Breaking News

ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್​ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?

ಕೊಚ್ಚಿ: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಆದರೆ, ಎಲ್ಲಾ ವೈದ್ಯರು ಬರವಣಿಗೆ ಅಸ್ಪಷ್ಟವಾಗಿರುತ್ತದೆ ಎಂದು ಸಾಮಾನ್ಯೀಕರಿಸಲು ಸಾಧ್ಯವಿಲ್ಲ. ಏಕೆಂದರೆ, ಇಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ …

Read More »

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಖಾರಿಫ್ ಋತುವಿನಲ್ಲಿ ಕಡಿಮೆ ಇಳುವರಿ, ರಫ್ತು ಇತರೆ ಕಾರಣದಿಂದ ಅಕ್ಕಿ ಬೆಲೆ ಏರಿಕೆ ಮುಂದುವರೆಯಬಹುದು ಎಂದು ಹೇಳಲಾಗಿದೆ. ರಫ್ತು ನೀತಿಯಲ್ಲಿ ಬದಲಾವಣೆ ಆಹಾರ ಸಚಿವಾಲಯ ನೀಡಿದ ಮಾಹಿತಿಯಲ್ಲಿ, ಭಾರತದ ಅಕ್ಕಿ ರಫ್ತು ನೀತಿಯಲ್ಲಿ ಇತ್ತೀಚಿನ ತಿದ್ದುಪಡಿಗಳ ಹಿಂದಿನ ವಿವರವಾದ ಕಾರಣಗಳನ್ನು ವಿವರಿಸಲಾಗಿದೆ. ಭಾರತದ ಅಕ್ಕಿ ರಫ್ತು ನಿಯಮಗಳಲ್ಲಿ ಇತ್ತೀಚಿನ ಬದಲಾವಣೆಗಳು ರಫ್ತಿಗೆ ಲಭ್ಯತೆಯನ್ನು ಕಡಿಮೆ ಮಾಡದೆ “ದೇಶೀಯ ಬೆಲೆಗಳನ್ನು …

Read More »

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿ ಪೊಲೀಸ್​​ ವಶಕ್ಕೆ

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಯುವಕರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಜಿಲ್ಲೆಯ ‌ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಹೋಂ ಗಾರ್ಡ್ ಶಾಂತೇಶ್ ಕೊರ್ತಿ ಎಂಬಾತ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ. ಹಣ ನೀಡುವುದಾಗಿ ಕರೆಸಿದ ಯುವಕರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀಕಾಂತ್​ ಎಂಬುವವರ ಬಳಿ ಹಣ ಪಡೆಯಲು ಶಾಂತೇಶ್ ಕೊರ್ತಿ ಬಂದಿದ್ದ. …

Read More »

ಕಾಂಗ್ರೆಸ್ ‘ಪೇ ಸಿಎಂ’ ಬಾಣಕ್ಕೆ ಬಿಜೆಪಿಯಿಂದ ‘ಸ್ಕ್ಯಾಮ್‌ ರಾಮಯ್ಯ’ ಪ್ರತಿಬಾಣ

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿದ್ದ ಕಾಂಗ್ರೆಸ್ ಈಗ ” ಪೇಸಿಎಂ” ಎಂಬ ವಿಶಿಷ್ಟ ಅಭಿಯಾನ ಆರಂಭಿಸಿದ್ದು, ಬಿಜೆಪಿ ‘ಸ್ಕ್ಯಾಮ್‌ ರಾಮಯ್ಯ’ ಎಂದು ತಿರುಗೇಟು ನೀಡುತ್ತಿದೆ. ಬೆಂಗಳೂರಿನ ಆಯಕಟ್ಟಿ‌ನ ಸ್ಥಳಗಳಲ್ಲಿ “ಪೇಸಿಎಂ” ಪೋಸ್ಟರ್ ಅಂಟಿಸಿ, ಸಾಮಾಜಿಕ ಜಾಲತಾಣದಲ್ಲೂ ” ಪೇಸಿಎಂ” ಅಭಿಯಾನ ತೀವ್ರಗೊಳಿಸಿತ್ತು. ಪ್ರತಿಯಾಗಿ ಬಿಜೆಪಿ ಹೋರಾಟಕ್ಕಿಳಿದು ಸಿದ್ದರಾಮಯ್ಯ ವಿರುದ್ಧ ಸಮರ ಸಾರಿದೆ.   ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ‘ಸ್ಕ್ಯಾಮ್‌ ರಾಮಯ್ಯ’ …

Read More »

ಮಠಮಾನ್ಯಗಳಿಗೆ ಅನುದಾನ ನೀಡುವುದನ್ನು ಸರ್ಕಾರ ಬಿಡಲಿ: ಮರಿತಿಬ್ಬೇಗೌಡ

ವಿಧಾನಪರಿಷತ್ತು: ಸರ್ಕಾರ ದೇವಾಲಯ, ಪ್ರತಿಮೆ, ಮಠಗಳಿಗೆ ಹಾಗೂ ಜಾತಿ ಸಂಘಟನೆಗಳಿಗೆ ಸಾವಿರಾರು ಕೋಟಿ ರೂ.ಅನುದಾನ ನೀಡುವುದನ್ನು ಮೊದಲು ನಿಲ್ಲಿಸಲಿ. ಆ ಹಣವನ್ನು ಪ್ರವಾಹ ಸಂತ್ರಸ್ತರಿಗೆ ಬಳಕೆ ಮಾಡಿಕೊಳ್ಳಲಿ ಎಂದು ಜೆಡಿಎಸ್‌ನ ಮರಿತಿಬ್ಬೇಗೌಡ ಸರ್ಕಾರಕ್ಕೆ ಮನವಿ ಮಾಡಿದರು.   ನಿಯಮ 68ರ ಅಡಿಯಲ್ಲಿ ನಡೆದ ಅತಿವೃಷ್ಠಿ ಚರ್ಚೆಯ ವೇಳೆ ಮಾತನಾಡಿದ ಅವರು ಸರ್ಕಾರ ಈಗಾಗಲೇ ಮಠಗಳಿಗೆ ಮತ್ತು ಜಾತಿ ಸಂಘ-ಸಂಸ್ಥೆಗಳಿಗೆ ಕೋಟ್ಯಾಂತ ರೂ. ಅನುದಾನ ನೀಡುತ್ತಿದೆ. ಸರ್ಕಾರದ ಈ ನಡೆ ಸಂವಿಧಾನ ವಿರೋಧಿಯಾಗಿದೆ …

Read More »

ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ: ಕುಮಾರಸ್ವಾಮಿ

ಬೆಂಗಳೂರು: ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ ಅನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸುವಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಶಾಮೀಲಾಗಿದ್ದು, ಹಣಕಾಸಿನ ಅವ್ಯವಹಾರವೂ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗುರುವಾರ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದರು. ಇದೀಗ ನಾನು ಹೊಡೆದ ಗುಂಡನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. …

Read More »

ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ: ಶಿವನಗೌಡ ಪಾಟೀಲ

ಬೆಳಗಾವಿ: ಕೃಷಿ ಕಾರ್ಮಿಕರ ಮಕ್ಕಳಿಗೆ ಇದು ಸಂತಸದ ಸುದ್ದಿ. ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ‘ಮುಖ್ಯಮಂತ್ರಿ ರೈತ ವಿದ್ಯಾವಿಧಿ’ ಯೋಜನೆ ವಿಸ್ತರಿಸಲಾಗಿದೆ. ‍ಹಿಂದೆ ತಂದೆ- ತಾಯಿ ಅಥವಾ ಅಜ್ಜ- ಅಜ್ಜಿ ಹೆಸರಿನಲ್ಲಿ ಹೊಲ ಇದ್ದವರು ಮಾತ್ರ ಅರ್ಹರಾಗಿದ್ದರು. ಪ್ರಸಕ್ತ (2022-23) ವರ್ಷದಿಂದ ಕೃಷಿ ಕಾರ್ಮಿಕರ ಮಕ್ಕಳೂ ಈ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು. ರಾಜು ಕಡಕೋಳ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ …

Read More »

ಜಾತಿ ನಿಂದನೆ ಆರೋಪದಲ್ಲಿ ಸುಳ್ಳು ದೂರು ದಾಖಲಿಸಿದ್ರೆ ಬೀಳುತ್ತೆ ದಂಡ!

ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ನಗರದ ಅಪಾರ್ಟ್ಮೆಂಟ್‌ವೊಂದರ ನಿವಾಸಿಗಳ ಸಂಘದ ಪದಾಧಿಕಾರಿಗಳ ವಿರುದ್ಧ ಸುಳ್ಳು ದೂರು ದಾಖಲಿಸಿದ್ದ ವ್ಯಕ್ತಿಗೆ ಹೈಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ.       ಬೆಂಗಳೂರು ನಗರದ ಕೈಲಾಶ್ ಅಪಾರ್ಟ್ಮೆಂಟ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅರುಣ ಕಣ್ಣೂರು, ಸಂಘದ ಕಾರ್ಯದರ್ಶಿ ರಾಮಲಿಂಗಯ್ಯ ಮತ್ತು ಅಪಾರ್ಟ್ಮೆಂಟ್ ನಿವಾಸಿಯಾಗಿರುವ ಬಿ.ಎನ್. ಅಭಿಷೇಕ್ ಅವರ ವಿರುದ್ಧದ ಅದೇ ಅಪಾರ್ಟ್ಮೆಂಟ್ …

Read More »

P.D.O.ಗಳ ಮುಂಭಡ್ತಿಗೆ ಶೀಘ್ರ ಕ್ರಮ: C.M.

ಬೆಂಗಳೂರು: ರಾಜ್ಯದಲ್ಲಿ 12 ವರ್ಷಗಳಿಂದ ಪದೋನ್ನತಿ ಇಲ್ಲದೆ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳ ಮುಂಭಡ್ತಿಗೆ ಶೀಘ್ರ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಗುರುವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಅವರ ಪ್ರಶ್ನೆಗೆ ಲಿಖೀತ ರೂಪದಲ್ಲಿ ಪ್ರತಿಕ್ರಿಯಿಸಿದ ಅವರು, ಪಿಡಿಒಗಳು ಸುಮಾರು 12 ವರ್ಷಗಳಿಂದ ಒಂದೇ ಹುದ್ದೆಯಲ್ಲಿರುವುದು ಸರಕಾರದ ಗಮನಕ್ಕೆ ಬಂದಿದೆ. ಅವರನ್ನು ಸಹಾಯಕ ನಿರ್ದೇಶಕ ಹುದ್ದೆಗೆ ಭಡ್ತಿಗೊಳಿಸಲು ಶೀಘ್ರ …

Read More »

ಪೇ ಸಿಎಂ’ ಅಧಿಕೃತಗೊಳಿಸಲು ಮುಂದಾದ ರಾಜ್ಯ ಸರ್ಕಾರ

ವಿಧಾನ ಪರಿಷತ್ತು: ಕೇವಲ ಒಂದು ದಿನದ ಹಿಂದೆ ತೀವ್ರ ಸದ್ದು ಮಾಡಿದ್ದ “ಪೇ ಸಿಎಂ’ ಅನ್ನು ಈಗ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ! ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ “ಪೇ ಸಿಎಂ’ ಡಿಜಿಟಲ್‌ “ಪೇ ಟು ಚೀಫ್ ಮಿನಿಸ್ಟರ್‌ ರಿಲೀಫ್ ಫ‌ಂಡ್‌ (ಸಿಎಂಆರ್‌ಎಫ್) ಎಂಬ ಡಿಜಿಟಲ್‌ ಆಯಪ್‌ ಅಭಿವೃದ್ಧಿಪಡಿಸಿ, ಆ ಮೂಲಕ ಅಧಿಕೃತಗೊಳಿಸಲು ಮುಂದಾಗಿದೆ. ಇದರೊಂದಿಗೆ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ ಇದಾಗಿದೆ ಎಂದು ಮೂಲಗಳು ತಿಳಿಸಿವೆ. “ಪೇ ಸಿಎಂ’ …

Read More »