ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು. ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
Read More »ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು
ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು. ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.
Read More »ಖಾನಾಪುರ ತಾಲೂಕಿನಲ್ಲಿ ರಸ್ತೆ ಮೇಲೆ ಬಿದ್ದ ಮರ: ತೆರವುಗೊಳಿಸದ ಅಧಿಕಾರಿಗಳ ನಿರ್ಲಕ್ಷ
ಖಾನಾಪುರ ತಾಲೂಕಿನ ಕಡತನ ಬಾಗೇವಾಡಿಯಿಂದ ಬೇಕವಾqಗೆÀ ಹೋಗುವ ರಸ್ತೆ ಮೇಲೆ ಪಕ್ಕದ ಗಿಡ ಮರಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯ ಧೋರಣೆ ಹಾಗೂ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.ಹೌದು ಜೂನ್ ತಿಂಗಳಿನಿಂದ ಅಗಸ್ಟ್ ತಿಂಗಳವರೆಗೆ ಅತಿ ಹೆಚ್ಚು ಮಳೆಗಾಲದ ದಿನಗಳು, ಈ ದಿನಗಳಲ್ಲಿ ರಸ್ತೆ ಪಕ್ಕದಲ್ಲಿರುವ ಮರಗಳು ರಸ್ತೆಯ ಮೇಲೆ ಬಿದ್ದು ಸಾರ್ವಜನಿಕರಿಗೆ ತೊಂದರೆಗಳಾಗುವುದು ಜಾಸ್ತಿ. ಆದರೆ ಈ ರೀತಿ ಆಗಬಹುದಾದ …
Read More »ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ: ಸಿಎಂ ಬಸವರಾಜ್ ಬೊಮ್ಮಾಯಿ.
ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ: ಸಿಎಂ ಬಸವರಾಜ್ ಬೊಮ್ಮಾಯಿ. ರಾಜ್ಯದಲ್ಲಿ ಮಳೆ ಪ್ರವಾಹ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ. ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ. ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ನೀರಿನ ಪ್ರಮಾಣಕ್ಕೆ ತಕ್ಕಂತೆ …
Read More »ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ
ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.
Read More »ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ
ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು …
Read More »ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …
Read More »ಆಲೂರು ವೆಂಕಟರಾವ ಕುರಿತ ಪುಸ್ತಕ ಬಿಡುಗಡೆಗೊಳಿಸಿದ ಅಶೋಕ ಚಂದರಗಿ
ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ಕಕವನ್ನು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಚಂದರಗಿ ಉದ್ಘಾಟಿಸಿದರು. ಶುಕ್ರವಾರ ಸಂಜೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಪ್ರಕಟಿಸಿರುವ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ತಕವನ್ನು ಅಶೋಕ ಚಂದರಗಿ ಲೋಕಾರ್ಪಣೆಗೊಳಿಸಿದರು. ಸಮಾರಂಭದಲ್ಲಿ ಸಾಹಿತಿ ಯ.ರು.ಪಾಟೀಲ, ಮಾಜಿ ಮೇಯರ್ ಹುಚ್ಚಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
Read More »ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್. ಸಚಿವ ಸುನಿಲ್ ಕುಮಾರ್ ಗೆ ಒಲಿದ ಅದೃಷ್ಟ.
ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನಿಲ್ ಕುಮಾರ್ ಅವರಿಗೆ ಅದೃಷ್ಟ ಒಲಿದು ಬಂದಿದೆ. ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಖಾಸಗಿ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಸುನಿಲ್ ಕುಮಾರ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೆಕು ಎಂದು ತೀರ್ಮಾನಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್, …
Read More »ರಾತ್ರೋರಾತ್ರಿ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ. ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ.
Read More »