ಬೆಳಗಾವಿ: ಕಬ್ಬಿನ ಕದ್ದೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ತಂದೆ-ಮಗ ಇಬ್ಬರನ್ನೂ ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, 204 ಕೆಜಿ ತೂಕದ ಹಸಿ ಗಾಂಜಾ ಬೆಳೆ ಜಪ್ತಿ ಮಾಡಿದ್ದಾರೆ. ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಬಸಪ್ಪ ರಂಗಪ್ಪ ಲಗಳಿ(77) ಮತ್ತು ಇವರ ಪುತ್ರ ಸಿದ್ದಪ್ಪ ಬಸಪ್ಪ ಲಗಳಿ(40) ಬಂಧಿತರು. ಹೊನಕುಪ್ಪಿ ಗ್ರಾಮದ ಹದ್ದಿನಲ್ಲಿನ ಸರ್ವೇ ನ.316/4ರ ತಮ್ಮ ಜಮೀನಿನಲ್ಲಿ ಯಾರಿಗೂ ಅನುಮಾನ ಬಾರದಂತೆ ಕಬ್ಬಿನಗದ್ದೆಯಲ್ಲಿ ಗಾಂಜಾ ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ …
Read More »ಖಾಸಗಿ ಬಸ್ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಘಟನೆಯಲ್ಲಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕು ಸರಕಾರಿ ಆಸ್ಪತ್ರೆ ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬಸ್‌ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಬೆಂಗಳೂರಿನಿಂದ ಮುಂಬೈನತ್ತ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ …
Read More »ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು
ಕೊಪ್ಪಳ: ನಿಯಂತ್ರಣ ತಪ್ಪಿ ಕಾರೊಂದು ಬಾವಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ-ಅಳವಂಡಿ ರಸ್ತೆಯ ಮೈನಳ್ಳಿ ಬಳಿ ನಡೆದಿದೆ. ಸಂಗಮೇಶ ಹಿರೇಮಠ (26) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಹರಿಹರದಿಂದ ಕೊಪ್ಪಳಕ್ಕೆ ಮದುವೆಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಶವ ಮತ್ತು ಕಾರನ್ನು ಮೇಲಕ್ಕೆತ್ತಿದ್ದಾರೆ.
Read More »ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಸ್ಥಳದಲ್ಲೇ ಮೃತ
ಬೆಳಗಾವಿ: ನಗರದ ಬಸವೇಶ್ವರ ವೃತ್ತದ ಬಳಿಯ ಎಲ್ಐಸಿ ಕಚೇರಿಯ ಆವರಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ ಟೀಳಕವಾಡಿಯ ಪಿಕೆ ಕ್ವಾರ್ಟಸ್ನಲ್ಲಿರುವ ಅನಿತಾ ರಾಜೇಶ್ ಬನ್ಸ್ (52) ಮೃತಪಟ್ಟವರು. ಅನಿತಾ ಎಂದಿನಂತೆ ಎಲ್ಐಸಿ ಕಚೇರಿಗೆ ಆಗಮಿಸಿ ಆವರಣ ಶುಚಿಗೊಳಿಸುತ್ತಿದ್ದರು. ಈ ಸಂದರ್ಭದಲ್ಲಿ ಎಲ್ಐಸಿ ಆವರಣದಿಂದ ಕಾರು ಹೊರತೆಗೆಯುವ ಸಂದರ್ಭದಲ್ಲಿ ಚಾಲಕ ಗುರುರಾಜ ಕುಲಕರ್ಣಿ, ಮಹಿಳೆಗೆ …
Read More »ಬಕ್ರೀದ್ ಹಬ್ಬ: ಕೋವಿಡ್ ಮಾರ್ಗಸೂಚಿ ಕಡ್ಡಾಯ
ಬೆಂಗಳೂರು: ಬಕ್ರೀದ್ ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಸ್ಲಿಮರು ಭಾನುವಾರ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಿದ್ದಾರೆ ಎಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿದೆ. ಹಬ್ಬದ ದಿನದಂದು ಮುಸ್ಲಿಮರು ಈದ್ಗಾ ಮೈದಾನ, ಮಸೀದಿಯಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಾರೆ. ಧಾರ್ಮಿಕ ಆಚರಣೆಯ ಪ್ರಯುಕ್ತ ಹಬ್ಬದ ದಿನ ಸೇರಿದಂತೆ …
Read More »ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ: ಚಿಕ್ಕೋಡಿಯ ನಾಲ್ಕು ಸೇತುವೆಗಳು ಮುಳುಗಡೆ
ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಮಳೆಯ ಆರ್ಭಟ ಮುಂದುವರದಿದ್ದು ಇದರಿಂದ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ ಯಡೂರ-ಕಲ್ಲೋಳ, ಮಾಂಜರಿ-ಸೌಂದತ್ತಿ, ಮಲಿಕವಾಡ-ದತ್ತವಾಡ, ಯಕ್ಸಂಬಾ-ದಾನವಾಡದ ಕೆಳಮಟ್ಟದ ಸೇತುವೆಗಳು ಮುಳಗಡೆಯಾಗಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ ಒಂದು ಅಡಿಯಷ್ಟು ನೀರು ಏರಿಕೆಯಾಗಿದ್ದು ನದಿತೀರದ ಜನರಿಗೆ ಮತ್ತೆ …
Read More »ಎಸಿಬಿ ರದ್ದುಗೊಳಿಸಿ ಬಲಯುಕ್ತ ಲೋಕಾಯುಕ್ತ ಮುಂದುವರೆಯಲಿ : ಭಾಸ್ಕರ್ ರಾವ್
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯದ ಆಪ್ ಮುಖಂಡ ಭಾಸ್ಕರ್ ರಾವ್ ಟ್ವೀಟ್ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆಯನ್ನು ಅನುಮೋದಿಸಿರುವ ಅವರು, ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಅಭಿಪ್ರಾಯ 100% ಸತ್ಯ ಎಂದಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿತ್ತು. ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ …
Read More »ಪಿಎಸ್‌ಐ ಅಕ್ರಮದ ಕಿಂಗ್ ಪಿನ್: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಹೆಸರು ಉಲ್ಲೇಖ
ಕಲಬುರಗಿ, ಜುಲೈ 7: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧನದ ನಂತರ, ವಿರೋಧ ಪಕ್ಷವಾದ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಕಾಂಗ್ರೆಸ್ ನಾಯಕರು ಸತತ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ಹೊರಹಾಕುತ್ತಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸರಿಯಾದ ತನಿಖೆ ನಡೆದರೆ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದಿದ್ದ ಕಾಂಗ್ರೆಸ್ ನಾಯಕ ಮತ್ತು ಚಿತ್ತಾಪುರ ಕ್ಷೇತ್ರದ ಶಾಸಕರೂ ಆಗಿರುವ ಪ್ರಿಯಾಂಕ್ ಖರ್ಗೆ, ಪರೋಕ್ಷವಾಗಿ ಈ ಅಕ್ರಮದ …
Read More »ಭ್ರಷ್ಟಾಚಾರ ಸಾಭೀತಾದ ಹಿನ್ನೆಲೆ: ಗ್ರಾ. ಪಂ ಸೇವೆಯಿಂದ ಪಿಡಿಓ ವಜಾ
ರಾಯಚೂರು: ಭ್ರಷ್ಟಾಚಾರ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮ ಪಂಚಾಯಿತಿ ಪಿಡಿಓ ಶರಣಪ್ಪ ಸರ್ಕಾರಿ ಸೇವೆಯಿಂದ ವಜಾಗೊಂಡಿದ್ದಾರೆ. 2010-11 ರ ಅವಧಿಯಲ್ಲಿ ಮಾನ್ವಿ ತಾಲೂಕಿನ ಕಪಗಲ್ ಗ್ರಾಪಂ ಪಿಡಿಓ ಆಗಿದ್ದಾಗ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಇದೀಗ ಕ್ರಮ ಕೈಗೊಂಡಿದ್ದು ಪಿಡಿಓ ಶರಣಪ್ಪ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಸರ್ಕಾರಕ್ಕೆ 34,77,999 ರೂ. ನಷ್ಟ ಉಂಟು ಮಾಡಿದ ಆರೋಪ ಪ್ರಕರಣದಲ್ಲಿ ಭ್ರಷ್ಟಾಚಾರ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆ …
Read More »ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ! ದೋಖಾ ದುಡ್ಡಲ್ಲಿ ಈತ ಮಾಡಿರೋ ಶೋಕಿ ಒಂದಾ? ಎರಡಾ? ನೀವೇ ನೋಡಿ
ಬಾಗಲಕೋಟೆ: ಆತ ಓರ್ವ ಸಿಪಾಯಿ (ಪಿಯೂನ್). ಅಧಿಕಾರಿಗಳು ಹೇಳಿದ ಫೈಲ್ (File) ಕೊಡೋದು ತೆಗೆದುಕೊಂಡು ಬರೋದು ಸಹಾಯಕ (Helper) ನಾಗಿ ಇರೋದು ಆತನ ಕೆಲಸ. ಆದರೆ ಆ ಪಿಯೂನ್ (Peon) ಈಗ ಮಾಡಿದ ಕೆಲಸ ಕೇಳಿದರೆ ದಂಗಾಗ್ತಿರಾ. ಬ್ಯಾಂಕ್ (Bank) ನಲ್ಲಿ ಪಿಯೂನ್ ಆದೋನು ಬ್ಯಾಂಕ್ ನಲ್ಲಿ ಕೋಟಿ ಕೋಟಿ (Crore) ಲೂಟಿ ಮಾಡಿದ್ದಾನೆ. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತ ಬಂದ ಹಣದಲ್ಲಿ ಸಿನಿಮಾ (Movie) , ನಾಟಕ, …
Read More »