ಎರಡನೇ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್ಎನ್ಜೆಪಿ) ಶಿಫಾರಸುಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಅನುಮೋದನೆ ನೀಡಿದೆ. ಅದರ ಅನುಷ್ಠಾನದಿಂದ ದೇಶದ ಸುಮಾರು 25,000 ನ್ಯಾಯಮೂರ್ತಿಗಳು ಹಾಗೂ ನ್ಯಾಯಾಧೀಶರ ಮೂಲ ವೇತನ ಮೂರು ಪಟ್ಟು ಹೆಚ್ಚಲಿದೆ. ಎಸ್ಎನ್ಜೆಪಿ ಶಿಫಾರಿತ ವೇತನವನ್ನು 2016ರ ಜನವರಿ 1ರಿಂದಲೇ ಪೂರ್ವಾನ್ವಯಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್.ವಿ.ರಮಣ ಸೂಚಿಸಿದ್ದಾರೆ. 2016 ಜನವರಿ 1ರಂದು ಕೇಂದ್ರ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಶಿಫಾರಸು ಜಾರಿಯಾಗಿತ್ತು. ಆ …
Read More »ಫಾಜಿಲ್ ಹತ್ಯೆಗೆ ನೇರ ಹೊಣೆ ಸಿಎಂ ಬೊಮ್ಮಾಯಿ: ಮುನೀರ್ ಕಾಟಿಪಳ್ಳ
ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ ಹೊಣೆಗೇಡಿತನವೇ ಕೊಲೆಗಡುಕರಿಗೆ ಧೈರ್ಯ ನೀಡಿದೆ ಎಂದು ಡಿವೈಎಫ್‌ಐ ರಾಜ್ತ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕರ ಸರಣಿ ಕೊಲೆಗಳಿಗೆ ಬೊಮ್ಮಾಯಿ ಸರ್ಕಾರವೇ ಕಾರಣ. ನಿರ್ಲಜ್ಜ ಕೋಮುವಾದಿ ಆಡಳಿತದ ಕರ್ನಾಟಕ ಮಾದರಿಯೊಂದನ್ನು ಬೊಮ್ಮಾಯಿ ನಿರ್ಮಿಸಿ ಬಿಟ್ಟರು. ಅವರಿಗೆ …
Read More »ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್’ ಹತ್ಯೆ ಪ್ರಕರಣ : ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಪೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಫಾಜಿಲ್ …
Read More »2017 ನೇ ಸಾಲಿನ `KAS’ ಫಲಿತಾಂಶ ಪ್ರಕಟ : ಪಾಸಾದ ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ.!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಿದೆ. ಅಂದ್ಹಾಗೆ, ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ರು. ಲೋಕಸೇವಾ ಆಯೋಗ ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅನಂತರ ಅವರ ಸಂದರ್ಶನ ನಡೆಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. …
Read More »ಅಸಮರ್ಥ ಗೃಹಸಚಿವ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲ:ಸಿದ್ದರಾಮಯ್ಯ
ಬೆಂಗಳೂರು : ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ …
Read More »ಜೀವನದಲ್ಲಿ ನೀವು ನಿಮ್ಮ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್ಸ್‌ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ ಅವರು ಮಾತನಾಡಿದರು. ಜೀವನದಲ್ಲಿ ನೀವು ನಿಮ್ಮ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ. ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು. ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು …
Read More »ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ.
VR ಪ್ರಪಂಚ..!ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ. ಹಾಗಾದ್ರೆ ವಿಕ್ರಾಂತ್ ರೋಣ ಹೇಗಿದ್ದಾನೆ ಅಂದ್ರೆ…. ಅದೊಂದು ದಟ್ಟಾರಣ್ಯದ ಮಧ್ಯೆ ಇರೋ ಊರು. ಆ ಊರ ಹೆಸರು ಕಮರೊಟ್ಟು.. ಅಲ್ಲಿ ಹೆಣ್ಣು ಮಕ್ಕಳ ಸರಣಿ ಕೊಲೆಗಳು ಆಗುತ್ತಿರುತ್ತವೆ. ಪೋಲಿಸ್ ಇನ್ಸ್‌ಪೆಕ್ಟರ್ ಆಗಿ ಕೊಲೆಗಳ ತನಿಖೆಗೆಗಾಗಿ ಕಮರೊಟ್ಟು ಊರಿಗೆ ಬರೋ ವಿಕ್ರಾಂತ್ ರೋಣ. ಈ ಇನ್ಸ್‌ಪೆಕ್ಟರ್‌ಗೆ ಈ ಸರಣಿ ಕೊಲೆಗಳ ಕೇಸುಗಳ ಮೇಲೆ …
Read More »ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ನೀರುಪಾಲು.. ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ
ಕಲಬುರಗಿ: ಬಾವಿಯೊಂದರಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಶ್ರೀಶೈಲ್ ಲಕ್ಷ್ಮಣ (13) ಹಾಗೂ ಲಕ್ಷ್ಮಣ ಗುಂಡಪ್ಪ(12) ಈಜಲು ಹೋಗಿ ಸಾವನ್ನಪ್ಪಿದ ದುರ್ದೈವಿಗಳು. ಈ ಇಬ್ಬರು ಮಕ್ಕಳು ಹೇಬಳಿ ರೋಡ್ ನ್ಯೂ ಬಾಳೇನಕೇರಿ ನಿವಾಸಿಗಳು ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಇಬ್ಬರು ಈಜಲು ಎಂದು ಬಾವಿಗೆ ತೆರಳಿದ್ದಾರೆ. ಈಜು ಸರಿಯಾಗಿ ಬಾರದಿದ್ದರೂ ಬಾವಿಗೆ ಇಳಿದು ದುಸ್ಸಾಹಸ ಮಾಡಿದ್ದರಿಂದ ಅವಘಡ ಸಂಭವಿಸಿದೆ ಎಂದು …
Read More »B.J.P. ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ: ಅಭಯ್ ಪಾಟೀಲ
ಬೆಳಗಾವಿ: ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತಿಲ್ಲ ಅನೋ ಭಾವನೆ ತಪ್ಪು. ಭಾರತದ ಸಂವಿಧಾನ ಒಪ್ಪದವರ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಬೇಕು. ಈ ರೀತಿಯ ಮಾಡುವವರನ್ನು ಎನ್ಕೌಂಟರ್ ಮಾಡಬೇಕೆಂದು ಬಿಜೆಪಿ ಶಾಸಕ ಅಭಯ್ ಪಾಟೀಲ ಆಗ್ರಹಿಸಿದರು. ನಾನು 32 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈವರೆಗೆ ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ. ಇದೇ ಮೊದಲು ಆಕ್ರೋಶ ವ್ಯಕ್ತವಾಗಿದ್ದು ಸತ್ಯವು ಇದೆ. ಪಕ್ಷಕ್ಕಾಗಿ ಶ್ರಮ ವಹಿಸುತ್ತಾರೆ. ಕುಟುಂಬ, …
Read More »ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಬೆಳ್ಳಾರೆ ನಿವಾಸಿ ಮೊಹ್ಮದ್ ಶಫೀಕ್ (27) , ಸವಣೂರು ನಿವಾಸಿ ಝಾಕೀರ್ (29) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯ ನೇತ್ರತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ …
Read More »