Breaking News

ಅಸಮರ್ಥ ಗೃಹಸಚಿವ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲ:ಸಿದ್ದರಾಮಯ್ಯ

ಬೆಂಗಳೂರು : ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ …

Read More »

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ‌

ಸತೀಶ ಜಾರಕಿಹೊಳಿ‌‌ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ‌ ಮತ್ತು ಪೊಲೀಸ್ ಕಾನ್ಸ್‌ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ‌ ಅವರು‌‌ ಮಾತನಾಡಿದರು. ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ. ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು. ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ‌ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು‌ …

Read More »

ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ‌ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ‌.

VR ಪ್ರಪಂಚ..!ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ‌ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ‌. ಹಾಗಾದ್ರೆ ವಿಕ್ರಾಂತ್ ರೋಣ ಹೇಗಿದ್ದಾನೆ ಅಂದ್ರೆ…. ಅದೊಂದು ದಟ್ಟಾರಣ್ಯದ ಮಧ್ಯೆ‌ ಇರೋ ಊರು. ಆ ಊರ ಹೆಸರು ಕಮರೊಟ್ಟು.. ಅಲ್ಲಿ ಹೆಣ್ಣು ಮಕ್ಕಳ ಸರಣಿ ಕೊಲೆಗಳು ಆಗುತ್ತಿರುತ್ತವೆ. ಪೋಲಿಸ್ ಇನ್ಸ್‌ಪೆಕ್ಟರ್ ಆಗಿ ಕೊಲೆಗಳ ತನಿಖೆಗೆಗಾಗಿ ಕಮರೊಟ್ಟು ಊರಿಗೆ ಬರೋ ವಿಕ್ರಾಂತ್ ರೋಣ. ಈ ಇನ್ಸ್‌ಪೆಕ್ಟರ್‌ಗೆ ಈ ಸರಣಿ ಕೊಲೆಗಳ ಕೇಸುಗಳ ಮೇಲೆ …

Read More »

ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ನೀರುಪಾಲು.. ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಕಲಬುರಗಿ: ಬಾವಿಯೊಂದರಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಶ್ರೀಶೈಲ್ ಲಕ್ಷ್ಮಣ (13) ಹಾಗೂ ಲಕ್ಷ್ಮಣ ಗುಂಡಪ್ಪ(12) ಈಜಲು ಹೋಗಿ ಸಾವನ್ನಪ್ಪಿದ ದುರ್ದೈವಿಗಳು. ಈ ಇಬ್ಬರು ಮಕ್ಕಳು ಹೇಬಳಿ ರೋಡ್‌ ನ್ಯೂ ಬಾಳೇನಕೇರಿ ನಿವಾಸಿಗಳು ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಇಬ್ಬರು ಈಜಲು ಎಂದು ಬಾವಿಗೆ ತೆರಳಿದ್ದಾರೆ. ಈಜು ಸರಿಯಾಗಿ ಬಾರದಿದ್ದರೂ ಬಾವಿಗೆ ಇಳಿದು ದುಸ್ಸಾಹಸ ಮಾಡಿದ್ದರಿಂದ ಅವಘಡ ಸಂಭವಿಸಿದೆ ಎಂದು …

Read More »

B.J.P. ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ: ಅಭಯ್ ಪಾಟೀಲ

ಬೆಳಗಾವಿ: ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತಿಲ್ಲ ಅನೋ ಭಾವನೆ ತಪ್ಪು. ಭಾರತದ ಸಂವಿಧಾನ ಒಪ್ಪದವರ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಬೇಕು. ಈ ರೀತಿಯ ಮಾಡುವವರನ್ನು ಎನ್​ಕೌಂಟರ್ ಮಾಡಬೇಕೆಂದು ಬಿಜೆಪಿ ಶಾಸಕ ಅಭಯ್ ಪಾಟೀಲ ಆಗ್ರಹಿಸಿದರು. ನಾನು 32 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈವರೆಗೆ ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ. ಇದೇ ಮೊದಲು ಆಕ್ರೋಶ ವ್ಯಕ್ತವಾಗಿದ್ದು ಸತ್ಯವು‌ ಇದೆ. ಪಕ್ಷಕ್ಕಾಗಿ ಶ್ರಮ‌ ವಹಿಸುತ್ತಾರೆ. ಕುಟುಂಬ, …

Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಬೆಳ್ಳಾರೆ ನಿವಾಸಿ ಮೊಹ್ಮದ್‌ ಶಫೀಕ್‌ (27) , ಸವಣೂರು ನಿವಾಸಿ ಝಾಕೀರ್‌ (29) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯ ನೇತ್ರತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ …

Read More »

ಕೋಮು ಉದ್ವಿಗ್ನತೆ : ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು : ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ. ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ …

Read More »

ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ; 25 ಲಕ್ಷ ರೂ. ಪರಿಹಾರ

ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇರಲಿದೆ ಎಂದು ಧೈರ್ಯ ತುಂಬಿದರು. 25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಿಎಂ …

Read More »

17 ವರ್ಷ ಮೇಲ್ಪಟ್ಟವರೂ Voter IDಗೆ ಅರ್ಜಿ ಸಲ್ಲಿಸಬಹುದು – ಚುನಾವಣಾ ಆಯೋಗ

ನವದೆಹಲಿ: ಇನ್ಮುಂದೆ 17 ವರ್ಷ ಮೇಲ್ಪಟ್ಟ ಯುವ ಜನರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿಯೇ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ಹೇಳಿದೆ. ದೇಶದ ಕಾನೂನಿನ ಪ್ರಕಾರ ಪ್ರತಿಯೊಬ್ಬ ಪ್ರಜೆಗೂ 18 ವರ್ಷ ತುಂಬಿದ ಬಳಿಕ ಮತದಾನದ ಹಕ್ಕು ನೀಡಲಾಗಿದೆ. ಆದರೆ ಈಗ 17 ವರ್ಷದವರು ಕೂಡ ತಮ್ಮ ಹೆಸರನ್ನು ನೋಂದಾಯಿಸಲು ಮತದಾನದ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಯುವ ಜನರು …

Read More »

ಇಸ್ಟೀಟ್ ಅಡ್ಡೆ ಮೇಲೆ ಬೈಲಹೊಂಗಲ ಪೊಲೀಸ್ ಭರ್ಜರಿ ದಾಳಿ

ಬೈಲಹೊಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಗ್ಯಾಂಬ್ಲಿಂಗ್ ಅಡ್ಡೆಯನ್ನು ಭೇದಿಸಿದ್ದಾರೆ. ಹೌದು ನಿನ್ನೆ ತಡರಾತ್ರಿ ಬೈಲಹೊಂಗಲ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಸ್ಪೀಟ್ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1,10,320 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ

Read More »