Breaking News

ಬಕ್ರೀದ್:‌ 30 ಲಕ್ಷಕ್ಕೆ ಮಾರಾಟವಾದ ಅಪರೂಪ ತಳಿಯ ಮೇಕೆ!

ಬಕ್ರೀದ್‌ ಹಬ್ಬದ ಪ್ರಯುಕ್ತ ಕುರಿ-ಮೇಕೆಗಳ ಮಾರಾಟ ದೇಶಾದ್ಯಂತ ಭರ್ಜರಿಯಾಗಿ ನಡೆದಿದ್ದು, ಉತ್ತರ ಪ್ರದೇಶದ ಮೀನಾ ಬಜಾರ್‌ ನಲ್ಲಿ ಅಪರೂಪದ ತಳಿಯ ಮೇಕೆಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿ ಸುದ್ದಿ ಮಾಡಿವೆ. ದೆಹಲಿಯ ಪ್ರಸಿದ್ದ ಮಾರುಕಟ್ಟೆ ಸ್ಥಳವಾದ ಮೀನಾ ಬಜಾರ್‌ ನಲ್ಲಿ ಅಪರೂಪದ ತಳಿಯ ಒಂದು ಮೇಕೆ 30 ಲಕ್ಷಕ್ಕೆ ಮಾರಾಟವಾಗಿ ದಾಖಲೆ ಬರೆದಿದೆ. ಎರಡು ಮೇಕೆಗಳು ತಮ್ಮ ಹೆಸರಿನಿಂದಲೇ ತಲಾ 15 ಲಕ್ಷ ರೂ.ಗೆ ಮಾರಾಟವಾಗಿ ಗಮನ ಸೆಳೆದಿವೆ. ೩೫ ವರ್ಷ …

Read More »

ಶ್ರೀಲಂಕಾ ಅಧ್ಯಕ್ಷರ ಬಂಗಲೆಗೆ ಮುತ್ತಿಗೆ ಹಿಂಸಾಚಾರಕ್ಕೆ ತಿರುಗಿದ ರಾವಣ ರಾಷ್ಟ್ರ

ಶ್ರೀಲಂಕಾ ಕಳೆದ 4 ತಿಂಗಳುಗಳಿಂದ ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ, ಆಹಾರಕ್ಕಾಗಿ ಜನ ತತ್ತರಗೊಂಡಿದ್ದಾರೆ. ಜನ ಸಾಮಾನ್ಯ ವಸತಿಗಾಗಿ ಸಾವಿರಾರು ರೂಗಳನ್ನ ತೆತ್ತಲು ಅವರ ಬಳಿ ಹಣ ಇಲ್ಲದೆ ನೆರೆ ದೇಶಗಳಿಗೆ ನಡೆದು ಆ ದೇಶಗಳ ಪೋಲಿಸರ ಅತಿಥಿಗಳಾಗಿದ್ದಾರೆ , ನೆರೆ ದೇಶಗಳು ಸಾವಿರಾರು ಕೋಟಿ ಹಣ ಸಹಾಯ ಮಾಡಿದರು ಶ್ರೀಲಂಕಾ ಇನ್ನೂ ಸರಿದಾರಿ ತರುವಲ್ಲಿ ಏಡವಿದ್ದಾರು ಎಲ್ಲಿ ಎಂದು ಈಗ ಜನ ಪ್ರಶ್ನೆ ಮಾಡಿಕೊಳ್ಳುತ್ತಿದ್ದಾರೆ , ಮುಖ್ಯವಾಗಿ ರಾಜಕಾರಣಿಗಳ ಏಡಬಿಡಂಗಿತನ …

Read More »

U.P.S.C.ಯಲ್ಲಿ 319ನೇ ರ‍್ಯಾಂಕ್ ಪಡೆದ ಗಜಾನನ ಬಾಲೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸತ್ಕಾರ

ಯುಪಿಎಸ್‍ಸಿ ಪರೀಕ್ಷೆಯಲ್ಲಿ 319ನೇ ರ್ಯಾಂಕ್ ಪಡೆದ ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪುತ್ರ ಗಜಾನನ ಶಂಕರ್ ಬಾಲೆ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸತ್ಕರಿಸಿ ಗೌರವಿಸಿದರು. ಕೇಂದ್ರ ಲೋಕಸೇವಾ ಆಯೋಗವು 2021ನೇ ಸಾಲಿನಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 319ನೇ ಯಾರ್ಂಕ್ ಪಡೆದಿರುವ ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಶಂಕರ್ ಬಾಲೆ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶುಕ್ರವಾರ (ಜು.8) ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು. …

Read More »

ಬಕ್ರೀದ್ ನಿಮಿತ್ಯ ಬೆಳಗಾವಿ ನಗರದ ಏರಿಯಾಗಳಲ್ಲಿ ಪೊಲೀಸರಿಂದ ಪಥಸಂಚಲನ

ನಾಳೆ ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಏರಿಯಾದಲ್ಲಿ ಬೆಳಗಾವಿ ನಗರ ಪೊಲೀಸರು ಪಥಸಂಚಲನವನ್ನು ನಡೆಸಿ ಜಾಗೃತಿಯನ್ನು ಮೂಡಿಸಿದರು. ಹೌದು ನಾಳೆ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ರಾಜ್ಯ ಸರಕಾರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ. ಹಾಗಾಗಿ ಬೆಳಗಾವಿ ನಗರದಲ್ಲಿಯೂ ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಬೆಳಗಾವಿ ನಗರ …

Read More »

ಭಾರಿ ಮಳೆ ಹಿನ್ನೆಲೆ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಶಿಥಿಲಗೊಂಡಿದ್ದ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ತಾಪೂರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ (60) ಮೃತ ವೃದ್ಧೆ. ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ …

Read More »

ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ

ರಾಯಚೂರು: ಜಿಲ್ಲಾ ಪೊಲೀಸರು ವಿಮೆ ಮಾಡಿಸದೆ ಓಡಿಸುತ್ತಿರುವ ಬೈಕ್ ಹಾಗೂ ಇತರ ವಾಹನಗಳನ್ನು ಹಿಡಿದು ವಿಮೆ ಮಾಡಿಸುತ್ತಿದ್ದಾರೆ. ವಿಮೆ ಇಲ್ಲದ್ದಕ್ಕೆ ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪೊಲೀಸರು ವಾಹನಗಳ ವಿಮೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ 400ಕ್ಕೂ ಹೆಚ್ಚು ಬೈಕ್‍ಗಳನ್ನು ಜಪ್ತಿ ಮಾಡಿರುವ ಪೊಲೀಸರು ಎಲ್ಲಾ ಬೈಕ್‌ಗಳಿಗೂ ವಿಮೆ ಮಾಡಿಸಿದ್ದಾರೆ. ನಗರದ ಎಸ್‍ಪಿ ಕಚೇರಿ …

Read More »

ಮಂಗಳೂರಿನಲ್ಲಿ ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ …

Read More »

ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿ

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು ಇತ್ತ ಗಡಿಜಿಲ್ಲೆ ಬೆಳಗಾವಿಯಲ್ಲೂ ವರ್ಷಧಾರೆ ಮುಂದುವರೆದಿದೆ. ಚಿಕ್ಕೋಡಿ ತಾಲೂಕಿನ ಕೆಳ ಹಂತದ ಯಡೂರು ಕಲ್ಲೋಳ, ಮಲ್ಲಿಕವಾಡ ದತ್ತವಾಡ, ಕಾರದಗಾ ಭೋಜ ಸೇತುವೆಗಳು ಜಲಾವೃತವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಹೇಳಿದ್ದಾರೆ. ಬೆಳಗಾವಿಯಲ್ಲಿ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿ ನಿತೇಶ್ ಪಾಟೀಲ್ ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ವರುಣರಾಯನ ಆರ್ಭಟ ಮುಂದುವರೆದಿದೆ. ಮಹಾ …

Read More »

2-3 ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲಘು ಭೂಕಂಪನದ ಅನುಭವ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲಘು ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ 6.45 ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.    

Read More »