ರಾಯಚೂರು(ಸೆ.09): ಬಾಲಕನೊಬ್ಬ ಶಾಲಾ ಸಮವಸ್ತ್ರದಲ್ಲಿ (School Uniform) ಮಲವಿಸರ್ಜನೆ ಮಾಡಿರುವ ವಿಚಾರವಾಗಿ ಕೋಪಗೊಂಡ ಶಿಕ್ಷಕನೊಬ್ಬ ಮಗುವಿನ ಮೇಲೆ ಬಿಸಿನೀರು ಸುರಿದಿದ್ದಾನೆ. ಹೌದು ರಾಯಚೂರು (Raichuru) ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಘನಮಠೇಶ್ವರ ಗ್ರಾಮೀಣ ಸಂಸ್ಥೆಯ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಿಗೆಪ್ಪ ಎಂಬಾತನೇ ಈ ರಾಕ್ಷಸ ಕೃತ್ಯ ಮೆರೆದ ವ್ಯಕ್ತಿ. ಸದ್ಯ ಬಿಸಿ ನೀರಿನ ದಾಳಿಗೊಳಗಾದ 2ನೇ ತರಗತಿಯ ವಿದ್ಯಾರ್ಥಿ ಎಂಟು ವರ್ಷದ ಅಖಿತ್ ಸ್ಥಿತಿ ಗಂಭೀರವಾಗಿದೆ. …
Read More »ಉಮೇಶ್ ಕತ್ತಿ ಸಮಾಧಿಗೆ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ
ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು. ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು. ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, …
Read More »ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಖಡಕ್ ಸೂಚನೆ
ಬೆಂಗಳೂರು: ಮಳೆ ಅನಾಹುತಕ್ಕೆ ಸಾರ್ವಜನಿಕರ ಆಕ್ರೋಶ ಮತ್ತು ಮತ್ತೊಂದೆಡೆ ಸರ್ಕಾರಕ್ಕೆ ಮೋಹನ್ ದಾಸ್ ಪತ್ರ ಬರೆದ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಖಡಕ್ ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆ ಅನಾಹುತ ಸರಿಪಡಿಸಲು ವಿಶೇಷ ಗಮನ ಹರಿಸಿ, ಬೆಂಗಳೂರು ಮಳೆ ಸಮಸ್ಯೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗ್ರೀನ್ ಸಿಟಿಯ ಬಗ್ಗೆ ಎಲ್ಲಾ ಕಡೆ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ಹಾಗೂ ಪಕ್ಷದ ಮೇಲೆ ಇದು ದೊಡ್ಡ ಪರಿಣಾಮ ಬೀರಲಿದೆ. …
Read More »ಬಿಪಿಎಲ್ ಪಡಿತರ ಪಡೆಯಲು ಇನ್ನು ಡಬಲ್ ಒಟಿಪಿ ಬೇಕು..
ಬೆಂಗಳೂರು: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದ್ಯಮ ಕಾರ್ಡ್ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು. ಆದರೆ, ಇನ್ನು ಮುಂದೆ ಸೆಪ್ಟೆಂಬರ್ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು. ಸೆ. ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎಲ್ಲರೂ ಎರೆಡೆರಡು ಬಾರಿ ಬೆರಳಚ್ಚು ಒಟಿಪಿ ನೀಡಬೇಕಾಗಿದೆ. ಹಾಗಾಗಿ ಇದರಿಂದ …
Read More »ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಕನಕಪುರದಲ್ಲಿ ಹಾದುಹೋಗುವ ದಿಂಡಗಲ್-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ. ಶುಕ್ರವಾರ ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಜತೆಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಕಿ.ಮೀ. 419.550ರಿಂದ …
Read More »B.J.P. ಸರ್ಕಾರದ ‘ಜನಸ್ಪಂದನ’ ಇಂದು; ಸರ್ಕಾರದ ‘ರಿಪೋರ್ಟ್ ಕಾರ್ಡ್’ ಮಂಡಿಸುವ C.M.
ಬೆಂಗಳೂರು /ದೊಡ್ಡಬಳ್ಳಾಪುರ: ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದಿಡುವ ‘ಜನಸ್ಪಂದನ’ ಸಮಾವೇಶಕ್ಕೆ ದೊಡ್ಡಬಳ್ಳಾಪುರದಲ್ಲಿ ವೇದಿಕೆ ಸಜ್ಜಾಗಿದೆ. 2023 ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಆಶಯದಿಂದ ನಡೆಸುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ‘ಜನೋತ್ಸವ’ದ ಹೆಸರಿನಲ್ಲಿ ನಡೆಯಬೇಕಿದ್ದ ಈ ಕಾರ್ಯಕ್ರಮ ಮೂರು ಬಾರಿ ಮುಂದೂಡಿಕೆಯಾಗಿತ್ತು. ಇದೀಗ ‘ಜನಸ್ಪಂದನ’ದ ಹೆಸರಿನಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಸುಮಾರು 3 ಲಕ್ಷ ಜನ ಭಾಗವಹಿಸುವ …
Read More »ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಿದೆ.
ಬೆಂಗಳೂರು: ಲೋಕಾಯುಕ್ತ, ಇಲಾಖಾ ವಿಚಾರಣೆ ಸೇರಿದಂತೆ ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಿದೆ. ಜತೆಗೆ ನಾಲ್ವರು ಶಿಕ್ಷಣಾಧಿ ಕಾರಿಗಳನ್ನೂ ವಿವಿಧ ಹುದ್ದೆ ಗಳಿಗೆ ವರ್ಗಾಯಿಸಲಾಗಿದೆ. ಎಕ್ಸಿಕ್ಯೂಟಿವ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳು ಕೇಳಿಬಂದರೆ, ಅವರ ವಿರುದ್ಧ ತನಿಖೆ, ವಿಚಾರಣೆ ನಡೆಯುತ್ತಿದ್ದರೆ. ಅಂಥವರನ್ನು ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಬೇಕು ಎಂಬ ನಿಯಮದ ಅನ್ವಯ ಈ ವರ್ಗಾ ವಣೆ ಮಾಡಲಾಗಿದೆ ಎಂದು …
Read More »ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ
ಬೆಂಗಳೂರು: ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. 2016ರಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ …
Read More »ಗಣಪತಿ ಮೆರವಣಿಗೆಯಲ್ಲಿ ಗೋಡ್ಸೆ ಫೋಟೊ ಪ್ರದರ್ಶನ
ಶಿವಮೊಗ್ಗ: ಇಲ್ಲಿನ ಹಿಂದೂ ಮಹಾಸಭಾದಿಂದ ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೇಳೆ ಶುಕ್ರವಾರ ಕೆಲವರು ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ವೀರ ಸಾವರ್ಕರ್, ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್ಚಂದ್ರ ಬೋಸ್, ಭಗತ್ಸಿಂಗ್ ಜೊತೆಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಇತ್ತೀಚೆಗೆ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು …
Read More »ಕರ್ನಾಟಕ ಸಂಪುಟ: ಸಿಎಂ ಬಸವರಾಜ ಬೊಮ್ಮಾಯಿಗೆ 8 ಖಾತೆಗಳ ಜವಾಬ್ದಾರಿ ಒತ್ತಡ!
ಬೆಂಗಳೂರು, ಸೆಪ್ಟೆಂಬರ್, 09: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಂಕಟಕ್ಕೆ ಮುಕ್ತಿ ಯಾವಾಗ ಅನ್ನೋ ಪ್ರಶ್ನೆ ಮೂಡಿದೆ. ಬಸವರಾಜ ಬೊಮ್ಮಾಯಿ ಹೆಗಲ ಮೇಲೆ ಮತ್ತಷ್ಟು ಹೊರೆ ಹೆಚ್ಚಾಗುತ್ತಿದೆ. ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಖಾತೆ ಸೇರಿದಂತೆ ಉಮೇಶ್ ಕತ್ತಿ ಸಾವಿನಿಂದ ಅರಣ್ಯ ಖಾತೆಯ ಜವಾಬ್ದಾರಿಯು ಸಿಎಂ ಲಭಿಸಿದೆ. ಬಸವರಾಜ ಬೊಮ್ಮಾಯಿ ಪ್ರಸ್ತುತ 8 ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಹಣಕಾಸು, ಬೆಂಗಳೂರು ನಗರಾಭಿವೃದ್ದಿ, ಗುಪ್ತಚರ, …
Read More »
Laxmi News 24×7