ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ
Read More »ಮರಾಠ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ ಏನೆಲ್ಲಾ ಯೋಜನೆಗಳು ಸಿಗಲಿದೆ?
ಬೆಂಗಳೂರು: ರಾಜ್ಯ ಸರ್ಕಾರದ ಎದುರು ಕರ್ನಾಟಕದ ಮರಾಠ ಸಮುದಾಯ (Maratha community) ಹಲವು ಬೇಡಿಕೆಗಳನ್ನು ಇಟ್ಟಿದೆ. ಮರಾಠ ಸಮುದಾಯದವರ ಮೀಸಲಾತಿ ಬೇಡಿಕೆಗೆ ರಾಜ್ಯ ಹಿಂದುಳಿದ ವರ್ಗದ ವರದಿ ಬಂದ ನಂತರ ಸಂವಿಧಾನದ ಚೌಕಟ್ಟಿನೊಳಗೆ ನ್ಯಾಯ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಅವರು ಇಂದು ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರ ಮವನ್ನು ಉದ್ಘಾಟಿಸಿ ಮಾತನಾಡಿದದ್ದರು. ಮರಾಠ …
Read More »ಅಂಗನವಾಡಿ ಕಾರ್ಯಕರ್ತೆಯರ ಬಹುದಿನದ ಬೇಡಿಕೆಗೆ ಸಿಗಲಿದೆ ಗ್ರೀನ್ ಸಿಗ್ನಲ್!?
ಬೆಂಗಳೂರು (ಜು.19): ಅಂಗನವಾಡಿ ಕಾರ್ಯಕರ್ತೆಯರ (Anganwadi Workers) ಬಹುದಿನದ ಕನಸು ನನಸಾಗುವ ಸಾಧ್ಯತೆ ಇದೆ. ಅಂಗನವಾಡಿ ಕಾರ್ಯಕರ್ತರನ್ನು ಶಿಕ್ಷಕಿಯರೆಂದು (Teacher) ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ಮಾಡಿದೆ. ಒಂದು ವೇಳೆ ಈ ಶಿಫಾರಸ್ಸಿಗೆ ಅನುಮೋದನೆ ಸಿಕ್ಕಿದ್ದೇ ಆದಲ್ಲಿ ಗೌರವ ಧನ, ವೇತನವಾಗಿ (Salary) ಪರಿವರ್ತನೆಯಾಗಲಿದ್ದು ಅದರ ಜೊತೆಗೆ ಸೇವಾ ಭದ್ರತೆ ಕೂಡ ದೊರೆಯಲಿದೆ. ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ (Combined Schools) ಸ್ವರೂಪವನ್ನು ಬದಲಾವಣೆ …
Read More »ಕಿತ್ತೋದ ಬಸ್ ನಿಲ್ದಾಣದ ಅದ್ಧೂರಿ ಉದ್ಘಾಟನೆ; ಚೀಫ್ ಗೆಸ್ಟ್ ಆಗಿ ಬಂದಿದ್ದು ಎಂಎಲ್ಎ ಅಲ್ಲ, ಎಮ್ಮೆ!
ಗದಗ: ಕಾಮಗಾರಿ (Work) ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿತ್ತು. ಈ ಬಸ್ ನಿಲ್ದಾಣ (Bus Stand) ಕಟ್ಟಡದ ಉದ್ಘಾಟನೆ (Inauguration) ಯಾವಾಗ ಎಂದು ಎದುರು ನೋಡುತ್ತಿದ್ದ ಜನ ಅದಕ್ಕೊಂದು ಶುಭ ಮುಹೂರ್ತವನ್ನು ನಿಗದಿ ಮಾಡಿಯೇಬಿಟ್ಟರು. ಅವರೆಲ್ಲ ಎದುರು ನೋಡುತ್ತಿದ್ದ ಶುಭ ಸಮಯ ಬಂದೇಬಿಟ್ಟಿತು. ಗ್ರಾಮಸ್ಥರೆಲ್ಲರೂ (Villagers) ಸೇರಿ ಉದ್ಘಾಟಕರನ್ನು ಬಿಗಿ ಭದ್ರತೆಯೊಂದಿಗೆ, ದೊಡ್ಡ ಸ್ವರದ ಮೈಕ್ ಸ್ವಾಗತದೊಂದಿಗೆ, ಹೂಮಾಲೆಗಳಿಂದ, ಬ್ಯಾನರ್ ಗಳಿಂದ ಸಿಂಗಾರಗೊಂಡಿದ್ದ ಬಸ್ ನಿಲ್ದಾಣದ ಬಳಿ ಕರೆತಂದು ರಿಬ್ಬನ್ (Ribbon) …
Read More »ಕ್ಯಾಮೆರಾಗಳ ಮುಂದೆ ಫೋಸ್ ಕೊಟ್ಟ ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸುತ್ತೆವೆಂದು ಗ್ರಾಮಸ್ಥರು ಅಕ್ರೋಶ
ಯಾದಗಿರಿ: ಮಹಾರಾಷ್ಟ್ರದಲ್ಲಿ ವರುಣ (Maharashtra Rains) ರೌದ್ರ ನರ್ತನವಾದ್ರೆ, ಕಲ್ಯಾಣ ಕರ್ನಾಟಕದ (Kalyana Karnataka) ಅದೆಷ್ಟೋ ಭಾಗದ ಗ್ರಾಮಗಳು ಮುಳುಗಡೆಯಾಗುತ್ತವೆ. ಕೃಷ್ಣೆಯ (Krishna River) ಆರ್ಭಟಕ್ಕೆ ನದಿ ಪಾತ್ರದ ಗ್ರಾಮಸ್ಥರ ಸಂಕಷ್ಟ ಮಾತ್ರ ಕೇಳ ತೀರದು. ಪ್ರವಾಹ (Flood) ಬಂದಾಗ ಮಾತ್ರ ನೆನಪಾಗೋ ಗ್ರಾಮ ಮತ್ತೆ ಅವರಿಗೆ ನೆನಪಾಗೋದು ಚುನಾವಣೆ (Election) ಬಂದಾಗ ಮಾತ್ರ. ಮಹಾರಷ್ಟ್ರ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾದರೆ ಇತ್ತ ಕಲ್ಯಾಣ ಕರ್ನಾಟಕದ ಹಲವು ಭಾಗಗಳು ಜಲಾವೃತಗೊಳ್ಳುತ್ತವೆ. …
Read More »ಸಿದ್ದರಾಮೋತ್ಸವ ಕಾರ್ಯಕ್ರಮ: ಕೊಪ್ಪಳ ಜಿಲ್ಲಾಧ್ಯಕ್ಷರ ಫೋಟೊಗೆ ಕೊಕ್
ಕೊಪ್ಪಳ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮದ ಕುರಿತ ಪ್ರಚಾರದ ಪೋಸ್ಟರ್‌ನಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಅವರ ಫೋಟೊ ಕೈ ಬಿಡಲಾಗಿದೆ. ಇದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ. ಪೋಸ್ಟರ್ ಅನ್ನು ನಗರದ ಕೆಲ ಬಡಾವಣೆಗಳ ಮನೆಮನೆಗೆ ಅಂಟಿಸಲಾಗಿದೆ. ಪೋಸ್ಟರ್‌ನಲ್ಲಿ ಸಿದ್ದರಾಮಯ್ಯ, ಶಾಸಕ ರಾಘವೇಂದ್ರ್ ಹಿಟ್ನಾಳ್, ಅವರ ಸಹೋದರ ರಾಜಶೇಖರ ಹಿಟ್ನಾಳ್, ಮಾಜಿ ಸಚಿವ …
Read More »ಆ.10ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ
ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.10ರಿಂದ 16ರವರೆಗೆ ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಾತ್ರೋತ್ಸವವು ಜರುಗಲಿದೆ. ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ಜರುಗಲಿವೆ. ಈ ವರ್ಷ ಮಂತ್ರಾಲಯದ ವಿದ್ವಾನ್ ಅರ್ಚಕ ಕೃಷ್ಣಾಚಾರ್, ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಆರ್.ಪ್ರಭಾಕರರಾವ್, ತಿರುವನಂತಪುರದ ವಿದ್ವಾನ್ ಆರ್.ಕೃಷ್ಣಮೂರ್ತಿ ಶಾಸ್ತ್ರಿ, ಬೆಂಗಳೂರಿನ ವಿದ್ವಾನ್ ಮಾಳಗಿ ರಾಮಾಚಾರ, ಮೈಸೂರಿನ ವಿದ್ವಾನ್ ಸಿ.ಎಚ್. ಶ್ರೀನಿವಾಸಮೂರ್ತಿ, ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಇಲಾಖೆ ನಿವೃತ್ತ ಜಂಟಿ …
Read More »ಬಾಗಲಕೋಟೆ: ಪತ್ನಿಯಿಂದ ಸಿನೆಮಾ ಮಾದರಿಯಲ್ಲಿ ಪತಿಯ ಕೊಲೆ
ಬಾಗಲಕೋಟೆ : ಹೆಂಡತಿ ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿದ ಪ್ರಕರಣ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಪ್ರವೀಣ ಸೇಬಣ್ಣವರ(30) ಮೃತ ಪಟ್ಟ ವ್ಯಕ್ತಿ. ಪತ್ನಿ ನಿತ್ಯಾ ಮತ್ತು ಪ್ರಿಯಕರ ರಾಘವೇಂದ್ರ ಸೇರಿ ಕಾರಿನಲ್ಲಿ ಗುದ್ದಿ ಪ್ರವೀಣನನ್ನು ಕೊಲೆ ಮಾಡಿರುವುದು ಸಾಭೀತಾಗಿದೆ. ನಿತ್ಯಾಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮದ ಸಂಬಂಧ ಹಿನ್ನೆಲೆ ಲವರ್ ಜೊತೆ ಸೇರಿ ಗಂಡನಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಿದ್ದಾರೆ. ಕಾರಿನಲ್ಲಿ ಬಂದ ಪತ್ನಿ ಹಾಗೂ ಲವರ್ ಪತಿಗೆ …
Read More »ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತಾನು ಒಮ್ಮೆಯೂ ಗೆಲ್ಲದ 77 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಬಗ್ಗೆ ಗಮನ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತಾನು ಒಮ್ಮೆಯೂ ಗೆಲ್ಲದ 77 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಬಗ್ಗೆ ಗಮನಹರಿಸಿದೆ. ಆ ಮೂಲಕ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಬಗ್ಗೆ ಚಿಂತನೆ ನಡೆಸಲು ಪಕ್ಷ ತೀರ್ಮಾನಿಸಿದೆ. ಇತ್ತೀಚೆಗೆ ನಡೆದ ರಾಜ್ಯ ನಾಯಕರ ಚಿಂತನ ಮಂಥನ ಸಭೆಯಲ್ಲಿ ಈ ಅಂಶ ಗಂಭೀರವಾಗಿ ಚರ್ಚೆಯಾಗಿದೆ. 1950 ರಲ್ಲಿ ಜನಸಂಘ ಸ್ಥಾಪನೆಯಾದಾಗಿನಿಂದ ಮತ್ತು 1980ರಲ್ಲಿ ಬಿಜೆಪಿ ಸ್ಥಾಪನೆ ಆದಾಗಿನಿಂದ ರಾಜ್ಯದ 224 ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರಗಳಲ್ಲಿ …
Read More »ಮರಾಠರಿಗೆ 2ಎ ಮೀಸಲಾತಿ: ಸಿಎಂ ಭರವಸೆ, ಮರಾಠ ಅಭಿವೃದ್ಧಿ ನಿಗಮ ಉದ್ಘಾಟನೆ
ಬೆಂಗಳೂರು: ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ 2ಎ ಮೀಸಲಾತಿ ಕೊಡುವ ವಿಚಾರವಾಗಿ ಆಯೋಗದಿಂದ ವರದಿ ತರಿಸಿಕೊಂಡು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಟೊಂಕ ಕಟ್ಟಿ ನಿಂತಿರುವ ಸಮುದಾಯಕ್ಕೆ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ಮರಾಠ ಸಮುದಾಯಕ್ಕೆ ಹಿಂದುಳಿದ …
Read More »