ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಮೂರು ತಿಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವಂತೆ ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 3 ತಿಂಗಳ ಒಳಗಾಗಿ ಎಲ್ಲ ವ್ಯವಸ್ಥೆ ಸರಿಗೊಳಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಹಲವು ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಾಧಿಕಾರಿಗಳ …
Read More »ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ
ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮನೆಯ ಮೇಲೆ ಸ್ಟೀಲ್ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ …
Read More »ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜ್ಯೂನಿಯರ್ ಲೈನ್ಮ್ಯಾನ್ ಆಗಿರುವ ಹುಕ್ಕೇರಿ ತೂಲೂಕಿನ ಗಿರೀಶ ಬನಾಜ್, ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ …
Read More »ಬೆಂಗಳೂರಿನಲ್ಲಿ ಮತ್ತೆ ಶುರುವಾದ ಭಾರೀ ಮಳೆ, 2 ಗಂಟೆ ನಿರಂತರ ಸುರಿದ್ರೆ ಅನಾಹುತ ಫಿಕ್ಸ್
ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಇನ್ನೂ ಚೇತರಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಇದರ ನಡುವೆ ಈಗ ಮತ್ತೆ ಬೆಂಗಳೂರಿನಲ್ಲಿ (Bengaluru) ಭಾರೀ ಮಳೆ (Heavy Rain) ಶುರುವಾಗಿದೆ. ಮತ್ತಿಕೆರೆ, ಕಾರ್ಪೊರೇಷನ್, ಯಶವಂತಪುರ, ಬಿಇಎಲ್ ಸರ್ಕಲ್, ಗೊರಗುಂಟೆಪಾಳ್ಯ ಸೇರಿದಂತೆ ಹಲವೆಡೆ ಮಳೆ ಆರಂಭವಾಗಿದೆ. ತಗ್ಗುಪ್ರದೇಶದಲ್ಲಿರುವ (Down Area) ಜನರಿಗೆ ಹಾಗೂ ರಾಜಕಾಲುವೆ ಪಕ್ಕದಲ್ಲಿರುವ ಜನರಿಗೆ ಮತ್ತೆ ಆತಂಕ ಶುರುವಾಗಿದೆ. ಅದರಲ್ಲೂ ಆಫೀಸ್ (Office) ಬಿಡೋ ಟೈಮ್ ಆಗಿರೋದ್ರಿಂದ ವಾಹನ ಸವಾರರಿಗೆ (Vehicle ) …
Read More »ಸತತ ಮಳೆ: ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿತ
ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.
Read More »ಮಠದ ಆವರಣದಲ್ಲೇ ನೇಣಿಗೆ ಶರಣಾದ ಮಡಿವಾಳೇಶ್ವರ ಮಠದ ಬಸವಸಿದ್ದಲಿಂಗ ಮಹಾಸ್ವಾಮೀಜಿ
ಬೈಲಹೊಂಗಲ : ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರಮಠದ ಪೀಠಾಧಿಪತಿ ಬಸವಸಿದ್ದಲಿಂಗ ಮಹಾಸ್ವಾಮೀಜಿ ಮಠದ ಆವರಣದಲ್ಲೇ ಸ್ವಾಮೀಜಿಗಳು ನೇಣಿಗೆ ಶರಣಾಗಿದ್ದಾರೆ. ಮುರಘಾಮಠದ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಆಡಿಯೋದಲ್ಲಿ ಈ ಸ್ವಾಮೀಜಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಕೇಳಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ ಭೇಟಿ ನೀಡಿ ಪರಿಶಿಲಿಸುತ್ತಿದ್ದಾರೆ.
Read More »‘3.30 ಲಕ್ಷ ನಕಲಿ ಕಾರ್ಡ್’ ರದ್ದು
ಬೆಂಗಳೂರು: ನಿಗದಿತ ಮಾನದಂಡ ಉಲ್ಲಂಘಿಸಿದಂತ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 3.30 ಲಕ್ಷ ನಕಲಿ ಪಡಿತರ ಚೀತಿಯನ್ನು ರದ್ದುಗೊಳಿಸಿದೆ. ಹೌದು.. ರಾಜ್ಯಾಧ್ಯಂತ 21,679 ಅಂತ್ಯೋದಯ, 3,08,345 ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದೆ. ಹೀಗೆ ರದ್ದುಗೊಳಿಸಲಾದಂತ ಕಾರ್ಡ್ ಗಳಲ್ಲಿ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ನಕಲಿ ಕಾರ್ಡ್ ಗಳಿದ್ದರೇ, ಚಿತ್ರದುರ್ಗ ಜಿಲ್ಲೆಯಲ್ಲಿ ಕಡಿಮೆ ಕಾರ್ಡ್ ಪತ್ತೆಯಾಗಿವೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ …
Read More »ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮರುಘಾಮಠದ ಶ್ರೀಗಳಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ …
Read More »ವೈರಲ್ ಪೋಸ್ಟ್ ತಂದ ಆಪತ್ತು; ಸತ್ತ ಬಾಲಕನ ಜೀವ ಬರುತ್ತೆ ಅಂತ ಶವವನ್ನ ಉಪ್ಪಿನ ರಾಶಿಯಲ್ಲಿಟ್ಟ ಗ್ರಾಮಸ್ಥರು
ಬಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲೊಂದು ವಿಡಿಯೋ ಅಥವಾ ಪೋಸ್ಟ್ ಗಳು ವೈರಲ್ ಆಗುತ್ತದೆ. ಇಂತಹ ವಿಡಿಯೋ ನೋಡಿ ಅದೆಷ್ಟು ಜನ ಹೊಸ- ಹೊಸ ಪ್ರಯತ್ನ ಕೂಡ ಮಾಡುವುದಕ್ಕೆ ಹೋಗುತ್ತಾರೆ. ಅದೇ ರೀತಿ ಇಲ್ಲೊಂದು ಜಿಲ್ಲೆಯಲ್ಲಿ ಅಂತಹದ್ದೆ ಒಂದು ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ವೈರಲ್ ಆಗಿತ್ತು. ಅದರಲ್ಲಿ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿ ಇಟ್ಟರೆ ಮತ್ತೆ ಬದುಕುತ್ತಾನೆ ಎಂದು …
Read More »ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ 24×7 ಕುಡಿಯು ನೀರು ಪೂರೈಕೆಗೆ ಯೋಜನೆ ಅನುಷ್ಠಾನ – ಸಿಎಂ ಬೊಮ್ಮಾಯಿ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳಿಗೆ 24/7 ನಿರಂತರ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿ ಚುರುಕುಗೊಳ್ಳಬೇಕು.ಗುತ್ತಿಗೆ ಪಡೆದಿರುವ ಸಂಸ್ಥೆಯು ಸ್ಥಳೀಯ ಜನಪ್ರತಿನಿಧಿಗಳ ಸಲಹೆ,ಸಹಕಾರ ಪಡೆದು ಜಲ ಸಂಗ್ರಹಾಗಾರ ಹಾಗೂ ಕೊಳವೆ ಮಾರ್ಗ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡೆನಿಸನ್ಸ್ ಹೋಟೆಲಿನಲ್ಲಿ ಭಾನುವಾರ ಸಂಜೆ ಅವಳಿನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, …
Read More »
Laxmi News 24×7