Breaking News

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿದ್ದ ಪತ್ನಿ

ಮಳವಳ್ಳಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ, ಶಾಂತಂ ಪಾಪಂ‌ ಸೀರಿಯಲ್ ನಲ್ಲಿ ಬರುವ ಸನ್ನಿವೇಶದ ರೀತಿ ಹತ್ಯೆ ಮಾಡಿದ್ದ ಪತ್ನಿ ಮತ್ತು ಪ್ರಿಯಕರನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.   ಪಟ್ಟಣದ ಇನ್ ಇಎಸ್ ಬಡಾವಣೆಯ ಶಶಿಕುಮಾರ್(35) ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಪತ್ನಿ ನಾಗಮಣಿ(28) ಹಾಗೂ ಪ್ರಿಯಕರ ಕನಕಪುರದ ನಿವಾಸಿ ಹೇಮಂತ್(25) ಬಂಧಿತರು. ನಾಗಮಣಿ ಮತ್ತು ಹೇಮಂತ್ ಕನಕಪುರ ಗ್ರಾಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಯವಾಗಿ ಅನೈತಿಕ …

Read More »

ಶಿಕ್ಷಕರ ಅಕ್ರಮ ನೇಮಕಾತಿ: ಮತ್ತೊಬ್ಬ ಶಿಕ್ಷಕನ ಬಂಧನ  

ವಿಜಯಪುರ: ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಕೈಚಳಕ ತೋರಿದ ವಿಜಯಪುರ ಜಿಲ್ಲೆಯ ಶಿಕ್ಷಕರನ್ನು ಒಬ್ಬೊಬ್ಬರಾಗಿ ಬಲೆಗೆ ಕೆಡವುತ್ತಿದ್ದಾರೆ. ಇದೀಗ ಮತ್ತೂಬ್ಬ ಶಿಕ್ಷಕ ಅಶೋಕ ಚವ್ಹಾಣ ಎಂಬಾತನನ್ನು ಬಂಧಿ ಸಿ ವಿಚಾರಣೆ ನಡೆಸಿದ್ದಾರೆ. ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ನಂಟು ಗಾಢವಾಗಿರುವುದು ಶಿಕ್ಷಕರ ಸರಣಿ ಬಂಧನ ಇಂಬು ನೀಡುತ್ತಿದೆ. ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕನಾಗಿ ಸೇವೆ …

Read More »

ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಪ್ರತಿಭಟಿಸಿ ಕೆಸರು ನೀರಲ್ಲೇ ಸ್ನಾನ ಮಾಡಿದ ಶಾಸಕಿ

ರಾಂಚಿ: ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ (National Highway) ತುಂಬಿದ ಕೆಸರಲ್ಲಿ (Mud) ಕುಳಿತು ಶಾಸಕಿಯೊಬ್ಬರು (MLA) ಸ್ನಾನ (Bath) ಮಾಡಿ ಪ್ರತಿಭಟಿಸಿರುವ ಘಟನೆ ಜಾರ್ಖಂಡ್‌ನ (Jharkhand) ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ. ಶಾಸಕಿ ಕೊಳಚೆ ನೀರಿನಲ್ಲಿ ಮಿಂದು ತಕ್ಷಣವೇ ರಸ್ತೆಯ ದುರಸ್ತಿ ಮಾಡುವಂತೆ ಒತ್ತಾಯಿಸಿದ್ದಾರೆ. ಮಹಾಗಾಮಾದ ಕಾಂಗ್ರೆಸ್ ಶಾಸಕಿ ದೀಪಿಕಾ ಪಾಂಡೆ ಸಿಂಗ್ ಅವರು ತಮ್ಮ ಮೇಲೆ ಕೆಸರು ನೀರನ್ನು ಸುರಿದುಕೊಂಡು, ಈ ರಸ್ತೆಯ ದುರಸ್ತಿಯನ್ನು ಕೈಗೊಂಡು ದೊಡ್ಡ ಗುಂಡಿಗಳನ್ನು ಮುಚ್ಚಲು ಈಗಿಂದೀಗಲೇ ಮುಂದಾಗದಿದ್ದರೆ, …

Read More »

PAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಅಸೆಂಬ್ಲಿ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜ್ಯ ರಾಜಕೀಯ ಕಾವೇರಿದೆ. ಬಿಜೆಪಿ (BJP) ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡ್ತಿರುವ ಕಾಂಗ್ರೆಸ್ (Congress), ಈ ವಿಚಾರದಲ್ಲಿ ದಿನಕ್ಕೊಂದು ಅಸ್ತ್ರ ಪ್ರಯೋಗಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಲು ಪ್ರಯತ್ನ ನಡೆಸಿದೆ. ಇಂದು ಯುಪಿಐ ಪೇಮೆಂಟ್ (UPI Payment) ಆಪ್ `ಪೇಟಿಎಂ” ಮಾದರಿಯಲ್ಲಿ `ಪೇ ಸಿಎಂ’ (PayCM) Poster ಪೋಸ್ಟರ್‌ಗಳನ್ನು ಅಂಟಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಇತ್ತ ಪೋಸ್ಟರ್ ಅಭಿಯಾನವನ್ನು …

Read More »

ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ -ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಯೋಜನೆಯಡಿ ಕಾರ್ಡ್ ವಿತರಣೆಯ ಮಧ್ಯಂತರ ಗುರಿಯಾಗಿ ಅ.2 ರೊಳಗೆ 1 ಕೋಟಿ ಗುರುತಿನ ಚೀಟಿ ಸಿದ್ದುಪಡಿಸಿ ವಿತರಿಸಲು ತೀರ್ಮಾನಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಸಾರ್ವಜನಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆಭರಣದಲ್ಲಿ ಗುರುತಿನ ಚೀಟಿ …

Read More »

ಬಿಗ್‌ ಬಾಸ್‌-9ರ ಮನೆಗೆ ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ರಿಯಾಲಿಟಿ ಶೋಬಿಗ್‌ ಬಾಸ್‌9ನೇ ಆವೃತ್ತಿಯ ಮನೆಗೆ ಯಾರೆಲ್ಲಾ ಬರ್ತಿದ್ದಾರೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಿದೆ. ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ ಬಾಸ್‌ ರಿಯಾಲಿಟಿ ಶೋ ಸೆಪ್ಟೆಂಬರ್‌ 24ರಂದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗಲಿದೆ. ಬಿಗ್‌ ಬಾಸ್‌ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಕುತೂಹಲ ಮುಂದುವರಿದಿದ್ದು ಮೂಲಗಳ ಪ್ರಕಾರ ಯಾರೆಲ್ಲಾ ಬರುತ್ತಿದ್ದಾರೆ ಎಂಬ ಮಾಹಿತಿಗಳು ಹೊರಗೆ ಬರುತ್ತಿವೆ. ಬಿಗ್ ಬಾಸ್ ಓಟಿಟಿಯಲ್ಲಿ ವಿಜೇತ ನಾಲ್ವರು ಸ್ಪರ್ಧಿಗಳು ಸೇರಿದಂತೆ ಇನ್ನೂ ಹೊಸಬರು ಹಾಗೂ …

Read More »

ಸರ್ಕಾರದ ಗೋಮಾಳ, ಕಾಣೆ,ಬಾಣೆ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ!

ಬೆಂಗಳೂರು : ಸರ್ಕಾರಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿನೀಡಿದ್ದು, ಶೀಘ್ರವೇ ಜಮೀನು ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.   ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸರ್ಕಾರಕ್ಕೆ ಸೇರಿದ ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ ಸೇರಿದಂತೆ ಕಾಣೆ, ಬಾಣೆ, ಕಮ್ಮಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಜಮೀನುಗಳನ್ನು ಸಕ್ರಮ ಮಾಡುವ ಸಂಬಂಧ ನೀತಿ ರೂಪಿಸಲು …

Read More »

ದಿಢೀರ್ ಕಾಣಿಸಿಕೊಂಡ ವಿಚಿತ್ರ ಕೀಟಕ್ಕೆ ಬೆಚ್ಚಿಬಿದ್ದ ಗದಗ ರೈತರು!

ಗದಗ, ಸೆಪ್ಟೆಂಬರ್ 21 : ತಾಲೂಕಿನ ಡಂಬಳ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಕಂಬಳಿ ಹುಳು ಆಕಾರದ ವಿಚಿತ್ರ ಕೀಟವೊಂದು ಹರಿದಾಡಿದ ಪರಿಣಾಮ ಆ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ತಮ್ಮ ಜಮೀನು ಕೆಲಸಕ್ಕೆ ಹೋಗಿದ್ದ ಸಿದ್ದಲಿಂಗಪ್ಪ ಕುರ್ತಕೋಟಿ ಮೈ ಮೇಲೆ ಈ ಹುಳು ಹರಿದಾಡಿದೆ. ಹಾಗಾಗಿ ಸಿದ್ದಲಿಂಗಪ್ಪ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಗುಣಮುಖರಾಗಿರುವ ಸಿದ್ದಲಿಂಗಪ್ಪ ಮನೆಯಲ್ಲಿದ್ದಾರೆ‌. ಅದೇ ಮಾದರಿಗೆ ಹುಳವೊಂದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹುಳು …

Read More »

ಅರ್ಜಿದಾರರಿಗೆ ಬರೋಬ್ಬರಿ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್‌

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಶ್ನಿಸಿ ಕ್ಷುಲ್ಲಕ ಅರ್ಜಿ ಸಲ್ಲಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮೂಲದ ವ್ಯಕ್ತಿಯೊಬ್ಬರಿಗೆ ಹೈಕೋರ್ಟ್‌ ಬರೋಬ್ಬರಿ 5 ಲಕ್ಷ ರೂ. ದಂಡ ಹಾಕಿದೆ. ಅರ್ಜಿದಾರರು ಸತ್ಯಾಂಶವನ್ನು ಬಚ್ಚಿಟ್ಟು, ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳುವ ಮಾಡಿದ್ದಲ್ಲದೆ, ನ್ಯಾಯಾಂಗದ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಇದನ್ನು ಸರ್ವತಃ ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಯತ್ನಗಳನ್ನು ನಿರ್ದಾಕ್ಷಿಣ್ಯವಾಗಿ ಮತ್ತು ಕಠೀಣಾತಿ ಕಠಿಣ ರೀತಿಯಲ್ಲಿ …

Read More »

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …

Read More »