Breaking News

ಆರೋಗ್ಯ ಉಚಿತ ತಪಾಸಣಾ ಶಿಬಿರ 16ರಂದು

ಗೋಕಾಕ: ಉಚಿತ ಕಣ್ಣಿನ ಪೊರೆ ತಪಾಸಣೆ ಬೃಹತ್ ಶಿಬಿರವನ್ನು ಮಾರ್ಚ್‌ 16ರಂದು ಮುಂಜಾನೆ 9ರಿಂದ ಮಧ್ಯಾಹ್ನ 1:30ರ ವರೆಗೆ ತಾಲ್ಲೂಕಿನ ಮಮದಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ವಿಶೇಷವಾಗಿ ಮಕ್ಕಳ ತಪಾಸಣೆ, ರಕ್ತದೊತ್ತಡ, ಹೃದಯ, ಚರ್ಮರೋಗ ತಪಾಸಣೆ ಸಹ ಉಚಿತವಾಗಿ ಮಾಡಲಾಗುತ್ತಿದೆ. ಡಾ.ಎಂ.ಎಸ್.ಕೊಪ್ಪದ, ಡಾ.ಅಶೋಕ ಮುರಗೋಡ, ಡಾ.ಸಿದ್ದಣ್ಣ ಕಮತ, ಕಣ್ಣಿನ ತಜ್ಞ ಡಾ. ಸಂದೀಪ್ ಕೋಲಕಾರ, ಡಾ. ಅಮರ ಮುರುಗೋಡ, ಡಾ.ಪ್ರಮಿತಾ ಮುರುಗೋಡ, ಡಾ.ಪ್ರೀತಿ ಚೌಧರಿ ಹಾಗೂ ನೇತ್ರಾಧಿಕಾರಿ …

Read More »

ನಂದಗಡ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ಧ ದೂರು

ಖಾನಾಪುರ: ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆಯ ಅಧಿಕಾರಿಗಳು ಸರ್ಕಾರದ ಆದೇಶವಿದ್ದರೂ ಕಳೆದ 8 ತಿಂಗಳಿಂದ ಪ್ರತಿ ತಿಂಗಳು ದಲಿತರ ದಿನವನ್ನು ಆಚರಿಸದೇ ದಲಿತ ಸಮುದಾಯದವರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಮತ್ತು ದಲಿತರ ಸಭೆ ಆಯೋಜಿಸದೇ ಮೇಲಧಿಕಾರಿಗಳಿಗೆ ಸಭೆ ನಡೆಸಿರುವ ಬಗ್ಗೆ ಖೊಟ್ಟಿ ನಡಾವಳಿ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸಂತೋಷ ತಳವಾರ ದೂರು ನೀಡಿದ್ದಾರೆ. ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ನಂದಗಡ ಪೊಲೀಸ್ ಠಾಣೆಯ ಅಧಿಕಾರಿಗಳ …

Read More »

ಹಿರೇಬಾಗೇವಾಡಿ: ಸರ್ಕಾರಿ ಬಸ್ ಹಾಯ್ದು ಬೈಕ್ ಸವಾರ ಸಾವು

ಹಿರೇಬಾಗೇವಾಡಿ: ಸರ್ಕಾರಿ ಬಸ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಬಸವನಗರದ ಬಳಿ ಬೆಳಗಾವಿ- ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಜರುಗಿದೆ. ಖಾನಾಪೂರ ತಾಲ್ಲೂಕಿನ ಅವರೊಳ್ಳಿ ಗ್ರಾಮದ ರಾಜಗೌಡ ಕಲ್ಲನಗೌಡ ಪಾಟೀಲ (45) ಮೃತರು. ಹಿಂಬದಿ ಕುಳಿತಿದ್ದ ಅವರ ಪತ್ನಿ ಸುನಿತಾ ಅವರು ಸಾಧಾರಣ ಗಾಯಗೊಂಡಿದ್ದಾರೆ. ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

ಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ‘ಬಾಗಲಕೋಟೆಯಲ್ಲಿ ಗೆಲ್ಲಲು ಎಲ್ಲ ತಯಾರಿ ಮಾಡಿದ್ದೇವೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಅಗತ್ಯ. ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಇಲ್ಲಿ ಪತ್ರಕರ್ತರೊಂದಿಗೆ ತಿಳಿಸಿದರು. ‘ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆಯೇ’ ಎಂಬ …

Read More »

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

ಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು ಅಂತ ಸಚಿವ ಮುನಿಯಪ್ಪ  ತಿಳಿಸಿದ್ದಾರೆ. ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜ ಮತ್ತು ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಆಟೋ, ಹೋಟೆಲ್‌ಗಳಿಗೆ ಗ್ಯಾಸ್ ಸಿಕ್ತಿಲ್ಲ. ಗ್ಯಾಸ್ ಕಾಳಸಂತೆಯಲ್ಲಿ ಮಾರಾಟ ಆಗ್ತಿದೆ. ಹೋಟೆಲ್‌ನಲ್ಲಿ ತಿಂಡಿ, ಊಟ ಸಮಸ್ಯೆ ಆಗ್ತಿದೆ. ಗ್ಯಾಸ್ ರೇಟ್ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ …

Read More »

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ ಅಂತ ಸಚಿವ ಶಿವರಾಜ್ ತಂಗಡಗಿ  ತಿಳಿಸಿದ್ದಾರೆ. ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ ಮಾಡಿದರು. ಸರ್ಕಾರ ಕನ್ನಡ ನೆಲ, ಜಲಕ್ಕೆ ಹೋರಾಟ ಮಾಡಿದ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಬೇಕು. ವಾಟಾಳ್ ನಾಗರಾಜ್  ಸೇರಿ ಕನ್ನಡಪರ ಹೋರಾಟಗಾರಿಗೆ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಕೊಡಬೇಕು. ಕನ್ನಡ …

Read More »

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ  ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ …

Read More »

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ  ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಪ್ರಶ್ನೆ ಕೇಳಿದರು. 3 ವರ್ಷಗಳಲ್ಲಿ ವಸತಿ ನಿಲಯಗಳಲ್ಲಿ ನೂರಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಫಲ್ಯ, ವೈಯಕ್ತಿಕ ಕಾರಣ ಸೇರಿ ಹಲವು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. 7-8ನೇ ತರಗತಿ …

Read More »

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ

ನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ನೀಡಿದರೆ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ನಾವು ಅಂತಹ ಕಾನೂನನ್ನು ರೂಪಿಸಲು ನಿರ್ದೇಶನ ನೀಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅಭಿಪ್ರಾಯಪಟ್ಟಿದ್ದಾರೆ. ವಕೀಲ ಶೈಲೇಂದ್ರ ಮಣಿ ಎಂಬವರು ಸಂಬಳದೊಂದಿಗೆ ಮುಟ್ಟಿನ ರಜೆ ನೀಡುವಂತೆ ನಿಯಮಗಳನ್ನು ರೂಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಸಿಜೆಐ ಮತ್ತುನ್ಯಾಯಮೂರ್ತಿ …

Read More »

ನಿಯಮ ಉಲ್ಲಂಘಿಸಿದರೆ ದಂಡ, ಶಿಕ್ಷೆ: ತಂಬಾಕು‌ ಮಾರಾಟಗಾರರಿಗೆ ಎಚ್ಚರಿಕೆ

ಬೆಳಗಾವಿ: ತಂಬಾಕು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಕೋಟ್ಟಾ-2003 ರ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ರಾಮದುರ್ಗ ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಗುರುವಾರ(ಮಾ.12) ರಾಮದುರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಿಪಿಐ ವಿನಾಯಕ ಬಡಿಗೇರ ಅವರು, ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಕೋಟ್ಟಾ ಕಾಯ್ದೆ ಕುರಿತು ತಿಳಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಶ್ವೇತಾ ಪಾಟೀಲ್, ತಂಬಾಕು …

Read More »