ಬೆಂಗಳೂರು(ಸೆ.06): ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಮಂಗಳವಾರ) ರಾತ್ರಿ ನಗರದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್ ಕತ್ತಿ ನಿಧನರಾಗಿದ್ದಾರೆ.
Read More »BIG BREAKING ಸಚಿವ ಉಮೇಶ್ ಕತ್ತಿಗೆ ಹಾರ್ಟ್ ಅಟ್ಟ್ಯಾಕ್
ಸಚಿವ ಉಮೇಶ್ ಕತ್ತಿಗೆ ಹಾರ್ಟ್ ಅಟ್ಟ್ಯಾಕ್ ರಾತ್ರಿ 10ಗಂಟೆಗೆ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸದಲ್ಲಿ ತಕ್ಷಣ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಹೆಚ್ಚಿನ ಮಾಹಿತಿಗೆ ಬಾಕಿ
Read More »ತ್ಯಾಗರ್ತಿ: ಒಂದೇಕಡೆ ಗಣಪತಿ ಪ್ರತಿಷ್ಠಾಪನೆ
ತ್ಯಾಗರ್ತಿ: ಸರ್ವಧರ್ಮಿಯರನ್ನು ಹೊಂದಿರುವ ತ್ಯಾಗರ್ತಿ ಗ್ರಾಮ ಸುಮಾರು 5,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಸಂಘಟಿಸಿ ಮಾದರಿಯಾಗಿದೆ. ಕೆಲವು ವರ್ಷಗಳ ಹಿಂದೆ ಗ್ರಾಮದಲ್ಲಿ ಅಂಬೇಡ್ಕರ್ ಸಂಘ, ಮುಕ್ಕುಪ್ಪೆ ಸರ್ಕಲ್, ಕಾಗೋಡು ತಿಮ್ಮಪ್ಪ ವೃತ್ತ, ಬನ್ನಿಕಟ್ಟೆ, ಮಾರಿಕಾಂಬಾ ತವರು ಮನೆ ಹಾಗೂ ಮಾರಿಕಾಂಬಾ ದೇವಸ್ಥಾನ ಹೀಗೆ ಬೇರೆ ಬೇರೆ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿತ್ತು. ಗ್ರಾಮದ ಹಿರಿಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಚರ್ಚಿಸಿ ಎಲ್ಲರೂ ಸೇರಿ ಸಾರ್ವಜನಿಕ ಹಿಂದೂ ಮಹಾಸಭಾ …
Read More »ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು:C.M. ಬೊಮ್ಮಾಯಿ
ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ. ಅದರಲ್ಲಿ ಬೊಮ್ಮನಹಳ್ಳಿ ವಲಯ ಸಂಪೂರ್ಣ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿದ್ದು, …
Read More »ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ.: ಸಿಎಂ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ. ಅಕ್ಟೋಬರ್ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿದ ಬಳಿಕ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ, ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು. …
Read More »ಹಾಸನ ವಿಧಾನಸಭಾ ಟಿಕೆಟ್ ಫೈಟ್: ಜೆಡಿಎಸ್ ಸಭೆಯಲ್ಲಿ ಗದ್ದಲ, ರೇವಣ್ಣ ಗರಂ
ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯುವ ಮುಖಂಡ ಎಚ್.ಎಸ್.ಸ್ವರೂಪ್ ಅವರಿಗೆ ಜೆಡಿಎಸ್ ಟಿಕೆಟ್ ನೀಡುವಂತೆ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದಾಗ, ಜೆಡಿಎಸ್ ಕಾರ್ಯಕರ್ತರ ಸಭೆ ಗದ್ದಲಕ್ಕೆ ತಿರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಎಚ್.ಡಿ.ರೇವಣ್ಣ ಅವರು ನಿರಂತರವಾಗಿ ಸ್ವರೂಪ್ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರನ್ನು ಏಕವಚನದಲ್ಲಿಯೇ ತರಾಟೆಗೆ ತೆಗೆದುಕೊಂಡರು. ಅಲ್ಲದೆ ಅವರಿಗೆ ಸಭಾಂಗಣದಿಂದ ಹೊರಗೆ ಹೋಗುವಂತೆ ಸೂಚಿಸಿದರು. ಎಚ್.ಡಿ.ರೇವಣ್ಣ ಹೇಳಿಕೆಯಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಸ್ವರೂಪ್ …
Read More »ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ 229 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು 129 ಹುದ್ದೆಗಳು ಮತ್ತು ಹೈದರಾಬಾದ್ ಕರ್ನಾಟಕ 59 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ …
Read More »ಗೋಕಾಕ್‌ನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು, ಬಾಣಂತಿಯ ರಕ್ಷಣೆಯೇ ರೋಚಕ!
ಬೆಳಗಾವಿ: ಗೋಕಾಕ್ ತಾಲೂಕು ಸೇರಿದಂತೆ ವಿವಿಧಡೆ ಭಾರಿ ಮಳೆ ಸುರಿಯುತ್ತಿದೆ. ರಣಮಳೆಯಿಂದ ಹಲವೆಡೆ ಪ್ರವಾಹ ಉಂಟಾಗಿದ್ದು ಹಲವರು ಸಿಲುಕಿಕೊಂಡಿದ್ದಾರೆ. ಇಂದು ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ ಪ್ರಸಂಗವೂ ಕೂಡ ಮಳೆಯ ಪ್ರಮಾಣಕ್ಕೆ ಸಾಕ್ಷಿಯಾಯಿತು. ಸ್ಥಳೀಯ ಯುವಕರೆಲ್ಲ ಸೇರಿ ಹರಸಾಹಪಟ್ಟು ಹಸುಗೂಸು ಮತ್ತು ತಾಯಿಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರ ಮನಮಿಡಿಯೂವ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಗೋಕಾಕ್ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ …
Read More »ಕಳ್ಳತನ ಯತ್ನ ವಿಫಲ.. ಸಿಟ್ಟಿಗೆದ್ದ ಖದೀಮ ಅಂಗಡಿಯಲ್ಲಿ ಮಾಡಿದ್ದೇನು ಗೊತ್ತಾ?
ಬೆಂಗಳೂರು: ದಿನವಿಡೀ ಕಾದು ಯತ್ನಿಸಿದರೂ ಕನ್ನ ಹಾಕುವ ಪ್ಲಾನ್ ವಿಫಲವಾಗಿದ್ದಕ್ಕೆ ಸಿಟ್ಟಿಗೆದ್ದ ಕಳ್ಳನೊಬ್ಬ ಸಿಕ್ಕ ಸಿಕ್ಕ ವಸ್ತುಗಳನ್ನು ಕಿತ್ತೆಸೆದು ಪರಾರಿಯಾಗಿದ್ದಾನೆ. ಸೂಪರ್ ಮಾರ್ಕೆಟ್ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಖದೀಮನು ತನ್ನ ಪ್ರಯತ್ನ ಕೈಗೂಡದೆ ಪರಾರಿಯಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 27ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಜೆಯಿಂದಲೇ ಹೊಂಚು ಹಾಕಿ ರಾತ್ರಿ ಸೂಪರ್ ಮಾರ್ಕೆಟ್ ಒಂದಕ್ಕೆ ನುಗ್ಗಿದ್ದ ಖದೀಮ ಆ್ಯಕ್ಸೆಲ್ ಬ್ಲೇಡ್ ಬಳಸಿ ಕ್ಯಾಶ್ ಬಾಕ್ಸ್ …
Read More »ಬೆಂಗಳೂರಿನಲ್ಲಿ ಮಳೆಯ ಅವಾಂತರಕ್ಕೆ ಹಲವಾರು ರಸ್ತೆಗಳು ಜಲಾವೃತ
ಬೆಂಗಳೂರು: ಟ್ರಾಫಿಕ್ ಜಾಮ್ ಉಂಟಾದಾಗ ಸಂಚಾರಿ ಪೊಲೀಸರು ವಾಹನ ದಟ್ಟಣೆಯಾಗಿರುವ ಮಾರ್ಗದಲ್ಲಿ ಸಂಚಾರಿಸಬೇಡಿ ಎಂದು ಹೇಳುವುದು ಸರ್ವೇಸಾಮಾನ್ಯ. ಇಲ್ಲಿಯೂ ಸಹ ಟ್ರಾಫಿಕ್ ಪೊಲೀಸರು ಈ ಮಾರ್ಗಗಳಲ್ಲಿ ವಾಹನ ಚಲಾಯಿಸಬೇಡಿ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸಿ ಎಂದು ಮನವಿ ಮಾಡುತ್ತಿದ್ದಾರೆ. ಈ ಬಾರಿ ಮನವಿ ಮಾಡುತ್ತಿರುವುದು ಟ್ರಾಫಿಕ್ ಜಾಮ್ ಕಾರಣಕ್ಕೆ ಅಲ್ಲ, ರಸ್ತೆಗಳು ಜಲಾವೃತ ಆಗಿದ್ದಕ್ಕಾಗಿ ಎನ್ನುತ್ತಿದ್ದಾರೆ. ಕಳೆದ ಒಂದು ವಾರದಿಂದ ಐಟಿ ಸಿಟಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ರಾಜಧಾನಿ ಥಂಡಾ …
Read More »
Laxmi News 24×7