ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಭವ್ಯ ಮೂರ್ತಿಯ ಪ್ರತಿಷ್ಠಾಪನೆಯ ಕಾರ್ಯಕ್ರಮವು ಅಥಣಿ ಪಟ್ಟಣದಲ್ಲಿ ವಿಜೃಂಭಣೆಯಿಂದ ಜರುಗಿತು ಅಥಣಿ ಪಟ್ಟಣಕ್ಕೆ ಬೆಳಗಿನ ಜಾವ ಆಗಮಿಸಿದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ನೂರಾರು ಕುಂಭಹೊತ್ತ ಮಹಿಳೆಯರು ಮತ್ತು ಡೊಳ್ಳು ಕುಣಿತದೊಂದಿಗೆ ಉತ್ಸಾಹಿ ಯುವಕರು ಹಾಲುಮತದ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸ್ವಾಗತಿಸಿದರು.ಪಟ್ಟಣದ ಶಿವಾಜಿ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಿದ್ದೇಶ್ವರ ದೇವಸ್ಥಾನ ಹತ್ತಿರ ರಾಮಣ್ಣ ವೃತ್ತದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಚಿಕ್ಕೋಡಿ …
Read More »ಸತತ ಮಳೆಯ ಅಬ್ಬರ ಹಲಸಿ ಗ್ರಾಮದಲ್ಲಿಯೂ ಎರಡು ಮನೆಗಳ ಗೋಡೆಗಳು ಬಿದ್ದಿವೆ.
ಸತತ ಮಳೆಯ ಅಬ್ಬರಕ್ಕೆ ಖಾನಾಪೂರ ತಾಲೂಕಿನ ಮನೆಗಳು, ಮನೆಗಳ ಗೋಡೆಗಳು ಬೀಳುವ ವರದಿಗಳು ಸಂಭವಿಸುತ್ತಲ್ಲೇ ಇದ್ದು ಐತಿಹಾಸಿಕ ಹಲಸಿ ಗ್ರಾಮದಲ್ಲಿಯೂ ಎರಡು ಮನೆಗಳ ಗೋಡೆಗಳು ಬಿದ್ದಿವೆ. ಹಲಸಿ ಗ್ರಾಮದ ಜಹೂರ ಅಬ್ಬಾಸಿ ಮತ್ತು ಚನ್ನಬಸವರಾಜ ಡಿಗ್ಗಿಮಠ ಎಂಬವರಿಗೆ ಸೇರಿದ ಎರಡು ಮನೆ ಗೋಡೆಗಳು ಹಿಂಬದಿಯಿಂದ ಬಂದಿದ್ದು, ಅದೃಷ್ಟವಶ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಎರಡು ಮನೆಗಳ ಗೋಡೆಗಳು ಸತತ ಮಳೆಯಿಂದ ನೆನೆದು, ಉಳಿದ ಮನೆಯೂ ಕೂಡಾ ಅಪಾಯಕಾರಿ ಸ್ಥಿತಿಯಲ್ಲಿವೆ. ಇದನ್ನು …
Read More »8 ಐಪಿಎಸ್ ಅಧಿಕಾರಿಗಳಿಗೆ E.D. ಸಮನ್ಸ್
ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು 8 ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣ ಸಂಬಂಧ ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್, ಕೋಟೇಶ್ವರ್ ರಾವ್, ಎಸ್.ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್, ತಥಾಗತ ಬಸು ಸೇರಿ 8 ಐಪಿಎಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಆಗಸ್ಟ್ 21ರಿಂದ 31ರವರೆಗೆ ಅಧಿಕಾರಿಗಳ ವಿಚಾರಣೆ ನಡೆಯಲಿದೆ. ಈ 8 …
Read More »ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.
ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ …
Read More »ಗಾಲಿ ಜನಾರ್ದನ ರೆಡ್ಡಿ ರೀ ಎಂಟ್ರಿ! ಮತ್ತೆ ಗಣಿಗಾರಿಕೆ ಗ್ಯಾರಂಟಿ!
ಅನಂತಪುರ, ಆಗಸ್ಟ್ 11: ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಎದುರಿಸಿರುವ ಕರ್ನಾಟಕದ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತೆ ಸಕ್ರಿಯ ಉದ್ಯಮಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದಾರೆ. ಕಬ್ಬಿಣ ಅದಿರು ಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿರುವ ರೆಡ್ಡಿಗೆ ಆಂಧ್ರಪ್ರದೇಶ ಸರ್ಕಾರ ಮುಕ್ತ ಆಹ್ವಾನ ನೀಡಿರುವ ಸುದ್ದಿ ಬಂದಿದೆ. ಕರ್ನಾಟಕ – ಆಂಧ್ರಪ್ರದೇಶದ ಗಡಿಯಲ್ಲಿರುವ ಓಬಳಾಪುರಂ ಗಣಿಯಲ್ಲಿ ಎಂದಿನಂತೆ ಚಟುವಟಿಕೆ ನಡೆಸಲು ಇದ್ದ …
Read More »ಕೊಪ್ಪಳದಲ್ಲಿ ಕೋಮುಘರ್ಷಣೆ: 2 ಸಾವು, 6 ಮಂದಿಗೆ ಗಾಯ, ನಿಷೇದಾಜ್ಞೆ ಜಾರಿ
ಘರ್ಷಣೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಮೃತಪಟ್ಟಿದ್ದು, ೬ ಮಂದಿ ಗಾಯಗೊಂಡಿದ್ದಾರೆ . ಧರ್ಮಣ್ಣ ಹರಿಜನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಗ್ರಾಮದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ . ಡಿವೈಎಸ್ ಪಿ ರುದ್ರೇಶ್ ಉಜ್ಜನಕೊಪ್ಪ , ತಹಶೀಲ್ದಾರ್ ಧನಂಜಯ ಮಾಲಗತ್ತಿ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು , 100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ . …
Read More »ಮೋದಿ ವಿರುದ್ಧ ಯೋಗಿ ಬಂಡಾಯ: ಆಮ್ ಆದ್ಮಿ ಪಕ್ಷದ ನಾಯಕರು ನೀಡಿದ ಕಾರಣವೇನು?
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, ‘ಬಿಜೆಪಿಯ ಉನ್ನತ ನಾಯಕತ್ವದ ವಿರುದ್ಧ ಯೋಗಿ ಆದಿತ್ಯನಾಥ್ ದಂಗೆ ಎದ್ದಂತಿದೆ’ ಎಂದು ಹೇಳಿದೆ. ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಉಚಿತ ಕೊಡುಗೆಗಳನ್ನು ನೀಡುವ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ’ ಎಂದು ಹೇಳಿದ್ದರು. …
Read More »ಬೃಹತ್ ಐಟಿ ದಾಳಿ; 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿ ಪತ್ತೆ!
ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.ಮುಂಬೈ: ಮಹಾರಾಷ್ಟ್ರದಲ್ಲಿ ಬೃಹತ್ …
Read More »ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶಿಸಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಮಾತನಾಡಿ, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ …
Read More »ಹಿಡಕಲ್ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಬೆಳಗಾವಿ: ಘಟಪ್ರಭಾ ನದಿಗೆ ನಿರ್ಮಿಸಲಾದ ಹಿಡಕಲ್ (ರಾಜಾ ಲಖಮಗೌಡ) ಜಲಾಶಯ ಶೇ. 94ರಷ್ಟು ಭರ್ತಿಯಾಗಿದ್ದು ಕೆಲವೇ ಗಂಟೆಗಳಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2175 ಅಡಿಗಳಿದ್ದು ಗುರುವಾರ ಬೆಳಗ್ಗ 8.30ರ ವೇಳೆಗೆ 2171.333 ಅಡಿ ನೀರಿದೆ. ಒಳಹರಿವಿನ ಪ್ರಮಾಣ 29133 ಕ್ಯೂಸೆಕ್ ಇರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಘಟಪ್ರಭಾ …
Read More »