Breaking News

B.S.F.ಯೋಧನ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ

ಚಿಕ್ಕೋಡಿ: ಕರ್ತವ್ಯಕ್ಕೆ ತೆರಳುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದ ಬಿಎಸ್‌ಎಫ್ ಯೋಧನ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ನಡೆಯಿತು. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್‌ಎಫ್ ಯೋಧ ಸೂರಜ್ ಧೋಂಡಿರಾಮ ಸುತಾರ(30) ಆಟೋದಿಂದ ಕೆಳಗಿಳಿಯುತ್ತಿದ್ದಾಗ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯೋಧ ಪಶ್ಚಿಮ ಬಂಗಾಳ ರಾಜ್ಯದ ಪಂಜಿ ಪಾಡಾ ಎಂಬಲ್ಲಿ ಸೋಮವಾರ ನಿಧನರಾಗಿದ್ದರು.   ಅವರ ಪಾರ್ಥಿವ ಶರೀರ ಬುಧವಾರ ಬೆಳಗ್ಗೆ ದೆಹಲಿಯ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದು …

Read More »

ಕಾಂಗ್ರೆಸ್‌ಗೆ ಇನ್ಮುಂದೆ ಎಂದಿಗೂ ಅಧಿಕಾರ ಸಿಗುವುದಿಲ್ಲ: ಹಾಲಪ್ಪ ಆಚಾರ್

ಕೊಪ್ಪಳ: ಕಾಂಗ್ರೆಸ್ ಈ ದೇಶದಲ್ಲಿ ಬಹು ವರ್ಷಗಳ ಕಾಲ ಅಧಿಕಾರ ಅನುಭವಿಸಿದ್ದಾರೆ. ಈಗ ಅಧಿಕಾರ ಕಳೆದುಕೊಂಡು ಸಿಎಂ ರೇಸ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಎಂದಿಗೂ ಅಧಿಕಾರ ಸಿಗುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ಹೇಳಿದರು.   ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈಚೆಗಿನ ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನೆಡೆ ಎಂದೆನ್ನುತ್ತಿದ್ದಾರೆ. ಈ ಹಿಂದೆಯೂ ಉತ್ತರ ಪ್ರದೇಶದಲ್ಲಿ ಹಿನ್ನಡೆಯಾಗಲಿದೆ ಎಂದು ಹೇಳಿದ್ದರು. ಆದರೆ ಫಲಿತಾಂಶ ಏನಾಯ್ತು …

Read More »

ಕೆಮಿಕಲ್ ಟ್ಯಾಂಕರ್‌ ಪಲ್ಟಿಯಾಗಿ ಸಾವಿರಾರು ಮೀನುಗಳ ಮಾರಣಹೋಮ!

ಧಾರವಾಡ(ಜು.20): ರಾಜ್ಯಾದ್ಯಂತ ಒಳ್ಳೆ ಮಳೆಯಾಗಿರೊ ಕಾರಣ ಹಳ್ಳಕೊಳ್ಳ ಕೆರೆಗಳೆಲ್ಲ ತುಂಬಿ ಭರ್ತಿಯಾಗಿವೆ. ಇದರಿಂದ ರೈತರಿಗಷ್ಟೆ ಅಲ್ಲ ಮೀನುಗಾರರಿಗೂ ಸಂತಸ ತಂದಿದೆ. ಆದ್ರೆ ಇಲ್ಲೊಂದು ಗ್ರಾಮದದಲ್ಲಿ ಏಕಾಏಕಿಯಾಗಿ ಆ ಕೆರೆಯಲ್ಲಿನ ಮೀನುಗಳ ಮಾರಣಹೋಮ ಶುರುವಾಗಿದ್ದು, ರಾಶಿ ರಾಶಿ ಮೀನುಗಳು (Fish) ಸತ್ತು ದಂಡೆಗೆ ಬಂದು ಬೀಳುತ್ತಿವೆ. ಗ್ರಾಮಸ್ಥರು ಕೆರೆಯ ಸಮೀಪ ಹೋಗೋದಕ್ಕೂ ಭಯಪಡುತ್ತಿದ್ದಾರೆ. ಹೌದು ಧಾರವಾಡ (Dharawad) ಜಿಲ್ಲೆಯ ನರೇಂದ್ರ ಗ್ರಾಮದಲ್ಲಿರೋ ಸುಮಾರು 82 ಎಕರೆ ವಿಸ್ತೀರ್ಣದ ಹಿರೇಕೆರೆಯ ದುಸ್ಥಿತಿ. ಅಷ್ಟಕ್ಕೂ ಈ …

Read More »

ಅಪ್ಪ ಹಣ ಕೊಟ್ಟಿಲ್ಲ ಎಂದು ಮಗನನ್ನೇ ಕಿಡ್ನಾಪ್

ಬೆಂಗಳೂರು (ಜು.20): ತಂದೆಯ (Father) ಜೊತೆಗಿನ ವ್ಯವಹಾರ ವೈಷಮ್ಯಕ್ಕೆ ಮಗನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು (Accused) ಯಲಹಂಕ ಪೊಲೀಸರು 4 ಗಂಟೆಯಲ್ಲಿ ಬಂಧಿಸಿದ್ದಾರೆ‌. ಚಿತ್ರದುರ್ಗದಲ್ಲಿ (Chitradurga) ಟ್ರ್ಯಾಕ್​ ಮಾಡಿ ಬಂಧಿಸಿ ಕರೆತಂದಿದ್ದಾರೆ. ಕಲಬುರಗಿ ಮೂಲದ ರಮೇಶ್ ರಾಥೋಡ್ (Ramesh Rathod) (43), ರಿಜ್ವಾನ್ ಪಟೇಲ್ (23), ಇಂದ್ರಜಿತ್ ಪವಾರ್ (23) ಹಾಗೂ ಹರೀಶ್ ಕುಮಾರ್ (24) ಬಂಧಿತ ಆರೋಪಿಗಳು. 4 ಗಂಟೆಯಲ್ಲಿ ಆರೋಪಿಗಳ ಬಂಧನ ಪ್ರಕರಣದ …

Read More »

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​; ಕೆ.ಎಸ್​ ಈಶ್ವರಪ್ಪಗೆ ಕ್ಲೀನ್ ಚಿಟ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್  ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

Read More »

ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚಳ ಕ್ರೈಂ ರೇಟ್​: ಕೇವಲ ಎರಡೂವರೆ ವರ್ಷದಲ್ಲೇ 38 ಕೊಲೆಗಳು!

ಹುಬ್ಬಳ್ಳಿ: ರಾಜ್ಯದ ವಾಣಿಜ್ಯ ನಗರಿ ಖ್ಯಾತಿ ಗಳಿಸಿರುವ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅವಳಿ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ ಹಾಗೂ ಸಣ್ಣ-ಪುಟ್ಟ ವಿಷಯಕ್ಕೆ ಗಲಾಟೆ ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ಹೆಚ್ಚುತ್ತಲೇ ಇವೆ. ಇದು ಇಲ್ಲಿನ ಜನರ ನಿದ್ದೆಗೆಡಿಸಿದೆ. ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಪೊಲೀಸರು ಎಷ್ಟೋ ನಿಯಮಗಳನ್ನು ಜಾರಿಗೊಳಿಸಿದರೂ, ನಿಯಂತ್ರಣ ಮಾತ್ರ ಸಾಧ್ಯವಾಗುತ್ತಿಲ್ಲ. ಕೊಲೆ, ದರೋಡೆ, …

Read More »

ದಿಗಳ ದಿನಗೂಲಿ ಹೆಚ್ಚಳ ಮಾಡಿಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಜೈಲಿನಲ್ಲಿರುವ ಕೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆ ಎಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ, ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಕೈದಿಗಳ ದಿನಗೂಲಿಯನ್ನ 525 ರೂ.ಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದಿದೆ. ಈ ವಿಷಯದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಪಷ್ಟೀಕರಣ ನೀಡಿದ್ದು, ರಾಜ್ಯದಲ್ಲಿ ಸುಮಾರು ಹದಿನೈದು ಸಾವಿರ ಕೈದಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. …

Read More »

ಜನರು ತುಂಬಿದ್ದ ನೀರಿನ ಬಿಲ್ ಗುಳುಂ ಮಾಡಿತಾ ದಂಡು ಮಂಡಳಿ..?

ನೀರಿನ ಬಿಲ್‍ನ್ನು ಇಲ್ಲಿನ ಜನರು ತುಂಬಿದರೂ ಕೂಡ ಅಧಿಕಾರಿಗಳು ಮಾಡಿದ ಯಡವಟ್ಟಿನಿಂದಾಗಿ ಇಲ್ಲಿನ ಮನೆಗಳಿಗೆ ಕಳೆದ 20 ದಿನಗಳಿಂದ ನೀರನ್ನು ಬಿಟ್ಟಿಲ್ಲ. ಇದರಿಂದ ರೋಸಿ ಹೋದ ಇಲ್ಲಿನ ಮಹಿಳೆಯರು ಸಂಬಂಧಿಸಿದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಹೀಗೆ ಚಿಕ್ಕ ಮಕ್ಕಳನ್ನು ಹಿಡಿದುಕೊಂಡು ನಿಂತಿರುವ ಈ ನೂರಾರು ಮಹಿಳೆಯರು ಬೆಳಗಾವಿಯ ಕ್ಯಾಂಪ್ ಪ್ರದೇಶದವರು. ಕಳೆದ 20 ದಿನಗಳಿಂದ ಇವರ ಮನೆಗಳಿಗೆ ನೀರನ್ನು ಬಿಟ್ಟಿಲ್ಲ. ಇದರಿಂದ ಆಕ್ರೋಶಗೊಂಡಿರುವ …

Read More »

ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಿಸುತ್ತಿದ್ದ ಗಾಡಿ ಸೀಜ್

ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾಗಿಸುತ್ತಿದ್ದ ಗಾಡಿಯನ್ನು ಸೀಜ್ ಮಾಡಿ ಅಪಾರ ಪ್ರಮಾಣದ ಅಕ್ಕಿಯನ್ನು ನೇಸರಗಿ ಪೊಲೀಸರು ಜಪ್ತಿ ಮಾಡಿದ್ದಾರೆ. ಹೌದು ಬೊಲೆರೋ ಪಿಕ್‍ಅಪ್ ವಾಹನದಲ್ಲಿ ಅಕ್ರಮವಾಗಿ ರೇಶನ್ ಅಕ್ಕಿಯನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ನೇಸರಗಿ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 76,076 ರೂಪಾಯಿ ಮೌಲ್ಯದ 71 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಚಾಲಕನನ್ನು ವಶಕ್ಕೆ …

Read More »

ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.   ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ.       “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …

Read More »