ಸಾಗರ: ರಾಜ್ಯ ಸರ್ಕಾರ ಪಂಚಮಸಾಲಿ-ಗೌಡ ಲಿಂಗಾಯಿತ, ಮಲೇಗೌಡ ದೀಕ್ಷಾ ಲಿಂಗಾಯಿತ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಕೇಂದ್ರ ಸರ್ಕಾರ ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡದೆ ಹೋದಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮಿಗಳು ತಿಳಿಸಿದರು. ತಾಲೂಕಿನ ಕೆಳದಿಯಲ್ಲಿ ಮಂಗಳವಾರ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠದ ವತಿಯಿಂದ ರಾಣಿ ಚೆನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮಲೆನಾಡು ಭಾಗದಲ್ಲಿ ಹಮ್ಮಿಕೊಂಡಿದ್ದ …
Read More »ಬೆಳಗಾವಿಯ ಇಬ್ಬರು ಸೇರಿ ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ
ನವದೆಹಲಿ: ರಾಜ್ಯದ 7 ಜನ ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ ನೀಡಿ ಕೇಂದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಸಚಿನ್ ಘೋರ್ಪಡೆ, ವಿಕ್ರಂ ಅಮಟೆ, ಸಂಜೀತ್ ವಿ.ಜೆ., ರಾಮ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ ನೇಮಗೌಡ, ಗೋಪಾಲ ಎಂ. ಬ್ಯಾಕೋಡ್ ಹಾಗೂ ಮಹಾನಿಂಗ ನಂದಗಾವಿ ಅವರು ಸರಕಾರದ ಆದೇಶದನ್ವಯ ಐಪಿಎಸ್ ಕರ್ನಾಟಕ ಕೆಡರ್ ಅಧಿಕಾರಿಗಳಾಗಿ ಮೇಲ್ದರ್ಜೆಗೇರಿದವರು. ಈ ಎಲ್ಲ ಅಧಿಕಾರಿಗಳು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಾನಾ ಹುದ್ದೆಗಳನ್ನು ಖಾಲಿ …
Read More »ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಮುಖಂಡ
ಮುಂಬೈ: ಶಿವಸೇನಾ ಮುಖಂಡರೊಬ್ಬರು ಖಾಸಗಿ ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಕ್ಷೇತ್ರವಾದ ಹಿಂಗೋಲಿಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಊಟ ಬಡಿಸಿದ ಕಾರಣಕ್ಕೆ ಶಿವಸೇನೆಯ ಬಂಡಾಯ ಶಾಸಕ ಸಂತೋಷ್ ಬಂಗಾರ್ ಅವರು ಅಡುಗೆ ವ್ಯವಸ್ಥಾಪಕನನ್ನು ನಿಂದಿಸಿ ಅವರಿಗೆ ಎಲ್ಲರ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದರು. ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಮನಾರ್ಹವೆಂದರೆ, ಬಂಗಾರ್ ಅವರು ಈ ಘಟನೆಗೆ ಕೆಲವೇ ನಿಮಿಷ ಮೊದಲು ವಿಧಾನಸಭೆಯಲ್ಲಿ ಮುಖ್ಯಮಂತ್ರಿ …
Read More »ಆ.17 ರಂದು ನಾಳೆ ಮಹಾಲಿಂಗಪುರ ಬಂದ್: ಸಾಮೂಹಿಕ ನಾಯಕತ್ವದಡಿ ಹೋರಾಟ
ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಸರ್ಕಾರದ ಕಾರ್ಯವೈಖರಿ ಖಂಡಿಸಿ ಆ.17 ರಂದು ಮಹಾಲಿಂಗಪುರ ಬಂದ್‌ಗೆ ಕರೆ ನೀಡಲಾಗಿದ್ದು, ಸಾಮೂಹಿಕ ನಾಯಕತ್ವದಡಿ ತಾಲ್ಲೂಕು ಕೇಂದ್ರಕ್ಕೆ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹೋರಾಟ ಸಮಿತಿ ಸದಸ್ಯರು ತಿಳಿಸಿದರು. ಹೋರಾಟದ ವೇದಿಕೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.15 ರೊಳಗೆ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿದ್ದರೆ ಆ.17ರಂದು ಮಹಾಲಿಂಗಪುರ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದೆಂದು ಈಗಾಗಲೇ ತಿಳಿಸಲಾಗಿತ್ತು. ಇನ್ನುವರೆಗೂ …
Read More »ಮನಃ ಪರಿವರ್ತನೆಗೆ ವಚನಗಳು ಸಹಕಾರಿ; ಡಾ| ಚನ್ನವೀರ ದೇವರು
ವಿಜಯಪುರ: ತಾಳ್ಮೆಯಿಂದ ಇರುವ ಮನುಷ್ಯ ಸಹನೆ-ವಿವೇಕದಿಂದ ಎಲ್ಲವನ್ನೂ ಗೆಲ್ಲುವ ಶಕ್ತಿ ಹೊಂದಿರುತ್ತಾನೆ. ಸಿಟ್ಟು-ಕೋಪ, ಆವೇಶದಂಥ ಗುಣಗಳು ಜೀವನದಲ್ಲಿ ಸೋಲನ್ನೇ ತರುತ್ತದೆ. ಲೋಕದ ದೃಷ್ಟಿಯಲ್ಲಿ ಜೈಲಿನಲ್ಲಿರುವ ಕೈದಿಗಳು ಹೃದಯ ಪರಿವರ್ತಿಸಿಕೊಂಡ ಪ್ರವಾದಿಗಳಾಗಿ, ಬಸವಾದಿ ಪ್ರಥಮರಾಗಿ, ಗೌತಮ ಬುದ್ಧರಾಗಿ ಜೀವಿಸಲು ಇರುವ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕುಂಟೋಜಿ ಹಿರೇಮಠದ ಡಾ| ಚನ್ನವೀರ ದೇವರು ಕಿವಿಮಾತು ಹೇಳಿದರು. ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶ್ರಾವಣ ಮಾಸದ ನಿಮಿತ್ತ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್, …
Read More »ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು
ಹುಬ್ಬಳ್ಳಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಕೈಗೊಂಡ ದಂಡಿಯಾತ್ರೆ ತನ್ನದೇ ಮಹತ್ವ ಪಡೆದುಕೊಂಡಿದೆ. ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿ.ಮೀ. ಯಾತ್ರೆಯಲ್ಲಿ ಗಾಂಧೀಜಿ ಬಳಸಿದ್ದ ದೊಡ್ಡದಾದ ಬೆತ್ತ ಕನ್ನಡದ ನೆಲದ್ದು. ಅದನ್ನು ನೀಡಿದ್ದು ಕರ್ನಾಟಕದ ಮೊದಲ ರಾಷ್ಟ್ರಕವಿ ಎಂಬ ಖ್ಯಾತಿಯ ಮಂಜೇಶ್ವರ ಗೋವಿಂದ ಪೈಗಳು ಎನ್ನುವುದು ವಿಶೇಷ. ದಂಡಿಯಾತ್ರೆಯಲ್ಲಿ ದೇಶದ ಸಹಸ್ರಾರು ಜನರು ಗಾಂಧೀಜಿ ಅವರನ್ನು ಹಿಂಬಾಲಿಸಿದ್ದರು. ಉತ್ತರ ಕನ್ನಡ, ಕರಾವಳಿ ಪ್ರದೇಶ ಸೇರಿ ದೇಶದ ವಿವಿಧೆಡೆಗಳಲ್ಲಿ ಉಪ್ಪಿನ ಸತ್ಯಾಗ್ರಹ …
Read More »ಪಾಲಿಕೆ ಸದಸ್ಯರಿಗೆ ಸಿಗದ ಧ್ವಜಾರೋಹಣ ಭಾಗ್ಯ
ಬೆಳಗಾವಿ: ಸ್ವಾತಂತ್ರ್ಯ ಮಹೋತ್ಸವದ ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಲೆ ರಾಷ್ಟ್ರ ಧ್ವಜಾರೋಹಣ ಮಾಡುವ ಸೌಭಾಗ್ಯ ಪಾಲಿಕೆಯ ಸದಸ್ಯರಿಗೆ ಒಲಿದು ಬರಲಿಲ್ಲ. ಈ ವಿಷಯದಲ್ಲಿ ಸರಕಾರ ಮತ್ತು ಸ್ಥಳೀಯ ಬಿಜೆಪಿ ಶಾಸಕರ ಭರವಸೆ ಮತ್ತೂಮ್ಮೆ ಹುಸಿಯಾಗಿದೆ. ಶಾಸಕರ ಮಾತು ನಂಬಿ ಮೇಯರ್ ಅಗುವ ಮೂಲಕ ದ್ವಜಾರೋಹಣ ಮಾಡುವ ಕನಸು ಕಂಡಿದ್ದ ಸದಸ್ಯರಿಗೆ ನಿರಾಸೆಯಾಗಿದೆ. ಜೊತೆಗೆ ಈ ನಿರಾಸೆಯ ಬೆನ್ನಲ್ಲೇ ಬಿಜೆಪಿ ಸದಸ್ಯರಲ್ಲಿ ಶಾಸಕರ ನಡೆಯ ಬಗ್ಗೆ ಅಸಮಾಧಾನ …
Read More »ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ
ಚಿಕ್ಕೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ವೇಳೆ ಚಿಕ್ಕೋಡಿ ತಾಲೂಕಾಡಳಿತ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮರೆತಿದ್ದ ಹಿನ್ನಲೆ ದಲಿತ ಸಂಘಟನೆಗಳು ತಾಲೂಕಾಡಳಿತ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕೋಡಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ ಸಂದರ್ಭ ಚಿಕ್ಕೋಡಿ ತಾಲೂಕಾಡಳಿತ ಮಹಾತ್ಮಾ ಗಾಂಧೀಜಿಯವರ ಒಂದೇ ಪೋಟೋ ಇಟ್ಟು ಯಡವಟ್ಟು ಮಾಡಿಕೊಂಡಿದೆ. ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಬಿಟ್ಟು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ …
Read More »ಸ್ವಾತಂತ್ರ್ಯ ದಿನಾಚರಣೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಚಾಮರಾಜಪೇಟೆ ಮೈದಾನ
ಬೆಂಗಳೂರು: ಹಲವು ವಿವಾದಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು. ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ. ಮೋಹನ್, ಶಾಸಕರಾದ ಜಮೀರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ …
Read More »ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ
ಬೆಂಗಳೂರು: ನೆಹರು ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೊಮ್ಮಾಯಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲುವಾಸ ಅನುಭವಿಸಿದ್ದರಾ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ನೆಹರು ಅವರ ಕೊಡುಗೆಯಿದೆ. ನೆಹರು ಜೈಲು ವಾಸ ಅನುಭವಿಸಿದ್ದರು. ಈಶ್ವರಪ್ಪ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ರಾ? ಬೊಮ್ಮಾಯಿ ಜೈಲುವಾಸ ಅನುಭವಿಸಿದ್ರಾ? ಅವನ್ಯಾವನೋ ರವಿಕುಮಾರ್ ಜೈಲಿಗೆ …
Read More »