Breaking News

ಕೋಮು ಉದ್ವಿಗ್ನತೆ : ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು : ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ. ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ …

Read More »

ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ; 25 ಲಕ್ಷ ರೂ. ಪರಿಹಾರ

ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇರಲಿದೆ ಎಂದು ಧೈರ್ಯ ತುಂಬಿದರು. 25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಿಎಂ …

Read More »

17 ವರ್ಷ ಮೇಲ್ಪಟ್ಟವರೂ Voter IDಗೆ ಅರ್ಜಿ ಸಲ್ಲಿಸಬಹುದು – ಚುನಾವಣಾ ಆಯೋಗ

ನವದೆಹಲಿ: ಇನ್ಮುಂದೆ 17 ವರ್ಷ ಮೇಲ್ಪಟ್ಟ ಯುವ ಜನರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿಯೇ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ಹೇಳಿದೆ. ದೇಶದ ಕಾನೂನಿನ ಪ್ರಕಾರ ಪ್ರತಿಯೊಬ್ಬ ಪ್ರಜೆಗೂ 18 ವರ್ಷ ತುಂಬಿದ ಬಳಿಕ ಮತದಾನದ ಹಕ್ಕು ನೀಡಲಾಗಿದೆ. ಆದರೆ ಈಗ 17 ವರ್ಷದವರು ಕೂಡ ತಮ್ಮ ಹೆಸರನ್ನು ನೋಂದಾಯಿಸಲು ಮತದಾನದ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಯುವ ಜನರು …

Read More »

ಇಸ್ಟೀಟ್ ಅಡ್ಡೆ ಮೇಲೆ ಬೈಲಹೊಂಗಲ ಪೊಲೀಸ್ ಭರ್ಜರಿ ದಾಳಿ

ಬೈಲಹೊಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಗ್ಯಾಂಬ್ಲಿಂಗ್ ಅಡ್ಡೆಯನ್ನು ಭೇದಿಸಿದ್ದಾರೆ. ಹೌದು ನಿನ್ನೆ ತಡರಾತ್ರಿ ಬೈಲಹೊಂಗಲ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಸ್ಪೀಟ್ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1,10,320 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ

Read More »

ಬೆಳಗಾವಿ ಡಿಸಿ ಕಚೇರಿ ಆವರಣ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಟ್ಟ ಡಿಸಿ ನಿತೇಶ ಪಾಟೀಲ್

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಡಿಸಿ ಕಚೇರಿ ಸುತ್ತಲೂ ವಿವಿಧ ಅಭಿವೃದ್ಧಿ ಮಾಡಲು ಡಿಸಿ ನಿತೇಶ ಪಾಟೀಲ್ ದೃಢವಾದ ಹೆಜ್ಜೆ ಇಟ್ಟಿದ್ದಾರೆ. ಹೌದು ರಾಜ್ಯದ ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುವ ಬೆಳಗಾವಿಯ ಡಿಸಿ ಕಚೇರಿಗೆ ವಿವಿಧ ತಾಲೂಕುಗಳ ಗ್ರಾಮಗಳಿಂದ ದಿನನಿತ್ಯ ಸಾವಿರಾರು ಜನರು ಬರುತ್ತಾರೆ. ಅನೇಕ ಜಿಲ್ಲಾಧಿಕಾರಿಗಳು ಬೆಳಗಾವಿಗೆ ಬಂದು ಹೋಗಿದ್ದಾರೆ. ಆದರೆ ನಿತೇಶ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ ತಮ್ಮ ಕಚೇರಿ ಸುತ್ತಮುತ್ತಲಿನ ಅಂಗಡಿ, …

Read More »

ಹುಬ್ಬಳ್ಳಿ: ಗೋಡೆ ಕುಸಿದು ಬಾಲಕ ಸಾವು

ಹುಬ್ಬಳ್ಳಿ: ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಬುಧವಾರ ಸಾಯಂಕಾಲ ನಗರದಲ್ಲಿ ಏಕಾಏಕಿ ರಭಸವಾಗಿ ಸುರಿಯಿತು. ಅಬ್ಬರದ ಮಳೆಗೆ ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಶ್ರೇಯಾ ಜ್ಯುಪಿಟರ್‌ ಕಾಂಪ್ಲೆಕ್ಸ್‌ನ ತಡೆಗೋಡೆ ಕುಸಿದು ಕಲಬುರ್ಗಿ ಮೂಲದ, ಇಲ್ಲಿನ ಬೆಂಗೇರಿ ನಿವಾಸಿ ದರ್ಶನ್‌(16) ಮೃತಪಟ್ಟಿದ್ದಾರೆ. ಮಾರುಕಟ್ಟೆ ಪ್ರದೇಶ ಸೇರಿದಂತೆ, ಕೆಲವು ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಹೊಸೂರು ವೃತ್ತ, ಹೊಸೂರು ಬಿಆರ್‌ಟಿಎಸ್‌ ಬಸ್‌ ನಿಲ್ದಾಣ, ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ …

Read More »

ಅಗತ್ಯ ಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಎಂದ ಸಿಎಂ..!

ಕೋಮು ಭಾವನೆ ಕದಡುವ ಶಕ್ತಿಗಳನ್ನು ಸದೆಬಡಿಯುತ್ತೇವೆ. ಬಾಯಿ ಮಾತಿನಲ್ಲಿ ಅಲ್ಲ ಕಠಿಣ ಕ್ರಮಕೈಗೊಂಡಿದ್ದೇವೆ. ರಾಜ್ಯದಲ್ಲಿ ಅಪರಾಧಗಳ ತಡೆಗೆ ಹಲವು ಕ್ರಮಕೈಗೊಂಡಿದ್ದೇವೆ. ಅಗತ್ಯ ಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮ್ಮ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ …

Read More »

ಕುಂದಾನಗರಿಯಲ್ಲಿ ಕಿಚ್ಚ ಸುದೀಪ್ “ವಿಕ್ರಾಂತ ರೋಣ”ನ ಅಬ್ಬರ:

ಕಿಚ್ಚ ಸುದೀಪ ಅಭಿನಯದ ವಿಕ್ರಾಂತ್ ರೋಣ ಚಿತ್ರಕ್ಕೆ ಬೆಳಗಾವಿಯಲ್ಲಿ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಕಿಚ್ಚನ ಅಭಿಮಾನಿಗಳು ಭರ್ಜರಿ ಬೈಕ್ ರ್ಯಾಲಿ ನಡೆಸಿದ್ದು, ಚಿತ್ರ ಮಂದಿರ ಮುಂದೆ ಕುಣಿದು ಕುಪ್ಪಳಿಸಿ, ಸಂಭ್ರಮಿಸಿದ್ದಾರೆ. ಹೌದು ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಬಹು ನಿರೀಕ್ಷಿತ ವಿಕ್ರಾಂತ ರೋಣ ಸಿನಿಮಾ ಗುರುವಾರ ವಿಶ್ವದಾಧ್ಯಂತ ರಿಲೀಸ್ ಆಗಿರುವ ಹಿನ್ನೆಲೆ ಬೆಳಗಾವಿ ಚೆನ್ನಮ್ಮ ವೃತ್ತದಿಂದ ಚಿತ್ರಾ ಟಾಕೀಸ್‍ವರೆಗೂ ಕಿಚ್ಚ ಅಭಿಮಾನಿಗಳು ಬೈಕ್ ರ್ಯಾಲಿ ನಡೆಸಿದರು. ಕಿಚ್ಚ ಸುದೀಪ್ ಸೇನಾ …

Read More »

ಹೂಲಿಕಟ್ಟಿಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ

ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ‌ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಚಿರತೆ ಹೆಜ್ಜೆ ಗುರುತು ಪತ್ತೆಯಾಗಿರುವ ಹಿನ್ನೆಲೆ ಗ್ರಾಮಸ್ಥರಲ್ಲಿ‌ ಆತಂಕ ಮನೆ ಮಾಡಿದೆ. ಹೂಲಿಕಟ್ಟಿ ಗ್ರಾಮದಲ್ಲಿ ನೆಲದ ಮೇಲೆ ಚಿರತೆ ಹೆಜ್ಜೆ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸವದತ್ತಿ ವಲಯ ಅರಣ್ಯ ಅಧಿಕಾರಿಗಳು ಚಿರತೆಯ ಹೆಜ್ಜೆಯನ್ನು ಗುರುತು ಮಾಡಿದ್ದಾರೆ. ವಿಶೇಷ ತಂಡ ರಚಿಸಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ …

Read More »

ವಿವಿಧ ಬೇಡಿಕೆ ಈಡೇರಿಸುವಂತೆ ಬೆಳಗಾವಿಯಲ್ಲಿ ಕೂಲಿ ಕಾರ್ಮಿಕ ಪ್ರತಿಭಟನೆ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕಾರ್ಮಿಕ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಗುರುವಾರ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು 2021ರ ಫೆಬ್ರುವರಿ, ಮಾರ್ಚ ಹಾಗೂ 2022ರ ಏಪ್ರೀಲ್, ಮೇ, ಜೂನ್ ತಿಂಗಳ ಕೂಲಿ ಹಣ ಈವರೆಗೂ ಬಿಡುಗಡೆ ಆಗಿಲ್ಲ. ತಕ್ಷಣವೇ ಈ ಕೂಲಿ ಹಣ ಬಿಡುಗಡೆ ಮಾಡುವುದು …

Read More »