ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‌ವುಡ್‌ನಲ್ಲಿ ‘ಕ್ರಾಂತಿ’ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದರ್ಶನ್ ಸಂದರ್ಶನವೊಂದರಲ್ಲಿ ಆಡಿದ ಮಾತು ವಿವಾದಕ್ಕೆ ತಿರುಗಿದೆ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್ ಕೊಟ್ಟ ಒಂದೇ ಒಂದು ಹೇಳಿಕೆ ಈಗ ಪುನೀತ್ ಅಭಿಮಾನಿಗಳ ನಿದ್ದೆಕೆಡಿಸಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು, ಅಪ್ಪು ಫ್ಯಾನ್ಸ್ ಆಕ್ರೋಶಕ್ಕೆ ಕಾರಣ. ಇನ್ನೇನು …
Read More »ಬಬಲೇಶ್ವರ ಪಾಕಿಸ್ತಾನದಲ್ಲಿ ಇದೆಯಾ: ಸವದಿ ಪ್ರಶ್ನೆ
ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರವೇನು ಪಾಕಿಸ್ತಾನದಲ್ಲಿ ಇದೆಯಾ? ಅದು ಕರ್ನಾಟಕ ರಾಜ್ಯದಲ್ಲಿ ಇದೆ ತಾನೇ? ಹೀಗೆಂದು ಪ್ರಶ್ನಿಸಿದವರು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ. ನಾಗಠಾಣದಲ್ಲಿ ಭಾನುವಾರ ನಡೆದ ನೂತನ ಬಸ್ ನಿಲ್ದಾಣ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಬಲೇಶ್ವರ ಕ್ಷೇತ್ರದಿಂದ ನೀವು ಸ್ಪರ್ಧಿಸುತ್ತೀರಿ ಎಂಬ ಮಾತು ಕೇಳಿಬರುತ್ತಿದೆ ನಿಜಾನಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು. ‘ನಾನು ಸದ್ಯ ವಿಧಾನ …
Read More »ನಾನು ಹಾಕಿದ್ದು ಬಟ್ಟೆ ಶೂ, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ : ಕತ್ತಿ ಪ್ರತಿಕ್ರಿಯೆ
ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಉಮೇಶ್ ಕತ್ತಿ ತಾನು ಹಾಕಿರುವುದು ಬಟ್ಟೆ ಶೂ ಆಗಿದ್ದು, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ, ಪೂಜೆ ಮಾಡುವ ಮುನ್ನ ಬಿಚ್ಚಿದ್ದೆ ಬಳಿಕ ಆನೆಗಳಿಗೆ ಸ್ವಾಗತ ಕೋರುವಾಗ ಹಾಕಿಕೊಂಡಿದ್ದೆ, …
Read More »ಕಾರ್ಯಕರ್ತರ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯ
ಬೈಲಹೊಂಗಲ: ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೋರಾಟ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಡಿವೈಎಸ್ಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ತೆರಳಿ ಅಸಮಾಧಾನ ಹೊರ ಹಾಕಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಪೊಲೀಸರು ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವುದು ಬಿಟ್ಟು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು ಅಕ್ಷಮ್ಯ …
Read More »ಎಲ ಹಳ್ಳಿಗಳಲ್ಲೂ ಜೆಜೆಎಂ ಕಾಮಗಾರಿ ಪ್ರಗತಿ: ಯಾದವಾಡ
ರಾಮದುರ್ಗ: ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿವ ನೀರು ಕಲ್ಪಿಸಬೇಕೆಂಬ ಉದ್ದೇಶದೊಂದಿಗೆ ಮೊದಲ ಆದ್ಯತೆ ನೀಡಿ ಕೋಟ್ಯಾಂತರ ಅನುದಾನ ನೀಡಿದ್ದು, ತಾಲೂಕಿನಲ್ಲಿ ಎಲ್ಲ ಹಳ್ಳಿಗಳಲ್ಲಿಯೂ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ಹೊಸಕೇರಿ ಗ್ರಾಮದಲ್ಲಿ ಗ್ರಾಮೀಣ ಕುಡಿವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆ 99.47 ಲಕ್ಷ ರೂ. ಅನುದಾನದಲ್ಲಿ ಮನೆ- ಮನೆಗೆ ನಲ್ಲಿ ಜೋಡಣೆ ಕಾಮಗಾರಿಗೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿಯ 10 …
Read More »ಅತಿವೃಷ್ಟಿ ಹಾನಿ ಒಳಗಾದ ಮನೆಗಳನ್ನು ಸರ್ವೇ ಸರಿಯಾಗಿ ಮಾಡಿ: ಸಾರ್ವಜನಿಕರ ಆಕ್ರೋಶ
ಕಳೆದ ಎರಡು ತಿಂಗಳ ಹಿಂದೆ ಸುರಿದ ಮಳೆಯಿಂದ ಧರೆಗುರುಳಿದ ಮನೆಗಳ ಸರ್ವೆ ಕಾರ್ಯ ಸರಿಯಾಗಿ ನಡೆದಿಲ್ಲ. ಸಾಕಷ್ಟು ಸಾರ್ವಜನಿಕ ಮನೆಗಳಿಗೆ ಪರಿಹಾರ ಪಟ್ಟಿಯಿಂದ ವಜಾಗೊಳಿಸಿದ್ದು ಸರಿಯಾದ ಕ್ರಮವಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾನಾಪುರ ತಾಲ್ಲೂಕಿನಲ್ಲಿ ಕೇರವಾಡ ಗ್ರಾವi ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಂದುರ್ ಗ್ರಾಮದಲ್ಲಿ ಶೋಭಾ .ಉ. ಹಿರೇಮಠ ಅವರ ಮನೆ ಎರಡು ತಿಂಗಳ ಹಿಂದೆ ನಿರಂತರ ಮಳೆಯಿಂದ ಬಹಳಷ್ಟು ಹಾನಿಯಾಗಿದ್ದು. ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು …
Read More »ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ. ಹೌದು ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಬೆಳಗಾವಿ ಹಿರೇಬಾಗೇವಾಡಿ ಮಧ್ಯೆ ಕಮಕಾರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಬಸ್ ಪಲ್ಟಿಯಾಗಿದೆ.. ಸರಕಾರಿ ಬಸ್ ಕೊಲ್ಹಾಪೂರದಿಂದ ರಾಣೇಬೆನ್ನೂರಿಗೆ ಪ್ರಯಾಣ ಬೆಳೆಸಿತ್ತು. ಇದರಲ್ಲ್ಲಿ ಒಟ್ಟು ೩೫ ಜನ ಪ್ರಯಾಣ ಮಾಡುತ್ತಿದ್ದರು. ಜಿಟಿ ಜಿಟಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ …
Read More »ಬೆಳಗಾವಿಯಲ್ಲಿ ಇನ್ನೂ ಪತ್ತೆಯಾಗದ ಚಿರತೆ: ಹೊರಗೆ ಬಾರದ ಜನ
ಬೆಳಗಾವಿ: ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ. ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು. ಶಾಲೆ, …
Read More »ಕಲುಷಿತ ನೀರು ಸೇವನೆ, 84 ಮಂದಿ ಆಸ್ಪತ್ರೆಗೆ ದಾಖಲು
ಬಳ್ಳಾರಿ : ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದಳು. ಈ ಘಟನೆ ಮಾಸುವ ಮುನ್ನವೇ ಇದೇ ರೀತಿಯ ಪ್ರಕರಣಗಳು ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮದಲ್ಲೂ ನಡೆದಿದೆ. ಗ್ರಾಮದಲ್ಲಿ ಕಳೆದ ಶುಕ್ರವಾರದಿಂದ ಇದುವರೆಗೆ ಒಟ್ಟು 84 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥರನ್ನು ಈಗಾಗಲೇ ಸಂಡೂರು ತಾಲೂಕು ಆಸ್ಪತ್ರೆ, ಬಳ್ಳಾರಿಯ ವಿಮ್ಸ್, …
Read More »ಹುಬ್ಬಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಾಯಗೊಂಡಿದ್ದಾರೆ.
ಹುಬ್ಬಳ್ಳಿ: ನಗರದ ಹೊರವಲಯದ ಪುಣೆ-ಬೆಂಗಳೂರು ರಸ್ತೆಯಲ್ಲಿ ರಸ್ತೆ ದುರಂತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನದ್ದಾರೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡರು. ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ದುರ್ಘಟನೆ ನಡೆಯಿತು. ಮೃತರನ್ನು ಹನಮಂತಪ್ಪ ಬೇವಿನಕಟ್ಟ ಮತ್ತು ಪತ್ನಿ ರೇಣುಕಾ ಬೇವಿನಕಟ್ಟಿ ಹಾಗು ಅಳಿಯ ರವೀಂದ್ರ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ದರ್ಗಾಗೆ ಗುದ್ದಿದೆ. ಪರಿಣಾಮ, ಕಾರಿನಲ್ಲಿದ್ದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದರು. ಬೆಂಗಳೂರಿನಲ್ಲಿ …
Read More »