ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಭಾನುವಾರ ಗೋಕಾಕದ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿಗಾಗಿ ಸ್ಮಾರ್ಟ್ ವಾಚ್ ಉಪಯೋಗಿಸಲೆತ್ನಿಸಿದ ಆರೋಪದಲ್ಲಿಅಭ್ಯರ್ಥಿಯೋರ್ವನನ್ನುಗೋಕಾಕ ಶಹರ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಆರೋಪಿ. ಕಳೆದ ಭಾನುವಾರ ಗೋಕಾಕ ನಗರದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಬಂಧಿತ ಆರೋಪಿ ಸ್ಮಾರ್ಟ್ ವಾಚ್ ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋ …
Read More »ಈ 4 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ VTU ಸೂಚನೆ
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಇಟಿ ಫಲಿತಾಂಶವೂ ಈಗಾಗಲೇ ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರ ಮಧ್ಯೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಅಗತ್ಯ ಮೂಲ ಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಇಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಕಾಲೇಜುಗಳಲ್ಲಿ ಸೀಟು ಹಂಚಿಕೆ …
Read More »ಮೊಹರಂ ಹಬ್ಬದ ವೇಳೆ ಇಬ್ಬರು ಮುಸ್ಲಿಂ ಯುವಕರಿಗೆ ಚೂರಿ ಇರಿತ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತ
ಗದಗ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತಾಗಿದೆ. ಸದ್ಯ ಕರಾವಳಿ ಭಾಗದಲ್ಲಿ ನಡೆಯುತ್ತಿದ್ದ ಹಿಂಸಾತ್ಮಕ ಕೃತ್ಯಗಳು ಇದೀಗ ರಾಜ್ಯದ ಬೇರೆ ಜಿಲ್ಲೆಗಳಿಗೆ ನಿಧಾನವಾಗಿ ಹಬ್ಬುತ್ತಿವೆ. ಅಂದ ಹಾಗೇ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಇಬ್ಬರು ಯುವಕರಿಗೆ ಚೂರಿಯಿಂದ ಇರಿಯಲಾಗಿದ್ದು, ಚೂರಿ ಇರಿತಕ್ಕೊಳಗಾದವರನ್ನು ದಾದಾಪೀರ್ ಹೊಸಮನಿ(೨೩), ಮುಸ್ತಾಕ್ ಹೊಸಮನಿ(೨೪),ಎಂದು ಗುರುತಿಸಲಾಗಿದೆ. ಇನ್ನು ಇನ್ನು ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು.ಈ ವೇಳೆ ಕಾಲು ತುಳಿದಿದ್ದಕ್ಕೆ …
Read More »ವಿಶ್ವರೂಪಿಣಿ ಹುಲಿಗೆಮ್ಮ ದೇವಿಯ ಅವತಾರದಲ್ಲಿ ಪ್ರಿಯಾಂಕಾ ಉಪೇಂದ್ರ
(ಕೊಪ್ಪಳ): ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿಯ ಚರಿತ್ರೆ ಮತ್ತು ಪವಾಡ ಬಿಂಬಿಸುವ ‘ವಿಶ್ವರೂಪಿಣಿ ಹುಲಿಗೆಮ್ಮ’ ಸಿನಿಮಾ ಚಿತ್ರೀಕರಣಕ್ಕೆ ಮಂಗಳವಾರ ದೇವಸ್ಥಾನದ ಆವರಣದಲ್ಲಿ ಚಾಲನೆ ಲಭಿಸಿತು. ಹುಲಿಗೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಶುಭಕೋರಿ ಚಿತ್ರೀಕರಣಕ್ಕೆ ಚಾಲನೆ ಕೊಟ್ಟರು. ಚಲನಚಿತ್ರದ ನಿರ್ದೇಶಕ ಓಂಸಾಯಿಪ್ರಕಾಶ್ ಮಾತನಾಡಿ ‘ಹುಲಿಗೆಮ್ಮದೇವಿಗೆ ಹೊರರಾಜ್ಯದಲ್ಲೂ ಭಕ್ತರಿದ್ದಾರೆ. ಪ್ರಿಯಾಂಕಾ ಉಪೇಂದ್ರ ಮುಖ್ಯಭೂಮಿಕೆಯಲ್ಲಿದ್ದು …
Read More »ರಾಜ್ಯದಲ್ಲಿ ಹೆಚ್ಚುತ್ತಿದೆ ಹನಿಟ್ರ್ಯಾಪ್ ಹಾವಳಿ
ಬೆಂಗಳೂರು: ದಿಲ್ಲಿ, ಮುಂಬಯಿ, ಸೂರತ್‌ನಂತಹ ಬೃಹತ್ ನಗರಗಳಲ್ಲಿ ನಡೆಯುತ್ತಿದ್ದ ಹನಿಟ್ರ್ಯಾಪ್ ದಂಧೆ ಈಗ ರಾಜ್ಯಾದ್ಯಂತ ವಿಸ್ತರಿಸಿದೆ. ಶ್ರೀಮಂತರು, ರಾಜಕಾರಣಿಗಳು, ಉದ್ಯಮಿಗಳು, ಉನ್ನತ ಹುದ್ದೆಯಲ್ಲಿರುವ ಸರಕಾರಿ ಅಧಿಕಾರಿಗಳು, ಟೆಕ್ಕಿಗಳೇ ಈ ಗ್ಯಾಂಗ್‌ನ ಟಾರ್ಗೆಟ್! ರಾಜ್ಯದಲ್ಲಿ ಹನಿಟ್ರ್ಯಾಪ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಸುಂದರ ಮಾನಿನಿಯರನ್ನು ಛೂ ಬಿಟ್ಟು ಶ್ರೀಮಂತ ಕುಳಗಳಿಗೆ ಗಾಳ ಹಾಕುವ ಹತ್ತಾರು ಗ್ಯಾಂಗ್‌ಗಳು ಸಕ್ರಿಯವಾಗಿದೆ. ಹನಿಟ್ರ್ಯಾಪ್ ಉರುಳಿಗೆ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡ ಬಹಳಷ್ಟು ಮಂದಿ ಮಾನಕ್ಕೆ ಅಂಜಿ ಠಾಣೆ …
Read More »ಅನುಕಂಪದ ಉದ್ಯೋಗ’ ಹಕ್ಕಲ್ಲ – ‘ಸುಪ್ರೀಂ ಕೋರ್ಟ್’ ಮಹತ್ವದ ಅಭಿಪ್ರಾಯ
ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯ ಬಹುದು ಎಂದು ಸುಪ್ರೀಂ ಕೋರ್ಟ್ ( Supreme Court ) ಮಹತ್ವದ ಅಭಿಪ್ರಾಯ ಪಟ್ಟಿದೆ. ಈ ಸಂಬಂಧ ಪ್ರಕರಣವೊಂದರ ವಿಚಾರಣೆ …
Read More »ಡೆತ್‌ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ
ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ …
Read More »ಉಮೇಶ ಕತ್ತಿ ಮಂತ್ರಿಯಾಗಲು ಲಾಯಕ್ಕಲ್ಲ:ಸಿದ್ದರಾಮಯ್ಯ
ರಾಜ್ಯ ಸರ್ಕಾರದ ವೀಕೆಂಡ್ ಕಫ್ರ್ಯೂಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಲಸಿಕೆ ನೀಡಲಿ, ನಿಯಮಾವಳಿಗಳನ್ನ ಕಟ್ಟುನಿಟ್ಟಾಗಿ ಮಾಡಲಿ. ನನ್ನ ಪ್ರಕಾರ ವೀಕೆಂಡ್ ಕಫ್ರ್ಯೂ ಬೇಕಿಲ್ಲ ಎಂದರು. ಮಾಸ್ಕ್ ಹಾಕಲ್ಲ ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಉಮೇಶ ಕತ್ತಿ ಸಚಿವರಾಗಿರಲು ಲಾಯಕ್ಕಾ, ಸರ್ಕಾರ ನಡೆಸಲು ಲಾಯಕ್ಕ..? ಮಂತ್ರಿ ಮಾಸ್ಕ್ ಹಾಕಲ್ಲ ಅಂದ್ರೆ …
Read More »ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ಕತ್ತಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಹೇಳುವ ಮೂಲಕ ಮತ್ತೆ ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸಿಎಂ ಸ್ಥಾನವನ್ನು ಜಪಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ನಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು …
Read More »ವರುಣನ ಆರ್ಭಟ ಜೋರಾಗಿದ್ದು ಜೂನ್ 1ರಿಂದ 990 ಮನೆಗಳು, 1 ಸಾವಿರ ಕಿ.ಮೀ ರಸ್ತೆಗೆ ಹಾನಿ
ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷವೂ ವರುಣನ ಆರ್ಭಟ ಜೋರಾಗಿದ್ದು. ಕಳೆದ ಜೂನ್ ಒಂದರಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ 990 ಮನೆಗಳು, ಒಂದು ಸಾವಿರ ಕಿ.ಮೀ ರಸ್ತೆ ಹಾಗೂ 18 ಸೇತುವೆಗಳಿಗೂ ಹಾನಿಯಾಗಿರುವ ವರದಿಯಾಗಿದೆ. ಹೌದು ಮಹಾರಾಷ್ಟ್ರ ಘಟ್ಟಪ್ರದೇಶ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಹಳೆ ಮನೆಗಳು ಕುಸಿಯುತ್ತಿವೆ. ಬೆಳಗಾವಿಯ ಕಾಮತ್ ಗಲ್ಲಿಯ ಅನಿಲ್ ಬಡಮಂಜಿ ಹಾಗೂ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ನಬಿಸಾಬ್ …
Read More »