Breaking News

ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ: ಗೋಕಾಕ

ಗೋಕಾಕ :ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೋಕಾಕದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಚಿಕ್ಕ ಮಕ್ಕಳ ವೈದ್ಯರಾದ ಡಾ ಗೋಪಾಲ ಹೊಂಗಲ ಮತ್ತು ಡಾ ಸಂಜೀವಿನಿ ಉಮರಾಣಿ ಯವರು ತಾಯಂದಿರಿಗೆ ಎದೆಹಾಲಿನ ಮಹತ್ವ ಬಗ್ಗೆ ಹೇಳಿದರು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹುಟ್ಟಿದ ಪ್ರತಿ ಮಗುವೂ ಬದುಕಬೇಕು, ತಾಯಿಯೂ ಆರೋಗ್ಯವಾಗಿ ಇರಬೇಕು ಎಂಬುದು ಎಲ್ಲರ ಆಸೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು …

Read More »

ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ

  ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …

Read More »

ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ

  ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು.   ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …

Read More »

ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಇಬ್ಬರಿಗೆ ಚಾಕು ಇರಿತ

ಬೆಳಗಾವಿ: ಹುಡುಗಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಗಲಾಟೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ‌ ನಗರದ ಕಾಲೇಜು ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ. ನಗರದ ಸರ್ದಾರ್ ಮೈದಾನ ಪಕ್ಕದ ಕಾಲೇಜು ರಸ್ತೆಯಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ಶುರುವಾಗಿದೆ. ನೋಡನೋಡುತ್ತಿದ್ದಂತೆ ಒಂದು ಗುಂಪಿನ ಯುವಕರು ಮತ್ತೊಂದು ಗುಂಪಿನ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ. ಶ್ರೀಹರಿ ಮತ್ತು ಪರಶುರಾಮ್ ಎಂಬುವವರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ರವಾನಿಸಿ …

Read More »

M.B.ಪಾಟೀಲ ಮನೆಯಲ್ಲಿ ಕಳವು: ಒಡಿಶಾದಲ್ಲಿ ಆರೋಪಿ ಸೆರೆ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ನಿವಾಸದಲ್ಲಿ ನಡೆದಿದ್ದ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಒಡಿಶಾದಲ್ಲಿ ಬಂಧಿಸಿ, ನಗರಕ್ಕೆ ಕರೆತಂದಿದ್ದಾರೆ. ಶಾಸಕರ ಮನೆಯಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್‌ ದಾಸ್‌ ಬಂಧಿತ ಆರೋಪಿ.   ಆರೋಪಿಯನ್ನು ಐದು ದಿನಗಳ ಕಾಲ ವಶಕ್ಕೆ ಪಡೆದಿರುವ ಸದಾಶಿವನಗರದ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ‘ಐದು ವರ್ಷಗಳಿಂದ ಶಾಸಕರ ಮನೆಯಲ್ಲಿ ಆರೋಪಿ ಕೆಲಸಕ್ಕಿದ್ದ. ಆತನ ಮೇಲೆಯೇ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿತ್ತು. …

Read More »

ಖಾಸಗಿಕರಣದತ್ತ ಹೆಜ್ಜೆ ಇಟ್ಟಿದೆಯಾ KSRTC ? ಅನುಮಾನಕ್ಕೆ ಕಾರಣವಾಗಿದೆ ನಿಗಮದ ಈ ನಡೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ನಷ್ಟವನ್ನು ಒಂದಷ್ಟು ಕಡಿಮೆ ಮಾಡಿಕೊಳ್ಳುವ ಸಲುವಾಗಿ ಸರ್ಕಾರಿ ಬಸ್ ಗಳಿಗೆ ಟೋಲ್ ಗಳಲ್ಲಿ ಶುಲ್ಕ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗಿತ್ತು.   ಇದರ ಮಧ್ಯೆ ನಿಗಮದ ನಡೆಯೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಖಾಸಗೀಕರಣದತ್ತ ಹೆಜ್ಜೆ ಇಟ್ಟಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. 350 ಚಾಲಕರನ್ನು ಹೊರಗುತ್ತಿಗೆ ಆಧಾರದ ಮೇಲೆ …

Read More »

ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ. ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಮೂಲತಃ ಸುಳ್ಯ …

Read More »

ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ …

Read More »

ಜೀವಂತ ನಾಗರಹಾವಿಗೆ ಹಾಲೆರೆದು ನಾಗರಪಂಚಮಿ ಆಚರಣೆ

ಹಾವೇರಿ: ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಜೀವಂತ ನಾಗರಹಾವಿಗೆ ಹಾಲೆರೆಯುವ ಮೂಲಕ ನಾಗರಪಂಚಮಿ ಆಚರಣೆ ನಡೆಯಿತು. ಆಡೂರು ಪಕ್ಕದ ಗ್ರಾಮದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಉರಗಪ್ರೇಮಿ ಕೃಷ್ಣರೆಡ್ಡಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಕೃಷ್ಣರೆಡ್ಡಿ ನಾಗರಹಾವು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲು ಹೋದಾಗ ಆಡೂರು ಗ್ರಾಮದ ಮಹಿಳೆಯರು ನಾಗರಪಂಚಮಿ ಆಚರಿಸುತ್ತಿದ್ದರು. ತಮ್ಮ ಮುಂದೆ ಜೀವಂತ ಹಾವು ಹಿಡಿದು ಹೋಗುತ್ತಿದ್ದ ಅವರಿಗೆ ಸ್ವಲ್ಪ ಹೊತ್ತು ಹಾವು ಬಿಡುವಂತೆ ತಿಳಿಸಿದ್ದಾರೆ. ನಾಗರಹಾವು ನೆಲದ ಮೇಲೆ …

Read More »

3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದು: ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು

ಬೆಂಗಳೂರು: ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸಬಲರಾಗಿರುವವರು ಪಡೆದಿದ್ದ 3,17,441 ಬಿಪಿಎಲ್‌ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಳೆದ ಒಂದೂವರೆ ವರ್ಷದಿಂದ ರದ್ದುಪಡಿಸುತ್ತಿದೆ. ಇಂಥ ಅನರ್ಹರಿಂದ 11. 91 ಕೋಟಿ ರೂ. ದಂಡವನ್ನೂ ವಸೂಲಿ ಮಾಡಲಾಗಿದೆ. ಆರ್ಥಿಕವಾಗಿ ಸಬಲರಾಗಿರುವವರೂ ಪಡಿತರ ಚೀಟಿ ಪಡೆದು ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರು, ವಾರ್ಷಿಕ 1.20ಲಕ್ಷ ರೂ. ಆದಾಯ ಗಳಿಸುವವರು, ಮೂರು ಹೆಕ್ಟೇರ್‌ಗಿಂತ …

Read More »