ಬೆಂಗಳೂರು: ‘ಪಠ್ಯಪುಸ್ತಕದಲ್ಲಿ ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಈ ಹಿಂದೆ ಇದ್ದಂತೆಯೇ ಮತ್ತೆ ಪ್ರಕಟಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಖಿತ ಸೂಚನೆ ನೀಡಿದ್ದಾರೆ. ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಕನಕದಾಸರ ಜೀವನ ಚರಿತ್ರೆ ಮತ್ತು ವಿವರಗಳನ್ನು ಕಡೆಗಣಿಸಿದೆ ಎಂದು ಸ್ವಾಮೀಜಿ ಹೇಳಿದರು. ಒಂಬತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ …
Read More »ಬಡವರ ಕಲ್ಯಾಣ ಕೇಂದ್ರ ಸರ್ಕಾರದ ಆಶಯ: ಸಚಿವ ಸೋಮ ಪ್ರಕಾಶ
ಬೆಳಗಾವಿ: ಕೇಂದ್ರ ಸರ್ಕಾರವು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಬಡವರು ಹಾಗೂ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ದೇಶವು ಆರ್ಥಿಕ ಪ್ರಾಬಲ್ಯದತ್ತ ದಾಪುಗಾಲು ಹಾಕುತ್ತಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವ ಸೋಮ ಪ್ರಕಾಶ ಹೇಳಿದರು. ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಆಯೋಜಿಸಿದ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ …
Read More »ಪೀರನವಾಡಿಯಲ್ಲಿ ವರ್ಷದೊಳಗೆ ಬಯಲು ರಂಗಮಂದಿರ ನಿರ್ಮಾಣ: ಶಾಸಕ ಅಭಯ ಪಾಟೀಲ ಭರವಸೆ
ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ ಎಂದು ದಕ್ಷಿಣ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು. ತಾಲ್ಲೂಕಿನ ಪೀರನವಾಡಿಯಲ್ಲಿ ಸೋಮವಾರ ನಡೆದ ಗಾಂಧಿ ಭವನ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಆ ಐತಿಹಾಸಿಕ ಕ್ಷಣಕ್ಕೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ …
Read More »ಹುಬ್ಬಳ್ಳಿ: ಬಾಡಿಗೆ ಜಾಗದಲ್ಲಿ ವಾಸ ಮಾಡಿ, ಅಲ್ಲಿಯೇ ಗುಡಿ ಕಟ್ಟಿದ ಇನ್‌ಸ್ಪೆಕ್ಟರ್
ಹುಬ್ಬಳ್ಳಿ: ಸ್ವಂತ ಜಾಗದಲ್ಲಿಯೂ ಸ್ಥಳೀಯ ಆಡಳಿತದಿಂದ ಅನುಮತಿಯಿಲ್ಲದೆ ಚಿಕ್ಕ ಕಟ್ಟಡ ನಿರ್ಮಿಸಲು ಸಹ ಅವಕಾಶವಿಲ್ಲ. ಬಾಡಿಗೆ ಜಾಗದಲ್ಲಿ ವಾಸ ಮಾಡಿ, ಅಲ್ಲಿಯೇ ಒಂದು ಗುಡಿ ಕಟ್ಟುತ್ತಾರೆ ಅಂದರೆ? ಅದರಲ್ಲೂ, ಕಾನೂನು ಪಾಲನೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಗುಡಿಯನ್ನು ಅಕ್ರಮವಾಗಿ ನಿರ್ಮಿಸುತ್ತಾರೆಂದರೆ..! ಇಂತಹದ್ದೊಂದು ಕಾನೂನು ಬಾಹಿರ ಕೃತ್ಯ ಗೋಕುಲ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ಅವರಿಂದ ನಡೆದಿದೆ. ಕಳೆದ ನಲವತ್ತು ವರ್ಷಗಳಿಂದ ಗೋಕುಲ ಪೊಲೀಸ್ ಠಾಣೆ ಸಣ್ಣ ಮತ್ತು ಮಧ್ಯಮ …
Read More »ಬಂಟ್ವಾಳ: ಪೊಲೀಸರಿಗೆ ದೂರು ನೀಡಿದ್ದಕ್ಕೆ ಸಿಟ್ಟು… ಹಾಡಹಗಲೇ ಮಹಿಳೆಗೆ ಇರಿದು ಕೊಂದ
ಬಂಟ್ವಾಳ(ದಕ್ಷಿಣ ಕನ್ನಡ): ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್ ಮಹಿಳೆಯ ಮನೆ ಬಳಿ …
Read More »ದುಬಾರಿ ದುನಿಯಾದಲ್ಲಿ ಜನತೆಗೆ ಮತ್ತೊಂದು ಬರೆ, ಜು. 1 ರಿಂದ ವಿದ್ಯುತ್ ದರ ಏರಿಕೆ ಶಾಕ್
ಬೆಂಗಳೂರು: ಪೆಟ್ರೋಲ್, ಡೀಸೆಲ್, ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್ , ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಜುಲೈ 1 ರಿಂದ ಮತ್ತೊಂದು ಬರೆ ಬೀಳಲಿದೆ. ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ. ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕರಣೆ …
Read More »ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯಧನ; ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕಾಶಿ ಯಾತ್ರೆ’ಗೆ ಸೋಮವಾರ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ …
Read More »ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ನೇರವಾಗಿ ಮನೆಗೆ ತಲುಪುತ್ತದೆ ಡ್ರೈವಿಂಗ್ ಲೈಸೆನ್ಸ್
ನೀವು ಡ್ರೈವಿಂಗ್ ಲೈಸೆನ್ಸ್ (Driving Licence) ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ ನೀವು ಆನ್ಲೈನ್ನಲ್ಲಿ ಸಹ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ನೇರವಾಗಿ ಮನೆಗೆ ತಲುಪುತ್ತದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿಯಲ್ಲಿ ಆನ್ಲೈನ್ ಸೌಲಭ್ಯವನ್ನು ಸಹ ಪ್ರಾರಂಭಿಸಿದೆ. ಡಿಎಲ್ ಮಾಡಲು ಮೊದಲು ನೀವು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಒಂದು ಸಣ್ಣ ಪರೀಕ್ಷೆ ಇದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ನೀವು ಕಲಿಕೆಯ ಚಾಲನಾ …
Read More »ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ
ಹುಬ್ಬಳ್ಳಿ : ಯುವಕನೋರ್ವ ಪ್ರೇಮ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೊಟ್ರೇಶ್ ಮಠಪತಿ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕನಾಗಿದ್ದ ಕೊಟ್ರೇಶ್ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಬೇರೆ ಹುಡುಗನ ಜೊತೆ ಮದುವೆ ನಿಶ್ಚಯವಾಗಿದೆ. ಇದರಿಂದ ಮನನೊಂದು ಕೊಟ್ರೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ …
Read More »ಇನ್ಮುಂದೆ ಸುಖಾಸುಮ್ಮನೆ ವಾಹನ ನಿಲ್ಲಿಸಿ ದಾಖಲೆ ಪರಿಶೀಲಿಸುವಂತಿಲ್ಲ
ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್ ಪೊಲೀಸರು ಏಕಾಏಕಿ ಕೈ ಅಡ್ಡ ಹಾಕಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್ ಜಾಮ್ ಆಗುತ್ತಿತ್ತಲ್ಲದೇ ಸವಾರರೂ ಸಹ ಕಿರಿಕಿರಿ ಅನುಭವಿಸುವಂತಾಗಿತ್ತು. ತುರ್ತಾಗಿ ಎಲ್ಲದರೂ ಹೋಗಬೇಕಿದ್ದವರು ತಮ್ಮ ವಾಹನ ಅಡ್ಡಗಟ್ಟಿದ ವೇಳೆ ದಾಖಲೆಗಳು ಸರಿಯಾಗಿದ್ದರೂ ಸಹ ತಮ್ಮ ಸರದಿ ಬರುವವರೆಗೂ ಕಾಯಬೇಕಾಗಿತ್ತು. ಇದರಿಂದ ರೋಸತ್ತು ಹೋಗಿದ್ದ ಸಾರ್ವಜನಿಕರು, ಉನ್ನತಾಧಿಕಾರಿಗಳಿಗೆ ಪದೇ ಪದೇ ದೂರು ಸಲ್ಲಿಸುತ್ತಿದ್ದರು. ಇದೀಗ ಈ ಸಮಸ್ಯೆಗೆ ಅಂತ್ಯ ಹಾಡಲು ಡಿಜಿ …
Read More »