ಬೆಂಗಳೂರು : ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯೂ (ದ್ರೌಪದಿ ಮುರ್ಮು) ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ.ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ ಎಂದು ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಭಾನುವಾರ ಹೇಳಿಕೆ ನೀಡಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ …
Read More »ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಿರಲಿದೆ: ಅಮಿತ್ ಶಾ
ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳು ಭಾರತೀಯ ಜನತಾ ಪಕ್ಷದ ಯುಗವಾಗಿರಲಿದೆ. ಅಲ್ಲದೆ ಭಾರತವು ಈ ಸಮಯದಲ್ಲಿ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹೈದರಾಬಾದ್ ನಲ್ಲಿ ನಡೆಯುತ್ತಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕುಟುಂಬದ ರಾಜಕೀಯ, ಜಾತಿವಾದ ಮತ್ತು ತುಷ್ಟೀಕರಣದ ರಾಜಕೀಯಗಳು “ಮಹಾನ್ ಪಾಪಗಳು” ಮತ್ತು ವರ್ಷಗಳಿಂದ ದೇಶವು ಅನುಭವಿಸುತ್ತಿರುವ ನೋವುಗಳ ಹಿಂದಿನ ಕಾರಣ ಎಂದು ಶಾ ಹೇಳಿದರು. …
Read More »ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯಸ್ವಂತ ಮಗಳ ಮೇಲೆರಗಿದ ತಂದೆ; ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ…!
ಕುಂದಾನಗರಿ ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದ್ದು ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳ ಮೇಲೆಯೇ ತಂದೆಯೊಬ್ಬ ೫ ವರ್ಷದ ಮಗಳ ಕೆನ್ನೆ ಹಾಗೂ ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ತಂದೆ ಕಾಕಾತಿ ಪಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಆರ್‌ಎಂಪಿ ವೈದ್ಯನಾಗಿ …
Read More »ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ.
ಬೆಳಗಾವಿಯ ಕೋಟೆ ಹಿಂದಿನ ಸಮರ್ಥ ನಗರದ ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತ ದೇಹ ಪತ್ತೆಯಾಗಿದೆ. ಹೌದು ಬೆಳಗಾವಿಯ ಕೋಟೆ ಹಿಂದೆ ಸಮರ್ಥನಗರದ ರೈಲು ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಮೃತ ಹುಸೇನ್‌ಗೆ ಎರಡು ಮಕ್ಕಳಿದ್ದಾರೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಮನೆಯಲ್ಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು …
Read More »ರಜೆಯೂ ಇಲ್ಲ, ಭತ್ಯೆಯೂ ಸಿಗ್ತಿಲ್ಲ!; ಪೊಲೀಸ್ ಕಾನ್ಸ್ಟೇಬಲ್ಗಳಿಗೆ ಗೋಳು, ಠಾಣಾಧಿಕಾರಿಗೆ ಇಕ್ಕಟ್ಟು..
ಬೆಂಗಳೂರು :ವರಿಷ್ಠಾಧಿಕಾರಿಗಳ ಆದೇಶ ಒಂದೆಡೆ…, ಹಿರಿಯ ಅಧಿಕಾರಿಗಳ ಒತ್ತಡ ಇನ್ನೊಂದೆಡೆ. ಆದರೆ, ನಲುಗುತ್ತಿರುವವರು ಮಾತ್ರ ಕಾನ್ಸ್ಟೇಬಲ್ಗಳು…. ಆರಕ್ಷಕರಿಗೆ ದಿನದ ಹದಿಮೂರು ತಾಸು ಕೆಲಸ ಮಾಡಿದರೂ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ. ರಜೆಯೂ ಇಲ್ಲ; ಕೆಲಸ ಮಾಡಿದರೆ ಭತ್ಯೆಯೂ ದೊರೆಯದ ಅತಂತ್ರ ಸ್ಥಿತಿ ಅವರದ್ದಾಗಿದೆ. ಹೀಗಾಗಿ ಕಡ್ಡಾಯವಾಗಿ ವಾರದ ರಜೆ ಹಾಗೂ ರಜೆ ಬದಲಿಗೆ ಭತ್ಯೆ ಕೊಡುವ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ‘ಕಳ್ಳಾಟ’ ಆಡುತ್ತಿರುವ ಆರೋಪ ಕೇಳಿಬಂದಿದೆ. ಕಡ್ಡಾಯವಾಗಿ ವಾರದ ರಜೆ ಕೊಡಬೇಕು …
Read More »ಸಿದ್ದರಾಮಯ್ಯಗೆ ತಾಕತ್ತು ಇದ್ದರೆ ಡಿಕೆಶಿ ವಿರುದ್ಧ ಸೆಟೆದು ನಿಲ್ಲಲಿ: B.J.P.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತು ಇದ್ದರೆ ಈಗಲೇ ಡಿ.ಕೆ.ಶಿವಕುಮಾರ್ ವಿರುದ್ಧ ಸೆಟೆದು ನಿಲ್ಲಲಿ ಎಂದು ಬಿಜೆಪಿ ಸವಾಲು ಹಾಕಿದೆ. ಕಾಂಗ್ರೆಸ್ ನಾಯಕತ್ವ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ. ಅದು ಉತ್ತರಕುಮಾರನ ಪೌರುಷ ಅಷ್ಟೇ. ತಾಕತ್ತು ಇದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ …
Read More »ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ : ರಾಜ್ಯ ಸರ್ಕಾರ ಆದೇಶ
ಕಲಬುರ್ಗಿ: ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿರುವಾಗ, ರಾಜ್ಯದ ಎಲ್ಲಾ ವಾಣಿಜ್ಯ ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂಗಡಿಯ ಪರವಾನಗಿಯನ್ನೇ ರದ್ದುಗೊಳಿಸೋದಾಗಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಕಲಬುರ್ಗಿ ಪಾಲಿಕೆಯ ಆರೋಗ್ಯಾಧಿಕಾರಿ ಆದೇಶ ಹೊರಡಿಸಿದ್ದು, ಕಲಬುರ್ಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿನಂತೆ ಕರ್ನಾಟಕದಲ್ಲಿ ಕನ್ನಡ ಭಾಷೆಯು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡ ಬಳಸುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ. ಕನ್ನಡ …
Read More »`PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್
ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ ನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ. ಎಸ್. ಜಾಗೃತ್ ಪಿಎಸ್ ಐ ಪರೀಕ್ಷೆಯಲ್ಲಿ 4 ನೇ ರ್ಯಾಂಕ್ ಬಂದಿದ್ದನ್ನು. ಎಸ್. ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ ಐಆರ್ ಹಾಕಿರುವುದನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಜಾಗೃತ್ ಒಬ್ಬನಾಗಿದ್ದ. ಬಳಿಕ ಪ್ರಕರಣದ …
Read More »ರಾತ್ರಿಯೆಲ್ಲ ಒಂದೇ ರೂಮಿನಲ್ಲಿ ಯಾಕಿದ್ರು? ಮೈಸೂರಿನಲ್ಲಿ ಹೈಡ್ರಾಮ, ನರೇಶ್-ಪವಿತ್ರಾ ವಿರುದ್ಧ ರಮ್ಯಾ ಕಿಡಿ
ಮೈಸೂರು: ಕಳೆದ ಕೆಲವು ದಿನಗಳಿಂದ ನಟಿ ಪವಿತ್ರಾ ಲೋಕೇಶ್ ಮತ್ತು ನಟ ನರೇಶ್ ನಡುವಿನ ಸಂಬಂಧದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಅಲ್ಲದೆ, ಈ ವಿಚಾರವಾಗಿ ಬಹು ಚರ್ಚೆಯು ನಡೆಯುತ್ತಿದೆ. ನರೇಶ್ ಮೂರನೇ ಪತ್ನಿ ಮಾಧ್ಯಮಗಳ ಮುಂದೆ ಬಂದು ಆರೋಪಗಳನ್ನು ಮಾಡಿದ್ದು, ಅದಕ್ಕೆ ಪ್ರತಿಯಾಗಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಸ್ಪಷ್ಟನೆಗಳನ್ನು ನೀಡಿದ್ದಾರೆ. ಇದೆಲ್ಲದರ ನಡುವೆ ಇದೀಗ ಮೈಸೂರಿನ ಹೋಟೆಲ್ ಒಂದರ ಬಳಿ ಹೈಡ್ರಾಮವೊಂದು ನಡೆದಿದೆ. ಹೋಟೆಲ್ ರೂಮಿನಿಂದ ನರೇಶ್ ಮತ್ತು …
Read More »ರಬಕವಿ-ಬನಹಟ್ಟಿ:ಕಾಣೆಯಾದ ವಕೀಲ ಶವವಾಗಿ ಪತ್ತೆ
ರಬಕವಿ-ಬನಹಟ್ಟಿ : ಕಳೆದೊಂದು ವಾರದಿಂದ ಕಾಣೆಯಾಗಿದ್ದ ಬನಹಟ್ಟಿ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ರಾಜಕುಮಾರ ಗೂಗಾಡ(46) ಶವವಾಗಿ ಪತ್ತೆಯಾಗಿದ್ದಾರೆ. ತಾಲೂಕಿನ ಚಿಮ್ಮಡ ಗ್ರಾಮದ ಗೂಗಾಡ ಕುಟುಂಬದ ಭೂಮಿಯಲ್ಲಿನ ಕಬ್ಬಿನ ಬೆಳೆಯಲ್ಲಿ ಶವ ಪತ್ತೆಯಾಗಿದೆ. ಜೂನ್ 24 ರಂದು ಬಹಿರ್ದೆಸೆಗೆಂದು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಎಲ್ಲೋ ಹೋಗಿರಬೇಕೆಂದು ಸಂಬಂಧಿಕರು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಕೊಳೆತ ಸ್ಥಿತಿಯಲ್ಲಿ ಶನಿವಾರ ಮನೆಯ ಹಿಂಭಾಗದ ಕಬ್ಬಿನ ಬೆಳೆಯಲ್ಲಿ ಕೆಟ್ಟ ವಾಸನೆ ಬರಲಾರಂಭಿಸುತ್ತಿದ್ದಂತೆ ಶೋಧ ನಡೆಸಿದ ಕುಟುಂಬಸ್ಥರಿಗೆ …
Read More »