Breaking News

ಬಿಜೆಪಿ ಕಾರ್ಯಕರ್ತರ ದೊಣ್ಣೆಯಿಂದ ಥಳಿಸಿದ ಟಿಎಂಸಿ ಶಾಸಕ:

ಚಿನ್ಸುರಾ(ಪಶ್ಚಿಮಬಂಗಾಳ): ಮೆರವಣಿಗೆಯಲ್ಲಿ ಕೂಗಿದ ಘೋಷಣೆಗಳಿಂದ ಕ್ರೋಧಗೊಂಡ ಟಿಎಂಸಿ ಶಾಸಕ ಮತ್ತು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಶಾಸಕರು ಬಿಜೆಪಿ ಬಾವುಟ ಅಳವಡಿಸಿದ್ದ ಕೋಲಿನಿಂದಲೇ ಅವರನ್ನು ಥಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್​ ಶಾಸಕ ಅಸಿತ್ ಮಜುಂದಾರ್ ಹಲ್ಲೆ ನಡೆಸಿದ್ದಲ್ಲದೇ, ಹಲ್ಲೆ ಪ್ರೇರೇಪಣೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಆಗಿದ್ದೇನು?: ಬಿಜೆಪಿ ಕಾರ್ಯಕರ್ತರು ಆಡಳಿತ ಪಕ್ಷದ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದರು. …

Read More »

BJP ಗೆ ಸೆಡ್ಡು ಹೊಡೆಯುತ್ತಾ ಹಿಂದೂಸ್ಥಾನ ಜನತಾ ಪಾರ್ಟಿ ಪಕ್ಷ ?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಸೆಡ್ದು ಹೊಡೆಯುವ ನಿಟ್ಟಿನಲ್ಲಿ ಹೊಸದೊಂದು ರಾಜಕೀಯ ಪಕ್ಷ ಉದಯವಾಗಲಿದ್ದು, ನಾಳೆ ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ. ವಿನಾಯಕ ಮಾಳದಕರ್ ನೇತೃತ್ವದಲ್ಲಿ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದಲ್ಲಿ ನಾಳೆ ಉದ್ಘಾಟನಾ ಸಮಾರಂಭ ನಡೆಯಲಿದೆ.   ನಾಳೆ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆ ಬಳಿಕ ಮಠಾಧೀಶರಿಂದಲೇ ಹಿಂದೂಸ್ಥಾನ ಜನತಾ …

Read More »

ತುಂಬಿ ಹರಿಯುತ್ತಿದ್ದ ಸಾತಿಹಳ ಸೇತುವೆ ಮೇಲೆ ಬಸ್‌ ಚಾಲಕನ ದುಸ್ಸಾಹಸ;

ವಿಜಯಪುರ:ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ನಿರಂತರವಾಗಿ ವರುಣ ಅಬ್ಬರದಿಂದ ಸೇತುವೆಗಳೆಲ್ಲ ತುಂಬಿ ಹರಿಯುತ್ತಿದೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಳ ಗ್ರಾಮದ ಸೇತುವೆ ಫುಲ್‌ ಜಲಾವೃತಗೊಂಡಿದೆ. ಈ ವೇಳೆ ಬಸ್‌ ಚಾಲಕನೊಬ್ಬ ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬಸ್‌ ಚಲಾಯಿಸುತ್ತಿದ್ದು, ದುಸ್ಸಾಹಸಕ್ಕೆ ಇಳಿದಿದ್ದಾನೆ. ಗ್ರಾಮದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ …

Read More »

ಮುಸ್ಲಿಂ ಮನೆಯಲ್ಲಿ ವರಮಹಾಲಕ್ಷ್ಮಿ ಸಂಭ್ರಮ

ಕೊಪ್ಪಳ ಜಿಲ್ಲೆ): ಜಿಲ್ಲೆಯ ಅಳವಂಡಿಯ ಮುಸ್ಲಿಂ ಕುಟುಂಬವೊಂದು ಹಿಂದೂ ಸಂಸ್ಕೃತಿಯ ವರಮಹಾಲಕ್ಷ್ಮಿ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಿತು. ನಜುರುದ್ದೀನ್ ಬಿಸರಳ್ಳಿ‌ ಹಾಗೂ ರಜಿಯಾಬೇಗಂ ದಂಪತಿ ಮೂರು ವರ್ಷಗಳಿಂದ ಈ ಹಬ್ಬ ಆಚರಿಸಿಕೊಂಡು ಬಂದಿದ್ದಾರೆ. ಈ ಸಲವೂ ಎಲ್ಲ ಹಿಂದೂ ಧಾರ್ಮಿಕ ಸಂಪ್ರದಾಯ ಪಾಲಿಸಿ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ಸಲುವಾಗಿ ಮನೆಗೆ ದೀಪಾಲಂಕಾರ ಮಾಡಿದ್ದರು. ಹೋಳಿಗೆ ನೈವೇದ್ಯ ಮಾಡಿ ಹಾಗೂ ವಿವಿಧ ತರಹದ ಹಣ್ಣುಗಳು ಸಮರ್ಪಿಸಿ ಭಾವೈಕ್ಯ ಮೆರೆದರು.   …

Read More »

ದರ್ಶನ್ ಜೊತೆ ನಟಿ ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಎಂಟ್ರಿ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್ ಅವರ ‘ಕ್ರಾಂತಿ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರವೊಂದರ ಮುಹೂರ್ತ ಸದ್ದಿಲ್ಲದೆ ನೆರವೇರಿದೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಈ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಲಿದ್ದಾರೆ.   ಸ್ಯಾಂಡಲ್‍ವುಡ್‍ಗೆ ‘ಕನಸಿನ ರಾಣಿ’ಯ ಪುತ್ರಿಯ ಎಂಟ್ರಿ!. ಜೊತೆಗೆ ನಾಯಕಿಯಾಗಿ ‘ಕನಸಿನ ರಾಣಿ’ ಮಾಲಾಶ್ರೀ ಪುತ್ರಿ ಸ್ಕ್ರೀನ್ ಶೇರ್ ಮಾಡಲಿದ್ದು, …

Read More »

ವಿದ್ಯುತ್​​ ಬಿಲ್​ ಹೆಚ್ಚು ಬರೋದಕ್ಕೆ ಮನೆಯಲ್ಲಿರುವ ಈ ಸಾಧನೆಗಳೇ ಕಾರಣ! ತಕ್ಷಣವೇ ಆಫ್​ ಮಾಡಿ

ಅಧಿಕ ವಿದ್ಯುತ್ ಬಿಲ್ ಜನತೆಗೆ ತಲೆನೋವಿನಂತಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮನೆಯ ವಿದ್ಯುತ್ ಬಿಲ್ ಕಡಿಮೆ ಬರಬೇಕೆಂದು ಬಯಸುತ್ತಾನೆ. ಆದರೆ ಮನೆಯಲ್ಲಿ ಹಲವಾರು ಸಾಧನಗಳ ನಿರಂತರ ಬಳಕೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಆದಾಗ್ಯೂ, ಕೆಲವು ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ, ವಿದ್ಯುತ್ ಬಿಲ್ ಅನ್ನು ನೀವು ಕಡಿತಗೊಳಿಸಬಹುದು. ನೀವು ಸಹ ವಿದ್ಯುತ್ ಬಿಲ್ನಿಂದ ತೊಂದರೆಗೀಡಾಗಿದ್ದರೆ ಮತ್ತು ಮನೆಯ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡಲು ಬಯಸಿದರೆ, ನಿಮ್ಮ ಮನೆಯಲ್ಲಿ ಹೆಚ್ಚು ವಿದ್ಯುತ್ ಬಳಸುವ …

Read More »

ಎಸಿಬಿ ವಿಚಾರಣೆಗೆ ಹಾಜರಾದ ಜಮೀರ್ ಅಹಮದ್

ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಎಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆ ನೋಟಿಸ್ ನೀಡಿದ್ದ, ಹಿನ್ನೆಲೆಯಲ್ಲಿ ತನಿಖಾಧಿಕಾರಿ ಎಸಿಬಿ ಡಿವೈಎಸ್​ಪಿ ರವಿಶಂಕರ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ‌. ಕಳೆದ ಜುಲೈ 5 ರಂದು ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಫ್ಲ್ಯಾಟ್​ಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಅಕ್ರಮ ಆಸ್ತಿ …

Read More »

600 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಿಂದ ರಸ್ತೆ, ಒಳಚರಂಡಿ ನಿರ್ಮಾಣ ಮಾಡಿದರೂ ಅದು ಸರಿಯಾಗಿಲ್ಲ:A.A.P.

ಬೆಳಗಾವಿ ಸ್ಮಾರ್ಟ್ ಸಿಟಿಯು ಮಹತ್ವದ ವಿಶ್ವಸಂಸ್ಥೆ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅರ್ಬನ್ ಅಫೆಸ್ 9 ಏರ್ಪಡಿಸಿದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿರುವುದು ಯಾವ ಮಾನದಂಡದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ತಂಡವನ್ನು ಬೆಳಗಾವಿಗೆ ಕಳುಹಿಸಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಪರಿಶೀಲನೆ ನಡೆಸಬೇಕು ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಆಗ್ರಹಿಸಿದ್ದಾರೆ. ಶನಿವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್‍ಕುಮಾರ್ ಟೋಪಣ್ಣವರ್ ರವರು, …

Read More »

ಲೋಡ್ ತುಂಬಿದ ಲಾರಿಯಿಂದ ಕುಸಿದ ನಾಲಾ ಬ್ರಿಡ್ಜ್

ಲೋಡ್ ಲಾರಿಯೊಂದು ನಾಲಾ ಬ್ರಿಡ್ಜ್ ಬಳಿ ಸಾಗುತ್ತಿದ್ದ ಸಂದರ್ಭದಲ್ಲಿ ನಾಲಾ ಕುಸಿದುಗೊಂಡ ಘಟನೆ ಹುಬ್ಬಳ್ಳಿಯ ತುಮಕೂರು ಓಣಿ ನಾಲಾ ಬ್ರಿಡ್ಜ್ ಬಳಿ ನಡೆದಿದೆ. ಹುಬ್ಬಳ್ಳಿಯ ವಾರ್ಡ್ ನಂ. 65 ರಲ್ಲಿ ಬರುವ ತುಮಕೂರ ಓಣಿಯಲ್ಲಿ ಲೋಡ್ ಲಾರಿಯಿಂದ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ಲಾರಿಯ ಭಾರವನ್ನು ತಾಳಲಾರದೆ ಕುಸಿದು ಸಿಕ್ಕಾಕಿಕೊಂಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು …

Read More »

ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕರಿಗೆ ತಿಳುವಳಿಕೆ ನೀಡುವುದು ಅತ್ಯವಶ್ಯ- ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಳೇಶ್ವರ್..!!

ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಕುರಿತು ಗ್ರಾಹಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ಕಾರ್ಯಮಾಡುತ್ತಿದೆ ಎಂದು ಬ್ಯಾಂಕ್‍ನ ಎಂಡಿ ಮಹಾಬಳೇಶ್ವರ್ ರವರು ತಿಳಿಸಿದ್ದಾರೆ. : ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. …

Read More »