Breaking News

ಡಿಸಿ ಕಚೇರಿ ಮುಂಭಾಗ ಎಂಇಎಸ್​ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳಗಾವಿ: ಸರ್ಕಾರಿ ದಾಖಲಾತಿ ಪತ್ರವನ್ನು ಮರಾಠಿ ಭಾಷೆಯಲ್ಲಿ ನೀಡಬೇಕೆಂದು ಒತ್ತಾಯಿಸಿ ಎಂಇಎಸ್ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ನಗರದ ಸರ್ದಾರ್ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟ ಪ್ರದರ್ಶಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಎಂಇಎಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು. ಈ ವೇಳೆ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯ …

Read More »

PUC ಪಾಸಾದವರಿಗೆ ಗುಡ್ ನ್ಯೂಸ್: SDA ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟಿಸಲಾಗಿದ್ದು, 155 SDA ಹುದ್ದೆಗಳ ನೇಮಕಾತಿಗೆ ಜುಲೈ 11 ರಿಂದ ಆಗಸ್ಟ್ 10 ರ ವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.   ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿ ನಡೆಸುವ …

Read More »

ತನ್ನ ಹೇಳಿಕೆಯಿಂದ U ಟರ್ನ್ ಹೊಡೆದ ಕತ್ತಿ

ಚಿಕ್ಕೋಡಿ:2024ರ ಬಳಿಕ ಕರ್ನಾಟಕದಲ್ಲಿ ಎರಡು ರಾಜ್ಯ ಹಾಗೂ ದೇಶದಲ್ಲಿ 50 ರಾಜ್ಯಗಳು ನಿರ್ಮಾಣ ಆಗುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಸಚಿವ ಉಮೇಶ ಕತ್ತಿ ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಪದೇ ಪದೇ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಆಗುತ್ತದೆ ಎಂದು ಹೇಳಿಕೆ ನೀಡುತ್ತಲೇ ಬಂದಿದ್ದ ಉಮೇಶ ಕತ್ತಿ ಇದೀಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿದ್ದು, ಭಾನುವಾರ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜ್ಯ ಸೇರಿ …

Read More »

ಅಸ್ಸಾಂನಿಂದ 40 ಶವಗಳು ಹಿಂದಿರುಗಲಿವೆ’ ನೇರವಾಗಿ ಶವಾಗಾರಕ್ಕೆ ಕಳುಹಿಸಲಾಗುವುದು’

ಖುರ್ಚಿಗಾಗಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಶಿವಸೇನಾ ಸಂಸದ ನಿರಂತರ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ರಾವುತ್ ನೇತೃತ್ವದಲ್ಲಿ ಶಿವಸೇನಾ ಮುಖನರು ಬಂಡೆದ್ದ ಶಾಸಕರ ಮೇಲೆ ನಿರಂತರ ವಾಗ್ದಾಳಿ ಮುಂದುವರೆಸಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸುಪ್ರಿಮೋ ಶರದ್ ಪವಾರ್ ಅವರು ಮಹಾವಿಕಾಸ್ ಆಘಾಡಿ ಶಾಸಕರ ಜೊತೆಗೆ ಮುಚ್ಚಿದ ಬಾಗಿಲುಗಳ ಹಿಂದೆ ನಿರಂತರ ಸಭೆ ನಡೆಸುತ್ತಿದ್ದಾರೆ. ಇಂದು ಮುಂಬೈ ಮತ್ತು ಪುಣೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸತತ ಎರಡನೇ ದಿನವಾದ ಇಂದೂ ಕೂಡ …

Read More »

ಕೆಎಎಸ್‌ ಹುದ್ದೆಗಾಗಿ ಇಲ್ಲ ಐದು ವರ್ಷ ಪರೀಕ್ಷೆ: ಆಕಾಂಕ್ಷಿಗಳಲ್ಲಿ ಹತಾಶೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2017ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ಮುಖ್ಯಪರೀಕ್ಷೆ ನಡೆಸಿ 15 ತಿಂಗಳು ಕಳೆದಿವೆ. 2021ರ ಫೆಬ್ರುವರಿಯಲ್ಲಿ ನಡೆದ ಆ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟಿಸಿಲ್ಲ. ಇನ್ನೊಂದೆಡೆ, ಐದು ವರ್ಷ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಸದ ರಾಜ್ಯ ಸರ್ಕಾರದ ನಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಹತಾಶೆ ಮೂಡಿಸಿದೆ. 2018, 2019, 2020, 2021, 2022- ಈ ಐದು ಸಾಲುಗಳಲ್ಲಿ ಕೆಪಿಎಸ್‌ಸಿ ಪರೀಕ್ಷೆಗಳು ನಡೆದಿರಲಿಲ್ಲ. …

Read More »

ನಗ್ನ ಜಾಲದಲ್ಲಿ ತೊಳಲಾಡುತ್ತಿರುವ 15 ಮಂದಿ ಪುರುಷರು!

ಬೀದರ್‌: ವೀಡಿಯೋ ಕಾಲ್‌ನಲ್ಲಿ ಸಂಪರ್ಕ ಸಾಧಿಸಿರುವ ಯುವತಿಯರ ಮಾತಿಗೆ ಮರುಳಾಗಿ ನಗ್ನ ದೇಹ ಪ್ರದರ್ಶಿಸಿ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ 15ಕ್ಕೂ ಹೆಚ್ಚು ಮಂದಿ ಈಗ ಪೊಲೀಸರಿಗೆ ದೂರು ನೀಡಿದ್ದಾರೆ. ಪಶ್ಚಿಮ ಬಂಗಾಲ, ರಾಜಸ್ಥಾನ ಮತ್ತು ಝಾರ್ಖಂಡ್‌ ಸಹಿತ ಉತ್ತರ ಭಾರತದಲ್ಲಿ ಇಂಥ ಸೈಬರ್‌ ಜಾಲಗಳು ವ್ಯಾಪಕವಾಗಿ ಹರಡಿಕೊಂಡಿದ್ದು, ಮುಖ್ಯವಾಗಿ ರಾಜಕಾರಣಿ, ಉದ್ಯಮಿ ಹಾಗೂ ಇತರ ಪ್ರಭಾವಿಗಳಿಗೇ ಗಾಳ ಹಾಕಲಾಗುತ್ತಿದೆ.   ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ನಕಲಿ ಅಕೌಂಟ್‌ಗಳ ಮೂಲಕ ಯುವಕರನ್ನು ಪರಿಚ ಯಿಸಿಕೊಂಡು …

Read More »

ಶಿವಸೇನೆ-ಬಿಜೆಪಿ ಮೈತ್ರಿ ಸುಳಿವು ಕೊಟ್ಟ ಕರ್ನಾಟಕದ ಸಚಿವ!

ಬೆಳಗಾವಿ ಜೂ. 26: “ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಆಗಲಿದೆ. ಅದು ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ಮೈತ್ರಿ ಮೂಲಕ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಸಚಿವರು, “ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಕಾಂಗ್ರೆಸ್, ಶಿವಸೇನೆ ಮೂರು ಪಕ್ಷಗಳು ಒಟ್ಟಾದವು. ಆದರೆ ಈ ಸರ್ಕಾರ ಬಹುದಿನಗಳವರೆಗೂ ಸಾಗುವ ಅನುಮಾನ ಈ …

Read More »

ಧಾರವಾಡದಲ್ಲಿ ಬೈಕ್​-ಕಾರು ಅಪಘಾತ: ಮೂವರ ಸಾವು

ಧಾರವಾಡ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಪ್ರಯಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಸುಶೀಲವ್ವ ಹರಿಜನ, ಕಲ್ಲವ್ವ ಹರಿಜನ ಹಾಗೂ ರಾಜು ಎಂಬುವರು ಮೃತರು. ಸುಶೀಲವ್ವ ಮತ್ತು ಕಲ್ಲವ್ಬ ಬೊಗೂರ ಗ್ರಾಮದವರಾಗಿದ್ದು, ರಾಜು ತಿಗಡೊಳ್ಳಿ ನಿವಾಸಿಯಾಗಿದ್ದಾರೆ. ಮೃತ ಮಹಿಳೆಯರು ಧಾರವಾಡಕ್ಕೆ ನೇರಳೆ ಹಣ್ಣು ಮಾರಲು ಬಂದಿದ್ದರು ಎನ್ನಲಾಗುತ್ತಿದೆ. ಕಾರಿನವರು ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಗರಗ ಪೊಲೀಸ್​​ ಠಾಣೆ …

Read More »

SS.L.C. ಪೂರಕ ಪರೀಕ್ಷೆ ಇಂದಿನಿಂದ ಆರಂಭ

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು …

Read More »

2023ರ ಸಿ. ಎಂ. ನಾನೇ: H.D.K.

2023ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ವಿಚಾರ: ರಾಜ್ಯದಲ್ಲಿ ನೊಂದವರನ್ನು ರಕ್ಷಿಸಲು ಮತ್ತೊಮ್ಮೆ ಸಿಎಂ ಆಗುವ ವಿಶ್ವಾಸ ಇದೆ. ಬಡವರಿಗಾಗಿ ಮತ್ತೊಂದು ಬಾರಿ ಸಿಎಂ ಆಗಲು ದೇವರ ಆಶೀರ್ವಾದ ಇದೆ. ಬಡವರಿಗಾಗಿ ಅಧಿಕಾರ ಹಿಡಿಯುವ ಇಚ್ಛೆಯಿದೆ. ಯಾರೇ ಏನೇ ಹೇಳಲಿ. ಜೆಡಿಎಸ್ ಪಕ್ಷ ಮುಗಿಸಿದ್ದೇವೆ. ತಲೆ ಎತ್ತಲು ಬಿಡಲ್ಲ ಅಂತ ಹೇಳಲಿ. ಯಾರೇ ಹೇಳಿದರೂ ಮೇಲೋಬ್ಬ ಇದ್ದಾನೆ. ಅವನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ಪಂಚರತ್ನ ಯಾತ್ರೆ: ಈ ಬಾರಿ ಜೆಡಿಎಸ್​ಅನ್ನು ಅಧಿಕಾರಕ್ಕೆ …

Read More »