ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾದಿಗ ಸಮಾಜದ ಯುವಕರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದಾಗ ಪೊಲೀಸರು ಮಧ್ಯಪ್ರವೇಶ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಗಂಗಾವತಿ ನಗರದ ಸೋಮನಾಥ ಕಂಪ್ಲಿ ಹಾಗೂ ಬಾಳಪ್ಪ ಕಾಮದೊಡ್ಡಿ ಎಂಬ ಯುವಕರು ಸದಾಶಿವ ವರದಿ ಅನುಷ್ಠಾನದ ಮೂಲಕ ಎಸ್ಸಿ ಮೀಸಲಾತಿ ಯನ್ನು …
Read More »ಸತೀಶ ಜಾರಕಿಹೊಳಿ ಫೌಂಡೇಶನ್‍ನಿಂದ ಸೌಂಡ್ ಸಿಸ್ಟಮ್-ಕುರ್ಚಿಗಳ ವಿತರಣೆ
ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದಕ್ಕಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್‍ನಿಂದ ಘಟಪ್ರಭಾ ಸೇವಾದಳದಲ್ಲಿ ವಿದ್ಯಾರ್ಥಿಗಳಿಗೆ ಆರ್ಮಿ, ಪೆÇಲೀಸ್ ತರಬೇತಿಯನ್ನು ಉಚಿತ ನೀಡಲಾಗುತ್ತಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿಯ ಜಾಧವ ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಢೇಶನ್‍ದಿಂದ ಬೆಳಗಾವಿಯ ದಕ್ಷಿಣ ಹಾಗೂ ಉತ್ತರ ಮತಕ್ಷೇತ್ರದಲ್ಲಿರುವ ವಿವಿಧ ಸಮುದಾಯಗಳಿಗೆ ಸೌಂಡ್ ಸಿಸ್ಟಮ್ ಹಾಗು ಕುರ್ಚಿಗಳನ್ನು ಯುವ …
Read More »ಭ್ರಷ್ಟ ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕುವುದೇ ಎಎಪಿ ಗುರಿ:
ಬೆಂಗಳೂರು : ಮುಂಬರುವ ಬಿಬಿಎಂಪಿ (ಪಾಲಿಕೆ) ಚುನಾವಣೆ ಭ್ರಷ್ಟ ಬಿಜೆಪಿ ವಿರುದ್ಧ ಜನಸಾಮಾನ್ಯರು ನಡೆಸುವ ಹಣಾಹಣಿಯಾಗಲಿದೆ. ಪಕ್ಷ ಸ್ಥಾಪನೆಯ ಹತ್ತೇ ವರ್ಷದಲ್ಲಿ ದೇಶದೆಲ್ಲೆಡೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯ ಸಾಧಿಸಿದ್ದಲ್ಲದೇ, ಎರಡು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿರುವ ಆಮ್ ಆದ್ಮಿ ಪಾರ್ಟಿಯು ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದೆ. ನಾವು ಕೆಲಸ ಮಾಡುತ್ತಿರುವುದರಿಂದ ಚುನಾವಣೆಗಳಲ್ಲಿ ಗೆಲ್ಲುತ್ತಿದ್ದೇವೆ.! ದೇಶದ ಜನರು “ಅರವಿಂದ್ ಕೇಜ್ರಿವಾಲ್ ಮಾದರಿ” ಅನ್ನು ಗುರುತಿಸಿದ್ದಾರೆ. ಪಾಲಿಕೆ ಚುನಾವಣೆ ಯಾವ ಕ್ಷಣದಲ್ಲಾದರೂ …
Read More »ಪವರ್ ಸ್ಟಾರ್ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಗ್ಗೆ ವ್ಯಂಗ್ಯದ ರೀತಿಯಲ್ಲಿ ಟ್ವೀಟ್ ಮಾಡಿದ್ದಕ್ಕೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಅಭಿಮಾನಿಗಳಲ್ಲಿ ಚಕ್ರವರ್ತಿ ಸೂಲಿಬೆಲೆ ಕ್ಷಮೆ ಕೋರಿದ್ದಾರೆ. ನನ್ನ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. …
Read More »ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ
ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ …
Read More »ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ: ಸಿಎಂ ಬಿಎಸ್ ಬೊಮ್ಮಾಯಿ
ಕೊಪ್ಪಳ: ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ. ಇದನ್ನು ಸಾವಿರ ಸಾವಿರ ಸಾರಿ ಒತ್ತಿ ಹೇಳುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮೆಲ್ಲರ ಆರಾದ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೆ ಬಜೆಟ್ ನಲ್ಲಿ 100 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದೇನೆ. ಅಂಜನಾದ್ರಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವುದು …
Read More »ಸಿದ್ಧು ಜನ್ಮದಿನ ಆಚರಣೆಗೆ ದೇವನಗರಿ ಸಜ್ಜು
ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತ ಆ.3ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವಕ್ಕಾಗಿ ನಗರದ ಹೊರವಲಯದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ 50 ಎಕರೆ ಪ್ರದೇಶದಲ್ಲಿರುವ ಶಾಮನೂರು ಅರಮನೆ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಅದ್ಧೂರಿ ಮತ್ತು ವಿಜೃಂಭಣೆಯಿಂದ ಆಚರಿ ಸುವ ಉದ್ದೇಶದಿಂದ ವೇದಿಕೆ, ಸಭಾಂಗಣ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ. ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿರುವ ಯೋಜನೆ, ಕಾರ್ಯಕ್ರಮಗಳನ್ನು …
Read More »ಗನ್ ಇಟ್ಟುಕೊಳ್ಳಲು ಸಲ್ಮಾನ್ ಖಾನ್ಗೆ ಸಿಕ್ತು ಲೈಸೆನ್ಸ್; ಕೊಲೆ ಬೆದರಿಕೆ ಬೆನ್ನಲ್ಲೇ ವಿಶೇಷ ಅನುಮತಿ
ಕೊಲೆ ಬೆದರಿಕೆ ಬಂದ ಬಳಿಕ ಸಲ್ಮಾನ್ ಖಾನ್ ಅವರು ಭದ್ರತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಬುಲೆಟ್ ಪ್ರೂಫ್ ಕಾರಿನ ಜತೆ ಅವರೀಗ ಗನ್ ಲೈಸೆನ್ಸ್ ಪಡೆದುಕೊಂಡಿದ್ದಾರೆ.ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಆತ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಲೈಸೆನ್ಸ್ ಪಡೆದಿದ್ದಾರೆ. ಕೆಲವೇ ದಿನಗಳ ಹಿಂದೆ ಅವರಿಗೆ ಮತ್ತು ಅವರ ತಂದೆ ಸಲೀಮ್ ಖಾನ್ಗೆ ಕೊಲೆ ಬೆದರಿಕೆ (Death Threat) ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. …
Read More »“ನನ್ನ ಸಿನಿಮಾ ನೋಡಿ ಪ್ಲೀಸ್..”
ನವದೆಹಲಿ : ಅಮೀರ್ ಖಾನ್ ಅವರ ‘ಲಾಲ್ ಸಿಂಗ್ ಚಡ್ಡಾ’ ಆಗಸ್ಟ್ 11ರಂದು ಬಿಡುಗಡೆಯಾಗಲಿದೆ. ಪ್ರೇಕ್ಷಕರಿಂದ ಚಲನಚಿತ್ರಕ್ಕೆ ವೈವಿಧ್ಯಮಯ ಪ್ರತಿಕ್ರಿಯೆಗಳಿದ್ದು, ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ ಬಹಿಷ್ಕಾರವು ಸಾಮಾಜಿಕ ಮಾಧ್ಯಮದಲ್ಲಿಯೂ ಟ್ರೆಂಡ್ ಆಗಿದೆ. ಚಿತ್ರದ ವಿರುದ್ಧ ಪ್ರೇಕ್ಷಕರ ಈ ಪ್ರತಿಕ್ರಿಯೆಯಿಂದ ಅಮೀರ್ ಖಾನ್ ಬೇಸರಗೊಂಡಿದ್ದು, ಅಮೀರ್ ಖಾನ್ ತಮ್ಮ ಚಿತ್ರವನ್ನ ಬಹಿಷ್ಕರಿಸದಂತೆ ಜನರನ್ನ ವಿನಂತಿಸಿದ್ದಾರೆ. ಅಂದ್ಹಾಗೆ, ಜನರು ಅಮೀರ್ ಖಾನ್ ಮತ್ತು ಕರೀನಾ ಕಪೂರ್ ಕೆಲವು ಹೇಳಿಕೆಗಳನ್ನ ಗಮನಿಸಿ ಅವರ …
Read More »ಸಂಜಯ ರಾವುತ್‌ರನ್ನು ಮುಂಬೈ ನ್ಯಾಯಾಲಯಕ್ಕೆ ಕರೆತಂದ ಇ.ಡಿ ಅಧಿಕಾರಿಗಳು
ಮುಂಬೈ: ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್ ರಾವುತ್ ಅವರ ವಿಚಾರಣೆಯು ಮುಂಬೈ ನ್ಯಾಯಾಲಯದಲ್ಲಿ ಸೋಮವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ರಾವುತ್ ಅವರನ್ನು ನ್ಯಾಯಾಲಯಕ್ಕೆ ಕರೆತಂದಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಂಜಯ್ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ನಂತರ ಅವರನ್ನು ವಶಕ್ಕೆ ಪಡೆದಿದ್ದರು. ಇದೇ ವೇಳೆ, ರಾವುತ್ ಮನೆಗೆ ಭೇಟಿ ನೀಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ …
Read More »