ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿಯ ಧಾರವಾಡ ಕಾಲೋನಿಯಲ್ಲಿ ನಡೆದಿದೆ. ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ಆಕೆಯ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವವರು ಚಾಕು ಇರಿದಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಗಾಯವಾಗಿರುವ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ …
Read More »ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ: ಸತೀಶ ಜಾರಕಿಹೊಳಿ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರತಿಕ್ರಿಯೆ: ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಗ್ಗೆ ಸಚಿವ ಉಮೇಶ್ ಕತ್ತಿ ಪುನರುಚ್ಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂರು ಕೋಟಿ ಜನಸಂಖ್ಯೆ ಇದ್ದಲ್ಲಿ ಎರಡು ರಾಜ್ಯ ಮಾಡಲು ಮಸೂದೆ ತರಲು ಬಿಜೆಪಿ ಪ್ಲ್ಯಾನ್ ಇದೆ. ಅದರ ಚಿಂತನೆ ಕೂಡ ನಡೀತಿದೆ. ಒಂದು ವೇಳೆ ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ. ಹಿಂದೆ ಪ್ರಧಾನಿ ಮೋದಿ ಈ …
Read More »ವ್ಯಕ್ತಿಯೊಬ್ಬರ ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ.
ಬೆಳಗಾವಿ: ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಬೆಳಗಾವಿ ಕೆಎಲ್ಇಎಸ್ ವೈದ್ಯರು ಹೊರತೆಗೆದಿದ್ದಾರೆ. ಬೆಳಗಾವಿಯ ಸ್ಥಳೀಯ ನಿವಾಸಿಯಾಗಿರುವ 45 ವರ್ಷದ ವ್ಯಕ್ತಿ ನಿತ್ಯ ಪೂಜೆ ಮಾಡುತ್ತಿದ್ದರು. ಪೂಜೆ ಬಳಿಕ ತೀರ್ಥ ಸೇವಿಸುವಾಗ ಗಮನಿಸದೇ ಲೋಹದ ಕೃಷ್ಣನ ಮೂರ್ತಿಯನ್ನು ನುಂಗಿದ್ದರು. ಇದರಿಂದ ಅವರಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದ್ದರು. ಆಗ ವೈದ್ಯರು ಎಕ್ಸರೇ ಮಾಡಿಸಲು ಸೂಚಿಸಿದ್ದಾರೆ. ಎಕ್ಸರೇ ರಿಪೋರ್ಟ್ನಲ್ಲಿ ಕೃಷ್ಣನ ವಿಗ್ರಹ ಗಂಟಲಿನಲ್ಲೇ ಇರುವುದು …
Read More »ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್ ಕುಮಟಳ್ಳಿ
ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್ ಕುಮಟಳ್ಳಿ …
Read More »ಭಾರತೀಯ ಸೇನೆ ಸೇರಿದ ಬಾಗಲಕೋಟೆ ಗ್ರಾಮೀಣ ಯುವತಿ
ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಮಹಿಳೆಯರು ಮನೆಯಿಂದ ಹೊರಬರುವುದೇ ಕಡಿಮೆ ಎನ್ನುವಂಥ ಪರಿಸ್ಥಿತಿ ಇತ್ತು. ಆದರೆ ಕಾಲ ಬದಲಾಗಿದೆ. ಇದೀಗ ಈ ಭಾಗದ ಯುವತಿಯೋರ್ವಳು ಭಾರತೀಯ ಸೇನೆ ಸೇರುವ ಮೂಲಕ ಮಾದರಿಯಾಗಿದ್ದಾಳೆ. ವಿಜಯಾ ಹದ್ಲಿ, ಬಾಗಲಕೋಟೆ ತಾಲೂಕಿನ ಯಡಹಳ್ಳಿ ಗ್ರಾಮದ ನಿವಾಸಿ. ಮೊದಲ ಪ್ರಯತ್ನದಲ್ಲಿ ದೇಶ ಸೇವೆ ಮಾಡುವ ಅವಕಾಶ ಪಡೆದಿದ್ದಾರೆ. ದೈಹಿಕ ಶಿಕ್ಷಕಿ ಆಗಬೇಕು ಎಂದುಕೊಂಡಿದ್ದರಂತೆ. ಆದರೆ, ಸಿಆರ್ಪಿಎಫ್ ಯೋಧೆಯಾಗಿ ದೇಶ ಸೇವೆಗೆ ಹೊರಟಿದ್ದಾರೆ. 2021ರಲ್ಲಿ ಬೆಂಗಳೂರಿನ ಯಲಹಂಕದಲ್ಲಿ ನಡೆದ …
Read More »ಸಿಎಂ ಕೂರಲು, ಏಳಲು ಸಹ ದೆಹಲಿಗೆ ಹೋಗಿ ಪರ್ಮಿಶನ್ ಪಡೆದು ಬರಬೇಕು!
ಬೆಂಗಳೂರು, ಜೂನ್ 24; ಕರ್ನಾಟಕದ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿನವದೆಹಲಿ ಪ್ರವಾಸದಲ್ಲಿದ್ದಾರೆ. 2021ರ ಜುಲೈ 28ರಂದು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ 11ನೇ ಬಾರಿ ಅವರು ದೆಹಲಿಗೆ ತೆರಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಬಸವರಾಜ ಬೊಮ್ಮಾಯಿ ನವದೆಹಲಿ ಭೇಟಿ ಬಗ್ಗೆ ಟ್ವೀಟ್ ಮಾಡಿದೆ. “ಸಿಎಂ ಕೂರಲು, ಏಳಲು, ಮಲಗಲೂ ಸಹ ದೆಹಲಿಗೆ ಹೋಗಿ ಪರ್ಮಿಶನ್ ಪಡೆದು ಬರಬೇಕು ಎನಿಸುತ್ತದೆ!” ಎಂದು ಟೀಕಿಸಿದೆ. ಗುರುವಾರ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ್ದಾರೆ. ಕೇಂದ್ರ ಸಚಿವ, ಧಾರವಾಡ …
Read More »ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನಗರಬಸ್ತಿಕೇರಿ ಎಂಬಲ್ಲಿ ಅತಿಹೆಚ್ಚು 104 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ, ಕೆಲವು ಕಡೆ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಳೆ ಮತ್ತು ಇನ್ನುಳಿದ ಭಾಗಗಳಲ್ಲಿ …
Read More »ಪ್ರತ್ಯೇಕ ರಾಜ್ಯ ವಿಚಾರವಾಗಿ ಗೋವಿಂದ ಕಾರಜೋಳ ಬೆಳಗಾವಿಯಲ್ಲಿ ಹೇಳಿದ್ದೇನು..?
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಚಿವ ಉಮೇಶ ಕತ್ತಿ ಅವರ ಹೇಳಿಕೆ ಅದು ವೈಯಕ್ತಿಕವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಗುರುವಾರ ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಯ ಬಳಿಕ ದೇಶದಲ್ಲಿ 50 ರಾಜ್ಯಗಳನ್ನು ಮೋದಿ ಮಾಡಲಿದ್ದಾರೆ. ಇದರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ. ಇದು ಚಿಂತನೆ ನಡೆಯುತ್ತಿದೆ ಎಂದು ಉಮೇಶ ಕತ್ತಿ ಹೇಳಿಕೆ ವೈಯಕ್ತಿಕ. ಇಂಥ ಚಿಂತನೆಗಳು ನಡೆದಿಲ್ಲ ಎಂದರು.
Read More »ಪ್ರತ್ಯೇಕ ರಾಜ್ಯ ವಿಚಾರವಾಗಿ ನೀವು ಕತ್ತಿಯವರನ್ನೇ ಕೇಳಬೇಕು.: ಬಸವರಾಜ್ ಬೊಮ್ಮಾಯಿ
ಉಮೇಶ್ ಕತ್ತಿ ಹೇಳಿಕೆ ಕುರಿತಂತೆ ದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತ್ಯೇಕ ರಾಜ್ಯ ವಿಚಾರವಾಗಿ ನೀವು ಕತ್ತಿಯವರನ್ನೇ ಕೇಳಬೇಕು. ಅವರು ಹೀಗೆ ಹೇಳುತ್ತಿರುವುದು ಹೊಸದೇನೂ ಅಲ್ಲ ಎಂದಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಚಿವ ಉಮೇಶ್ ಕತ್ತಿರವರ ಹೇಳಿಕೆಯನ್ನು ಅವರನ್ನೇ ಕೇಳಬೇಕು. ಇದನ್ನು ಅವರು ಸುಮಾರು ೧೦ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ. ಇನ್ನು ಸರಕಾರದ ಮಟ್ಟದಲ್ಲಿ …
Read More »ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆ …
Read More »