Breaking News

ಬರ್ಬರವಾಗಿ ಹತ್ಯೆಗೈದು ಯುವತಿಯ ರುಂಡದೊಂದಿಗೆ ಠಾಣೆಗೆ ಆಗಮಿಸಿದ ಪಾಗಲ್ ಪ್ರೇಮಿ

ವಿಜಯನಗರ (ಹೊಸಪೇಟೆ): ಪಾಗಲ್‌ ಪ್ರೇಮಿಯೋರ್ವ ಯುವತಿಯ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಯುವತಿಯ ತಲೆಯೊಂದಿಗೆ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾದ ಘಟನೆ ಕಾನಾಹೊಸಹಳ್ಳಿ ಕನ್ನಬೋರಯ್ಯನಹಟ್ಟಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ನಿರ್ಮಲಾ (23) ಕೊಲೆಯಾದ ಯುವತಿ, ಭೋಜರಾಜ ಎಂಬಾತ ಕೊಲೆ ಮಾಡಿದ ವ್ಯಕ್ತಿ. ನಿರ್ಮಲಾ ಹಾಗೂ ಭೋಜರಾಜ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಕಳೆದ ಮೂರು ತಿಂಗಳ ಹಿಂದೆ ಬೇರೆ ಯುವತಿಯೊಂದಿಗೆ ಬೋಜರಾಜ ಮದುವೆಯಾಗಿದ್ದ ಎಂದು ತಿಳಿದುಬಂದಿದೆ. ಯುವತಿ ಬಿಎಸ್ಸಿ ನರ್ಸಿಂಗ್ …

Read More »

ಇಂದು ಡಾ| ಹೆಗ್ಗಡೆ ಪ್ರಮಾಣ ವಚನ:

ಬೆಳ್ತಂಗಡಿ: ನಾಡಿನ ಪುಣ್ಯದ ನೆಲೆವೀಡಾಗಿ ಚತುರ್ದಾನ ಪರಂಪರೆಯೊಂದಿಗೆ ಸಮಾಜಮುಖೀ ಯೋಜನೆಗಳಿಂದ ಐತಿಹಾಸಿಕ ಗೌರವ ಗಳಿಗೆ ಸಾಕ್ಷಿಯಾ ಗಿರುವ ಧರ್ಮಸ್ಥಳ ಕ್ಷೇತ್ರವಿಂದು ಮಗದೊಂದು ಇತಿಹಾಸ ಬರೆಯುತ್ತಿದೆ. ಕ್ಷೇತ್ರದ ಧರ್ಮಾಧಿ ಕಾರಿಯವರಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯ ಸಭೆಗೆ ಪ್ರವೇಶಿಸುವ ಮೂಲಕ ರಾಜಧರ್ಮ ಪರಿಪಾಲನೆಯ ಮತ್ತೊಂದು ಅಧ್ಯಾಯ ಬರೆಯಲಿದ್ದಾರೆ. ಜನಸಾಮಾನ್ಯರ ಏಳಿಗೆಗಾಗಿ ಹಲವು ಸೇವೆಗಳನ್ನು ಸಲ್ಲಿಸಿರುವ ಧರ್ಮಾಧಿಕಾರಿಗಳ ಅಗ್ರಮಾನ್ಯ ಸೇವೆ ಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಸಭೆಗೆ ನಾಮ ನಿರ್ದೇಶನಗೊಳಿಸಿದ ಕ್ಷಣದಿಂದ …

Read More »

ಆಂಬುಲೆನ್ಸ್ ಚಾಲಕನ ವೇಗ, ಟೋಲ್ ಸಿಬ್ಬಂದಿಯ ಅಜಾಗರುಕತೆಗೆ ಬಿತ್ತು ಒಂದೇ ಕುಟುಂಬದ 4 ಹೆಣ

ಉಡುಪಿ, ಜುಲೈ 20: ಜಿಲ್ಲೆಗೆ ಬುಧವಾರ ಕರಾಳ ಬುಧವಾರವಾಗಿ ಮಾರ್ಪಾಟಾಗಿದೆ. ಬೆಳಗ್ಗಿನ ವೇಳೆಗೆ ಚಾಕಲೇಟ್ ನಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದರೆ ಸಂಜೆಯ ವೇಳೆಗೆ ಆಂಬುಲೆನ್ಸ್ ಒಂದು ಭೀಕರವಾಗಿ ಅಫಘಾತವಾಗಿ ಒಂದೇ ಕುಟುಂಬದ ನಾಲ್ವರು ಮೃತರಾಗಿದ್ದಾರೆ. ಅಂಬುಲೆನ್ಸ್ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,ಎಂತವರ ಹೃದಯವೂ ನಡುಗಿಸುವಂತಿದೆ.   ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ವೇಗವಾಗಿ ಬಂದ ಅಂಬುಲೆನ್ಸ್ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಭೀಕರ …

Read More »

SSLC’ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ಇಂದು ಮಧ್ಯಾಹ್ನ 12 ಗಂಟೆಗೆ ‘ವೆಬ್ ಸೈಟ್’ನಲ್ಲಿ ಲಭ್ಯ |

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಇಂದು ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶ ಲಭ್ಯ ವೀಕ್ಷಿಸಬಹುದಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಜೂನ್ …

Read More »

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ :ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ …

Read More »

110 ವರ್ಷದ ಸಾವಳಗಿಯ ಬಾಳವ್ವ ಅಜ್ಜಿ ವಿಧಿವಶ:

110 ವರ್ಷ ಸಾರ್ಥಕ ಜೀವನ ನಡೆಸಿ ಇಹಲೋಕ ತ್ಯಜಿಸಿದ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದ ಅಜ್ಜಿಯ ಅಂತ್ಯಕ್ರಿಯೆಯನ್ನು ಸುತ್ತ ನಾಲ್ಕೂರಿನ ಜನರು, ಬಂಧು-ಬಾಂಧವರು ಸೇರಿಕೊಂಡು ಅದ್ಧೂರಿಯಾಗಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.   ಹೌದು 110 ವರ್ಷದ ಬಾಳವ್ವಾ ಅಜ್ಜಿ ಬುಧವಾರ ಸಾವಳಗಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಸಾವಳಗಿ ಸುತ್ತಲಿನ ನಾಲ್ಕೂರಿನ ಹಾಗೂ ಸುತ್ತಮುತ್ತಲಿನ ಹಳ್ಳಿಯ ಜನರು ಕೂಡ ಭಾಗವಹಿಸಿ ಅಜ್ಜಿಯ ಅಂತಿಮ ದರ್ಶನ ಪಡೆದುಕೊಂಡರು. ಸ್ವಗ್ರಾಮದಲ್ಲಿ ಅಜ್ಜಿಯ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. …

Read More »

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ನಲ್ಲಿ ಕ್ಲೀನ್ ಚಿಟ್: ಕೆಎಸ್ ಈಶ್ವರಪ್ಪ ನಿವಾಸದಲ್ಲಿ ಸಿಹಿಹಂಚಿ ಸಂಭ್ರಮಾಚರಣೆ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು.   ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. …

Read More »

ಕಾಂಗ್ರೆಸ್‌ ನಲ್ಲಿ ಡಿಕೆಶಿ ಒಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ: ಸಿಎಂ

ಮೈಸೂರು: ಕಾಂಗ್ರೆಸ್ ಅಧ್ಯಕ್ಷನಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಡಿಕೆಶಿ ಅವರಿಗೆ ಪಕ್ಷದವರೇ ಬಿಡುತ್ತಿಲ್ಲ. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ. ಡಿಕೆಶಿ ನಾನೊಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ. ಅವರ ತಟ್ಟೆಯಲ್ಲಿ ಏನಿದೆ ಎನ್ನುವುದನ್ನು ಬಿಟ್ಟು ನಮ್ಮ‌ ಬಗ್ಗೆ ಮಾತನಾಡಲು ಬರ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ನಾಡಿನಲ್ಲಿ‌ ಎಲ್ಲಾ ಕಡೆ ಉತ್ತಮ ಮಳೆಯಾಗುತ್ತಿದೆ. ಕಬಿನಿ, …

Read More »

ಡಿ.ಕೆ.ಶಿವಕುಮಾರ್ ಹೇಳುದರಲ್ಲಿ ಯಾವುದೇ ತಪ್ಪಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಸಂಪ್ರದಾಯ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಾದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.   ಖಾಸಗಿ ಟಿವಿ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದವರೇ ಸಿಎಂ ಆಗಲೇಬೇಕು ಎಂದೇನಿಲ್ಲ. ಆಗದೇ ಇದ್ದವರನ್ನೂ ಮುಖ್ಯಮಂತ್ರಿಯಾಗಿ ಮಾಡಿದ ಸಂಪ್ರದಾಯ ಇದೆ. ಪಂಜಾಬಿನಲ್ಲಿ ಈ ರೀತಿ ಮಾಡಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.   ಯಾರು ಬೇಕಾದರೂ ಮುಖ್ಯಮಂತ್ರಿಯಾಗುತ್ತಾನೆ …

Read More »

“ಭೀಮಾತೀರ” ಕಳಂಕ ಅಳಿಸಲು ಕ್ರಮ: ಎಡಿಜಿಪಿ ಅಲೋಕ್ ಕುಮಾರ್

ವಿಜಯಪುರ : ವಿಜಯಪುರ ಜಿಲ್ಲೆಗೆ ಎರಡು ಕುಟುಂಬಗಳ ವೈಯಕ್ತಿಕ ದ್ವೇಷದಿಂದ ಭೀಮಾತೀರ ಎಂಬ ಕಳಂಕ ಅಂಟಿಕೊಂಡಿದೆ. ಈ ಭಾಗದ ಜನರಿಗೆ ಶಾಂತಿಯ ಅಗತ್ಯವಿದೆ. ಹೀಗಾಗಿ ಈ ನೆಲಕ್ಕೆ ಅಂಟಿರುವ ರಕ್ತಪಾತದ ಕಳಂಕ ತೊಡೆದು ಹಾಕಲು ಅಗತ್ಯ ಇರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿಪಿ ಅಲೋಕಕುಮಾರ ಹೇಳಿದರು.   ಬುಧವಾರ ನಗರದಲ್ಲಿ ಪೊಲೀಸ್ ಚಿಂತನ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಮುನ್ನ ಪತ್ರಕರ್ತರೊಂದಿಗೆ …

Read More »