Breaking News

ಮಹಿಳೆಗೆ ಮಂಕುಬೂದಿ ಎರಚಿ ಚಿನ್ನಾಭರಣ ಎಗರಿಸಿ ಪರಾರಿಯಾದ ಕಿರಾತಕರು..!!

ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬಳಿಗೆ ಮಂಕುಬೂದಿ ಎರಚಿದ ಕಿರಾತಕರು ಮಹಿಳೆಯಿಂದ ಬಂಗಾರದ ಮಾಗಲ್ಯದ ಸರ ಸೇರಿದಂತೆ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾದ ಘಟನೆ ಬೆಳಗಾವಿಯ ಆಜಾದ್‍ಗಲ್ಲಿಯಲ್ಲಿ ನಡೆದಿದೆ. ಇಂದು ಶನಿವಾರ ಮಧ್ಯಾಹ್ನದ ವೇಳೆ ಆಜಾದ್‍ಗಲ್ಲಿಯಲ್ಲಿ ಮಹಿಳೆಯೊಬ್ಬಳು ಹೋಗುತ್ತಿದ್ದಳು ಈ ವೇಳೆ ಮಹಿಳೆಯನ್ನು ಹಸಿವೆಯಾಗಿದೆ ತಿನ್ನಲು ನಹಣ ಕೊಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಿದ ಮಹಿಳೆಗೆ ಮೈ ಮೇಲೆ ಬಂಗಾರದ ಆಭರಣಗಳನ್ನು ಹಾಕಿಕೊಳ್ಳಬೇಡ. ಕಳ್ಳರು ಕದ್ದುಕೊಂಡು ಹೋಗಬಹುದು. ಹಾಗಾಗಿ ಅವುಗಳನ್ನು ತದುಕೊಡು …

Read More »

ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ

  *ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ …

Read More »

ಪ್ರಕೃತಿ ಪ್ರಲಾಪ: ಶೈಕ್ಷಣಿಕ ವ್ಯವಸ್ಥೆಗೆ ಸಂಕಷ್ಟ

ಬೆಳಗಾವಿ: ಈ ವರ್ಷದ ಅತಿಯಾದ ಮಳೆ ಮತ್ತು ನದಿಗಳ ಪ್ರವಾಹ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಾಕಷ್ಟು ಹಾನಿ ಉಂಟುಮಾಡಿದೆ. ಕೃಷಿ ಕ್ಷೇತ್ರದ ಜೊತೆಗೆ ಮೂಲಭೂತ ಸೌಕರ್ಯಗಳಿಗೂ ಇದರ ಪರಿಣಾಮ ಬೀರಿದೆ. ಶೈಕ್ಷಣಿಕ ಕ್ಷೇತ್ರ ಸಹ ಇದರಿಂದ ಹೊರತಾಗಿಲ್ಲ.   ಕಳೆದ ಮೂರು ತಿಂಗಳಿಂದ ಜಿಲ್ಲೆಯಲ್ಲಿ ಸುರಿದ ಮಳೆ ಹಾಗೂ ನದಿಗಳ ಪ್ರವಾಹದಿಂದ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಮೊದಲೇ ಅನುದಾನದ ಕೊರತೆಯಿಂದ ಬಳಲುತ್ತಿರುವ ಶಾಲೆಗಳು ಈಗ ಕೊಠಡಿಗಳ ದುರಸ್ತಿ ವಿಷಯದಲ್ಲಿ ಮತ್ತಷ್ಟು ಸಮಸ್ಯೆಗೆ …

Read More »

ಈಗಲೇ ಹೊಸದಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸುವುದಿಲ್ಲ: ಬಿ.ಸಿ.ನಾಗೇಶ್ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿರುವ ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್‌ ಹಾಗೂ ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದರು.   ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಧ್ಯ 276 ಕೆಪಿಎಸ್‌ಗಳಿವೆ. ಮತ್ತೆ ತ್ವರಿತವಾಗಿ ಕೆ‍ಪಿಎಸ್‌ ಹಾಗೂ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿದರೆ, ಭಾಷಾ ಶಿಕ್ಷಕರ ಕೊರತೆ ಎದುರಾಗುತ್ತದೆ. ಅಂತಹ ಪ್ರಯತ್ನಕ್ಕೆ ಮಂದಾಗುವುದಿಲ್ಲ. …

Read More »

58 R.T.O.ಸೇವೆಗಳು ಆನ್‌ಲೈನ್‌; ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶ

ನವದೆಹಲಿ: ಡ್ರೈವಿಂಗ್‌ ಲೈಸೆನ್ಸ್‌, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಇನ್ನು ಆನ್‌ಲೈನ್‌ನಲ್ಲಿ ಲಭ್ಯವಾಗಲಿವೆ. ಇಂಥ ಸೇವೆಗಳನ್ನು ಪಡೆಯಲು ಆಧಾರ್‌ ಸಂಖ್ಯೆಯನ್ನು ನೀಡುವ ಮೂಲಕ ಪಡೆಯಬಹುದು. ಆದರೆ, ಆಧಾರ್‌ ಸಂಖ್ಯೆಯನ್ನು ನೀಡುವುದು ಕೇವಲ ಆಯ್ಕೆಯ ವಿಚಾರವಾಗಲಿದೆ.   ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಶನಿವಾರ ಘೋಷಣೆ ಮಾಡಿದೆ. ಇಂಥ ಕ್ರಮದಿಂದ ದೇಶದ ನಾಗರಿಕರಿಗೆ ಕ್ಷಿಪ್ರವಾಗಿ ವಾಹನ ನೋಂದಣಿ, ಮಾಲೀಕತ್ವ ವರ್ಗಾವಣೆ, ಡ್ರೈವಿಂಗ್‌ ಲೈಸೆನ್ಸ್‌, …

Read More »

ಇನ್ನೂ ಈಡೇರದ ಗ್ರಾಮ ಪಂಚಾಯತ್‌ ಸದಸ್ಯರ ಬೇಡಿಕೆ

ಬೆಂಗಳೂರು: ಗ್ರಾಮ ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳದ ಬೇಡಿಕೆಗೆ ವರ್ಷ ಕಳೆದರೂ “ಪರಿಶೀಲನೆ ಹಂತ’ದಿಂದ ಮುಕ್ತಿ ಸಿಕ್ಕಿಲ್ಲ. ಗೌರವಧನ ಪರಿಷ್ಕರಣೆಯ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ಕಳೆದ ವರ್ಷ ಸರಕಾರ ಸದನದಲ್ಲಿ ಹೇಳಿತ್ತು. ಈಗ ಮತ್ತೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಈ ಬಾರಿಯಾದರೂ ಈಡೇರೀತೇ ಎಂಬುದು ಸುಮಾರು 99 ಸಾವಿರ ಗ್ರಾ. ಪಂ. ಪ್ರತಿನಿಧಿಗಳ ನಿರೀಕ್ಷೆ. ಗ್ರಾ.ಪಂ. ಸದಸ್ಯರ ಗೌರವಧನ 2017ರಲ್ಲಿ ಪರಿಷ್ಕರಿಸಿದ್ದು, ಅಧ್ಯಕ್ಷರಿಗೆ 1,000 ರೂ. ಗಳಿಂದ …

Read More »

ಬಿಎಸ್‌ವೈ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌

ಬೆಂಗಳೂರು: ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಂಬಂಧ ಲಂಚ ಪಡೆದ ಆರೋಪದ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.   ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಿ.ಎಸ್‌.ವಿಜಯೇಂದ್ರ, ಶಶಿಧರ್‌ ಮರಡಿ, ಸಂಜಯ್‌, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಮ್‌, ಶಾಸಕ ಎಸ್‌.ಟಿ. ಸೋಮಶೇಖರ್‌, ರೀಜಿನಲ್‌ ಕಮೀಷನರ್‌ ಡಾ.ಜಿ.ಸಿ.ಪ್ರಕಾಶ್‌, ಕೆ.ರವಿ. ವಿರೂಪಾಕ್ಷ ಯಮಕನಮರಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.   ತನಿಖೆ …

Read More »

ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !

  ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …

Read More »

ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.

ಗೋಕಾಕ: ನಗರದ ಕೆಎಲ್‍ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್‍ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.  

Read More »

ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ

  ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …

Read More »