*ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ: ಭೂಸ್ವಾಧೀನಕ್ಕೆ ಗಡುವು ಕೊಟ್ಟ ಸಚಿವ ಎಂ ಬಿ ಪಾಟೀಲ* ಬೆಂಗಳೂರು: ರಾಜ್ಯ ರಾಜಧಾನಿ ಮತ್ತು ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿರುವ 14-15 ಗಂಟೆಗಳಿಂದ ಕನಿಷ್ಠ 10 ಗಂಟೆಗಳಿಗೆ ಇಳಿಸುವ ಸಂಬಂಧ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಈ ನಿಟ್ಟಿನಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ಬುಧವಾರ ಅವರು ಇಲ್ಲಿ …
Read More »ಮಳೆಗಾಲದಲ್ಲಿ ವಿದ್ಯುತ್ ಅನಾಹುತ ತಪ್ಪಿಸಲು ಸೆಸ್ಕ್ ಸನ್ನದ್ಧ: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಯಾವಾಗಲೂ ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಉಂಟಾಗುವ ವಿದ್ಯುತ್ ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ, ಎಚ್ಚರ ವಹಿಸಲು ಕ್ರಮ ವಹಿಸಿದೆ ಎಂದು ಸೆಸ್ಕ್ ಪ್ರಕಟಣೆ ಮೂಲಕ ತಿಳಿಸಿದೆ. ಸೆಸ್ಕ್ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಈಗಾಗಲೇ ಆರಂಭವಾಗಿದೆ. ಇಂತಹ ಸಂದರ್ಭಗಳಲ್ಲಿ ಅತಿಯಾದ ಗಾಳಿ ಮತ್ತು ಮಳೆಯಿಂದ ವಿದ್ಯುತ್ …
Read More »ಪ್ರಜ್ವಲ್ ರೇವಣ್ಣ ವಿರುದ್ಧ ದೋಷಾರೋಪ ನಿಗದಿ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ
ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೋಷಾರೋಪ ನಿಗದಿಪಡಿಸಿ, ವಿಚಾರಣೆಗೆ ಮುಂದಾಗಿರುವ ಸೆಷನ್ಸ್ ನ್ಯಾಯಾಲಯದ ಪ್ರಕ್ರಿಯೆ ಮುಂದೂಡಲು ನಿರ್ದೇಶಿಸುವಂತೆ ಕೋರಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಪ್ರಕರಣದಲ್ಲಿ ಯಾವುದೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿಲ್ಲ. …
Read More »ಶಬರಿಮಲೆಗೆ ತೆರಳಿದ್ದ ಹಾವೇರಿಯ ಗುರುಸ್ವಾಮಿ ರಸ್ತೆ ಅಪಘಾತದಲ್ಲಿ ಸಾವು
ಎರಿಮಲೈ/ಹಾವೇರಿ: ಕೇರಳ ರಾಜ್ಯದ ಎರಿಮಲೈ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಹಾನಗಲ್ ಪಟ್ಟಣದ 51 ವರ್ಷದ ಮಾರುತಿ ಎಂ ಹರಿಹರ ಎಂದು ಗುರುತಿಸಲಾಗಿದೆ. ಕೇರಳ ರಾಜ್ಯದಲ್ಲಿರುವ ಶಬರಿಮಲೆಗೆ ಹಾವೇರಿ ಜಿಲ್ಲೆಯಿಂದ 25 ಪ್ರಯಾಣಿಕರು ತೆರಳಿದ್ದರು. ಯಾತ್ರೆಗೆ ತೆಗೆದುಕೊಂಡಿದ್ದ ಮಿನಿ ಬಸ್ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಮಾರುತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. 20 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ …
Read More »ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್
*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್* ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ಲಾರಿ ಚಾಲಕ ಅರೆಸ್ಟ್ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ಗ್ರಾಮದ ಮಧುಕರ ಸೋಮವಂಶಿ ಅರೆಸ್ಟ್ ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ ಕಿತ್ತೂರು ಠಾಣೆ ಪೊಲೀಸರು ಜ. 14 ರಂದು ಬೆಳಗಿನ ಜಾವ ಸಚಿವೆ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಪರಾರಿಯಾಗಿದ್ದ ಚಾಲಕ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ …
Read More »ಮೇ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ,
ಬೆಂಗಳೂರು, ಏಪ್ರಿಲ್ 16: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ. ಈಗಾಗಲೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಿದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ- 1 ನಡೆದಿದ್ದು 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 …
Read More »ಮೋದಿ ನಿಮ್ಮ ಸರ್ಕಾರ ಬೀಳಿಸುತ್ತಾರೆ, ಹುಷಾರಾಗಿರಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಖರ್ಗೆ ಎಚ್ಚರಿಕೆ
ಕಲಬುರಗಿ, ಏಪ್ರಿಲ್ 16: ಕರ್ನಾಟಕದ (Karnataka) ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ (CM) ಬದಲಾವಣೆಯ ಚರ್ಚೆ ಜೋರಾಗಿದೆ. ಇದರ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ಗಂಭೀರ ಆರೋಪವೊಂದು ಮಾಡಿದ್ದಾರೆ. “ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಹೇಳಿದ್ದಾರೆ. ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ ಮೇಳ ಉದ್ಘಾಟನಾ …
Read More »ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ.
ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ. ಈ ಸಭೆಯ ಮುಖ್ಯಾಂಶಗಳು: * ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ. * ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. …
Read More »ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ
ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. …
Read More »ಏಪ್ರೀಲ್ 29 ರಂದು ಬೆಳಗಾವಿಯಲ್ಲಿ ಶಿವಜಯಂತಿ…ಮೇ. 1 ರಂದು ರೂಪಕಗಳ ಮೆರವಣಿಗೆ ಮಧ್ಯವರ್ತಿ ಶಿವಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ಮಾಹಿತಿ
ಏಪ್ರೀಲ್ 29 ರಂದು ಬೆಳಗಾವಿಯಲ್ಲಿ ಶಿವಜಯಂತಿ…ಮೇ. 1 ರಂದು ರೂಪಕಗಳ ಮೆರವಣಿಗೆ ಮಧ್ಯವರ್ತಿ ಶಿವಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ಮಾಹಿತಿ ಹಿಂದವಿ ಸ್ವರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ಯ ಮೇ 1 ರಂದು ಬೆಳಗಾವಿ ನಗರದಲ್ಲಿ ಐತಿಹಾಸಿಕ ಶಿವ ಜಯಂತಿ ರೂಪಕಗಳ ಮೆರವಣಿಗೆಯನ್ನು ನಡೆಸುವ ನಿರ್ಧಾರವನ್ನು ಮಧ್ಯವರ್ತಿ ಶಿವ ಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಬೆಳಗಾವಿಯ ಶ್ರೀ ಜತ್ತಿಮಠ ದೇವಸ್ಥಾನದಲ್ಲಿ ಶಿವಜಯಂತಿಯ ಪೂರ್ವಸಿದ್ಧತಾ ಸಭೆಯನ್ನು ಕರೆಯಲಾಗಿತ್ತು. …
Read More »