ಬೆಂಗಳೂರು, ಜುಲೈ 1: ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಆದೇಶಕ್ಕೆ ಬದ್ಧವಾಗಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದಲ್ಲಿ ಜುಲೈ1ರಿಂದ ನಿಷೇಧ ಜಾರಿಗೊಳಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ. ಕೆಎಸ್ಪಿಸಿಬಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ನಾಗರಿಕ ಸಂಸ್ಥೆಗಳು ನಿಷೇಧವನ್ನು ಜಾರಿಗೊಳಿಸುತ್ತವೆ. ನಾವು ಮೇಲ್ವಿಚಾರಣೆ ಮಾಡುತ್ತೇವೆ. ಜುಲೈ1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ.
Read More »ಒಂದು ಬಲಿ ಪಡೆದ ಭ್ರೂಣ ಹತ್ಯೆ ಪ್ರಕರಣ: ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರ ಮೊಟಕು ಮಾಡಿದ ಡಿಸಿ
ಬೆಳಗಾವಿ- ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸಣ್ಣವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು. ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ …
Read More »ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ
ಮುಂಬೈ; ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಫಡ್ನವಿಸ್, ಶಿವಸೇನೆಯ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7:30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದರು. ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರದ …
Read More »ಮಹಾರಾಷ್ಟ್ರ ಸರ್ಕಾರ ರಚಿಸಲು ಕೂಡ ಕಾರಣ ವಾದ್ರಾ ರಮೇಶ್ ಜಾರಕಿಹೊಳಿ ?
ಮುಂಬೈ: ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ದ ನಾಯಕರ ಜೊತೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರ್ ಲ ಆಗಿವೆ , ಗೋಕಾಕ ಸಾಹುಕಾರ ಕರ್ನಾಟಕ ದಂತೆ ಮಹಾರಾಷ್ಟ್ರ ಸರ್ಕಾರ ರಚಿಸಲು ಕೂಡ ಕಾರಣವಾದರಾ ಎಂಬ ಮಾತುಗಳು ಶುರು ವಾಗಿವೆ. ಶಿವಸೇನೆಯ ಕೆಲವು ಶಾಸಕರು ಹಾಗೂ ಏಕನಾಥ ಶಿಂದೆ ಜೊತೆ ಸುಮಾರು ದಿನಗಳಿಂದ ರಮೇಶ್ ಜಾರಕಿಹೊಳಿ ಮುಂಬೈ ನಲ್ಲೇ ಠಿಕಾಣಿ ಹೂಡಿದ್ದರು. ಫಡ್ನವಿಸ ಅವರ್ ಜೊತೆ ಮುಂಚೆ ಯಿಂದಲೂ …
Read More »ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ
ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ ನಡೆದಿದೆ. ಮೇಯರ್ ಭಾಷಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ಚುನಾಯಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸಭಾಭವನದಲ್ಲಿ ಮೇಯರ್ ಭಾಷಣ ಮುಕ್ತಾಯಗೊಂಡಿದ್ದು, ಸರ್ವ ಸದಸ್ಯರು ಮೇಯರ್ ಭಾಷಣದ ಬಗ್ಗೆ ಅಭಿಪ್ರಾಯ ವ್ಯಕ್ಯಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಧ್ವನಿ ಎತ್ತಿದ ಸುವರ್ಣ ಕಲಕುಂಟ್ಲ ಅವರು, ಭಾಷಣ ಬೇಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಧ್ವನಿ ಎತ್ತೊಣ್ಣ ಎಂದು ಸಮಸ್ಯೆ ಪ್ರಸ್ತುತ ಪಡಿಸಲು ಮುಂದಾದ …
Read More »ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ
ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ …
Read More »ಬಾಳ್ ಠಾಕ್ರೆ ಪರಂಪರೆ ಮುಂದುವರೆಸಲು ಜೈಲಿಗೆ ಹೋಗಲೂ ಸಿದ್ಧ ಎಂದು ಭಾವುಕರಾದ ಸಂಸದ ರಾವುತ್!
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಮಹಾರಾಷ್ಟ್ರ ಓರ್ವ ಸಂವೇದನಾಶೀಲ ಹಾಗೂ ಸುಸಂಸ್ಕೃತ ಮುಖ್ಯಮಂತ್ರಿಯನ್ನು ಕಳೆದುಕೊಂಡಿದೆ ಎಂದು ವಿಷಾದಿಸಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ಪರಂಪರೆಯನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ ಮತ್ತು ಇದಕ್ಕಾಗಿ ಜೈಲಿಗೆ ಹೋಗಲು ಸಿದ್ಧ ಎಂದಿರುವ ರಾವುತ್, ವಿಶ್ವಾಸಘಾತುಕರಿಗೆ ಎಂದಿಗೂ ಒಳ್ಳೆಯದಾಗುವುದಿಲ್ಲ. ಇತಿಹಾಸವನ್ನು ನೋಡಿದಾಗ ಇದು ಸಾಬೀತಾಗಿದೆ ಎಂದು …
Read More »ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; : ಕತ್ತಿ
ಮೈಸೂರು: ಇತ್ತೀಚೆಗಷ್ಟೇ ಪ್ರತ್ಯೇಕ ರಾಜ್ಯದ ಬಗ್ಗೆ ಉಲ್ಲೇಖ ಮಾಡಿದ್ದ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಇದೇ ಧಾಟಿಯಲ್ಲಿ ಮಾತನಾಡಿದ್ದಾರೆ. ತನ್ನ ಹೇಳಿಕೆಯನ್ನು ಸಮರ್ಥಿನೆ ಮಾಡಿಕೊಂಡಿರುವ ಸಚಿವ ಕತ್ತಿ, ‘ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶವಿಲ್ಲ” ಎಂದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ನನ್ನ ಹಣೆಬರಹದಲ್ಲಿ ಬರೆದಿದ್ದರೆ ನಾನು ಸಿಎಂ ಆಗುತ್ತೇನೆ. ಇರುವ …
Read More »ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಬೊಲೆರೋ ಪಿಕಪ್ ವಾಹನ ರಸ್ತೆಯಲ್ಲಿ ಪಲ್ಟಿ
ಮುದ್ದೇಬಿಹಾಳ: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಬೊಲೆರೋ ಪಿಕಪ್ ವಾಹನ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ನಾಲತವಾಡ ಮುಖ್ಯ ರಸ್ತೆಯ ನಾಡಗೌಡರ ತೋಟದ ಬಳಿ ನಡೆದಿದೆ. ಘಟನೆ ಪರಿಣಾಮ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮುರಾಳ ಗ್ರಾಮದ ಅಶೋಕ ಚಲವಾದಿ, ದಾವಲಸಾಬ ಹಾದಿಮನಿ, ಭೀಮನಗೌಡ ಬಿರಾದಾರ ಗಾಯಗೊಂಡವರಾಗಿದ್ದು ಇವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ …
Read More »ಅಭಯ ಪಾಟೀಲ ಭ್ರಷ್ಟಾಚಾರ ಎಸಗಿದ್ದಾರೆ. ಅಪಾರ ಆಸ್ತಿ ಕಬಳಿಸಿದ್ದಾರೆ,:ವಿಚಾರಣೆಗೆ ಒಳಪಡಿಸಲು ಎಸಿಬಿ ಸಿದ್ಧತೆ
ಬೆಳಗಾವಿ : ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪದ ಕುರಿತು ವಿಚಾರಣೆಗೆ ಎಸಿಬಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಎಸಿಬಿ ಡಿವೈಎಸ್ಪಿ ಜೆ.ಎಂ.ಕರುಣಾಕರ ಶೆಟ್ಟಿ ಈ ಸಂಬಂಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಶಾಸಕ ಅಭಯ ಪಾಟೀಲ ಅವರ ವಿರುದ್ಧ ಭ್ರಷ್ಟಾಚಾರ ಆರೋಪದ ತನಿಖೆ ಪೂರ್ಣಗೊಂಡಿದೆ. ಅವರನ್ನು …
Read More »