Breaking News

ಮತಪಟ್ಟಿ ಹಗರಣ ನಡೆದಿದೆ, ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಿ: ಸತೀಶ್ ಜಾರಕಿಹೊಳಿ

ಕೊಪ್ಪಳ: ರಾಜ್ಯದಲ್ಲಿ ಮತಪಟ್ಟಿ ಪರಿಷ್ಕರಣೆಯಲ್ಲಿ ಬಹುದೊಡ್ಡ ಹಗರಣ ನಡೆಯುತ್ತಿದೆ. ಇದರ ಬಗ್ಗೆ ನಾವೆಲ್ಲ ಜಾಗೃತರಾಗಬೇಕು. ಕೇವಲ ಬೆಂಗಳೂರು ಒಂದೇ ಅಲ್ಲ, ಎಲ್ಲ ಜಿಲ್ಲೆಯಲ್ಲಿಯೂ ನಡೆದಿದೆ. ನಮ್ಮೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು.   ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮತದಾರರ ಪಟ್ಟಿಯಲ್ಲಿ ನಮ್ಮ ಪರ ಇರುವ ಮತದಾರರನ್ನು ಡಿಲಿಟ್ ಮಾಡುವ ಕೆಲಸ ನಡೆದಿದೆ. ಈ ಬಗ್ಗೆ ನಾವು ಜಾಗೃತರಾಗಬೇಕಿದೆ. ಬಿಜೆಪಿ ಗೆಲ್ಲಲು ನಮ್ಮ …

Read More »

ಕಲಾವಿದರಿಂದ ರಚನೆಗೊಂಡ ನಾಡದೇವತೆಯ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದ ನಾಡದೇವತೆಯ ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯು ನಿಯೋಜಿತ ಕಲಾವಿದರಿಂದ ರಚನೆಗೊಂಡ ನಾಡದೇವತೆಯ ಚಿತ್ರವನ್ನು ಸ್ವೀಕರಿಸಿದೆ. ಹಲವಾರು ಕಾರ್ಯಕ್ರಮಗಳಲ್ಲಿ ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವತೆಗಳ ಚಿತ್ರಗಳನ್ನು ಬಳಸಲಾಗುತ್ತಿದ್ದು, ಒಂದು ನಿರ್ದಿಷ್ಟ ಚಿತ್ರಕೃತಿಯ ಕೊರತೆಯಿರುವುದನ್ನು ಮನಗಂಡ ಸರ್ಕಾರವು ಚಿತ್ರವನ್ನು ಆಯ್ಕೆ ಮಾಡಲು ಹಿಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.   ಲಲಿತ …

Read More »

ಯು.ಬಿ.ಬಣಕಾರ್ ಸೇರಿ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಈ ರಾಜ್ಯ ನಾಶ ಆಗುತ್ತದೆ. ಸರ್ವನಾಶ ಆಗುತ್ತದೆ. ಹೀಗಾಗಿ ಬಿಜೆಪಿ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ನಾವೆಲ್ಲರೂ ಸೇರಿಕೊಂಡು ಸೋಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದರು. 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ. ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ ಯು.ಬಿ.ಬಣಕಾರ್ ತಮ್ಮ ಬೆಂಬಲಿಗರಾದ ಮಂಜಣ್ಣ, ಶಿವರಾಜ್, ಹೇಮಣ್ಣ, ಷಣ್ಮುಖಯ್ಯ ಮಳಿಮಠ ಸೇರಿದಂತೆ …

Read More »

ಕಾಂಗ್ರೆಸ್ ಮುಖಂಡ ಧರ್ಮಸ್ಥಳ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ

ಧರ್ಮಸ್ಥಳ : ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದಾರೆ.   ಪಕ್ಷ ಸೇರ್ಪಡೆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಬೃಹತ್ ಮಹಾನಗರ ಕಾರ್ಪೋರೇಟರ್ ಗಳಾದ ಶ್ರೀಕಾಂತ್, …

Read More »

ಕೊಪ್ಪಳ ನಗರಸಭೆ ಮುಂದೆ ಮಹಿಳೆ ಶವವಿಟ್ಟು ಪ್ರತಿಭಟನೆ

ಕೊಪ್ಪಳ: ಕೊಪ್ಪಳ ನಗರದ 30ನೇ ವಾರ್ಡಿನಲ್ಲಿ ಬಿಡಾಡಿ ದನಗಳ ದಾಳಿಯಿಂದಾಗಿ ರಮಿಜಾ ಬೇಗಂ ಎನ್ನುವ ಮಹಿಳೆ ಮೃತಪಟ್ಟಿದ್ದು, ಶವವನ್ನು ನಗರಸಭೆ ಮುಂದಿಟ್ಟು ಸೋಮವಾರ ಪ್ರತಿಭಟನೆ ನಡೆಸಲಾಗಿದೆ. ಕೊಪ್ಪಳ ನಗರದಲ್ಲಿ ಕಳೆದ ಕೆಲವು ವರ್ಷಗಳಿಂದ ಬಿಡಾಡಿ ದನಗಳ ಹಾವಳಿ ಮಿತಿ ಮೀರಿದ್ದು, ಇದರಿಂದ ಜನರು ರಸ್ತೆಯ ಮೇಲೆ ಸಂಚಾರ ಮಾಡದಂತ ಸ್ಥಿತಿ ಎದುರಾಗಿದೆ. ಹಗಲು ರಾತ್ರಿ ಎನ್ನದೇ ಬಿಡಾಡಿ ದನಗಳು ರಸ್ತೆ ಮೇಲೆ ಮಲಗಿ ಪ್ರಯಾಣಿಕರಿಗೆ ತುಂಬಾ ತೊಂದರೆ ಮಾಡುತ್ತಿವೆ. ಈ ಮಧ್ಯೆ …

Read More »

ಸದ್ದು ಮಾಡುತ್ತಿದೆ ‘ವಿಜಯಾನಂದ’ ಚಿತ್ರದ ಟ್ರೇಲರ್‌

ಉದ್ಯಮಿ ವಿಜಯ್‌ ಸಂಕೇಶ್ವರ ಜೀವನಾಧಾರಿತ “ವಿಜಯಾನಂದ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದ ಕನ್ನಡ ಟ್ರೇಲರ್‌ ಬಿಡುಗಡೆ ಮಾಡಿದರೆ, ಆರೋಗ್ಯ ಸಚಿವ ಸುಧಾಕರ್‌ ಹಿಂದಿ ಟ್ರೇಲರ್‌ ಬಿಡುಗಡೆಗೊಳಿಸಿದರು.   ಟ್ರೇಲರ್‌ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ವಿಜಯ ಸಂಕೇಶ್ವರ ಅವರನ್ನು 1980ರಿಂದ ನೋಡಿದ್ದೇನೆ. ಸಂಕೇಶ್ವರ ಕೇವಲ ವೆಂಚರ್‌ ಅಲ್ಲ, ಅವರು ಅಡ್ವೆಂಚರ್‌ ವ್ಯಕ್ತಿ. ಯಾರು ಆಗಲ್ಲ ಆ ದಾರಿ ಸುಲಭ ಅಲ್ಲ ಅಂತ ಹೇಳುತ್ತಾರೋ …

Read More »

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿವಾಡಿ ಗ್ರಾಮದಲ್ಲಿ ನಡೆದಿದೆ. ಯಕ್ಸಂಬಾ- ಚಿಕ್ಕೋಡಿ ರಸ್ತೆಯ ಮದ್ಯ ಶವವಿಟ್ಟು ಭಜನೆ ಮಾಡುವುದರ ಮೂಲಕ ಪ್ರತಿಭಟನೆ ಮಾಡಲಾಯಿತು. ಇಂದು ಬೆಳಗ್ಗೆ ಅನಾರೋಗ್ಯದಿಂದ ನಣದಿವಾಡಿ ಗ್ರಾಮದ ಸುಧಾಕರ ಮಹಾದೇವ ನಾಯಕ ಎಂಬುವವರು ಮೃತಪಟ್ಟಿದರು. ರುದ್ರಭೂಮಿಗೆ ಹೋಗುವ ದಾರಿ ವಿಚಾರಕ್ಕೆ ಸಂಬಂಧಸಿದಂತೆ ನಣದಿವಾಡಿ ಗ್ರಾಮದ ಯಕ್ಸಂಬಿ ಕುಟುಂಬವು ತಕರಾರು ತಗೆದಿತ್ತು. ಅಷ್ಟೇ ಅಲ್ಲದೇ ರುದ್ರಭೂಮಿಗೆ …

Read More »

3ನೇ ವಿಶ್ವ ಕನ್ನಡ ಸಮ್ಮೇಳನ ಬೆಳಗಾವಿಯಲ್ಲಿಯೇ ನಡೆಸಿ

ಮೂರನೇ ವಿಶ್ವ ಕನ್ನಡ ಸಮ್ಮೇಳನವನ್ನು ಬೆಳಗಾವಿಯಲ್ಲಿಯೇ ನಡೆಸಲು ಚಳಿಗಾಲ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳುವಂತೆ ಕರ್ನಾಟಕ ಯುವ ವೇದಿಕೆ ಸಂಘಟನೆ ಒತ್ತಾಯಿಸಿದೆ. ಸೋಮವಾರ ನಗರದ ರಾಣಿ ಚನ್ನಮ್ಮ ವೃತ್ತದ ಮುಂಭಾಗದಲ್ಲಿ ಧರಣಿ ನಡೆಸಿದ ಕರ್ನಾಟಕ ಯುವ ವೇದಿಕೆ ಪದಾಧಿಕಾರಿಗಳು ಬೆಳಗಾವಿಯಲ್ಲಿಯೇ ಮೂರನೇ ವಿಶ್ವ ಕನ್ನಡ ಸಮ್ಮೇಳನ ನಡೆಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು. ಬಳಿಕ ಡಿಸಿ ಕಚೇರಿವರೆಗೂ ರ್ಯಾಲಿ ನಡೆಸಿದ ಕನ್ನಡ ಹೋರಾಟಗಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ …

Read More »

ಬೊಮ್ಮಾಯಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬಂದರೆ ಸ್ವಾಗತ: ಸಿ.ಎಂ.ಇಬ್ರಾಹಿಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬಂದರೆ ಅವರನ್ನು ಆದರದಿಂದ ಸ್ವಾಗತಿಸುತ್ತೇನೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಈದ್ಗಾ ಮೈದಾನ ವಿಚಾರವಾಗಿ ನಾನು ಮತ್ತು ಬಸವರಾಜ ಬೊಮ್ಮಾಯಿ ಅವರು ಸೂಕ್ತ ನಿರ್ಧಾರ ಕೈಗೊಂಡಿದ್ದೇವು, ಇದೀಗ ಪಾಪ ಬೊಮ್ಮಾಯಿ ಅವರು ಬಿಜೆಪಿ ಸೇರಿ ತಬ್ಬಲಿ ಆಗಿದ್ದಾರೆ ಎಂದರು. ಸದ್ಯ ಬಸವರಾಜ ಬೊಮ್ಮಾಯಿ ಅವರ ಸ್ಥಿತಿ 2ಎ, ಎಸ್ ಸಿ ಎಸ್ ಟಿ, ಹಾಗೂ …

Read More »

ನಂದಗಡದಲ್ಲಿ ಶಾಲೆಗಳ ನೂತನ ಕೊಠಡಿಗಳ ಉದ್ಘಾಟನೆ: ಅಂಜಲಿ ನಿಂಬಾಳ್ಕರ್

ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ಜೆಸಿಎಸ್ ಆವರಣದಲ್ಲಿನ ಉರ್ದು ಹೆಣ್ಣು ಮಕ್ಕಳ ಶಾಲೆಯ ಕೊಠಡಿ, ಅದರಂತೆ ಮರಾಠಿ ಶಾಲೆಯ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನೆರವೇರಿಸುವರು. ಈ ಸಂದರ್ಭದಲ್ಲಿ ಉರ್ದು ಶಾಲೆಯ ವಿದ್ಯಾರ್ಥಿಗಳೊಂದಿಗೆ,ದುವಾ ಅದರಂತೆ ಮರಾಠಿ ಶಾಲೆಯ ಮಕ್ಕಳೊಂದಿಗೆ ಪೂಜೆ ಸಲ್ಲಿಸಿ ಮಕ್ಕಳಲ್ಲಿ ಸರಳತೆಯಿಂದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಶಿಕ್ಷಕರಿಂದ ಶಾಸಕಿ ಅಂಜಲಿ ಅವರನ್ನು …

Read More »