ಹಾವೇರಿ: ಸರ್ಕಾರಿ ವೈದ್ಯನ ಹಣದ ದಾಹಕ್ಕೆ ಗರ್ಭಕೋಶ ಕಳೆದುಕೊಂಡ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮದ ಮಹಿಳೆಯರು ಇದೀಗ ಮತ್ತೆ ಸಿಎಂ ಮನೆಗೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಕುರಿತಂತೆ ರಾಣೆಬೆನ್ನೂರಲ್ಲಿ ಸಭೆ ನಡೆಸಿದ ಮಹಿಳೆಯರು ಬರುವ ತಿಂಗಳು 17 ರಂದು ಸಿಎಂ ಶಿಗ್ಗಾಂವಿ ನಿವಾಸಕ್ಕೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ರಾಣೆಬೆನ್ನೂರು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಪಿ ಶಾಂತ ತಾಲೂಕಿನ ಸುಮಾರು 15 ನೂರಕ್ಕೂ ಅಧಿಕ ಮಹಿಳೆಯರ …
Read More »ಯಾದಗಿರಿ ಮತ್ತು ಕಲಬುರಗಿಯ ಬಂಧಿತ ಪಿಎಫ್ಐ ನಾಯಕರನ್ನು ನ್ಯಾಯಾಂಗ ಬಂಧನ
ಯಾದಗಿರಿ/ಕಲಬುರಗಿ: ಯಾದಗಿರಿ ಮತ್ತು ಕಲಬುರಗಿಯಲ್ಲಿ ಇಂದು ಬೆಳಗ್ಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದ ಪಿಎಫ್ಐ ಮುಖಂಡರನ್ನು ನ್ಯಾಯಾಂಗ ವಶಕ್ಕೆ ನೀಡಲು ತಾಲೂಕು ದಂಡಾಧಿಕಾರಿಗಳು ಆದೇಶ ಹೋರಡಿಸಿದ್ದಾರೆ. ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ ಮಜರ್ ಹುಸೇನ್ , ಮಿಲ್ಲತ್ ನಗರದ ಇಸಾಮೊದ್ದಿನ್ ಇಬ್ಬರ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿ, ನಂತರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬಳಿಕ ಕಲಬುರಗಿ ತಾಲೂಕು ದಂಡಾಧಿಕಾರಿ ಪ್ರಕಾಶ ಕುದರಿ ಅವರ ಮುಂದೆ ಇಬ್ಬರನ್ನು …
Read More »ಹೆಂಡತಿ ಹೊಟ್ಟೆಗೆ ಚೂರಿ ಹಾಕಿದ ಗಂಡ: ಭಯಗೊಂಡು ಆತ್ಮಹತ್ಯೆಗೆ ಶರಣು
ಚಿಕ್ಕೋಡಿ (ಬೆಳಗಾವಿ): ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ – ಹೆಂಡತಿ ಜಗಳ ವಿಕೋಪಕ್ಕೆ ತಿರುಗಿದ್ದು, ಹೆಂಡತಿ ಹೊಟ್ಟೆಗೆ ಗಂಡ ಚೂರಿ ಹಾಕಿದ್ದಾನೆ. ಬಳಿಕ ಇದರಿಂದ ಭಯಗೊಂಡ ಆತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ಪ್ರಭು ರಾಮಪ್ಪ ಮೇತ್ರಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರಭು ರಾಮಪ್ಪ ಮತ್ತು ಆತನ ಹೆಂಡತಿ ಪಾರ್ವತಿ ಮಧ್ಯೆ ಆಗಾಗ …
Read More »ಬೆಳಗಾವಿ ಜಿಲ್ಲೆಯ ಯುವಕ. ಪ್ರಿಯತಮೆಯೊಂದಿಗೆ ಜಗಳ.. ಮನನೊಂದು ಕೆಎಸ್ಆರ್ಪಿ ಟ್ರೈನಿ ನೇಣಿಗೆ ಶರಣು
ಬೆಂಗಳೂರು: ಕೆಎಸ್ಆರ್ಪಿ 4ನೇ ಬೆಟಾಲಿಯನ್ನಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಪ್ಪ ಅಣ್ಣಪ್ಪ ಅಂಬಿ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಪ್ಪ, ಆರು ತಿಂಗಳಿಂದ ಮಡಿವಾಳದಲ್ಲಿರುವ ಕೆಎಸ್ಆರ್ಪಿ 4ನೇ ಬೆಟಾಲಿಯನ್ನಲ್ಲಿ ತರಬೇತಿ ಪಡೆಯುತ್ತಿದ್ದರು. ಸೆ.25ರಂದು ಹೊರಗಡೆ ಹೋದಾಗ ನಾಪತ್ತೆಯಾಗಿದ್ದರು. ಈ ಸಂಬಂಧ ಬೆಟಾಲಿಯನ್ನ ಹಿರಿಯ ಅಧಿಕಾರಿಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಸೆ.26ರಂದು ಸಂಜೆ ಬೆಟಾಲಿಯನ್ನ ಬ್ಯಾರಕ್ಗೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ …
Read More »೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …
Read More »ಹುಕ್ಕೇರಿ ಬಳಿ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಯುವಕರ ಸಾವು
ಬೆಳಗಾವಿ ಜಿಲ್ಲೆ): ಹುಕ್ಕೇರಿ ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು. ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು …
Read More »ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಮೈಸೂರು: ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು, ನಿಧನರಾದ ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ. ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಒಟ್ಟು 37 ಮಂದಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. …
Read More »ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಧೋಳದಲ್ಲಿ ಸಚಿವ ಮುರುಗೇಶ ನಿರಾಣಿಯವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಬಂದಿದ್ದ ಅವರು ನಿರಾಣಿ ಅವರ ನಿವಾಸದ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಇಳಿದಿದ್ದರು. ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಿರಾಣಿ ಮನೆಗೆ ಹೋದರು. ಇದಕ್ಕೂ ಮುನ್ನ ಜಮಖಂಡಿಯಲ್ಲಿ ನಡೆದ ಸಿದ್ದು ನ್ಯಾಮಗೌಡರ …
Read More »ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವು
ಬೆಳಗಾವಿ : ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೇಟೆಬಸವಣ್ಣ ಓಣಿಯ ಸಿದ್ಧಾರೂಢ ಮಂಜುನಾಥ ಗಾಣಗಿ (8) ಮೃತ ಬಾಲಕ. ಇಂದು ಬೆಳಗಿನ ಜಾವ ಅಜ್ಜನ ಜೊತೆಗೆ ಈಜು ಕಲಿಯಲು ಸಿದ್ಧಾರೂಢ ಹೋಗಿದ್ದನು. ಈ ವೇಳೆ, ಬೆನ್ನಿಗೆ ಪ್ಲಾಸ್ಟಿಕ್ ಡಬ್ಬಿ ಕಟ್ಟಿಕೊಂಡು ಬಾಲಕ ನೀರಿಗೆ ಇಳಿದಿದ್ದನು. ಆದರೆ, ಬಾವಿಯಲ್ಲಿ ಈಜುವಾಗಲೇ ಡಬ್ಬಿ ಕಳಚಿದ್ದರಿಂದ …
Read More »ಯುವ ದಸರಾ 2022: ನೋಡುಗರ ಗಮನ ಸೆಳೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ
ಶಿವಮೊಗ್ಗ: ಯುವ ದಸರಾ ಹಿನ್ನೆಲೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 134ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧೆಯನ್ನು ಐದು ವಿಭಾಗದಲ್ಲಿ ವಿಂಗಡಿಸಲಾಗಿತ್ತು. ಯುವಕರು ತಮ್ಮ ಕಟ್ಟು ಮಸ್ತಾದ ದೇಹ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಸ್ಪರ್ಧೆಯ ತೀರ್ಪುಗಾರರಾಗಿ ರಾಜ್ಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಸದಸ್ಯರು ಭಾಗವಹಿಸಿದ್ದರು.
Read More »
Laxmi News 24×7