Breaking News

ಮಂಗಳೂರು; ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿಪಡೆದ ಹೆದ್ದಾರಿಯ ಗುಂಡಿ

ಮಂಗಳೂರು, ಆಗಸ್ಟ್ 12: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಇಂಜಿನಿಯರ್ ವಿದ್ಯಾರ್ಥಿ ಬಲಿಯಾದ ಘಟನೆ ನಗರದ ನಂತೂರು ಬಳಿಯ ಬಿಕರ್ಣಕಟ್ಟೆಯಲ್ಲಿ ನಡೆದಿದೆ. ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಿದ್ಯಾರ್ಥಿಯ ಸ್ನೇಹಿತ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲಾತಾಣದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ರಸ್ತೆಯಲ್ಲಿರುವ ಗುಂಡಿಯಿಂದ ತನ್ನ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ರಸ್ತೆಯ ರಿಫ್ಲೆಕ್ಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿ ಆತೀಷ್ (20) ಎಂಬ ಯುವಕ …

Read More »

ದರ್ಪ ತೋರಿದ್ದ ಕುರುಗೋಡು ಪಿಎಸ್ ಐ ಮಣಿಕಂಠ ಅಮಾನತು

ಕುರುಗೋಡು : ಕುರುಗೋಡು ಪಿ ಎಸ್ ಐ ಆಗಿದ್ದ ಮಣಿಕಂಠ ಅವರನ್ನು ಬಳ್ಳಾರಿ ಎಸ್ ಪಿ ಸೈದುಲು ಅಡಾವತ್ ಅವರು ಅಮಾನತುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಹಿಂದೆ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ನಡೆದ ಸಾರ್ವಜನಿಕ ಸಭೆ ವೇಳೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಹೋದಾಗ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬರ ಮೇಲೆ ಪಿ ಎಸ್ ಐ ಮಣಿಕಂಠ ಹಲ್ಲೆ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ …

Read More »

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. ಭಕ್ತವತ್ಸಲ ಸಮಿತಿ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನ್ಯಾ. ಭಕ್ತವತ್ಸಲ ಸಮಿತಿಯ ಶಿಫಾರಸಿಗೆ ಒಪ್ಪಿಗೆ ನೀಡಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಾದಿ ಸುಗಮವಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು …

Read More »

ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ: ಆರ್‌ಬಿಐ ತಾಕೀತು

ಮುಂಬೈ: ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ತಾಕೀತು ಮಾಡಿದೆ. ಅಲ್ಲದೆ, ವಸೂಲಿ ಏಜೆಂಟರು ಸಾಲಗಾರರಿಗೆ ಬೆಳಿಗ್ಗೆ 8 ಗಂಟೆಯ ಮೊದಲು ಹಾಗೂ ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಕೂಡ ಹೇಳಿದೆ.   ಬ್ಯಾಂಕ್‌, ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಮತ್ತು ಆಸ್ತಿ ಪುನರ್‌ರಚನಾ ಕಂಪನಿಗಳಿಗೆ (ಎಆರ್‌ಸಿ) ಈ ಹೆಚ್ಚುವರಿ ಸೂಚನೆಗಳು ಅನ್ವಯವಾಗುತ್ತವೆ. …

Read More »

ಕುರಿ, ಕೋಳಿ ಸಾಕಾಣಿಕೆ ಘಟಕ ಸ್ಥಾಪನೆಗೆ ಅರ್ಜಿ ಅಹ್ವಾನ

ಬೆಂಗಳೂರು, ಆಗಸ್ಟ್ 12: ‘ರಾಷ್ಟ್ರೀಯ ಜಾನುವಾರು ಮಿಷನ್’ ಯೋಜನೆಯಡಿ ಸಹಾಯಧನ ಸಹಿತ ಕುರಿ ಮತ್ತು ಕೋಳಿ ಸಾಕಾಣಿಕೆ ಘಟಕ ಸ್ಥಾಪಿಸುವವರಿಂದ ಕೇಂದ್ರ ಸರ್ಕಾರ ಅರ್ಜಿ ಅಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಲು ಅಗತ್ಯವಾಗಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.   ಕೇಂದ್ರ ಸರ್ಕಾರ ‘ರಾಷ್ಟ್ರೀಯ ಜಾನುವಾರು ಮಿಷನ್’ ಯೋಜನೆಯಡಿ ಉದ್ಯಮಶೀಲತೆಯ ಅಭಿವೃದ್ಧಿಗಾಗಿ 2021-22ರ ಸಾಲಿಗೆ ಯೋಜನೆಯ ಮಾರ್ಗಸೂಚಿ ಅಡಿಯಲ್ಲಿ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ಬೆಂಗಳೂರು ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, …

Read More »

ಹೊರಗುತ್ತಿಗೆ ಹುದ್ದೆ’ಯ ನಿರೀಕ್ಷೆಯಲ್ಲಿದ್ದ ‘ಮಹಿಳಾ ಅಭ್ಯರ್ಥಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೇ.33ರಷ್ಟು ಹುದ್ದೆ’ ಮೀಸಲಾತಿ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದಂತ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.   ಈ ಕುರಿತಂತೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳ್ನು ಹೊರಗುತ್ತಿಗೆ ಮೂಲಕ ಪಡೆಯಲಾಗುವ ಸೇವೆಗಳಲ್ಲಿ ಹಾಗೂ …

Read More »

ಪ್ರಭಾವಿ ಭ್ರಷ್ಟರಿಗೆ ಲೋಕಾ ನಡುಕ ಶುರು; ಭ್ರಷ್ಟಾಚಾರ ಆರೋಪದಲ್ಲಿ ಕೇಸ್​ ದಾಖಲಿಸಲು ಸ್ವತಂತ್ರ

ಬೆಂಗಳೂರು : ಹೈಕೋರ್ಟ್​ ಆದೇಶದ ಅನ್ವಯ ಲೋಕಾಯುಕ್ತ ಬಲಪಡಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ನಿರೀೆಯಂತೆ ಲೋಕಾಯುಕ್ತ ಬಲಗೊಂಡರೆ ಪ್ರಭಾವಿ ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಸಿಬಿಯಲ್ಲಿ ದಾಖಲಾಗಿರುವ 1803 ಪ್ರಕರಣಗಳೂ ಲೋಕಾಯುಕ್ತ ವ್ಯಾಪ್ತಿಗೆ ವರ್ಗಾವಣೆಯಾಗುವ ಹಿನ್ನೆಲೆಯಲ್ಲಿ ಎಸಿಬಿ ದಾಳಿಗಷ್ಟೇ ಸೀಮಿತವಾಗಿ ನಿರಾಳರಾಗಿದ್ದ ಆರೋಪಿಗಳಿಗೂ ಈಗ ಕಾನೂನಿನ ಬಿಸಿ ತಟ್ಟಲಿದೆ.   ಲೋಕಾಯುಕ್ತ ಪೊಲೀಸ್​ ವಿಭಾಗದಲ್ಲಿ ಅಂದಾಜು 350 ಪ್ರಕರಣಗಳು ತನಿಖಾ ಹಂತದಲ್ಲಿವೆ. ಈ ಪ್ರಕರಣಗಳನ್ನು ಇತ್ಯರ್ಥಪಡಿಸಿದರೆ …

Read More »

ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿದ

ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಕರಿಸಿದ್ದಪ್ಪ ಕಳಸದ ಮೃತ ದುರ್ದೈವಿ. ಸಿದ್ದನಗೌಡ ದೂಳಪ್ಪ ಹತ್ಯೆಗೈದ ಆರೋಪಿ. ಊಟದ ವಿಚಾರವಾಗಿ ಯೋಧ ಹಾಗೂ ಆತನ ಪತ್ನಿ ವಿದ್ಯಾ ನಡುವೆ ಗಲಾಟೆ ನಡೆದಿದೆ. ಇದರಿಂದ ಬೇಸರಗೊಂಡ ವಿದ್ಯಾ ತನ್ನ ಸಹೋದರ ಸಿದ್ದನಗೌಡನಿಗೆ ಕರೆ ಮಾಡಿ ಹೇಳಿದ್ದಾಳೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ-ಹೆಂಡತಿ …

Read More »

ಒಳ ಉಡುಪಿನಲ್ಲಿ ಚಿ‌ನ್ನ ಸಾಗಣೆ: ಮಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕ ವಶಕ್ಕೆ

ಮಂಗಳೂರು: ಒಳ ಉಡುಪಿನ ಕಿಸೆಯೊಳಗೆ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಬುಧವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ‌ಆಗಮಿಸಿದ ಪ್ರಯಾಣಿಕನ ಬಳಿಯಿದ್ದ ಒಳ ಉಡುಪಿನ ಪಾಕೆಟ್​ನೊಳಗೆ ಚಿನ್ನ ಪತ್ತೆಯಾಗಿದೆ. ಪ್ರಯಾಣಿಕನನ್ನು ತಪಾಸಣೆ ನಡೆಸಿದ ವೇಳೆ, ಆತನ ಬ್ಯಾಗ್​ನಲ್ಲಿದ್ದ ಒಳ ಉಡುಪಿನ ಹೊಲಿಗೆ ಹಾಕಲಾದ ಪಾಕೆಟ್​ನೊಳಗೆ ಚಿನ್ನ ಪತ್ತೆಯಾಗಿದೆ. 24K ನ 831 ಗ್ರಾಂ ಚಿನ್ನ …

Read More »

ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡ ಅಮೆಜಾನ್​ಗೆ 33 ಲಕ್ಷ ಡಾಲರ್ ದಂಡ

ಬಾರ್ಸಿಲೋನಾ (ಸ್ಪೇನ್): ತಂತ್ರಜ್ಞಾನ ಕ್ಷೇತ್ರದ ಮುಂಚೂಣಿ ಕಂಪನಿಯಾಗಿರುವ ಅಮೆಜಾನ್ ವಿರುದ್ಧ ಬಾರ್ಸಿಲೋನಾ ಸ್ಥಳೀಯ ಕಾರ್ಮಿಕ ಇಲಾಖೆ ತನಿಖೆ ಆರಂಭಿಸಿದೆ. ಅಮೆಜಾನ್ ಸ್ಪೇನ್​ನ ಕ್ಯಾಟಲೋನಿಯಾದಲ್ಲಿ ಹಲವಾರು ವರ್ಷಗಳವರೆಗೆ ಉಪಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. 2020ರಲ್ಲಿಯೂ ಇದೇ ರೀತಿಯ ಕಾನೂನು ಬಾಹಿರ ಕೃತ್ಯಕ್ಕಾಗಿ ಕಂಪನಿಯು ಅಂದಾಜು 8 ಲಕ್ಷ 26 ಸಾವಿರ ಡಾಲರ್​ಗೂ ಅಧಿಕ ದಂಡ ಪಾವತಿಸಿತ್ತು. ಈ ಬಾರಿ ಅಮೆಜಾನ್​ಗೆ 33 ಲಕ್ಷ ಡಾಲರ್​ ದಂಡ ವಿಧಿಸಲಾಗಿದೆ …

Read More »