Breaking News

ವೈರಲ್‌ ಪೋಸ್ಟ್‌ ತಂದ ಆಪತ್ತು; ಸತ್ತ ಬಾಲಕನ ಜೀವ ಬರುತ್ತೆ ಅಂತ ಶವವನ್ನ ಉಪ್ಪಿನ ರಾಶಿಯಲ್ಲಿಟ್ಟ ಗ್ರಾಮಸ್ಥರು

ಬಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲೊಂದು ವಿಡಿಯೋ ಅಥವಾ ಪೋಸ್ಟ್‌ ಗಳು ವೈರಲ್‌ ಆಗುತ್ತದೆ. ಇಂತಹ ವಿಡಿಯೋ ನೋಡಿ ಅದೆಷ್ಟು ಜನ ಹೊಸ- ಹೊಸ ಪ್ರಯತ್ನ ಕೂಡ ಮಾಡುವುದಕ್ಕೆ ಹೋಗುತ್ತಾರೆ. ಅದೇ ರೀತಿ ಇಲ್ಲೊಂದು ಜಿಲ್ಲೆಯಲ್ಲಿ ಅಂತಹದ್ದೆ ಒಂದು ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್‌ ವೈರಲ್‌ ಆಗಿತ್ತು. ಅದರಲ್ಲಿ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿ ಇಟ್ಟರೆ ಮತ್ತೆ ಬದುಕುತ್ತಾನೆ ಎಂದು …

Read More »

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ 24×7 ಕುಡಿಯು ನೀರು ಪೂರೈಕೆಗೆ ಯೋಜನೆ ಅನುಷ್ಠಾನ – ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳಿಗೆ 24/7 ನಿರಂತರ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿ ಚುರುಕುಗೊಳ್ಳಬೇಕು.ಗುತ್ತಿಗೆ ಪಡೆದಿರುವ ಸಂಸ್ಥೆಯು ಸ್ಥಳೀಯ ಜನಪ್ರತಿನಿಧಿಗಳ ಸಲಹೆ,ಸಹಕಾರ ಪಡೆದು ಜಲ ಸಂಗ್ರಹಾಗಾರ ಹಾಗೂ ಕೊಳವೆ ಮಾರ್ಗ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡೆನಿಸನ್ಸ್ ಹೋಟೆಲಿನಲ್ಲಿ ಭಾನುವಾರ ಸಂಜೆ ಅವಳಿನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, …

Read More »

‘ಶಿಕ್ಷಕರ ದಿನಾಚರಣೆ’ಯಂದೇ, ‘ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಕೊಟ್ಟ ‘ಸಿಎಂ ಬೊಮ್ಮಾಯಿ’

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ( Teacher Recruitment ) ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.   ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ …

Read More »

PSI ನೇಮಕಾತಿ ಹಗರಣ’ಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಹಣ ಪಡೆದಿದ್ದರೇನ್ನಲಾದ ‘ಬಿಜೆಪಿ ಶಾಸಕ’ನ ಆಡಿಯೋ ವೈರಲ್

ಕೊಪ್ಪಳ: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ( PSI Recruitment Scam ) ಅಕ್ರಮ ಹೊರ ಬಂದ ನಂತ್ರ, ನೇಮಕಾತಿಯನ್ನೇ ರದ್ದುಗೊಳಿಸಲಾಗಿತ್ತು. ಅಲ್ಲದೇ ಈ ಕೇಸ್ ನಲ್ಲಿ ಹಲವರನ್ನು ಸಿಐಡಿ ಬಂಧಿಸಿ ಜೈಲಿಗಟ್ಟಿದೆ. ಈ ಬೆನ್ನಲ್ಲೇ ಈಗ ಪ್ರಕರಣಕ್ಕೆ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಶಾಸಕರೊಬ್ಬರು ( BJP MLA ) 15 ಲಕ್ಷ ಪಿಎಸ್‌ಐ ನೇಮಕಕ್ಕೆ ಕೇಳಿದ್ದಾರೆ ಎನ್ನಲಾಗಿರುವಂತ ಆಡಿಯೋ ವೈರಲ್ ಆಗಿದೆ.   ಸೋಷಿಯಲ್ ಮೀಡಿಯಾದಲ್ಲಿ …

Read More »

ಮುರುಘಾ ಶ್ರೀಗಳಿಗೆ ಕಠಿಣ ಶಿಕ್ಷೆ ವಿಧಿಸಿ: ವಾಲ್ಮೀಕಿ ನೌಕರರ ಒಕ್ಕೂಟ ಆಗ್ರಹ

ಶ್ರೀಮಠದಲ್ಲಿ ಓದುತ್ತಿದ್ದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯ ಯುವ ಘಟಕ ಆಗ್ರಹಿಸಿದೆ. ಸೋಮವಾರ ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯ ಯುವ ಘಟಕದ ಪದಾಧಿಕಾರಿಗಳು ಮುರುಘಾ ಶ್ರೀಗಳು ತಮ್ಮ ಮಠದಲ್ಲಿ ಒದುತ್ತಿದ್ದ ಹೆಣ್ಣು ಮಕ್ಕಳಿಗೆ ದೈಹಿಕ …

Read More »

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!

ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೫ನೇ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಹಮ್ಮಿಕೊಂಡ ಶಿಕ್ಷಕರ …

Read More »

ಮಳೆಹಾನಿ ಪ್ರದೇಶಕ್ಕೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭೇಟಿ, ಪರಿಶೀಲನೆ!

ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಮಾಣಿಕವಾಡಿ, ಕೊಣ್ಣೂರ ರಸ್ತೆಯ …

Read More »

ಗೋಕಾಕನ ಮಾಣಿಕವಾಡಿ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು

ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.   ಮಾಣಿಕವಾಡಿ, ಕೊಣ್ಣೂರ …

Read More »

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ …

Read More »

ಬೆಳಗಾವಿ | ರಾಜ್ಯದ ಗಮನಸೆಳೆದ ಯಳ್ಳೂರ ಗ್ರಾಮ; ಈ ಊರಲಿದ್ದಾರೆ 425 ಶಿಕ್ಷಕರು

ಬೆಳಗಾವಿ: ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ಹೆಚ್ಚಿನವರು ಉನ್ನತ ಶಿಕ್ಷಣ ಪಡೆದು, ಶಿಕ್ಷಕ ಮತ್ತು ಉಪನ್ಯಾಸಕ ವೃತ್ತಿ ಆಯ್ಕೆ ಮಾಡಿಕೊಳ್ಳುತ್ತಿದ್ದು, ಪ್ರಸ್ತುತ 425 ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. 400 ಮಂದಿ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದಾರೆ.   ಸುಮಾರು 19 ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ, ಐದಕ್ಕಿಂತಲೂ ಹೆಚ್ಚು ಜನ ಶಿಕ್ಷಕರನ್ನು ಹೊಂದಿದ ಹಲವು ಕುಟುಂಬಗಳಿವೆ. ಬಬನ್‌ ಕಾನ್ಶಿಡೆ ಅವರ ಕುಟುಂಬವೊಂದರಲ್ಲೇ 12 ಮಂದಿ ಶಿಕ್ಷಕರಿದ್ದಾರೆ. ಈ ಪೈಕಿ 6 ಮಂದಿ …

Read More »