ಚಿಕ್ಕೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ವೇಳೆ ಚಿಕ್ಕೋಡಿ ತಾಲೂಕಾಡಳಿತ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮರೆತಿದ್ದ ಹಿನ್ನಲೆ ದಲಿತ ಸಂಘಟನೆಗಳು ತಾಲೂಕಾಡಳಿತ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕೋಡಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ ಸಂದರ್ಭ ಚಿಕ್ಕೋಡಿ ತಾಲೂಕಾಡಳಿತ ಮಹಾತ್ಮಾ ಗಾಂಧೀಜಿಯವರ ಒಂದೇ ಪೋಟೋ ಇಟ್ಟು ಯಡವಟ್ಟು ಮಾಡಿಕೊಂಡಿದೆ. ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಬಿಟ್ಟು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ …
Read More »ಸ್ವಾತಂತ್ರ್ಯ ದಿನಾಚರಣೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಚಾಮರಾಜಪೇಟೆ ಮೈದಾನ
ಬೆಂಗಳೂರು: ಹಲವು ವಿವಾದಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು. ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ. ಮೋಹನ್, ಶಾಸಕರಾದ ಜಮೀರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ …
Read More »ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ
ಬೆಂಗಳೂರು: ನೆಹರು ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೊಮ್ಮಾಯಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲುವಾಸ ಅನುಭವಿಸಿದ್ದರಾ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ನೆಹರು ಅವರ ಕೊಡುಗೆಯಿದೆ. ನೆಹರು ಜೈಲು ವಾಸ ಅನುಭವಿಸಿದ್ದರು. ಈಶ್ವರಪ್ಪ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ರಾ? ಬೊಮ್ಮಾಯಿ ಜೈಲುವಾಸ ಅನುಭವಿಸಿದ್ರಾ? ಅವನ್ಯಾವನೋ ರವಿಕುಮಾರ್ ಜೈಲಿಗೆ …
Read More »ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗಾ ಸೆಲ್ಫಿ!
ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಇದು ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ಅದರ ಜತೆಗೆ ಸೆಲ್ಫಿ ತೆಗೆದುಕೊಂಡು ಹರ್‌ಘರ್ ತಿರಂಗ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಮನವಿ ಮಾಡಲಾಗಿತ್ತು. ಅದಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್‌ಲೋಡ್ ಮಾಡಿದ್ದಾರೆ. …
Read More »ಚಿವರು ಎಚ್ಚರಿಕೆಯಿಂದ ಮಾತಾಡಲಿ: ಸಿ.ಟಿ.ರವಿ
ಸರಕಾರ ಮತ್ತು ಪಕ್ಷದ ವರ್ಚಸ್ಸು ಹೆಚ್ಚಿಸುವ ಜವಾಬ್ದಾರಿ ಹಿರಿಯ ಸಚಿವರ ಮೇಲಿದೆ. ನಮ್ಮ ಬದ್ಧತೆ ರಾಜ್ಯದ ಜನತೆಗೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಚಿವರು ಎಚ್ಚರಿಕೆಯಿಂದ ಮಾತನಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್.ಟಿ. ಸೋಮಶೇಖರ್ ಸಹಿತ ಯಾವುದೇ ಸಚಿವರು ಬಾಲಿಶವಾಗಿ ಮಾತನಾಡಿ ಸಮಾಜಕ್ಕೆ ತಪ್ಪು ಸಂದೇಶ ಹೋಗುವಂತೆ ಮಾಡಬಾರದು. ಟಿಪ್ಪು ಬ್ಯಾನರ್ ಹರಿದವರನ್ನು ಮತ್ತು ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ತೆಗೆಸಿ ಅವಮಾನಿಸಿದವರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಇಂಥ …
Read More »ಅಪ್ಪನ ಸಮಾಧಿ ಮುಂದೆ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನ ಆಚರಿಸಿದ ಸೈನಿಕನ ಪುತ್ರಿ
ಚಾಮರಾಜನಗರ: ಯಳಂದೂರು ತಾಲೂಕಿನ ಮಲಾರಪಾಳ್ಯದಲ್ಲಿ ನಿವೃತ್ತ ಸೈನಿಕ ನವೀನ್ ಅವರ ಸ್ಮಾರಕದ ಮುಂದೆ 9 ವರ್ಷದ ಪುತ್ರಿ ಹನಿ ಎಂಬಾಕೆ ಕೊಳಲಿನ ಮೂಲಕ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನಾಚರಿಸಿದ್ದಾಳೆ. ಮಗಳ ಜೊತೆ ತಾಯಿ ಭವ್ಯಾ ಇದ್ದರು. ನವೀನ್ ಅವರು ಅಪಘಾತದಲ್ಲಿ ಅಸುನೀಗಿದ್ದರು. ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ಈ ಕುಟುಂಬ ವಿಶೇಷ ನಮನ ಸಲ್ಲಿಸುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಗೌಡಹಳ್ಳಿ ಗ್ರಾ.ಪಂ ಸಿಬ್ಬಂದಿ, ಯುವಕರು ಭಾಗಿಯಾಗಿದ್ದರು.
Read More »ಶಾಸಕ ಅಭಯ ಪಾಟೀಲ್ ವಿರುದ್ಧ ಪರೋಕ್ಷ ಕಿಡಿ ಕಾರಿದ :ಕಾರಜೋಳ
ಚಿರತೆ ಪತ್ತೆಗೆ ಮುಧೋಳ ನಾಯಿ ತರೋಣ: ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಹಾವಳಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಬೆಳಗಾವಿ ನಗರದಲ್ಲಿ ಪ್ರತ್ಯೇಕ್ಷವಾಗಿರುವ ಚಿರತೆ ಸೆರೆ ಹಿಡಿಯಲು 8 ಕಡೆಗಳಲ್ಲಿ ಬೋನ್ ಇಟ್ಟು ಕಾಯುತ್ತಿದ್ದಾರೆ. 50 ಜನ ಸಿಬ್ಬಂದಿ ನೇಮಕ ಮಾಡಲಾಗಿದೆ. ತಜ್ಞರನ್ನು ಸಹ ನೇಮಕ ಮಾಡಿದೆ. ಇಷ್ಟಕ್ಕೂ ಸೆರೆ ಸಿಗದಿದ್ದರೇ ಮುಧೋಳ ನಾಯಿಯನ್ನು ತಂದು ಚಿರತೆ ಸೆರೆ ಹಿಡಿಯಲಾಗುವುದು ಎಂದರು. ಶಾಸಕ ಅಭಯ ಪಾಟೀಲ್ ವಿರುದ್ಧ ಪರೋಕ್ಷ ಕಿಡಿ ಜಿಲ್ಲಾ ಉಸ್ತುವಾರಿ …
Read More »ವಿಟಿಯು “ಜ್ಞಾನ ಸಂಗಮ”ದಲ್ಲಿ ಗಮನ ಸೆಳೆದ 100 ಮೀಟರ್ ತಿರಂಗಾ ರ್ಯಾಲಿ
ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ “ಜ್ಞಾನ ಸಂಗಮ”ದಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 76ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ವಿ ತಾ ವಿ ಯ ಕುಲಪತಿಗಳಾದ ಪ್ರೋ. ಕರಿಸಿದ್ದಪ್ಪ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಲ್ ದೀಪಕ ಕುಮಾರ ಗುರುಂಗ ಆಗಮಿಸಿದ್ದರು. ಧ್ವಜಾರೋಹಣ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ ಕರ್ನಲ್ ದೀಪಕ ಗುರುಂಗ, ಕನ್ನಡ ನಾಡನ್ನು ಆಳಿದ ರಾಜಮನೆತನಗಳ ಕೊಡುಗೆಗಳನ್ನು, ಸಂಗೀತ, …
Read More »ಕಣ್ಮನ ಸೆಳೆದ ವಿದ್ಯಾರ್ಥಿಗಳು ಸೃಷ್ಟಿಸಿದ ನಕ್ಷೆ
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸೊರಬ ಸಮೀಪದ ಜಡೆ ಗ್ರಾಮ ಪಂಚಾಯಿತಿಯಿಂದ ಆಯೋಜಿಸಲಾಗಿದ್ದ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಾಲೆ ಸೇರಿ 1,200ಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲಕ್ಕೆ ರಾಷ್ಟ್ರಗೀತೆ ಹಾಡುವ ಮೂಲಕ ಭಾರತ ಮಾತೆಗೆ ವಿಶೇಷ ಗೌರವ ಸಲ್ಲಿಸಿದರು. ಭಾರತದ ನಕ್ಷೆ ಹೋಲುವಂತೆ 1,200 ವಿದ್ಯಾರ್ಥಿಗಳನ್ನು ನಿಲ್ಲಿಸಲಾಗಿದ್ದು, ಕೇಸರಿ, ಬಿಳಿ ಹಾಗೂ ಹಸಿರು ಟೋಪಿ ಧರಿಸಿ ರಾಷ್ಟ್ರಗೀತೆ ಹಾಡಿರುವುದನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ …
Read More ». ಸುವರ್ಣಸೌಧ ಕೇವಲ ಜಿಲ್ಲಾಮಟ್ಟದ ಕಚೇರಿಗೆ ಸೀಮಿತ, ಪತ್ರಕರ್ತರಿಗೂ ನಿಷೇಧ: ಅವಕಾಶ ನೀಡದ ಜಿಲ್ಲಾಡಳಿತದ ನಡೆಗೆ ವಿರೋಧ ವ್ಯಕ್ತ
ಬೆಳಗಾವಿ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲಾಡಳಿತ ಸುವರ್ಣಸೌಧಕ್ಕೆ ಕೆಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ದೀಪಾಲಂಕಾರ ಮಾಡಿದ್ದು, ಸುವರ್ಣಸೌಧ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬೆಳಗಾವಿ ತಾಲೂಕಿನ ಹಲಗಾ – ಬಸ್ತವಾಡ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಪಕ್ಕದಲ್ಲಿ ನಿರ್ಮಾಣಗೊಂಡಿರುವ ಸುವರ್ಣ ವಿಧಾನಸೌಧ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ಸುವರ್ಣಸೌಧವನ್ನ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಬಾರಿ ಆಂತರಿಕ ಭದ್ರತೆ ನೆಪವೊಡ್ಡಿ …
Read More »
Laxmi News 24×7