ಬೆಂಗಳೂರು: ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ಹೀಗಂತ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ನಾಯಕರ ಫೋಟೋ ಹಾಕಿ ಭಜರಂಗದಳ ಕಾರ್ಯಕರ್ತರು ಪೋಸ್ಟ್ ಹಾಕುವ ಸಾಮಾಜಿಕ ಜಾಲತಾಣದಲ್ಲಿ ಸಿಟ್ಟು ಹೊರಹಾಕ್ತಿದ್ದಾರೆ. ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಭಜರಂಗದಳದ ಫೇಸ್ ಬುಕ್‌ನಲ್ಲಿ ಬಳೆ ತೊಟ್ಟುಕೊಳ್ಳಿ,ಬಿಜೆಪಿ ನಾಯಕರೇ.. ಇನ್ನೆಷ್ಟು ಹಿಂದೂಗಳ ಬಲಿದಾನವಾಗಬೇಕು?ನಿಮ್ಮನ್ನು ಗಂಡಸರು ಎಂದು ಆರಿಸಿದೆವು..ಆದರೆ ನೀವು..? ಎಂದೆಲ್ಲಾ ಬರೆದು ಫೋಸ್ಟ್ …
Read More »ಸಿದ್ದರಾಮೋತ್ಸವ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್..?
ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಪದೇ ಪದೇ ಕಾರ್ಮೋಡ ಆವರಿಸ್ತಿದೆ. ಪಕ್ಷದ ವೇದಿಕೆಯಲ್ಲಿ ಸಮಾರಂಭ ಮಾಡ್ತೀವಿ ಎನ್ನುತ್ತಿದ್ದ ಸಿದ್ದು ಬೆಂಬಲಿಗರಿಗೆ, ಡಿಕೆಶಿ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಕೈ ನಾಯಕರ ನಡುವಿನ ಕಲಹ, ಮತ್ತೊಮ್ಮೆ ಸ್ಪೋಟಗೊಂಡಿದೆ. ಕಾರ್ಯಕ್ರಮವನ್ನ ಹೈಜಾಕ್ ಮಾಡುವ ಪ್ರಯತ್ನಗಳೂ ನಡೀತಿವೆ. ಈ ನಡುವೆ ಸಿದ್ದು ಅಂಡ್ ಟೀಂ ವಿರುದ್ದ ಎಐಸಿಸಿ ನಾಯಕರು ಗರಂ ಆಗಿದ್ದಾರೆ. ಸಿದ್ದರಾಮೋತ್ಸವಕ್ಕೆ ಪದೇ ಪದೇ ವಿಘ್ನಗಳು ಎದುರಾಗ್ತಾನೇ ಇದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇ.ಡಿ …
Read More »ವಿಕ್ರಾಂತ್ ರೋಣ’ ಸಿನಿಮಾ ರಿವ್ಯೂ ಔಟ್..! ಜಗತ್ತಿನಾದ್ಯಂತ ಕಿಚ್ಚನ ಸುನಾಮಿ..
ಅಬ್ಬಬ್ಬಾ.. ಎಲ್ಲಿ ನೋಡಿದ್ರೂ ಬರೀ ‘ವಿಕ್ರಾಂತ್ ರೋಣ’.. ‘ವಿಕ್ರಾಂತ್ ರೋಣ’ .. ‘ವಿಕ್ರಾಂತ್ ರೋಣ’.. ಅರೆರೆ ಇದು ಇರಲೇಬೇಕಲ್ವಾ..? ಯಾಕಂದ್ರೆ ‘ವಿಕ್ರಾಂತ್ ರೋಣ’ ಇಟ್ಟಿರೋ ಹವಾ ಅಂತಹದ್ದು. ಇದು ಬರೀ ಹವಾ ಮಾತ್ರ ಅಲ್ಲ ಕನ್ನಡ ಸಿನಿಮಾಗಳ ತಾಕತ್ತು ಈ ‘ವಿಕ್ರಾಂತ್ ರೋಣ’ ಎನ್ನಬಹುದು. ಯಾಕಂದ್ರೆ ಬಹುನಿರೀಕ್ಷಿತ ಸ್ಯಾಂಡಲ್‌ವುಡ್ ಸಿನಿಮಾದ ರಿವ್ಯೂವ್ ಔಟ್ ಆಗಿದ್ದು, ‘ವಿಕ್ರಾಂತ್ ರೋಣ’ ಸುನಾಮಿ ಜಗತ್ತಿನಾದ್ಯಂತ ಸೃಷ್ಟಿಯಾಗಿದೆ. ‘ವಿಕ್ರಾಂತ್ ರೋಣ’ ಪದ ಕಿವಿಗೆ …
Read More »ಪ್ರವೀಣ್ ನೆಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ: ಇಂದು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಬಂದ್ ಗೆ ಕರೆ
ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂ ಜಿಲ್ಲೆ ಕೊಪ್ಪ ಪಟ್ಟಣ ಬಂದ್ ಕರೆ ನೀಡಿದ್ದಾರೆ. ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಹಿಂದೂ ಪು ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಅಂಗಡಿಗಳನ್ನ ಮುಚ್ಚುವಂತೆ ಮನವಿ ಮಾಡಿದ್ದಾರೆ. ಆರೋಪಿಗಳನ್ನ ಶೀಘ್ರದಲ್ಲಿ ಬಂಧಿಸಬೇಕು. ಪ್ರವೀಣ್ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ.
Read More »ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ
ಉಡುಪಿ: ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ ಎಂದು ಹೇಳುವ ಮೂಲಕ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಂತಹ ಪ್ರವೀಣ್‍ನನ್ನು ಕೊಲೆ ಮಾಡಿರುವುದು ಖಂಡನೀಯವಾಗಿದೆ. ಇದನ್ನು ಉಗ್ರವಾದ ಮಾತುಗಳಿಂದ ನಾವು ಖಂಡಿಸುತ್ತೇವೆ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೃಷ್ಣನಲ್ಲಿ ಪ್ರಾರ್ಥಿಸುತ್ತೇವೆ ಎಂದರು. ಇತ್ತೀಚೆಗೆ ಈ ತರಹದ ಕೊಲೆಗಳು ಹೆಚ್ಚಾಗಿ …
Read More »ಪಿಎಸ್‍ಐ ಹಗರಣ ಕೇಸ್- ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ
ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್‍ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ 30 ಆರೋಪಿಗಳ ವಿರುದ್ಧ ಈ ದೋಷಾರೋಪ ಪಟ್ಟಿಯಲ್ಲಿ ಮಾಹಿತಿ ಇದೆ. ಇದು ಒಟ್ಟು 3,065 ಪುಟಗಳನ್ನು ಒಳಗೊಂಡಿದೆ. 202 ಸಾಕ್ಷ್ಯಗಳನ್ನು ಪ್ರಸ್ತಾಪಿಸಲಾಗಿದೆ. ಆದರೆ, ಈ ದೋಷಾರೋಪ ಪಟ್ಟಿಯಲ್ಲಿ ಎಡಿಜಿಪಿ ಅಮೃತ್‍ಪೌಲ್ ಹೇಳಿಕೆ ಬಗ್ಗೆ ಎಲ್ಲಿಯೂ ಉಲ್ಲೇಖವಾಗಿಲ್ಲ. ಮುಂದಿನ ಚಾರ್ಜ್‍ಶೀಟ್‍ನಲ್ಲಿ …
Read More »ಗಡಿಭಾಗದಲ್ಲಿ ಪರಾರಿಯಾಗಲು ಸುಲಭ: ತಪಾಸಣೆ ಇಲ್ಲ, ಸಿಸಿ ಕೆಮರಾ ಇಲ್ಲ
ಉಳ್ಳಾಲ/ವಿಟ್ಲ/ಸುಳ್ಯ/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಕೇರಳದ ಗಡಿಗಳಲ್ಲಿ ಇರುವ ಚೆಕ್ ಪೋಸ್ಟ್‌ಗಳು ಸುಸಜ್ಜಿತವಾಗದಿರುವುದು ಕರ್ನಾಟಕದಲ್ಲಿ ದುಷ್ಕೃತ್ಯ ಎಸಗಿ ಕೇರಳಕ್ಕೆ ಪರಾರಿಯಾಗುವ ದುಷ್ಕರ್ಮಿಗಳಿಗೆ ಸುಲಭದ ದಾರಿಯಾಗಿದೆ. ಮಂಗಳವಾರ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯ ಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆಗೈದ ಕೊಲೆಗಡುಕರೂ ಕೇರಳದಿಂದಲೇ ಬಂದಿದ್ದರು ಎನ್ನಲಾಗಿದೆ. ದಕ್ಷಿಣ ಕನ್ನಡಕ್ಕೆ ಬಹುಮುಖ್ಯವಾಗಿ ಇರುವ ಕೇರಳದ ಗಡಿಗಳಲ್ಲಿ ಬಂದೋಬಸ್ತ್ ಲೆಕ್ಕಾಚಾರಕ್ಕಷ್ಟೇ. ವಿಟ್ಲದ ಗಡಿ, ಸುಳ್ಯದ …
Read More »ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ
ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು. ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ …
Read More »ಹಲ್ಲಿ ಬಿದ್ದಿರುವ ಶಂಕೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥ
ಕಲಬುರಗಿ: ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎನ್ನಲಾಗ್ತಿದೆ. ಅದೇ ಆಹಾರವನ್ನು ಮಕ್ಕಳು ಸೇವಿಸಿದ ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆಹಾರ ಸೇವಿಸಿದ ಸ್ವಲ್ವ ಸಮಯದ ನಂತರ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಆಗ ತಕ್ಷಣ ಅವರನ್ನು ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ …
Read More »ಪ್ರವೀಣ್ ನೆಟ್ಟಾರು ಹತ್ಯೆ: 15ಕ್ಕೂ ಹೆಚ್ಚು ಜನರು ವಶಕ್ಕೆ, 6 ಪೊಲೀಸ್ ತಂಡಗಳಿಂದ ತನಿಖೆ
ಸುಳ್ಯ: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ತನಿಖೆ ಪ್ರಗತಿಯಲ್ಲಿದೆ. ಮೇಲ್ನೋಟಕ್ಕೆ ಹತ್ಯೆಗೆ 2-3 ಕಾರಣಗಳು ಕಂಡುಬರುತ್ತಿದೆ. ಈಗಾಗಲೇ ಸುಮಾರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಬೆಳ್ಳಾರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ಮಂಗಳೂರು ಕಮಿಷನರ್, ಉಡುಪಿ ಪೊಲೀಸರ ಸಹಾಯ ಪಡೆದು ಈಗಾಗಲೇ ಆರು ತಂಡಗಳನ್ನು ರಚಿಸಿದ್ದೇವೆ. …
Read More »
Laxmi News 24×7