Breaking News

ಸಚಿವರೊಬ್ಬರ ಹಗರಣದ ದಾಖಲೆಯನ್ನು ಸದನದಲ್ಲೇ ಬಿಡುಗಡೆ ಮಾಡುತ್ತೇನೆ:H.D.K.

ಬೆಂಗಳೂರು: ಸಚಿವರೊಬ್ಬರು ನಡೆಸಿರುವ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲೆ ಬಿಡುಗಡೆಗೆ ಸಮಯಾವಕಾಶ ನೀಡುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಮಾಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ದಾಖಲೆ ಬಿಡುಗಡೆ ಮಾಡುವುದಕ್ಕಾಗಿ ಸ್ಪೀಕರ್ ಗೆ ಅವಕಾಶ ಕೇಳಿದ್ದೇನೆ.ಸ್ಪೀಕರ್ ಗೆ ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ಮಾತಾಡಿದ್ದೇನೆ. ನಾಳೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ ಎಂದರು. ನಾನು ನ್ಯೂಸ್ ಸೆನ್ಸ್ ಮಾಡೋಕೆ ನೀಡಿರುವ ಹೇಳಿಕೆ ಅಲ್ಲ. …

Read More »

ಯಾತ್ರೆ ನಡೆಯುವುದು ವ್ಯಕ್ತಿಯಿಂದಲ್ಲ, ಪಕ್ಷದಿಂದ: ಸ್ವಪಕ್ಷೀಯರಿಗೆ ಟಾಂಗ್ ನೀಡಿದ ದೇಶಪಾಂಡೆ

ಬೆಂಗಳೂರು: ಯಾವುದೇ ವ್ಯಕ್ತಿಯಿಂದ ರಥ ಯಾತ್ರೆ ನಡೆಯಲ್ಲ. ಪಕ್ಷದಿಂದ ರಥ ಯಾತ್ರೆ ನಡೆಯುತ್ತದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಪಕ್ಷದ ಹಿರಿಯ ನಾಯಕರ ವಿರುದ್ಧ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಥಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಅಧ್ಯಕ್ಷ, ಸಿಎಲ್ಪಿ ನಾಯಕ ಎಲ್ಲರೂ ಇರುತ್ತಾರೆ ಎಂದು ಹೇಳಿದರು.   ನಾವೆಲ್ಲ ಸಂಘಟಿತರಾಗಿ ಒಟ್ಟಾಗಿ ಚುನಾವಣೆಗೆ ಹೋಗುತ್ತೇವೆ. ಕೆಲವೊಂದು ಸಲಹೆಗಳು ಭಿನ್ನವಾಗಿ ಇರುತ್ತವೆ. ಹಾಗಂತ …

Read More »

ʼತೆಲಂಗಾಣದಲ್ಲಿ 40 ಶೇ. ಸಿಎಂ ಫ್ಲೆಕ್ಸ್ ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರʼ

ಬೆಂಗಳೂರು : ತೆಲಂಗಾಣದಲ್ಲಿ 40 ಶೇ. ಸರ್ಕಾರ ಎಂಬ ಫ್ಲೆಕ್ಸ್‌ಗಳನ್ನು ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.   ಅವರು ಇಂದು ಕೃಷ್ಣಾದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು. ತೆಲಂಗಾಣದಲ್ಲಿಯೂ40 ಶೇ. ಸರ್ಕಾರಎಂಬ ಫ್ಲೆಕ್ಸ್‌ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ನನಗೆ ಗೊತ್ತಿಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ …

Read More »

ಹುಬ್ಬಳ್ಳಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ಹುಬ್ಬಳ್ಳಿ, ಸೆಪ್ಟೆಂಬರ್‌, 19: ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಅವರು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿದ್ದಾರೆ. ವಿಶ್ವ ವಿಖ್ಯಾತ …

Read More »

ಬಸವರಾಜ ಹೊರಟ್ಟಿ ಅತಂತ್ರಕ್ಕೆ ಬಿಜೆಪಿ ಯತ್ನ? ಡಿಸೆಂಬರ್‌ವರೆಗೆ ಸಭಾಪತಿ ಆಯ್ಕೆ ಇಲ್ಲ

ಹುಬ್ಬಳ್ಳಿ: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸಚಿವ ಸಂಪುಟ ಒಪ್ಪಿಗೆ ನೀಡಿತ್ತಲ್ಲದೆ, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಆಯ್ಕೆ ಪ್ರಕ್ರಿಯೆಗೆ ದಿಢೀರ್‌ ತಡೆಯೊಡ್ಡುವ ಮೂಲಕ ಬಿಜೆಪಿ ನಾಯಕರು ಹೊರಟ್ಟಿ ಅವರನ್ನು ಅತಂತ್ರ ಮಾಡುವ ಯತ್ನಕ್ಕೆ ಮುಂದಾಗಿ ದ್ದಾರೆಯೇ ಎಂಬ ಶಂಕೆ ಮೂಡಿದೆ.   ಹೊರಟ್ಟಿ ಸುಮಾರು ಮೂರು ದಶಕಗಳ ಕಾಲದ ಜನತಾ ಪರಿವಾರದ ನಂಟು ತೊರೆದು ಬಿಜೆಪಿ ಸೇರಿ ಪಶ್ಚಿಮ …

Read More »

ಶಬರಿಮಲೆಗೆ ಏರ್‌ಪೋರ್ಟ್‌: ಇಂದು ಮಣ್ಣು ಪರೀಕ್ಷೆ

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಆಗಮಿಸುವವರಿಗಾಗಿ ಅನುಕೂಲವಾಗಲು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಾಥಮಿಕ ಕೆಲಸಗಳು ಶುರುವಾಗಿವೆ. ಚೆರುವಲ್ಲಿ ಎಸ್ಟೇಟ್‌ನಲ್ಲಿ ಪ್ರಸ್ತಾವಿತ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಮಣ್ಣಿನ ಪರೀಕ್ಷೆ ಸೋಮವಾರ ಆರಂಭವಾಗಲಿದೆ. ಈ ಮೂಲಕ ತಜ್ಞರ ತಂಡ, ರನ್‌ವೇ ನಿಲ್ದಾಣಕ್ಕೆ ಅಲ್ಲಿನ ಮಣ್ಣಿನ ಸ್ಥಿತಿ ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಲಿದೆ. ಕನ್ಸಲ್ಟಿಂಗ್‌ ಸಂಸ್ಥೆ ಲೂಯಿಸ್‌ ಬರ್ಗರ್‌ ಪರವಾಗಿ ಜಿಯೋ ಐಡಿ ಏಜೆನ್ಸಿಯ ಅಧಿಕಾರಿಗಳು ಮಣ್ಣಿನ ಪರೀಕ್ಷೆ ನಡೆಸಲು ನವದೆಹಲಿಯಿಂದ ಶಬರಿಮಲೆಗೆ ಆಗಮಿಸಿದ್ದಾರೆ.

Read More »

ಚಿರತೆ ಬಗ್ಗೆ ಸುಳ್ಳು ಮಾಹಿತಿ: ಮೋದಿ ಸುಳ್ಳುಗಾರ ಎಂದ ಜೈರಾಮ್ ರಮೇಶ್

ನವದೆಹಲಿ, ಸೆ.18: ದೊಡ್ಡ ಬೆಕ್ಕುಗಳು ಅಂದರೆ ಚಿರತೆಗಳು ದೇಶದಲ್ಲಿ ನಾಶವಾಗಿವೆ ಎಂದು ಘೋಷಿಸಿದ ನಂತರ ಚಿರತೆಗಳನ್ನು ಭಾರತಕ್ಕೆ ಮರು ಪರಿಚಯಿಸಲು ದಶಕಗಳಿಂದ ಯಾವುದೇ ರಚನಾತ್ಮಕ ಪ್ರಯತ್ನಗಳು ನಡೆದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಭಾನುವಾರ ವಾಗ್ದಾಳಿ ನಡೆಸಿದೆ.   2009 ರಲ್ಲಿ ‘ಪ್ರಾಜೆಕ್ಟ್ ಚೀತಾ’ ಆರಂಭಿಸಿದ ಪತ್ರವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಭಾನುವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದಿನ ಸರ್ಕಾರಗಳು ಚಿರತೆಗಳನ್ನು ಮರು ಪರಿಚಯಿಸಲು ಪ್ರಯತ್ನಗಳನ್ನು ಮಾಡಲಿಲ್ಲ …

Read More »

V.R.L.​ ಸಂಸ್ಥೆ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು ವಂಚಿಸುತ್ತಿದ್ದವರ ಬಂಧನ..

ಬೆಂಗಳೂರು: ವಿಆರ್‌ಎಲ್ ಸಂಸ್ಥೆ ಹೆಸರಿನ ಮೂವರ್ಸ್‌ ಆಯಂಡ್ ಪ್ಯಾಕರ್ಸ್‌ ಎಂಬ ನಕಲಿ ವೆಬ್‌ಸೈಟ್ ತೆರೆದು ವಂಚಿಸುತ್ತಿದ್ದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದ ಬ್ರಹ್ಮದೇವ್ ಯಾದವ್ (25), ಮುಕೇಶ್ ಕುಮಾರ್ ಯಾದವ್ (20), ವಿಜಯ್ ಕುಮಾರ್ ಯಾದವ್ (22) ಬಂಧಿತರು. ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ ನಾಲ್ಕು ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರೊಬ್ಬರು ಇತ್ತೀಚೆಗೆ ತಮ್ಮ …

Read More »

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಮೀನುಗಾರರಂತೆ ರೈತರಿಗೂ ಡೀಸೆಲ್ ರಿಯಾಯ್ತಿ

ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.   ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸಾಮಾನ್ಯವಾಗಿ ರೈತರು ಬಿತ್ತನೆ …

Read More »

BSY ಸ್ವಾಗತಕ್ಕೆ ಬರಲಿಲ್ಲ ಹುಬ್ಬಳ್ಳಿ ಬಿಜೆಪಿ ನಾಯಕರು!

ಹುಬ್ಬಳ್ಳಿ (ಸೆ.18): ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ಏಕಾಂಗಿ ಆದ್ರಾ? ಅನ್ನೋ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡಲಾರಂಭಿಸಿದೆ. ಅದಕ್ಕೆ ಕಾರಣ ಯಡಿಯೂರಪ್ಪ ಹುಬ್ಬಳ್ಳಿಗೆ (Hubballi) ಆಗಮಿಸಿದ ಸಂದರ್ಭದಲ್ಲಿ ಯಾವೊಬ್ಬ ಸ್ಥಳೀಯ ನಾಯಕರು ಅತ್ತ ಸುಳಿಯದೇ ಇರೋದು ಚರ್ಚೆಗೆ ಗ್ರಾಸವಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಿದ ಸಂದರ್ಭದಲ್ಲಿ ಒಬ್ಬ ಸ್ಥಳೀಯ ಬಿಜೆಪಿ ನಾಯಕರೂ (BJP Leaders) ಸಹ ಸ್ವಾಗತಕ್ಕೆ ಬಂದಿರಲಿಲ್ಲ. ಬಿಎಸ್​ವೈ ಸ್ವಾಗತಕ್ಕೆ ಬರಲಿಲ್ಲ ನಾಯಕರು ಬಿಜೆಪಿ …

Read More »