ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More »ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ
ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More »ರಾಹುಲ್ ಗಾಂಧಿಗೆ ಸಮನ್ಸ್ ರಾಜಕೀಯ ಪ್ರೇರಿತ: ಸತೀಶ್ ಜಾರಕಿಹೊಳಿ ಆರೋಪ
ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …
Read More »ಪ್ರಕಾಶ ಹುಕ್ಕೇರಿ A.C.P. ಗೆ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್
ಗೆದ್ದ ಹುಮ್ಮಸ್ಸಿನಲ್ಲಿ ಪೆÇಲೀಸರಿಗೆ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಅವಾಜ್ ಹಾಕಿರುವ ಘಟನೆ ನಡೆದಿದೆ. ಕಾನೂನು ಪಾಲಿಸಲು ಮುಂದಾದ ಎಸಿಪಿಗೆ ಏ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್ ಹಾಕುವ ಮೂಲಕ ಪ್ರಕಾಶ ಹುಕ್ಕೇರಿ ಉದ್ಧಟತನ ಮೆರೆದಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜೇತ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿಗೆ ಅವಾಜ್ ಹಾಕಿದ್ದಾರೆ. ಪ್ರಮಾಣ ಪತ್ರ ಸ್ವೀಕಾರ ಮಾಡಲು ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, …
Read More »ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಡೆದಿದೆ. ಡಿ.ಆರ್ ಪೊಲೀಸ್ ಪೇದೆ ಕಿರಣ್ ಕೊಪ್ಪದ ಮೃತ ವ್ಯಕ್ತಿ. ಕಿರಣ್ ಕೊಪ್ಪದ ಕರ್ತವ್ಯ ನಿರತ ವೇಳೆ ಕುತ್ತಿಗೆಗೆ ಗುಂಡಿ ಹಾರಿಸಿಕೊಂಡಿದ್ದಾನೆ. ಇದಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ. ಆದರೆ ಮೃತ ಪೇದೆ ತಂದೆ, ಕಿರಣ್ ಅವರು ಇತ್ತೀಚಿಗೆ ಅದ್ಯಾಕೋ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂದು ಹೇಳಿದ್ದಾರೆ. ಸೆಕೆಂಡ್ ಶಿಫ್ಟ್ ಮುಗಿಸಿಕೊಂಡು …
Read More »ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರ ದರ್ಪ
ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ …
Read More »ಎಂಜಿನಿಯರಿಂಗ್ ಕೋರ್ಸ್ ಶೇ 10ರಷ್ಟು ಶುಲ್ಕ ಹೆಚ್ಚಳ?
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಶುಲ್ಕವು ಈ ವರ್ಷದಿಂದ ಹೆಚ್ಚಳವಾಗುವ ಸಾಧ್ಯತೆಯಿದೆ. ಶುಲ್ಕ ಹೆಚ್ಚಳ ಸಂಬಂಧ ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಅನುದಾನರಹಿತ ಖಾಸಗಿ ಎಂಜಿನಿಯ ರಿಂಗ್ ಕಾಲೇಜು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಭಂಡಾರಿ ಪ್ರತಿಕ್ರಿಯಿಸಿ, ‘ಶೇ 15ರಷ್ಟು ಶುಲ್ಕ ಹೆಚ್ಚಿಸುವಂತೆ ಕಳೆದ ವರ್ಷವೇ ಮನವಿ ಸಲ್ಲಿಸಿದ್ದೆವು. ಆದರೆ, ಕೋವಿಡ್ ಕಾರಣಕ್ಕೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲಾಗಿತ್ತು. ಈ ಶೈಕ್ಷಣಿಕ ಸಾಲಿನಿಂದ ಶೇ 10ರಷ್ಟು …
Read More »ಕಾಂಗ್ರೆಸ್‌ನಿಂದ ಇಂದು ರಾಜಭವನ ಮುತ್ತಿಗೆ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ದ್ವೇಷದ ರಾಜಕೀಯ ಎಂದು ಆರೋಪಿಸಿರುವ ಕಾಂಗ್ರೆಸ್, ಅದನ್ನು ವಿರೋಧಿಸಿ ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿದೆ. ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳು ಮತ್ತು …
Read More »ಪರಿಷತ್ ಫೈಟ್ ಯಾರಿಗೆ ಎಲ್ಲೆಲ್ಲಿ ಎಸ್ಟೇಟ್ ಮತ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ. ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಹಂತದಲ್ಲಿದ್ದು, ಹನುಮಂತ ನಿರಾಣಿ ನಿರಾಯಾಸ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ …
Read More »ಟಿಳಕವಾಡಿಯಲ್ಲಿ ಡ್ರೈನೇಜ್ ಸಮಸ್ಯೆ
ಬೆಳಗಾವಿಯ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಸಾರ್ವಜನಿಕರಿಗೆ ಡ್ರೈನೇಜ್ ಪೈಪ್‍ಲೈನ್ ಸಮಸ್ಯೆಯಿಂದಾಗಿ ಸಾಕಷ್ಟು ತೊಂದರೆಯಾಗಿತ್ತು. ಈ ಸಮಸ್ಯೆಗಳನ್ನು ಅರಿತ ನಗರಸೇವಕರಾದ ನಿತಿನ್ ಜಾಧವ್ ಕೂಡಲೇ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಗರದ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಡ್ರೈನೇಜ್ ಪೈಪ್‍ಲೈನ್ ಬ್ಲಾಕ್ ಆಗಿ ಅಕ್ಕಪಕ್ಕದ ಮನೆಯಗಳ ಬಾವಿಯಲ್ಲಿ ಈ ಡ್ರೈನೇಜ್ ನೀರು ಸೇರುತ್ತಿತ್ತು. ಈ ಕುರಿತಂತೆ ಸ್ಥಳೀಯರು ನಗರ ಸೇವಕರಾದ ನಿತಿನ್ ಜಾಧವ್‍ರವರಿಗೆ …
Read More »