Breaking News

ಪಾಲಿಕೆಯ ಮುಂದಿನ ಪರಿಷತ್ ಸಭೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಆಗ್ರಹ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಬೇಕೆಂದು ರಾಜ್ಯ ಸರಕಾರ ಆಗಸ್ಟ್ 29 ರಂದು ಪಾಲಿಕೆಗೆ ಆದೇಶ ನೀಡಿದ್ದು, ಪಾಲಿಕೆಯ ಮುಂದಿನ ಪರಿಷತ್ ಸಭೆಯಲ್ಲಿ ಆದೇಶವನ್ನು ಅನುಷ್ಠಾನಗೊಳಿಸಲು  ಪಾಲಿಕೆಯ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯ ಹೊನಕೇರಿ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಪಾಲಿಕೆಯ ಆಯುಕ್ತ ಕಾರ್ತಿಕ ಅವರನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರು ರಾಜ್ಯ ಸರಕಾರದ ಆದೇಶ …

Read More »

ಶಿಕ್ಷಕರ ಮಾರ್ಗದರ್ಶನವೇ ವಿದ್ಯಾರ್ಥಿಗಳ ಭವಿಷ್ಯದ ಬೆಳಕು: ಪ್ರಾದೇಶಿಕ ಆಯುಕ್ತೆ ಕೆ. ಎಂ.ಜಾನಕಿ

ಬೆಳಗಾವಿ: ಪ್ರತಿ ದಿನವೂ ಶಿಕ್ಷಕರನ್ನು ಸ್ಮರಿಸಬೇಕು, ತಂದೆ-ತಾಯಿಯ ನಂತರ ಯಾವುದೇ ವೃತ್ತಿ ಅಥವಾ ಜ್ಞಾನವನ್ನು ಕಲಿಯಲು ಗುರುಗಳ ಮಾರ್ಗದರ್ಶನ ಅತ್ಯಗತ್ಯವಾಗಿದ್ದು ಶಿಕ್ಷಕರ ಮಾರ್ಗದರ್ಶನವೇ ವಿದ್ಯಾರ್ಥಿಗಳ ಭವಿಷ್ಯದ ಬೆಳಕು ಎಂದು ಪ್ರಾದೇಶಿಕ ಆಯುಕ್ತರಾದ ಕೆ.ಎಂ. ಜಾನಕಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ(ದಕ್ಷಿಣ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ(ಸೆ.05) ನಗರದ …

Read More »

ಆರೋಗ್ಯವಾಗಿರಲು ಸರಳ ಮತ್ತು ಪೌಷ್ಟಿಕ ಆಹಾರ ಉತ್ತಮ: ಪದ್ಮಶ್ರೀ ಪ್ರಭಾಕರ ಕೋರೆ

ಬೆಳಗಾವಿ: ಭಾರತದ ಪರಂಪರೆಯಲ್ಲಿ ಬೆಳಗಿನ ಉಪಾಹಾರದ ಪದ್ಧತಿ ಇರಲಿಲ್ಲ. ಹಸಿವಾದಾಗ ಕಡಲೆಕಾಯಿ ಅಥವಾ ಇತರ ಸರಳ ಆಹಾರವನ್ನು ಸೇವಿಸುತ್ತಿದ್ದೆವು. ಇಂದು ನನಗೆ 80 ವರ್ಷವಾದರೂ ಆರೋಗ್ಯವಾಗಿರಲು, ಸರಳ ಮತ್ತು ಪೌಷ್ಟಿಕ ಆಹಾರವೂ ಉತ್ತಮ ಆರೋಗ್ಯಕ್ಕೆ ಸಹಾಯಕವಾಗಬಹುದು. ರಾಗಿ ಸೇರಿದಂತೆ ಸ್ಥಳೀಯ ಸಿರಿಧಾನ್ಯಗಳಿಂದ ತಯಾರಿಸಿದ ಪೌಷ್ಟಿಕ ಅತ್ಯುತ್ತಮ. ಈ ಆಹಾರಗಳು ಕಡಿಮೆ ವೆಚ್ಚದಲ್ಲಿ ದೊರೆಯುತ್ತವೆ ಮತ್ತು ಮಕ್ಕಳ ಪೌಷ್ಟಿಕತೆಗೆ ಬಹಳ ಉಪಯುಕ್ತವಾಗಿವೆ ಕಾಹೆರನ ಕುಲಪತಿ ಪದ್ಮಶ್ರೀ ಪ್ರಭಾಕರ ಕೋರೆ ಅವರಿಂದಿಲ್ಲಿ ಹೇಳಿದರು. …

Read More »

ಕಳ್ಳಭಟ್ಟಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಬೆಳಗಾವಿ: ಮಚ್ಛೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದಾಗ ಬೆಳಗಾವಿಯ ಗ್ರಾಮೀಣ ಪೊಲೀರು ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪರುಶರಾಮ ಬಸಪ್ಪ ನಾಯಿಕ (35) ಬಂಧಿತ ಆರೋಪಿ, ಬೆಳಗಾವಿ ಗ್ರಾಮೀಣ ಠಾಣೆ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಆರೋಪಿತನಿಂದ ಒಟ್ಟು 20 ಲೀಟರ್‌ಗಳಷ್ಟು ಕಳ್ಳಭಟ್ಟಿ ಸರಾಯಿ ಜಪ್ತಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ. 206/2026 ಕಲಂ. 32, 34 ಕರ್ನಾಟಕ …

Read More »

ಬೆಳಗಾವಿಯ ಸಿಸಿಬಿ ಪೊಲೀಸ್‌ರಿಂದ 3 ಗಾಂಜಾ ಮಾರಾಟಗಾರರ ಬಂಧನ

ಬೆಳಗಾವಿ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಳಗಾವಿ ನಗರದ ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.‌ ಅಕ್ಷಯಕುಮಾರ ಸೋಮಶೇಖರ ಅಂಕಲಗಿ (20), ಆದರ್ಶ ಈರಯ್ಯ ಹಿರೇಮಠ (25), ಮಣಿಕಂಠ ರಾಚಯ್ಯಾ ಉಗರಖೋಡ ಬಂಧಿತ ಆರೋಪಿಗಳು. ಇವರು ಮೈತಾಬ ಎಂಬಾತನಿಂದ ಗಾಂಜಾ ತಂದು,  ಬೆಳಗಾವಿ ನಗರದ ಸಾಗರ ಕಿನಾರಾ ದಾಬಾ, ಯಡಿಯೂರಪ್ಪ ಮಾರ್ಗ ಹತ್ತಿರ ತಮ್ಮ ಬೈಕ್ ಮೇಲೆ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುವ ವೇಳೆ …

Read More »

ವಿನಯ ನಾವಲಗಟ್ಟಿ ಅವರ ತಾಯಿಯ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಸಂತಾಪ

ಬೆಳಗಾವಿ: ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಅವರ ತಾಯಿಯವರು ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನಾವಲಗಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಾಯಿಯನ್ನು ಕಳೆದುಕೊಂಡಿರುವ ವಿನಯ ನಾವಲಗಟ್ಟಿ ಹಾಗೂ ಅವರ ಕುಟುಂಬ ಸದಸ್ಯರೊಂದಿಗೆ ಕೆಲಕಾಲ ಮಾತನಾಡಿದ ಇಬ್ಬರೂ ನಾಯಕರು, ದುಃಖದ ಸಂದರ್ಭದಲ್ಲಿ …

Read More »

ರಾಜ್ಯದ ಸಮಸ್ಯೆಗಳ ಚರ್ಚೆ ಬಿಟ್ಟು ಬಿಜೆಪಿ ರಾಜಕಾರಣ ಮಾಡುತ್ತಿದೆ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ರಾಜ್ಯದ ಸಮಸ್ಯೆಗಳು ಹಾಗೂ ಜನರ ಸಮಸ್ಯೆಗಳ ಬಗ್ಗೆ ವಿಧಾನಮಂಡಲದಲ್ಲಿ ಚರ್ಚೆಯಾಗಬೇಕೇ ಹೊರತು, ರಾಜಕಾರಣ ಮಾಡುವುದಕ್ಕಾಗಿಯೇ ಸದನವನ್ನು ಬಳಸಿಕೊಳ್ಳಬಾರದು ಎಂದು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಜನತಾ ದರ್ಶನ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾಗಿದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚೆ …

Read More »

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿ

ಬೆಂಗಳೂರು: “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ …

Read More »

ನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿ

ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಸಿಎಂ ಡಿಕೆ ಶಿವಕುಮಾರ್‌  ಕಿಡಿಕಾರಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು ಅಂತ ಹೇಳಿದ್ದಾರೆ. ಲಾಲ್‌ಬಾಗ್‌ನಲ್ಲಿಯೇ ಟನಲ್ ಮಾಡಬೇಕೆಂಬ ಉದ್ದೇಶವಿಲ್ಲ. ಇದಕ್ಕೆ …

Read More »

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ:ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳದ  ತ್ರಿಶ್ಯೂರು ಜಿಲ್ಲೆಯಲ್ಲಿ ನಡೆದಿದೆ. ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿ.ಎಸ್.ಎಂ. …

Read More »