Breaking News

ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದ ವ ಸಿದ್ದರಾಮಯ್ಯ

ಹುಬ್ಬಳ್ಳಿ : ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಇರಬಾರದು ಅಂತ ಹೇಳಿದ್ದೆ. ಹಿಂದೆ ಆರ್ ಎಸ್ ಎಸ್ ನ ಕೆಲವರು ರಾಷ್ಟ್ರಧ್ವಜ ಬೇಡ ಅಂದಿದ್ದವರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧ ಮಾಡಿದ್ದರು. ಆರ್ ಎಸ್ ಎಸ್ ನವರು ನಾಗರಪುರದ ಕಚೇರಿಯ ಮೇಲೆ ಎಂದಾದರೂ ತ್ರಿವರ್ಣ ಧ್ವಜ …

Read More »

ಮೈಸೂರು ದಸರಾಕ್ಕೆ ಮುನ್ನುಡಿ : ಸಾಂಪ್ರದಾಯಿಕ ಪೂಜೆ ಮೂಲಕ ಅರಮನೆ ಪ್ರವೇಶಿಸಿದ ಗಜಪಡೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯ ರೂವಾರಿಗಳಾದ ಗಜಪಡೆಗೆ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಅರಮನೆ ಅಂಗಳಕ್ಕೆ ಸ್ವಾಗತಿಸಲಾಯಿತು. ಈ ಮೂಲಕ ಅರಮನೆ ಅಂಗಳದಲ್ಲಿ ನಾಡಹಬ್ಬದ ಸಂಭ್ರಮ ಕಳೆಗಟ್ಟಿತು.   ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದು ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು ನೇತೃತ್ವದ ಗಜಪಡೆಗೆ 9.20 ರಿಂದ 10 ರೊಳಗೆ ಸಲ್ಲುವ ಕನ್ಯಾ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ …

Read More »

ಮೋದಿಯವರ ಸರ್ಕಾರ ಜನದ್ರೋಹಿಯಾದ ಮತ್ತು ದೇಶದ್ರೋಹಿ

ಬೆಂಗಳೂರು: ಮೋದಿಯವರ ಸರ್ಕಾರ ಜನದ್ರೋಹಿಯಾದ ಮತ್ತು ದೇಶದ್ರೋಹಿಯೂ ಆದ ವಿದ್ಯುಚ್ಛಕ್ತಿ ತಿದ್ದುಪಡಿ ಕಾಯ್ದೆ-2022 ನ್ನು ಲೋಕಸಭೆಯಲ್ಲಿ ಮಂಡಿಸಿ, ಅಂಬಾನಿ, ಅದಾನಿ ಮುಂತಾದ ಉದ್ಯಮಿಗಳ ಕೈಗೆ ಚಿನ್ನದ ಖಜಾನೆಗಳನ್ನೆ ಕೊಡಲು ಹೊರಟಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.   ಪತ್ರಿಕಾ ಹೇಳಿಕೆ ನೀಡಿದ್ದು, ವಿದ್ಯುತ್ ಕ್ಷೇತ್ರವು ನಮ್ಮ ಸಂವಿಧಾನದ 7ನೇ ಶೆಡ್ಯೂಲ್‍ನಲ್ಲಿ ಸಮವರ್ತಿ ಪಟ್ಟಿಯಲ್ಲಿರುವ ಕಾರಣದಿಂದ ಇದರಲ್ಲಿ ಯಾವುದೆ ತಿದ್ದುಪಡಿ ತರಬೇಕಾದರೆ ರಾಜ್ಯಗಳ ಸಹಮತಿ ಕಡ್ಡಾಯ ಕುರಿತು ಶಾಸನಸಭೆಗಳಲ್ಲಿ …

Read More »

ಅತಿವೃಷ್ಟಿಯ ಹಾನಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು.   ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು …

Read More »

ಬೆಳಗಾವಿ ಜಿಪಂ ಸಿಇಒ ದರ್ಶನ್ ವಿರುದ್ಧ ಸಿಎಂ ಬೊಮ್ಮಾಯಿ ಗರಂ

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಾ. 31ಕ್ಕೆ ಅನುಮೋದನೆ ಕೊಟ್ಟು ಇದುವರೆಗೆ ಒಂದೂ ಕಾಮಗಾರಿ ಆರಂಭಿಸದ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಎಚ್.ವಿ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.   ರಾಜ್ಯದ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲೆಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 597 ಕಾಮಗಾರಿಗಳು ಇವೆ. ಇದರಲ್ಲಿ ಕೇವಲ 215 …

Read More »

ಶಿರಡಿ ಸಾಯಿಬಾಬಾಗೆ ಭಕ್ತ 100 ಗ್ರಾಂ ತೂಕದ ಬಂಗಾರದ ಕೊಳಲು ಸಮರ್ಪಿಸಿದ್ದಾರೆ.

ಮಹಾರಾಷ್ಟ್ರ): ಮಹಾರಾಷ್ಟ್ರದ ಅಹ್ಮದ್​​ ನಗರ ಜಿಲ್ಲೆಯಲ್ಲಿರುವ ಪ್ರಸಿದ್ಧ ಶಿರಡಿ ಸಾಯಿಬಾಬಾಗೆ ದೆಹಲಿ ಮೂಲದ ಭಕ್ತರೊಬ್ಬರು ಚಿನ್ನದ ಕೊಳಲು ಅರ್ಪಿಸಿ ತಮ್ಮ ಭಕ್ತಿಯನ್ನು ಮರೆದಿದ್ದಾರೆ. ಅಂದಾಜು 100 ಗ್ರಾಂ ತೂಕದ ಈ ಬಂಗಾರದ ಕೊಳಲು 4.85 ಲಕ್ಷ ರೂ. ಬೆಲೆ ಬಾಳುತ್ತದೆ. ದೆಹಲಿಯ ರಿಷಬ್ ಲೋಹಿಯಾ ಎಂಬುವವರೇ ಶಿರಡಿ ಸಾಯಿಬಾಬಾಗೆ ಚಿನ್ನದ ಕೊಳಲು ಅರ್ಪಿಸಿರುವ ಭಕ್ತರು. ತಮ್ಮ ಕುಟುಂಬದ ಸಮೇತ ಶಿರಡಿಗೆ ಬಂದು ಇದನ್ನು ದೇವರಿಗೆ ಸಮರ್ಪಿಸಿದ್ದಾರೆ. ಸಾಯಿ ಬಾಬಾ ನಮಗೆ ಶ್ರೀಕೃಷ್ಣನ …

Read More »

ಕಾಂಗ್ರೆಸ್‌ ಮುಖ್ಯಮಂತ್ರಿ ಬದಲಾವಣೆಯ ಗಾಳಿಸುದ್ದಿ ಹರಡಿದ್ದಾರೆ.: ಗೋವಿಂದ ಕಾರಜೋಳ

ಬೆಳಗಾವಿ: ‘ದೇಶದಲ್ಲಿ ಇದೂವರೆ‌ಗಿನ ಯಾವುದೇ ಪ್ರಧಾನಿ, ನರೇಂದ್ರ ಮೋದಿ ಅವರಷ್ಟು ಪ್ರಖರ ದೇಶಭಕ್ತ ಆಗಿರಲಿಲ್ಲ. ಅವರ ಬಗ್ಗೆ ಮಾತನಾಡುವ ಅರ್ಹತೆ ಕಾಂಗ್ರೆಸ್ಸಿಗರಿಗೆ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.   ‘ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಾನು ಕಂಡ ಪ್ರಖರ ದೇಶಭಕ್ತ ಪ್ರಧಾನಿಯೆಂದರೆ ಅದು ಮೋದಿ ಅವರೇ. ಮಹಮ್ಮದ್‌ ಅಲಿ ಜಿನ್ನಾ ಜೊತೆ ಕೈ ಜೋಡಿಸಿದವರು ಕಾಂಗ್ರೆಸ್ಸಿಗರು. ದೇಶ ಒಡೆದವರು ಕಾಂಗ್ರೆಸ್ಸಿಗರು. ಇಂಥವರು ಹರ್‌ಘರ್‌ ತಿರಂಗಾ …

Read More »

ರಾಮದುರ್ಗದ ಕಾರ್ಯ ನಿರ್ವಾಹಕ ಅಧಿಕಾರಿಯಿಂದ ವಂಚಿತಗೊಳಗಾದ ಸರ್ಕಾರಿ ಶಾಲೆಗಳು

ಹೌದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿಗೆ ಸಂಬಂಧಿಸಿದ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಸಂಬಂಧಿಸಿದ ಸರ್ಕಾರಿ ಶಾಲೆಗಳು ರಾಮದುರ್ಗ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾದ “ಪ್ರವೀಣ್ ಸಾಲಿ” ಇವರಿಂದ ಅಭಿವೃದ್ಧಿ ಕಾಣದೆ ಹದಗೆಟ್ಟು ಹೋಗುತ್ತೇವೆ… ಪ್ರಿಯ ವಿಕ್ಷೆಕರೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಕಾಮಗಾರಿಗಳಾದ ಕಂಪೌಂಡ್, ಆಟದ ಮೈದಾನ, ಶೌಚಾಲಯ, ಅಡುಗೆ ಕೊನೆ, ಹೀಗೆ ಮುಂತಾದ …

Read More »

ಬೆಳಗಾವಿಯಲ್ಲಿ ಮತ್ತೊಂದು‌ ಮನೆ ಗೋಡೆ ಕುಸಿತ: 2 ತಿಂಗಳ ಹಸುಗೂಸು, ತಾಯಿ ಪಾರು

ಬೆಳಗಾವಿ: ಪಶ್ಚಿಮಘಟ್ಟ ಮತ್ತು ಬೆಳಗಾವಿ ಜಿಲ್ಲಾದ್ಯಂತ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭೂತರಾಮನಹಟ್ಟಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ 2 ತಿಂಗಳ ಹಸುಗೂಸು ಮತ್ತು ತಾಯಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಭೀಮರಾಯ ಪಾಟೀಲ್ (44) ಎಂಬವರಿಗೆ ಸೇರಿದ ಮನೆಯ ಗೋಡೆ ಇಂದು ಬೆಳಗಿನ ಜಾವ ನೆಲಸಮವಾಗಿದೆ. ಮನೆಯ ಹೊರ ಭಾಗದ ಗೋಡೆ ಕುಸಿತವಾಗುವುದನ್ನ ಗಮನಿಸಿದ ಭೀಮರಾವ್, ಕೂಡಲೇ ಮಗು ಮತ್ತು ತಾಯಿಯನ್ನ ಹೊರಗಡೆ ಕರೆದುಕೊಂಡು ಬಂದಿದ್ದಾರೆ. …

Read More »

ಮೊಹರಂ ಹಬ್ಬ ಆಚರಣೆ: ಕೊಂಡ ಹಾಯುವಾಗ ನಿಗಿ ನಿಗಿ ಕೆಂಡದಲ್ಲಿ ಬಿದ್ದ ಯುವಕ

ಬೆಳಗಾವಿ: ಮೊಹರಂ ಹಬ್ಬ ಆಚರಣೆ ಸಂದರ್ಭದಲ್ಲಿ ಯುವಕನೊಬ್ಬ ಕೆಂಡ ಹಾಯಲು ಹೋಗಿ ಬೆಂಕಿಯಲ್ಲಿ ಬಿದ್ದ ಘಟನೆ ಸವದತ್ತಿ ತಾಲೂಕಿನ ಕೋ-ಶಿವಾಪೂರ ಗ್ರಾಮದ ನಡೆದಿದೆ. ಮತ್ತೊಂದೆಡೆ, ಯುವಕನೊಬ್ಬ ಕೆಂಡವನ್ನು ಕೈಯಲ್ಲಿ ಹಿಡಿದು ಜನರ ಮೇಲೆ ಎರಚಿದ ಘಟನೆ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ. ಮೊಹರಂ ಹಬ್ಬದ ನಿಮಿತ್ತ ಪೂರ್ವಜರು ಮಾಡಿಕೊಂಡು ಬಂದ ಸಂಪ್ರದಾಯದಂತೆ ಕೋ-ಶಿವಾಪೂರ ಗ್ರಾಮದಲ್ಲಿ ಪ್ರತಿ ವರ್ಷವೂ ಕೆಂಡ ಹಾಯಲಾಗುತ್ತದೆ. ಈ ವೇಳೆ ಕೆಂಡ ಹಾಯಲು ಹೋಗಿ ಯುವಕನೊಬ್ಬ …

Read More »