Breaking News

ಬೆಳಗಾವಿಯ ಸುವರ್ಣ ಸೌಧದಲ್ಲಿ ಎಂಟನೆಯ ಯೋಗ ದಿನ ಆಚರಣೆ : ನಿತೇಶ್ ಪಾಟೀಲ

ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ 2022 ರ ಘೋಷವಾಕ್ಯ “ಮಾನವೀಯತೆಗಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ ಮಂಗಳವಾರ (ಜೂ.21) “8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” 75 ಸಾಂಪ್ರದಾಯಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ …

Read More »

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಬೋಲ್ಡೊಜರ್ ಸದ್ದು: ಅಕ್ರಮ ಮನೆಗಳ ನೆಲಸಮ

ಕಲಬುರಗಿ‌: ನಗರದ ಜಾಫರಾಬಾದ್ ಪ್ರದೇಶದಲ್ಲಿ ‌ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ‌ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ‌ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ‌ಮೂಲಕ ಅಕ್ರಮ ಮನೆಗಳನ್ನು ನೆಲಸಮ‌ ಮಾಡಲಾಗುತ್ತಿದೆ.   ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಬಲದೊಂದಿಗೆ ತೆರಳಿದ ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ತಹಶೀಲ್ದಾರ ಪ್ರಕಾಶ ಕುದುರೆ, ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾರ್ಯಾಚರಣೆ ಶುರುವಿಟ್ಟಿದ್ದಾರೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಜೆಸಿಬಿ …

Read More »

ಇಡ್ಲಿ ಮಾರುವವನ ಮಗಳಿಗೆ ವೈದ್ಯೆಯಾಗುವಾಸೆ: ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ

ರಬಕವಿ–ಬನಹಟ್ಟಿ: ಬಡತನದಲ್ಲಿಯೇ ಹುಟ್ಟಿ ಬೆಳೆದು, ನಿರಂತರ ಅಧ್ಯಯನ, ಕಠಿಣ ಪರಿಶ್ರಮದ ಮೂಲಕ ಇಡ್ಲಿ ಮಾರಿ ಜೀವನ ನಡೆಸಿತ್ತಿರುವ ವ್ಯಾಪಾರಿಯ ಪುತ್ರಿ ದ್ವಿತೀಯ ಪಿಯುಸಿಯಲ್ಲಿ ಶೇ. 97.5 ರಷ್ಟು ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾಳೆ. ಇದರೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸಿಗೆ ರೆಕ್ಕೆ ಕಟ್ಟಿದ್ದಾಳೆ. ರಬಕವಿಯ ಬ್ರಹ್ಮಾನಂದ ಆಶ್ರಮ ಹತ್ತಿರ ಬಾಡಿಗೆ ಶೆಡ್‌ನಲ್ಲಿ ವಾಸ ಹೊಂದಿರುವ ಪ್ರಕಾಶ ಹನಗಂಡಿಯವರ ಮಗಳು ದಾನೇಶ್ವರಿ ಈ …

Read More »

ಮಿತಿ ಮೀರಿ ಸರಕು ಸಾಗಣೆ: ₹ 46 ಸಾವಿರ ದಂಡ

ಕಾರವಾರ: ಸಾಮರ್ಥ್ಯಕ್ಕಿಂತ ಹೆಚ್ಚು ಸರಕು ಸಾಗಿಸುತ್ತಿದ್ದ ಲಾರಿಯ ಚಾಲಕನಿಗೆ ಇಲ್ಲಿನ ನ್ಯಾಯಾಲಯವು ₹ 46 ಸಾವಿರ ದಂಡ ವಿಧಿಸಿದೆ. ಅಲ್ಲದೇ ವಾಹನದ ಸರಕು ಸಾಗಣೆ ಪರವಾನಗಿ ಹಾಗೂ ಚಾಲಕನ ವಾಹನ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಿದೆ.   ಶಿವಮೊಗ್ಗದ ಮೊಹಮ್ಮದ್ ಅಮೀರ್ ಪಾಷಾ ಶಿಕ್ಷೆಗೆ ಗುರಿಯಾದ ಚಾಲಕ. ಜೂನ್ 16ರಂದು ರಾತ್ರಿ ನಗರದ ಮೂಲಕ ಸಾಗುತ್ತಿದ್ದ ಲಾರಿಯಲ್ಲಿ ಮಿತಿ ಮೀರಿದ ಪ್ರಮಾಣದಲ್ಲಿ ಸ್ಟೀಲ್ ಸರಕು ಸಾಗಿಸಲಾಗುತ್ತಿತ್ತು. ಅಂದು ಗಸ್ತಿನಲ್ಲಿದ್ದ ನಗರದ ಸಂಚಾರ ಠಾಣೆಯ …

Read More »

”ಕೆಜಿಎಫ್” ಬೆಡಗಿ ಶ್ರೀನಿಧಿ ಶೆಟ್ಟಿಗೆ ಕನ್ನಡದಲ್ಲಿ ಎಷ್ಟು ಅಂಕ ಗೊತ್ತಾ..? SSLC ಮಾರ್ಕ್ಸ್ ಕಾರ್ಡ್ ವೈರಲ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶ್ರೀನಿಧಿ ಶೆಟ್ಟಿ. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು ತೆಲುಗು ಹಾಗೂ ತಮಿಳು ಸಿನಿಮಾರಂಗದಲ್ಲೂ ತಮ್ಮ ಚಾಪೂ ಮೂಡಿಸುತ್ತಿದ್ದಾರೆ. ಈ ಮಧ್ಯೆ ಶ್ರೀನಿಧಿ ಶೆಟ್ಟಿಯ ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಶ್ರೀನಿಧಿ ಶೆಟ್ಟಿಯ ಅಂಕಪಟ್ಟಿ ನೋಡಿ ಕನ್ನಡಿಗರು ಶಹಭಾಷ್ ಅಂತಿದ್ದಾರೆ. ಮೂಲತಃ ಕನ್ನಡದ ಹುಡುಗಿಯಾಗಿರುವ ಶ್ರೀನಿಧಿ ಶೆಟ್ಟಿ …

Read More »

ಪ್ರಮೋದ್ ಮುತಾಲಿಕ್​-ಯಶಪಾಲ್ ಸುವರ್ಣರ ತಲೆ ಕಡಿಯಲು ಕರೆ ನೀಡಿದ್ದವನ ಬಂಧನ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಹಾಗೂ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರ ತಲೆ ಕಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕರೆ ನೀಡಿದ್ದವನನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಮಹಮ್ಮದ್ ಶಫಿ ಬಂಧಿತ ಆರೋಪಿ. ಈತ ಮಾರಿಗುಡಿ ಎಂಬ ಇನ್​ಸ್ಟಾಗ್ರಾಂ ಖಾತೆ ಮೂಲಕ ಇಂಥದ್ದೊಂದು ಪ್ರಚೋದಕ ಹೇಳಿಕೆ ನೀಡಿದ್ದ. ‘ಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. …

Read More »

ಬಿಪಿಎಲ್ ಕಾರ್ಡ್ ಹೊಂದಿರುವ `SC-ST’ ಕುಟುಂಬಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ..!

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಗೃಹ ಬಳಕೆದಾರರಿಗೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ ಎಂದು ಬಳ್ಳಾರಿ ನಗರ ಜೆಸ್ಕಾಂ, ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರ (ಬಿಪಿಎಲ್ ಪಡಿತರ ಚೀಟಿ ಪಡೆದಿರುವಂತಹ) ಗ್ರಾಹಕರು ಪ್ರಸ್ತುತ ಇರುವ ವಿದ್ಯುತ್ ಬಾಕಿಯನ್ನು ಪಾವತಿಸಿದ್ದಲ್ಲಿ ಮಾತ್ರ …

Read More »

ವೇದಿಕೆಯಲ್ಲಿ ಕುರ್ಚಿ ಹಾಕಲಿಲ್ಲ ಎಂದು ಸಭೆಯಿಂದ ಹೊರ ನಡೆದ ಸಚಿವ!

ವಿಜಯಪುರ : ಕಾರ್ಯಕ್ರಮದಲ್ಲಿ ತಮ್ಮನ್ನು ಆಹ್ವಾನಿಸಿದರೂ ವೇದಿಕೆ ಮೇಲೆ ಕುರ್ಚಿ ಹಾಕಿಲ್ಲ ಎಂದು ಸರ್ಕಾರಿ ಒಡೆತನದ ನಿಗಮವೊಂದರ ಅಧ್ಯಕ್ಷರು ಕಿಡಿ ಕಾರಿದ್ದು, ವೇದಿಕೆ ಮೇಲಿದ್ದ ಸಚಿವರು ಇದರಿಂದ ಬೇಸರಗೊಂಡು ಸಭೆಯಿಂದ ನಿರ್ಗಮಿಸಲು ಮುಂದಾದ ಘಟನೆ ಜರುಗಿದೆ.   ಶನಿವಾರ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಜಿಲ್ಲೆಯ ಬಬಲೇಶ್ವರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹಾಗೂ ತಿಕೋಟ ತಾಲೂಕಿನ ಕನಮಡಿ ಗ್ರಾಮದಲ್ಲಿ ಇಲಾಖೆಯ ಅನುದಾನದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದರು. ಭೂಮಿ …

Read More »

ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಸೆಕೆಂಡ್ ಟಾಪರ್.. ಮುಂದಿನ ಶಿಕ್ಷಣಕ್ಕಾಗಿ ಕೂಲಿ ಕೆಲಸಕ್ಕೆ ಗುಳೇ ಹೋಗಿರೋ ವಿದ್ಯಾರ್ಥಿ..

ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ನ ಶ್ರೀ ಅಣ್ಣದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಶಿವರಾಜ್ ಎಂಬಾತ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾನೆ. ಮೂಲತ: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಬಳಿಯ ಯಲಗಟ್ಟ ಗ್ರಾಮದ ನಿವಾಸಿಯಾಗಿರೋ ಶಿವರಾಜ್ ಕಷ್ಟಪಟ್ಟು ಓದಿ ಈ ಸಾಧನೆ ಮಾಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್, ನನ್ನ ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು …

Read More »

ಮುಂದಿನ ಮೂರು ದಿನ ಮಳೆ ;13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಶುಕ್ರವಾರ ರಾತ್ರಿಯಿಂದಲೇ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಭಾಗದಲ್ಲಿ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿ ಸುರಿದ ಮಳೆಗೆ ಬೆಂಗಳೂರು ಪೂರ್ವ ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ದಕ್ಷಿಣ ಕನ್ನಡ, ಕೊಡಗು, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ, ಯಾದಗಿರಿ ಮತ್ತು ಹಾಸನ ಜಿಲ್ಲೆಗಳಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ಇಂದಿನಿಂದ ಜೂನ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. …

Read More »