ಬೆಂಗಳೂರು: ಪ್ರಾಣಿಗಳ ರಕ್ಷಣೆಗಾಗಿ ಜುಲೈ 19ರಂದು ಬೆಳಗಾವಿ ಜಿಲ್ಲೆಗೆ 82 ‘ಪಶು ಸಂಜೀವಿನಿ’ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಯು ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ 15 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಪ್ರಾರಂಭಿಸಿತು. ಇತರ ಪ್ರಾಣಿಗಳು ಸೇರಿದಂತೆ ಹಸುಗಳು, ಎತ್ತು, ಎಮ್ಮೆಗಳಂತಹ ಪ್ರಾಣಿಗಳಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ಈ …
Read More »ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು,
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಎಲ್ಲ 27 ವಾರ್ಡ್ಗಳಲ್ಲಿಯೂ ರಸ್ತೆಗಳು ಸಂಪೂರ್ಣ ಹಾಳಾಗಿವೆ. ತಕ್ಷಣ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ರಸ್ತೆ ತಡೆ ನಡೆಸಿದರು. ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು, ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳೀಯ ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧವೂ ಕಿಡಿ ಕಾರಿದರು. ಜೆಡಿಎಸ್ ಜಿಲ್ಲಾ …
Read More »ಮಳೆರಾಯನ ಅಬ್ಬರ.. ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳು ಜಲಾವೃತ.
ಬೆಳಗಾವಿ : ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಸತತ ಮಳೆಗೆ ಬೆಳಗಾವಿ ಜನರ ಸ್ಥಿತಿ ಅಯೋ ಮಯವಾಗಿದೆ. ಚರಂಡಿ ವ್ಯವಸ್ಥೆ ಇಲ್ಲದೇ ಹಲವು ರಸ್ತೆಗಳು ಜಲಾವೃತವಾಗಿದೆ. ಉಜ್ವಲ ನಗರ, ಓಂಕಾರ ನಗರ, ಮಹಾಂತೇಶ ನಗರ ಬ್ರಿಡ್ಜ್ , ಬೆಳಗಾವಿ ನಗರ ಸೇರಿ ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಜಲಾವೃತಗೊಂಡ ರಸ್ತೆಯಲ್ಲಿ ಭಯದಲ್ಲೇ ಬೈಕ್ ಸವಾರರ ಸಂಚಾರ ಮಾಡುತ್ತಿದ್ದಾರೆ. ಚರಂಡಿ ವ್ಯವಸ್ಥೆ ಕಲ್ಪಿಸದ ಬೆಳಗಾವಿ ಪಾಲಿಕೆ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
Read More »ಬೆಳಗಾವಿನಗರದ ಜೀವನಾಡಿ ರಕ್ಕಸಕೊಪ್ಪ ಡ್ಯಾಂ ಭರ್ತಿ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ (Maharashtra Western hills) ಧಾರಾಕಾರ ಮಳೆ (Rainfall) ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿಗಳು (Belagavi Rivers) ಮೈದುಂಬಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ ಮಲಪ್ರಭಾ (Malaprabha), ಘಟಪ್ರಭಾ (Ghataprabha), ಮಾರ್ಕಂಡೇಯ (Markandeya) ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದೇ ರೀತಿ ಇನ್ನೂ ಹದಿನೈದು ದಿನಗಳ ಕಾಲ ಮಳೆ ಮುಂದುವರಿದರೆ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ. ಸದ್ಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು …
Read More »ಸಿ.ಎಂ. ಆಯ್ಕೆ ಚುನಾವಣೆ ಮುಗಿದ ಮೇಲೆ ನೋಡೋಣ ನಾನು ಆ ರೇಸ್ನಲ್ಲಿ ಇಲ್ಲ
ಮುಖ್ಯಮಂತ್ರಿ ಆಯ್ಕೆ ಚುನಾವಣೆ ಮುಗಿದ ಮೇಲೆ ನೋಡೋಣ, ಸದ್ಯಕ್ಕೆ ನಾನು ಸಿಎಂ ರೇಸ್ನಲ್ಲಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಹಾರೂಗೇರಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸೈಕಲ್ ಜಾಥಾ ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಸಿದ್ದರಾಮಯ್ಯ ಸಿಎಂ ಆಗುವ ಇಂಗಿತ ವಿಚಾರಕ್ಕೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಚುನಾವಣೆ ಆದ ಮೇಲೆ ಮುಖ್ಯಮಂತ್ರಿಗಳ ಆಯ್ಕೆ ಆಗುತ್ತದೆ. ಸಧ್ಯಕ್ಕೆ ನಾನು ಸಿಎಂ ರೇಸ್ನಲ್ಲಿ ಇಲ್ಲ …
Read More »2023ರ ಚುನಾವಣೆ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ,ಯಾವ ಸ್ಥಾನಮಾನ, ಹುದ್ದೆಯೂ ನನಗೆ ಬೇಡ.: ಸಿದ್ದರಾಮಯ್ಯ
ಮೈಸೂರು: 2023ರ ಚುನಾವಣೆ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಯಾವ ಸ್ಥಾನಮಾನ, ಯಾವುದೇ ಹುದ್ದೆಯೂ ನನಗೆ ಬೇಡ. ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ. ನನ್ನನ್ನು ಖುಷಿಪಡಿಸಲೆಂದು ಈ ವಿಚಾರ ಮತ್ತೆ ಪ್ರಸ್ತಾಪ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಜರಗಿದ ಚಾಮುಂಡೇಶ್ವರಿ ಮತ್ತು ಇಳವಾಲ, ಜಯಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಚೂಣಿ ಘಟಕಗಳ ಪದಗ್ರಹಣ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು. ಕಾರ್ಯಕ್ರಮದ ಆರಂಭದಲ್ಲಿ …
Read More »ನ.11ರಿಂದ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಹೇಶ ಜೋಶಿ
ಕಲಬುರಗಿ:ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಈ ಬಾರಿ ನ.11ರಿಂದ 13ರವರೆಗೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಶೀಘ್ರವೇ ಸರ್ಕಾರದಿಂದ ಅಧಿಕೃತ ಘೋಷಣೆ ಆಗಲಿದೆ ಎಂದು ಕಸಾಪ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಸೆ.21, 22 ಮತ್ತು 23ರಂದು ನಡೆಸಲು ತೀರ್ಮಾನಿಸಲಾಗಿತ್ತು ಎಂದರು. ಹಾವೇರಿಯಲ್ಲಿ ಪ್ರಮುಖವಾಗಿ ಸಿರಿಗೆರೆ ಜಾತ್ರೆ ನಡೆಯುತ್ತದೆ. ದೊಡ್ಡ ಜಾತ್ರೆಯಾದ್ದರಿಂದ ಖುದ್ದು ಸಿರಿಗೆರೆ ಶ್ರೀಗಳೇ ಮಾತನಾಡಿ ದಿನಾಂಕ …
Read More »ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ.
ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ತಳ್ಳಿಕೊಂಡು ಹೋಗುತ್ತಿರುವ ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ ದೃಶ್ಯವನ್ನು ಅಲ್ಲಿನ ಜನರು ವಿಡಿಯೋ ಮಾಡಿದ್ದು, ವ್ಯಕ್ತಿಯ ಮೇಲೆ ಆಕ್ರೋಶಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಎಸೆದ ವಸ್ತುಗಳ ಕಸದ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಪಿಜೆ ಅಬ್ದುಲ್ …
Read More »ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ
ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ಮತದಾನ ನಡೆಯಲಿದ್ದು, ಅದರಂತೆ ರಾಜ್ಯದಲ್ಲೂ ಮತದಾನಕ್ಕೆ ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿ ಸಜ್ಜುಗೊಂಡಿದೆ. ರಾಷ್ಟ್ರಪತಿ ಚುನಾವಣೆಗೆ ಮತದಾರರಾಗಿರುವ 224 ಶಾಸಕರ ಜತೆಗೆ ವಿಶೇಷ ಅನುಮತಿ ಪಡೆದಿರುವ ಇಬ್ಬರು ಸಂಸದರು ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮತದಾನ ಮಾಡಲಿದ್ದಾರೆ. ಕೇಂದ್ರ ಚುನಾವಣ ಆಯೋಗದ ವಿಶೇಷ ವೀಕ್ಷಕ ಅಮಿತ್ ಕುಮಾರ್ ಘೋಷ್ ಮಾರ್ಗದರ್ಶನದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ …
Read More »ಇಂದಿನಿಂದ ಹೊಸ ‘GST ದರ’ ಜಾರಿ; ಯಾವುದು ಅಗ್ಗ? ಯಾವುದು ದುಬಾರಿ?.
ನಿಮಗೆ ಪ್ರತಿದಿನ ಮೊಸರು ಖರೀದಿಸುವ ಅಭ್ಯಾಸವಿದೆಯೇ? ಹಾಗಾದ್ರೆ, ಇನ್ಮುಂದೆ ನಿಮ್ಮ ಜೇಬಿನ ಭಾರ ಹೆಚ್ಚಿಸಿಕೊಳ್ಳಲೇಕಾಗುತ್ತೆ. ಯಾಕಂದ್ರೆ, ಇಂದಿನಿಂದ ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮೊಸರಿನ ಬೆಲೆ ಹೆಚ್ಚಾಗಲಿದೆ. ಕೇವಲ ಇದೊಂದೇ ಅಲ್ಲ, ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮಜ್ಜಿಗೆ, ಪನ್ನೀರ್ ಮತ್ತು ಲಸ್ಸಿಯಂತಹ ಹಾಲಿನ ಉತ್ಪನ್ನಗಳು ಜಿಎಸ್ಟಿಯಿಂದಾಗಿ ಬೆಲೆಗಳಲ್ಲಿ ಹೆಚ್ಚಳವನ್ನ ಕಾಣುವ ಸಾಧ್ಯತೆಯಿದೆ. ಇನ್ನು ಹವಾಮಾನವು ತಂಪಾಗಿದೆ ಅಂತಾ ನೀವು ಯಾವುದೇ ಟೂರ್ ಹೊಡೆಯಲು ಯೋಜಿಸಿದ್ದೀರಾ? ಆದಾಗ್ಯೂ, …
Read More »