯತ್ನ: ಆರೋಪಿ ಬಂಧನ

ರಾಯಬಾಗ: ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಎಟಿಎಂ ಒಡೆಯಲು ಯತ್ನಿಸಿದ ಆರೋ‍ಪಿಯನ್ನು ಎಂಟು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಾವಾನಸೌದತ್ತಿ ನಿವಾಸಿ ಖಾಜಾಸಾಬ್‌ ಬಾಬಾಸಾಬ್‌ ಮುಜಾವರ (25) ಬಂಧಿತ. 2022ರ ಫೆಬ್ರುವರಿ 4ರಂದು ರಾತ್ರಿ ಎಟಿಎಂ ಮುರಿದು ಕಳ್ಳತನಕ್ಕೆ ಯತ್ನಿಸಿದ ಯುವಕ ತಲೆ ಮರೆಸಿಕೊಂಡಿದ್ದ. ಕಬ್ಬಿಣದ ರಾಡ್‌ ಬಳಸಿ ಎಟಿಎಂ ಮುರಿಯಲು ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಆದರೆ, ಆರೋಪಿ ಗುರುತು ಸರಿಯಾಗಿ ಪತ್ತೆಯಾಗಿರಲಿಲ್ಲ. ಪ್ರಕರಣದ ತನಿಖೆ ಕೈಗೊಂಡ ರಾಯಬಾಗ …

Read More »