ಮೈಸೂರು: ಮೈಸೂರು ದಸರಾ 2022 ಹಿನ್ನೆಲೆ ನಾಳೆಯಿಂದ ನಡೆಯಲಿರುವ ಯುವ ದಸರಾ ಅಂಗವಾಗಿ ನಾಳೆ ಅಪ್ಪು ನಮನ ಕಾರ್ಯಕ್ರಮ ಅನ್ನು ದಿವಂಗತ ಪುನೀತ್ ರಾಜ್ಕುಮಾರ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಇಂದು ಯುವ ದಸರಾ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಸೆ.28ಕ್ಕೆ (ನಾಳೆ) “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು …
Read More »“ಲಂಚ ಕೊಡಬೇಕಾಗಿಲ್ಲ’ ಬೋರ್ಡ್ ಬದಲು ಸಿಸಿ ಕೆಮರಾ ಅಳವಡಿಸಿ: ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರೇ, “ಸರಕಾರಿ ಕಚೇರಿಗಳಲ್ಲಿ ಲಂಚ ಕೊಡಬೇಕಾಗಿಲ್ಲ’ ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತತ್ಕ್ಷಣ ಕ್ರಮ ಕೈಗೊಳ್ಳಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಯವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40 ಪರ್ಸೆಂಟ್ ಕಮಿಷನ್ ಆರೋಪ ಸಹಿತ ಸಚಿವರ ಮೇಲಿನ …
Read More »ಬಿಜೆಪಿಗೆ 2024ರವರೆಗೂ ಜೆ.ಪಿ.ನಡ್ಡಾ ಅಧ್ಯಕ್ಷ?
ನವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ. ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ …
Read More »ವಿಜಯಪುರ ಪಿಎಫ್ಐ ಜಿಲ್ಲಾಧ್ಯಕ್ಷ ಅಶ್ಫಾಕ್ ಪೊಲೀಶ ವಶಕ್ಕೆ
ವಿಜಯಪುರ: ವಿಜಯಪುರ ಪಿಎಫ್ಐ ಸಂಘಟನೆ ಜಿಲ್ಲಾಧ್ಯಕ್ಷ ಅಶ್ಫಾಕ್ ಜಮಖಂಡಿ ಎಂಬವನನ್ನು ಪೊಲೀಸರು ಮಂಗಳವಾರ ಬೆಳಂಬೆಳಿಗ್ಗೆ ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ. ನಗರದ ಜಾಮಿಯಾ ಮಜೀದ್ ರಸ್ತೆಯಲ್ಲಿರೋ ಅಶ್ಪಾಕ್ ಜಮಖಂಡಿ ಮನೆಯಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಸಂಘಟನೆ ಹೋರಾಟ, ಹಣಕಾಸಿನ ವ್ಯವಹಾರ ಸೇರಿದಂತೆ ಇತರೆ ವಿಷಯಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು, ಸ್ಥಳೀಯ ವಿಚಾರಣೆ ಬಳಿಕ, ಅಗತ್ಯ ಎನಿಸಿದರೆ ಅಶ್ಫಾಕ್ ನನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ …
Read More »ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ; ನವರಾತ್ರಿಯಲ್ಲೇ ಹಲವರಿಗೆ ಶುಭ ಯೋಗ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಒಂದು ಮೂಲದ ಪ್ರಕಾರ ಗುರುವಾರ ಇಲ್ಲವೇ ಶುಕ್ರವಾರವೇ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆ ಇದೆ. ಇಲ್ಲವಾದರೆ ನವರಾತ್ರಿ ಬಳಿಕ ಮುಹೂರ್ತ ಕೂಡಿ …
Read More »ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು
ಕಲಬುರಗಿ: ಇದೇ ಮೊದಲ ಬಾರಿಗೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜೇಶ ಹಾಗರಗಿಗೆ ಜಾಮೀನು ಮಂಜೂರಾಗಿದೆ. ಕಲಬುರಗಿ ಹೈ ಕೋರ್ಟ್ ನಿಂದ ರಾಜೇಶ್ ಹಾಗರಗಿಗೆ ಜಾಮೀನು ಮಂಜೂರಾಗಿದೆ. ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಅಧ್ಯಕ್ಷರಾಗಿದ್ದಾರೆ. ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು ದೊರೆತಿದೆ.
Read More »ತನ್ನ ಸ್ವಂತ ಕ್ಷೇತ್ರದ ಕಾರ್ಯಕ್ರಮದಲ್ಲೇ ಜಾಗ ಸಿಗದೆ ಅನಾಥರಾದ ಶೆಟ್ಟರ್ ಅವರ ಸ್ಥಿತಿ ಯಾರಿಗೂ ಬರಬಾರದು: ಕಾಂಗ್ರೆಸ್
ಬೆಂಗಳೂರು : ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಹೆಸರು ಕೈಬಿಟ್ಟಿದ್ದರು ಎನ್ನಲಾದ ವಿಚಾರ ಮತ್ತು ಬಿಡಿಎ ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ ಮತ್ತಿತರರ ವಿರುದ್ಧದ ಎಫ್ಐಆರ್ ಕುರಿತಂತೆ ವಿಜಯೇಂದ್ರ ಹೇಳಿಕೆ ವಿಚಾರವನ್ನು ಪ್ರಸ್ತಾಪಿಸಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಯತ್ನ ನಡೆದಿದೆ ಎಂದು ಆರೋಪಿಸಿ ಸರಣಿ ಟ್ವೀಟ್ ಮಾಡಿದೆ. ಸಿಎಂ ಹುದ್ದೆಯೂ ಕೊಡಲಿಲ್ಲ, ಸಚಿವ ಸ್ಥಾನವೂ ಸಿಗಲಿಲ್ಲ. ಈಗ ರಾಷ್ಟ್ರಪತಿ ಕಾರ್ಯಕ್ರಮದಲ್ಲೂ ಹೆಸರಿಲ್ಲ. ಬಿಎಸ್ವೈ ನಂತರ ಮತ್ತೊಬ್ಬ ಲಿಂಗಾಯತ ನಾಯಕನನ್ನು …
Read More »ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ
ಸವದತ್ತಿ: ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ ಮನೆ ಮಾಡಿದೆ. ಮೊದಲ ದಿನವಾದ ಸೋಮವಾರದಿಂದಲೇ ಭಕ್ತರು ಸಾಗರೋಪಾದಿಯಲ್ಲಿ ಹರಿದುಬಂದರು. ಘಟಸ್ಥಾಪನೆಯ ಮೂಲಕ ನವವೈಭವಕ್ಕೆ ವಿಧ್ಯುಕ್ತ ಚಾಲನೆಯೂ ದೊರೆಯಿತು. ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿದ್ದಾರೆ. ಅವಮಾಸ್ಯೆ ನಂತರದ ಮೊದಲ ದಿನ ಸೋಮವಾರ ಸಂಜೆ 4.30 ರಿಂದ 6.30 ಒಳಗಾಗಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮೂಲಕ ಘಟಸ್ಥಾಪನೆ ಜರುಗಿತು. …
Read More »ಗುಂಪು ಘರ್ಷಣೆ; ಬಾಲಕನಿಗೆ ಚೂರಿ ಇರಿತ
ಬೆಳಗಾವಿ: ಇಲ್ಲಿನ ಅನಂತಶಯನ ಗಲ್ಲಿಯಲ್ಲಿ ಸೋಮವಾರ ರಾತ್ರಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚೂರಿ ಇರಿತದಿಂದ ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ (15) ಚೂರಿ ಇರಿತಕ್ಕೆ ಒಳಗಾದವ. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಾನೆ. ಗಾಯಗೊಂಡ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಫರಾನ್ ಹಾಗೂ ಇಬ್ಬರು ಸ್ನೇಹಿತರು ಬೈಕ್ ಮೇಲೆ ಹೊರಟಿದ್ದರು. ನಗರದ ಅಂಬಾ ಭವಾನಿ ಮಂದಿರದ ಹತ್ತಿರ 10 ಯುವಕರ …
Read More »ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ 12 ವಾರ ಗಡುವು
ಬೆಂಗಳೂರು: ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ- 2021ರ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಗೆಜೆಟ್ ಅಧಿಸೂಚನೆ ಪ್ರಶ್ನಿಸಿ ರಾಜ್ಯ …
Read More »
Laxmi News 24×7