ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ದರ್ಶನ್ ಗೆ ಚಿಕಿತ್ಸೆಗೆಂದು ಮಧ್ಯಂತರ ಜಾಮೀನು ನೀಡಿದೆ. ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ದರ್ಶನ್ ಗೆ ಫಿಜಿಯೋಥೆರಪಿ ಜೊತೆ ಸರ್ಜರಿ …
Read More »ಏ ಕುಮಾರಸ್ವಾಮಿ ನಿನ್ ರೇಟ್ ಹೇಳು, ಮುಸಲ್ಮಾನರಿಂದ ಚಂದಾ ಎತ್ತಿ ಇಡೀ ನಿನ್ನ ಕುಟುಂಬ ಖರೀದಿ ಮಾಡ್ತೇನೆ: ಸಚಿವರ ಶಾಕಿಂಗ್ ಹೇಳಿಕೆ!
ರಾಮನಗರ: ಚನ್ನಪಟ್ಟಣ ಉಪ ಚುನಾವಣೆ (Channapatna By-Election) ಕಣ ದಿನದಿಂದ ದಿನಕ್ಕೆ ರಂಗೇರಿದ್ದು ಕಾಂಗ್ರೆಸ್ (Congress) ಅಭ್ಯರ್ಥಿ ಸಿ ಪಿ ಯೋಗೇಶ್ವರ್ (CP Yogeshwar) ಮತ್ತು ಎನ್ಡಿಎ (NDA) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪರ ಪ್ರಮುಖ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಜನರ ಮತವನ್ನು ಸೆಳೆಯಲು ಕಸರತ್ತು ನಡೆಸುತ್ತಿರುವ ನಾಯಕರು, ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಭಾನುವಾರ ರಾತ್ರಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ …
Read More »ಪ್ರಜ್ವಲ್ ರೇವಣ್ಣಗೆ ‘ಕಂಬಿ’ ಎಣಿಕೆ ಫಿಕ್ಸ್
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಇಡೀ ರಾಜ್ಯ ಅಷ್ಟೇ ಅಲ್ಲದೆ, ದೇಶಾದ್ಯಂತ ಸದ್ದು ಮಾಡಿತ್ತು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ನವೆಂಬರ್ 11) ಸುಪ್ರೀಂಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಅವರಿಗೆ ಇನ್ಮುಂದೆ ಜೈಲೂಟ ಫಿಕ್ಸ್ ಆದಂತಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇನ್ನು …
Read More »ಮಹಾರಾಷ್ಟ್ರ ಚುನಾವಣೆ: ಬಂಡಾಯದ ಬಿಸಿ, ಕಾಂಗ್ರೆಸ್ ನಿಂದ 28 ಮಂದಿ ಅಮಾನತು
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 28 ಬಂಡಾಯ ಅಭ್ಯರ್ಥಿಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಅಮಾನತು ಮಾಡಿ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್. ಪಟೋಲೆ ಆದೇಶಿಸಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಎರಡು ಪ್ರತ್ಯೇಕ ಪಟ್ಟಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 21 ಅಭ್ಯರ್ಥಿಗಳು ಮತ್ತು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ …
Read More »ಪೇಮೆಂಟ್ ನೀಡದ ಆರೋಪ; ಹೊಂಬಾಳೆ ವಿರುದ್ಧ ಬೀದಿಗಿಳಿದ ಜೂನಿಯರ್ ಅರ್ಟಿಸ್ಟ್ಗಳು
ಬೆಂಗಳೂರು: ರಿಷಬ್ ಶೆಟ್ಟಿ (Rishab Shetty) ಅವರ ʼಕಾಂತಾರ ಚಾಪ್ಟರ್-1 (Kantara Chapter 1) ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗೆ 60 ದಿನಗಳ ಮೆಗಾ ಶೆಡ್ಯೂಲ್ನೊಂದಿಗೆ ಚಿತ್ರತಂಡ ಚಿತ್ರೀಕರಣ ಆರಂಭಿಸಿದೆ. ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ʼಕಾಂತಾರ-1ʼ ಬಹುಕೋಟಿ ಬಜೆಟ್ನಲ್ಲಿ ಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ. ಸಿನಿಮಾದಲ್ಲಿ ಖ್ಯಾತ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿನ ಕೆಲ ದೃಶ್ಯಗಳಲ್ಲಿ ಜೂನಿಯರ್ ಆರ್ಟಿಸ್ಟ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಬೆಂಗಳೂರು, ಕೇರಳ ಸೇರಿದಂತೆ ವಿವಿಧ ಕಡೆಯಿಂದ …
Read More »ಇಪಿಎಫ್ಒ ವೇತನ ಮಿತಿ ಏರಿಕೆ, ಉದ್ಯೋಗಿಗಳ ಮೇಲೆ ಪರಿಣಾಮವೇನು?
ನವದೆಹಲಿ, ನವೆಂಬರ್ 11: ಉದ್ಯೋಗಿಗಳಿಗೆ ಮಹತ್ವದ ಮಾಹಿತಿಯೊಂದಿದೆ. ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆಗೆ ತಯಾರಿ ನಡೆಸಿದೆ. ಈ ಕುರಿತು ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಸದ್ಯ ರೂ. 15 ರೂ. ವೇತನ ಪಡೆಯುತ್ತಿರುವವರು ಇಪಿಎಫ್ಒ ವ್ಯಾಪ್ತಿಗೆ ಸೇರುತ್ತಿದ್ದಾರೆ. ಕೇಂದ್ರ ಸರ್ಕಾರ ಇಪಿಎಫ್ಒಗೆ ಇರುವ ಗರಿಷ್ಠ ವೇತನ ಮಿತಿಯನ್ನು 15 ಸಾವಿರದಿಂದ 21,000 ರೂ.ಗಳಿಗೆ …
Read More »ಗೆದ್ದ ಮೇಲೆ ಅಪ್ಪನೇ ನಿಮ್ಮ ಕೈಗೆ ಸಿಗ್ತಿಲ್ಲ..ಇನ್ನು ಮಗ ಸಿಗ್ತಾರಾ..?: ಶಿಗ್ಗಾಂವಿ ಜನರಿಗೆ ಸಿದ್ದರಾಮಯ್ಯ ಪ್ರಶ್ನೆ
ಹಾವೇರಿ, ನವೆಂಬರ್ 11: ಈ ಬಾರಿ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ನೂರಕ್ಕೆ ನೂರು ಗೆಲ್ಲುತ್ತಾರೆ. ಕಳೆದ ಚುನಾವಣೆಯ ಕತೆಯೇ ಬೇರೆ. ಈ ಚುನಾವಣೆಯ ಫಲಿತಾಂಶವೇ ಬೇರೆ ಆಗುತ್ತದೆ. ಕಳೆದ ಚುನಾವಣೆಯಲ್ಲಿ ಕಡೆ ಗಳಿಗೆಯಲ್ಲಿ ಟಿಕೆಟ್ ನೀಡಿದೆವು. ನಾನಾಗಲೀ, ನಮ್ಮ ಪಕ್ಷದ ಮುಖಂಡರಾಗಲಿ ಪ್ರಚಾರಕ್ಕೆ ಬರಲಾಗಲಿಲ್ಲ. ಅದಕ್ಕೇ ಹಿನ್ನಡೆ ಆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Read More »ಶಿಗ್ಗಾಂವಿ ಉಪಚುನಾವಣೆ: ಮತದಾರರಿಗೆ ಹಂಚಲು ತಂದಿದ್ದ 2.68 ಲಕ್ಷ ರೂ. ಜಪ್ತಿ
ಶಿಗ್ಗಾಂವಿ ಉಪಚುನಾವಣೆ: ಮತದಾರರಿಗೆ ಹಂಚಲು ತಂದಿದ್ದ 2.68 ಲಕ್ಷ ರೂ. ಜಪ್ತಿ ಹಾವೇರಿ: ಮೂರು ಕ್ಷೇತ್ರಗಳ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ರಾಜಕೀಯ ನಾಯಕರು ಮತದಾರರನ್ನು ಓಲೈಸಲು ಕೊನೇ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಶಿಗ್ಗಾಂವಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 2.68 ಲಕ್ಷ ರು ಹಣವನ್ನು ಎಫ್ ಎಸ್ ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸವಣೂರಿನ ಸುಭಾಷ್ ಗಡ್ಡೆಪ್ಪನವರ್ ಎಂಬುವವರ ಮನೆಯಲ್ಲಿ ಹಣ ಸಂಗ್ರಹಿಸಿ ಇಡಲಾಗಿತ್ತು. …
Read More »ಪಹಣಿಯಲ್ಲಿ ‘ವಕ್ಫ್’: ವಿಎಚ್ಪಿ-ಬಜರಂಗದಳ ಪ್ರತಿಭಟನೆ
ಹುಬ್ಬಳ್ಳಿ: ‘ರಾಜ್ಯ ಸರ್ಕಾರ ವಕ್ಫ್ ಹೆಸರಲ್ಲಿ ರೈತರ ಜಮೀನನ್ನು ಕಬಳಿಸುತ್ತಿದ್ದು, ತಕ್ಷಣ ವಕ್ಫ್ ಹೆಸರು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಸೋಮವಾರ ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಬೈರಿದೇವರಕೊಪ್ಪದ ಶಿವಾನಂದ ಮಠದ ಎದುರು, ವಿದ್ಯಾನಗರದ ಕೋತಂಬ್ರಿ ಕಾಲೇಜು ಎದುರು, ಗೋಕುಲ ರಸ್ತೆ ಅಕ್ಷಯ ಪಾರ್ಕ್ ವೃತ್ತ, ಹಳೇಹುಬ್ಬಳ್ಳಿ ಇಂಡಿಪಂಪ್ ವೃತ್ತ, ಬಂಕಾಪುರ ಚೌಕ, ಗದಗ ರಸ್ತೆಯ ರಲ್ವೆ ಬ್ರಿಡ್ಜ್ ಮತ್ತು ಕೇಶ್ವಾಪುರದ ಸರ್ವೋದಯ ವೃತ್ತದ ಬಳಿ ‘ನಮ್ಮ …
Read More »ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಯುವಕ?
ಬೆಳಗಾವಿ: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ (ನ.11ರಂದು) ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಹಲಶಿ ಗ್ರಾಮದ ಅಲ್ತಾಫ್ ಮಕಾನದಾರ(30) ಎಂಬ ಯುವಕ ಬಂದೂಕಿನ ಗುಂಡಿಗೆ ಬಲಿಯಾಗಿದ್ದಾನೆ. ಮೃತದೇಹವನ್ನು ಈತನ ಮನೆಗೆ ತೆಗೆದುಕೊಂಡು ಹೋಗಿರುವುದು ಸಂಶಯಕ್ಕೆ ಕಾರಣವಾಗಿದ್ದು ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ. ಅಲ್ತಾಫ್ ಕೆಲವು ಜನರೊಂದಿಗೆ ಮರಳು ತೆಗೆಯಲು ಹೋಗಿದ್ದನು. ಈ ವೇಳೆ …
Read More »