ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಗ್ರೀನ್ ಮೆಂಟರ್ಸ್ ಸಂಸ್ಥೆಯು ನಡೆಸಿದ ರಾಷ್ಟ್ರೀಯ ಹಸಿರು ವಿಶ್ವವಿದ್ಯಾಲಯ ಶ್ರೇಯಾಂಕ 2026 ರಲ್ಲಿ ಭಾಗವಹಿಸಿ, 100 ಅಂಕಗಳಲ್ಲಿ 90.7 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 26ನೇ ಸ್ಥಾನವನ್ನು ಪಡೆದು ಗಮನಾರ್ಹ ಸಾಧನೆ ಮಾಡಿದೆ. ಈ ಮಹತ್ವದ ಸಾಧನೆಯನ್ನು ಸಂಭ್ರಮಿಸುವ ಸಲುವಾಗಿ, ವಿಶ್ವವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದಲ್ಲಿ ಎನ್ಐಆರ್ಎಫ್/ಎನ್ಜಿಯುಆರ್ ಸಮಿತಿಯು ಕುವೆಂಪು ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು …
Read More »ಮೀಟರ್ ಆಧಾರಿತ ಆಟೋ ಸಂಚಾರ ಕಡ್ಡಾಯ: ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ: ಬೆಳಗಾವಿ ನಗರದಲ್ಲಿ ಆಟೋ ರಿಕ್ಷಾಗಳು ಕಡ್ಡಾಯವಾಗಿ ಮೀಟರ್ ಆಧಾರದಲ್ಲಿ ಸಂಚರಿಸಬೇಕು. ನಗರ ವ್ಯಾಪ್ತಿಯಲ್ಲಿ ಪ್ರಾರಂಭಿಕವಾಗಿ 1.6 ಕಿಲೋ ಮೀಟರ್ಗೆಗೆ ₹37 ತದನಂತರ ಪ್ರತಿ ಕಿಲೋ ಮೀಟರ್ಗೆ 15 ರೂ. ದರವನ್ನು ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ವಿದ್ಯಾರ್ಥಿಗಳು ಜಾನಪದ ಕಲೆಗಳನ್ನು ಅಳವಡಿಸಿಕೊಳ್ಳಬೇಕು; ರವಿ ಕೋಟಾರಗಸ್ತಿ
ಬೆಳಗಾವಿ: ವಿದ್ಯಾರ್ಥಿಗಳು ಜಾನಪದ ಕಲೆ, ಸಾಹಿತ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಬಿಡುವಿನ ಸಮಯದಲ್ಲಿ ಮನರಂಜನೆಗಾಗಿ ಜಾನಪದ ಸಾಹಿತ್ಯ, ನೃತ್ಯ ನಾಟಕಗಳನ್ನು ಮಾಡುತ್ತಿದ್ದರು. ಇದು ಕೇವಲ ಮನರಂಜನೆಯಾಗಿರದೇ ನಮ್ಮ ನಾಡಿನ ನಡೆ ನುಡಿ ಆಚಾರ ವಿಚಾರ ಹಾಗೂ ಹಳ್ಳಿಯ ಸೊಗಡನ್ನು ಸಾರುವಂತಾಗಿರುತ್ತದೆ ಎಂದು ಹಿರಿಯ ಸಾಹಿತಿ ರವಿ ಕೋಟಾರಗಸ್ತಿ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಾಂತೇಶ ನಗರ ರಹವಾಸಿ ಸಂಘದ ಶಿಕ್ಷಣ ಮಹಾವಿದ್ಯಾಲಯ …
Read More »ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ
ಕೋಲಾರ: ಜಿಲ್ಲೆಯ ಗಡಿ ಭಾಗದಲ್ಲಿ ಪೆಟ್ರೋಲ್ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ. ಮಾಲೂರು ತಾಲೂಕು ಆಲಂಬಾಡಿ ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಗುಂದಿಯಿಂದ ಬರುವ ಪೆಟ್ರೋಲ್ ಟ್ಯಾಂಕರ್ಗಳಿಂದ ಪೆಟ್ರೋಲ್ ಕಳ್ಳತನ ನಡೆಯುತ್ತಿದೆ. ಪೆಟ್ರೋಲ್ ಟ್ಯಾಂಕರ್ಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪೆಟ್ರೋಲ್ ಹಾಗೂ ಡೀಸೆಲ್ನ್ನು ದುಷ್ಕರ್ಮಿಗಳ ಗ್ಯಾಂಗ್ ಕಳ್ಳತನ ಮಾಡುತ್ತಿದೆ. ಪ್ರತಿನಿತ್ಯ ಪೆಟ್ರೋಲ್ ಬಂಕ್ಗಳಿಗೆ ಬರುವ ಟ್ಯಾಂಕರ್ಗಳಿಂದ ಹೀಗೆ ವ್ಯವಸ್ಥಿತವಾಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಕಳ್ಳತನ ಮಾಡಿದ ಪೆಟ್ರೋಲ್ ಹಾಗೂ ಡೀಸೆಲ್ …
Read More »2028ರಲ್ಲಿ ಕಾಂಗ್ರೆಸ್ ಸ್ಥಾನಗಳು 50-60ಕ್ಕೆ ಕುಸಿತ: ಬಿವೈವಿ
ಬೆಂಗಳೂರು: 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಾನಗಳು 50-60ಕ್ಕೆ ಇಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಾನಗಳು 50-60ಕ್ಕೆ ಇಳಿಯಲಿದೆ ಎಂದಿದ್ದಾರೆ. ಸೂಚನೆಗೂ ಮೊದಲೇ ನೀರು ಬಿಟ್ಟಿದ್ದ ಕರ್ನಾಟಕ: ಕಾವೇರಿ ನದಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಸಿಡಬ್ಲ್ಯುಆರ್ಸಿಯಲ್ಲಿ ವಾದ ಮಾಡುವ ನಮ್ಮ ವಕೀಲರು …
Read More »ನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿ
ಬೆಂಗಳೂರು: ನಮಗೇ ಕುಡಿಯೋಕೆ ನೀರಿಲ್ಲ, ಹಾಗಿದ್ದಾಗ 3,500 ಸಾವಿರ ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ? ಎಂದು ಡಿಸಿಎಂ ಪರಮೇಶ್ವರ್ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಕಾವೇರಿ ನೀರು ತಮಿಳುನಾಡಿಗೆ ಹರಿಸುವ ವಿಚಾರವಾಗಿ ಮಾತನಾಡಿದ ಅವರು, ನಮಗೇ ಕುಡಿಯಲು ನೀರಿಲ್ಲ. ಹಾಗಿದ್ದಾಗ 3,500 ಸಾವಿರ ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ? ಇದರ ಬಗ್ಗೆ ಚರ್ಚೆಗೆ ಸಿಎಂ ಸರ್ವಪಕ್ಷದ ಸಭೆ ಕರೆಯುತ್ತಾರೆ. ಸೋಮವಾರ (ಆ.3) ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಬರ್ತಾರೆ, ಅವರ …
Read More »ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ
ಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿರುದ್ಧ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಈ ಕುರಿತು ಮಾತನಾಡಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಒಂದು ವೇಳೆ ನೀರು ಬಿಟ್ಟರೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾವೇರಿ ಜಲಾನಯನ …
Read More »ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್ ಕಾನ್ಸ್ಟೇಬಲ್ಗೆ ಹಿಗ್ಗಾಮುಗ್ಗ ಥಳಿತ
ಬೆಂಗಳೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್ ಕಾನ್ಸ್ಟೇಬಲ್ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್ ಹತ್ತಿದ್ದರು. ಬಸ್ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ. ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ …
Read More »ಪ್ರೀತಿಯ ಬಲೆಗೆ ಬಿದ್ದು ಗರ್ಭಿಣಿಯಾದ ಅಪ್ರಾಪ್ತೆ – ಗಂಡು ಮಗುವಿಗೆ ಜನ್ಮ, ಪ್ರಿಯಕರನ ವಿರುದ್ಧ ಪೋಕ್ಸೋ ಕೇಸ್
ಚಿತ್ರದುರ್ಗ: ಪ್ರೀತಿಯ ಬಲೆಗೆ ಬಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪ್ರಿಯಕರ ಕರಿಯಣ್ಣನ ವಿರುದ್ಧ ಪೋಕ್ಸೋ (POCSO) ಕೇಸ್ ದಾಖಲಾಗಿದ್ದು, ಆರೋಪಿ ಎಸ್ಕೇಪ್ ಆಗಿದ್ದಾನೆ. ಮಾಹಿತಿಯ ಪ್ರಕಾರ, ಅಪ್ರಾಪ್ತ ಬಾಲಕಿ ಹಾಸ್ಟೆಲ್ನಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಈ ವೇಳೆ ಕರಿಯಣ್ಣ ಎಂಬ ಗೂಡ್ಸ್ ವಾಹನ ಚಾಲಕನನ್ನ ಪ್ರೀತಿಸುತ್ತಿದ್ದಳು. ಬಳಿಕ ಬಾಲಕಿ ಗರ್ಭಿಣಿಯಾಗಿರೋದು …
Read More »ತಮಿಳುನಾಡಿಗೆ ಕಾವೇರಿ ನೀರು – ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರ
ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ) ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ ನಡೆಸುತ್ತೇವೆ. ಆ ಭಾಗದ ರೈತರು, ರೈತ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದರು. ನಗರದ ಬೆಕ್ಕಿನಕಲ್ಮಠದಲ್ಲಿ ಗುರುಪೂರ್ಣಿಮೆಯ ಸಲುವಾಗಿ ಭೇಟಿ ನೀಡಿದ್ದರು. ಈ ವೇಳೆ ಕಾವೇರಿ ನೀರು ನಿರ್ವಾಹಣಾ ಸಮಿತಿ ತೀರ್ಪು ನೀಡಿದ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಆ ತೀರ್ಪು ಕಾವೇರಿ ಕೊಳ್ಳದ ರೈತರಿಗೆ ಬರೆ …
Read More »
Laxmi News 24×7