Breaking News

ಅಗೆದಷ್ಟೂ, ಬಗೆದಷ್ಟೂ ಪತ್ತೆಯಾಗ್ತಿವೆ ಭ್ರೂಣಗಳ ಚರಿತ್ರೆ- ಬೆಳಗಾವಿಯ ಆಸ್ಪತ್ರೆಗಳ ಭಯಾನಕ ಕಥೆಗಳು ಬೆಳಕಿಗೆ..!

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಜೂನ್. 23ರ ರಾತ್ರಿ ಐದು ಬಾಟಲ್‌ಗಳಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು, ಜನರಲ್ಲಿ ಭಾರಿ ಆತಂಕ ಮೂಡಿಸಿದ್ದವು. ಕೊನೆಗೆ ತನಿಖೆ ಕೈಗೊಂಡಿದ್ದ ಅಧಿಕಾರಿಗಳಿಗೆ ಇವು ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್​ಗಳ ಕೃತ್ಯ ಎನ್ನುವುದು ತಿಳಿದಿತ್ತು. ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳು ಇವಾಗಿದ್ದು, ಪೊಲೀಸರ ದಾಳಿ ಭೀತಿಯಿಂದ ರಾತ್ರೋರಾತ್ರಿ ಏಳು ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದೆವು ಎಂದು ತಪ್ಪೊಪ್ಪಿಕೊಂಡಿದ್ದರು ಸಿಬ್ಬಂದಿ. ಇದರ ಬೆನ್ನಲ್ಲೇ …

Read More »

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ

ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ …

Read More »

ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು

ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಏಕೀಕರಣ ನಡೆದ ಹೋರಾಟವನ್ನು ಉಮೇಶ ಕತ್ತಿ ನೆನಪಿಸಿಕೊಳ್ಳಲ್ಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಬಿಜೆಪಿಯವರು ಯಾರು ಖಂಡಿಸುತ್ತಾರೋ ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದರು. ಏಕೀಕರಣ ಹೋರಾಟ ಉದ್ದೇಶ ಸಹಬಾಳ್ವೆ. ಏಕೀಕರಣ ಉದ್ದೇಶ ಮರೆತು …

Read More »

ತಪ್ಪಿನ ಅರಿವಾಗಿ ಮತ್ತೆ ಮೂರು ಮಕ್ಕಳೊಂದಿಗೆ ಗರ್ಭಿಣಿ ಪತ್ನಿಯನ್ನು ಮನೆತುಂಬಿಸಿಕೊಂಡ ಪತಿ…

ಮನೆಯವರ ವಿರೋಧ ಕಟ್ಟಿಕೊಂಡು ಪ್ರೇಮವಿವಾಹವಾದ ಬಳಿಕ ೩ ಮಕ್ಕಳ ಗರ್ಭವತಿ ಅನುಭವಿಸಿದ್ದು ಅಷ್ಟೀಷ್ಟಲ್ಲ. ಕೊನೆಗೂ ಆಕೆಯ ಗಂಡನನ್ನು ಹುಡುಕಿ ಆ ಪ್ರೇಮಿಗಳನ್ನು ಒಂದು ಮಾಡಲಾಗಿದೆ. ಅಷ್ಟಕ್ಕೂ ಆ ದಂಪತಿಗಳಾರು … ಅವರನ್ನು ಒಂದುಗೂಡಿಸಿದ್ದಾದರೂ ಯಾರು??? ಅಂತೀರಾ. ಹಾಗಾದ್ರೇ ನೋಡಿ ಈ ಇಂಟರೆಸ್ಟಿಂಗ್ ಸ್ಟೋರಿ. ಗಿಡಗಂಟಿಗಳಲ್ಲಿ ವಾಸಿಸುತ್ತಿರುವ ಮಹಿಳೆ… ಹಸಿವು-ನೀರಡಿಕೆಯಿಂದ ಪರಿತಪಿಸುತ್ತಿರುವ ಗರ್ಭಿಣಿಯ ಮೂರು ಮಕ್ಕಳು… ಗಿಡಗಂಟಿಯಲ್ಲಿ ಪತಿಯಿಲ್ಲದೇ ಪರಿತಪಿಸುತ್ತಿದ್ದ ಅಬಲೆಗೆ ಸಹಾಯ ಮಾಡಿದ ಫೌಂಡೇಶನ್… ಹೌದು, ೮ ವರ್ಷದ ಹಿಂದೆ …

Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಚೂನವ್ವ ಸರ್ವಿ ಮೃತ ದುರ್ದೈವಿ ಬಾಲಕಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೆÇಲೀಸರು ಭೇಟಿ, ನೀಡಿ …

Read More »

ತಮ್ಮ ಊರುಗಳಿಗೆ ಶವಗಳನ್ನು ಒಯ್ದ ಕುಟುಂಬಸ್ಥರು

ಕ್ರ್ಯೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರ ದುರ್ಮರಣ ಪ್ರಕರಣ ಅಪಘಾತದಲ್ಲಿ ಮೃತಪಟ್ಟ 7 ಜನರ ಮರಣೋತ್ತರ ಪರೀಕ್ಷೆ ಮುಕ್ತಾಯ ಕೊನೆಯ ಬಾರಿ ಮುಖ ನೋಡಲು ಕರೆಯುತ್ತಿರುವ ಶವಾಗಾರ ಸಿಬ್ಬಂದಿ ಪ್ರಕರಣದಲ್ಲಿ ಸ್ಥಳದಲ್ಲೇ ಮೃತಪಟ್ಟರಿರುವ ಏಳು ಕಾರ್ಮಿಕರು ಬೆಳಗಾವಿ ಬೀಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮರಣೋತ್ತರ ಪರೀಕ್ಷೆ ಬಳಿಕ ಶವಗಳ ಹಸ್ತಾಂತರಿಸಿದ ಆಸ್ಪತ್ರೆ ಸಿಬ್ಬಂದಿಗಳು ಶವಾಗಾರ ಎದುರು ಜಮಾಯಿಸಿರುವ ಪೋಷಕರು, ಬಿಮ್ಸ್ ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಶವ ಹಸ್ತಾಂತರ, ತಮ್ಮ ತಮ್ಮ …

Read More »

ನಗರದ ಸಮಾದೇವಿಗಲ್ಲಿಯಲ್ಲಿರುವ ಪಟ್ಟಣಶೆಟ್ಟಿ ಸ್ಯ್ಕಾನಿಂಗ್ ಸೆಂಟರ್ ಸೇರಿದಂತೆ ತಾಲೂಕಿನಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ‌ ಮೇಲೆ‌ ಬೆಳಗಾವಿ ಟಿಎಚ್ಒ ಡಾ.ಶಿವಾನಂದ ಮಾಸ್ತಿಹೊಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಸ್ಕ್ಯಾನಿಂಗ್ ಸೆಂಟರ್ ನಡೆಸಲು ಅನುಮತಿ ಪಡೆದಿದೆಯೋ? ಇಲ್ಲವೋ? ಎಂಬ ಬಗ್ಗೆ ಮಾಹಿತಿ, ಗರ್ಭಿಣಿಯ ಮಾಹಿತಿ ಒಳಗೊಂಡಿರುವ ದಾಖಲೆ ಪತ್ರಗಳ ಪರಿಶೀಲನೆ, ಜೊತೆಗೆ ಭ್ರೂಣ ಪತ್ತೆ ಅಪರಾಧ ಎಂಬ ಭಿತ್ತಿ ಪತ್ರ ಅಂಟಿಸಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ.ದಾಳಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಿಎಚ್ಒ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾರ್ಗದರ್ಶನದಲ್ಲಿ ಬೆಳಗಾವಿ ತಾಲೂಕಿನ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದೇವೆ. ದಾಖಲೆಗಳು ಸರಿ ಇದೆಯೋ ಇಲ್ಲವೋ ಅನ್ನೋದನ್ನು ಪರಿಶೀಲನೆ ಮಾಡಿದ್ದೇವೆ. ರಿಜಿಸ್ಟರ್ ಬುಕ್, ಎಫ್ ಫಾರ್ಮೆಟ್, ಗರ್ಭಿಣಿ ತಪಾಸಣೆ ಮಾಡುವಾಗ ಮಷಿನ್ ರಿಜಿಸ್ಟರ್ ಇದ್ದ ಬಗ್ಗೆ, ಎಪ್ ಫಾರ್ಮೆಟ್ ಸರಿಯಾಗಿ ಸಲ್ಲಿಕೆ ಬಗ್ಗೆ ಇದರ ಜೊತೆಗೆ ಯಾವುದೇ ಕಾರಣಕ್ಕೆ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಬಾರದು. ತಾಯಿ‌ ಮತ್ತು ಮಗುವಿನ ಆರೋಗ್ಯವನ್ನ ಮಾತ್ರ ತಪಾಸಣೆ ಮಾಡಬೇಕು. ಐದು ತಂಡದಲ್ಲಿ 120ಕ್ಕೂ ಅಧಿಕ ಸೆಂಟರ್ ಗಳಲ್ಲಿ ತಪಾಸಣೆ ಮಾಡುತ್ತೇವೆ. ಇಲ್ಲಿಯವರೆಗೆ ಬೆಳಗಾವಿ ತಾಲೂಕಿನ ಅಂತಹ ಸ್ಕ್ಯಾನಿಂಗ್ ಸೆಂಟರ್ ಕಂಡುಬಂದಿಲ್ಲ. ತಾಲೂಕಿನಲ್ಲಿ ಎಲ್ಲ ರೀತಿಯಲ್ಲಿ ವ್ಯವಸ್ಥಿತವಾಗಿ ಸ್ಕ್ಯಾನಿಂಗ್ ಸೆಂಟರ್ ಕಾರ್ಯ ನಡೆಸುತ್ತಿವೆ ಎಂದು ಹೇಳಿದರು.

ಬೆಳಗಾವಿ: ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಲ್ಲಿರುವ 100ಕ್ಕೂ ಅಧಿಕ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ತಾಲೂಕಾ ವೈದ್ಯಾಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದೆ‌. ಮೂಡಲಗಿ ಪಟ್ಟಣದಲ್ಲಿ ಭ್ರೂಣಗಳು ಪತ್ತೆಯಾಗಿರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ ತಾಲೂಕಿನ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ನಗರದ ಸಮಾದೇವಿಗಲ್ಲಿಯಲ್ಲಿರುವ ಪಟ್ಟಣಶೆಟ್ಟಿ ಸ್ಯ್ಕಾನಿಂಗ್ ಸೆಂಟರ್ ಸೇರಿದಂತೆ ತಾಲೂಕಿನಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ‌ ಮೇಲೆ‌ …

Read More »

ಬೆಳಗಾವಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಅನೇಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರು. ಸರ್ಕಾರದಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ತಲುಪಿಸಲಾಗುವುದು, ಜೊತೆಗೆ …

Read More »

ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ನಡೆಯಿತು.

ಬೆಳಗಾವಿ: ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೊಲ್ಲಾಪುರ ಸರ್ಕಲ್ ಸಮೀಪ ನಡೆದಿದೆ. ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ರೇಣುಕಾ ಭಾತಕಾಂಡೆ (30)‌ ಮೃತರು. ಇವರು ಚನ್ನಮ್ಮ ವೃತ್ತದ ಕಡೆ ತಮ್ಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ತಿಂಗಳ ಹಿಂದಷ್ಟೇ …

Read More »

ನಾಳೆಯಿಂದ `SSLC’ ಪೂರಕ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ . ಈ ನಡುವೆಯೂ ದಿನಾಂಕ 27-06-2022 ರಿಂದ 04-07-2022 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ( SSLC Supplementary Exam ) ನಿಗದಿ ಪಡಿಸಲಾಗಿದೆ . ಕೋವಿಡ್ ನಡುವೆಯೂ ನಡೆಯಲಿರುವಂತ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ . ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಇದೇ ಜೂನ್ 27, 2022ರಿಂದ ದಿನಾಂಕ 04-07-2022ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ 94649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪ್ರವೇಶ ಪತ್ರ ವಿತರಣೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ …

Read More »